ಸಚಿವರನ್ನು ರಕ್ಷಿಸಲು ಸರ್ಕಾರ ಯತ್ನಿಸುತ್ತಿದೆ: ವಾಲ್ಮೀಕಿ ನಿಗಮ ಅಕ್ರಮದ ವಿರುದ್ಧ ಪಾಪೇಶ್ ನಾಯಕ್ ಆಕ್ರೋಶ.

ಚಿತ್ರದುರ್ಗ ಆ. 21

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ರಾಜ್ಯದಲ್ಲಿ ಬರಪೀಡಿತ ಪರಿಸ್ಥಿತಿ, ಕುಡಿಯುವ ನೀರು, ರಸ್ತೆ ಮತ್ತು ಮೂಲಸೌಕರ್ಯಗಳಂತಹ ಜ್ವಲವಂತ ಸಮಸ್ಯೆಗಳು ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳು ರಾಜ್ಯದಲ್ಲಿದ್ದರೂ, ರಾಜ್ಯ ಸರ್ಕಾರವು ಒಬ್ಬ ಸಚಿವರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ ದುರಾದುಷ್ಟ ಕರ ಎಂದು ರಾಜ್ಯ ಬಿಜೆಪಿ ಎಸ್.ಟಿ.ಮೋರ್ಚಾದ ಮಾಜಿ ಕಾರ್ಯಕಾರಿಣಿ ಸದಸ್ಯರಾದ ಪಾಪೇಶ್ ನಾಯಕ್ ಆರೋಪಿಸಿದರು.

ಭಾರತೀಯ ಜನತಾ ಪಾರ್ಟಿಯವತಿಯಿಂದ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿಯಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅನುದಾನ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ, ಪ್ರಸ್ತುತ ರಾಜ್ಯದಲ್ಲಿ ಅಧಿಕಾರ ದಲ್ಲಿರುವ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ಸಂಪುಟ ಪುನರ್ ರಚನೆಯ ವೈಫಲ್ಯವನ್ನು ಖಂಡಿಸಿ ಮೊಳಕಾಲ್ಮೂರು ಹಾಗೂ ನಾಯಕನಹಟ್ಟಿ ಮಂಡಲದ ಅಡಿಯಲ್ಲಿ ನಡೆದ ಐದನೇ ದಿನದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ಅಕ್ರಮದ ಹಣವನ್ನು ಇದುವರೆಗೆ ವಶಪಡಿಸಿಕೊಂಡಿಲ್ಲ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆಈ ಅಕ್ರಮದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಂವಿಧಾನದ ಪುಸ್ತಕವನ್ನು ಹಿಡಿದು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಲು ಪ್ರತ್ನಿಸುತ್ತಿರುವ ಸಚಿವರ ನಡೆಯನ್ನು ತೀವ್ರವಾಗಿ ಖಂಡಿಸಿ. ಪ್ರಕರಣದ ಕುರಿತು ಕೇಂದ್ರ ತನಿಖಾ ಸಂಸ್ಥೆ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದ್ದು, ಶೀಘ್ರವೇ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸಚಿವರು ತಕ್ಷಣವೇ ರಾಜೀನಾಮೆ ನೀಡದಿದ್ದರೆ, ಕೇವಲ ಜಿಲ್ಲಾ ಮಟ್ಟದಲ್ಲಷ್ಟೇ ಅಲ್ಲದೆ, ಮುಂಬರುವ ದಿನಗಳಲ್ಲಿ ವಿಧಾನಸೌಧದ ಮುತ್ತಿಗೆ ಸೇರಿದಂತೆ ರಾಜ್ಯಾದ್ಯಂತ ಬೃಹತ್ ಬೀದಿಗಿಳಿದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್ ಮಾತನಾಡಿ, ರಾಜ್ಯದ ಇತಿಹಾಸದಲ್ಲೇ ಇಂತಹ ಭ್ರಷ್ಟ ಸರ್ಕಾರವನ್ನು ಯಾರೂ ಕಂಡಿರಲಿಲ್ಲ ಎಂದು ಸರ್ಕಾರದ ವಿರುದ್ಧ ಕಟುವಾಗಿ ವಾಗ್ದಾಳಿ ನಡೆಸಿದರು. ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಲೂಟಿ ಮಾಡಿರುವುದು ಅತ್ಯಂತ ಖಂಡನೀಯ ಹಾಗೂ ಮಾನವ ಸಂವೇದನೆಯನ್ನೇ ಕಳೆದುಕೊಂಡಿರುವ ನಡವಳಿಕೆ ಎಂದು ಆರೋಪಿಸಿದ ಅವರು. ಲೂಟಿ ಆರೋಪ ಹೊತ್ತಿರುವ ಸಚಿವರು ತಾವು ದಲಿತ ಎಂಬ ಕಾರಣಕ್ಕೆ ತಮ್ಮನ್ನು ಗುರಿ ಮಾಡಲಾಗುತ್ತಿದೆ ಎಂದು ಸಮರ್ಥನೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ. ಇಂತಹ ಅಕ್ರಮವನ್ನು ಮುಚ್ಚಿಡಲು ದಲಿತ ಕಾರ್ಡ್ ಬಳಸುವುದು ಒಪ್ಪಲು ಸಾಧ್ಯವಿಲ್ಲ ಎಂದರು.

ಪ್ರಸ್ತುತ ಸರ್ಕಾರದ ಅವಧಿಯಲ್ಲಿ ಬರಿ ಲೂಟಿಯೇ ನಡೆಯುತ್ತಿದೆ. ಮುಖ್ಯಮಂತ್ರಿಗಳ ಹಂತದಿಂದ ಹಿಡಿದು ವಿವಿಧ ಇಲಾಖೆಗಳಲ್ಲಿ ಸಾಲು ಸಾಲು ಹಗರಣಗಳು ಹೊರಬರುತ್ತಿವೆ. ಗೃಹಲಕ್ಷ್ಮಿ ಯೋಜನೆಯ ಹಣ ಸೇರಿದಂತೆ ಬಡವರ ಹಾಗೂ ಸಾರ್ವಜನಿಕರ ಹಣ ಸೂಕ್ತವಾಗಿ ತಲುಪದೆ ದುರುಪಯೋಗವಾಗುತ್ತಿದೆ. ನಿಗಮದ 187 ಕೋಟಿ ಅಕ್ರಮವನ್ನು ಮುಖ್ಯಮಂತ್ರಿಗಳ ನಿವಾಸದ ಮುಂದೆ ಕೇವಲ 89 ಕೋಟಿ ಎಂದು ಹೇಳಿಕೆ ನೀಡುವ ಮೂಲಕ ಪ್ರಕರಣದ ತೀವ್ರತೆಯನ್ನು ಕಡಿಮೆ ಮಾಡಲು ಯತ್ನಿಸಲಾಗುತ್ತಿದೆ. ಮಾಜಿ ಸಚಿವ ನಾಗೇಂದ್ರ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಈ ಭ್ರಷ್ಟ ಸರ್ಕಾರ ಅಧಿಕಾರದಿಂದ ತೊಲಗಬೇಕು. ನಾಗೇಂದ್ರ ಅವರ ರಾಜೀನಾಮೆ ದೊರೆಯುವವರೆಗೆ ಮತ್ತು ಬಡವರ ಹಣಕ್ಕೆ ಸೂಕ್ತ ನ್ಯಾಯ ಸಿಗುವವರೆಗೆ ಈ ಹೋರಾಟ ಹಾಗೂ ಪ್ರತಿಭಟನೆ ನಿರಂತರವಾಗಿ ಮುಂದುವರಿಯಲಿದೆ ಎಂದು ತಿಳಿಸಿದರು.

ಬಿಜೆಪಿ ಮೊಳಕಾಲ್ಮೂರು ಮಂಡಲ ಅಧ್ಯಕ್ಷ ರಾಮರೆಡ್ಡಿ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ರೂಪಾಯಿಗಳ ಬೃಹತ್ ಅಕ್ರಮ ನಡೆದಿದೆ. ದೆಹಲಿ ಹೈಕಮಾಂಡ್‍ಗೆ ಹಾಗೂ ತೆಲಂಗಾಣ, ಆಂಧ್ರಪ್ರದೇಶದ ಚುನಾವಣೆಗಳಿಗೆ ಕರ್ನಾಟಕವನ್ನು “ಎಟಿಎಂ ಮಿಷನ್” ನಂತೆ ಬಳಸಿಕೊಳ್ಳಲಾಗುತ್ತಿದೆ. ನಿಗಮದ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಹಾಗೂ ರಾಜ್ಯದ ಪರಿಶಿಷ್ಟ ಪಂಗಡದ ಸಮುದಾಯದ ಕ್ಷಮೆಯಾಚಿ ಸಬೇಕು ಕಾಂಗ್ರೆಸ್ ಸರ್ಕಾರದ ದುರಾಡಳಿತ, ಲೂಟಿ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಸಚಿವ ನಾಗೇಂದ್ರ ಅವರ ರಾಜೀನಾಮೆ ಬರುವವರೆಗೂ ಮತ್ತು ಸರ್ಕಾರ ತಕ್ಕ ಉತ್ತರ ನೀಡುವವರೆಗೂ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಹೋರಾಟವನ್ನು ಮುಂದುವರಿಸಲಿದೆ ಎಂದು ನಾಯಕರು ಎಚ್ಚರಿಸಿದರು.

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ಜಿಲ್ಲಾ ಓಬಿಸಿ ಮಾರ್ಚಾದ ಪ್ರಧಾನ ಕಾರ್ಯದರ್ಶಿ ಮೂರ್ತಿ, ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕ ಹನುಮಂತಪ್ಪ ಉಪ್ಪಾರ್, ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ರೇಖಾ, ಉಪಾಧ್ಯಕ್ಷರಾದ ಲಿಂಗರಾಜು, ಜಿಲ್ಲಾ ಓಬಿಸಿ ಮೋರ್ಚಾದ ಅಧ್ಯಕ್ಷರಾದ ಬಾಲರಾಜ್, ನಾಯಕನಹಟ್ಟಿ ಮಂಡಲ ಪ್ರಧಾನ ಕಾರ್ಯದರ್ಶಿ ಮೂರ್ತಿ, ಮಂಡಲ ಪ್ರಧಾನ ಕಾರ್ಯದರ್ಶಿ ಗೋವಿಂದಪ್ಪ, ಜಿಲ್ಲಾ ಎಸ್.ಸಿ. ಮೋರ್ಚಾದ ಉಪಾಧ್ಯಕ್ಷರಾದ ಚಂದ್ರಣ್ಣ, ಮುಖಂಡರಾದ ಚಿರಳ್ಳಿ ತಿಪ್ಪೇಸ್ವಾಮಿ, ಸೋಮು, ಸಿದ್ದಾರ್ಥ, ಬಲರಾಮ್ ಲಿಂಗಣ್ಣ, ಸಣ್ಣ ರಂಗಪ್ಪ, ಕುಮಾರಸ್ವಾಮಿ, ಮರಿಸ್ವಾಮಿ, ಅಜ್ಜಲ್ ಆಹ್ಮದ್, ತಿಪ್ಪೇಸ್ವಾಮಿ, ಓನರಸ್ವಾಮಿ, ಕುಮಾರಸ್ವಾಮಿ, ರೂಪ ರಾಧಮ್ಮ ಸೇರಿದಂತೆ ಇತಯರರು ಭಾಗವಹಿಸಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook pagehttps://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Whats App Channel: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *