
ಚಿತ್ರದುರ್ಗ ಏ. 30
ಪೋಟೋ ಮತ್ತು ವರದಿ ಸುರೇಶ್
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 50 ವರ್ಷದ ರಾಜಕೀಯ ಜೀವನದ ಹಿನ್ನಲೆಯಲ್ಲಿ ಮೇ. 9 ರಂದು ನಡೆಸಲು ಉದ್ದೇಶಿಸಿರುವ ಅಭೀಮಾನೋತ್ಸವ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧೆಡೆಗಳಿಂದ ಸುಮಾರು 8 ರಿಂದ 10 ಲಕ್ಷ ಜನ ಆಗಮಿಸಲಿದ್ದಾರೆ, ಇದಕ್ಕೆ ಬೇಕಾದ ಎಲ್ಲಾ ಸಿದ್ದತೆಯನ್ನು ಮಾಡಲಾಗುತ್ತಿದೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.


ಚಿತ್ರದುರ್ಗ ನಗರದ ಹೊರವಲಯದ ಶ್ರೀ ಮಾದರ ಚೆನ್ನಯ್ಯ ಗುರುಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ನಡೆಸಲು ಉದ್ದೇಶಿಸಿರುವ ಅಭೀಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಬೇಟಿ ನೀಡಿ ಪೆಂಡಾಲ್ ನಿರ್ಮಾಣ ಸ್ಥಳವನ್ನು ವೀಕ್ಷಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಡಿಯೂರಪ್ಪರ ವರೆಂದರೆ ರಾಜ್ಯದಲ್ಲಿ ಹೋರಾಟವನ್ನು ನಡೆಸುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಿಎಸ್.ವೈ ಎಂದರೆ ಹೋರಾಟ ಎಂಬ ಮನೋಭಾವ ಎಲ್ಲರಲ್ಲೂ ಸಹಾ ಮೂಡಿದೆ. ಜನ ಸೇವೆಗಾಗಿಯೇ ತಮ್ಮ ಜೀವನನ್ನೇ ಮುಡುಪಾಗಿ ಇಟ್ಟಿದ್ದಾರೆ. ತಮ್ಮ ಅಧಿಕಾರದ ಅವಧಿಯಲ್ಲಿ ದಲಿತರು, ಪರಿಶಿಷ್ಟ ಜಾತಿ ಮತ್ತು ಪಂಗಡ, ಮಹಿಳೆಯರಿಗೆ ಧ್ವನಿಯಾಗಿ ಕೆಲಸವನ್ನು ಮಾಡಿದ್ದಾರೆ 50 ವರ್ಷ ಬಡವರ ಪರವಾಗಿ ಕೆಲಸವನ್ನು ಮಾಡಿದ್ದಾರೆ ತಮ್ಮ ಮುಂದೆ ಬಂದ ಹಲವಾರು ರೀತಿಯ ಸವಾಲುಗಳನ್ನು ಎದುರಿಸುವುದರ ಮೂಲಕ ಅವುಗಳನ್ನು ಮೆಟ್ಟಿ ನಿಂತು ಪಕ್ಷವನ್ನು ರಾಜ್ಯದಲ್ಲಿ ಕಟ್ಟಿದ್ದಾರೆ ಎಂದರು.
ಈ ಕಾರ್ಯಕ್ರಮಕ್ಕೆ ಬರಲು ರಾಜ್ಯದ 29000 ಹಳ್ಳಿಗಳಿಂದ ಜನತೆ ಉತ್ಸಾಹಕರಾಗಿದ್ದಾರೆ. ರೈತರು, ದೇವದಾಸಿಯರು, ದಲಿತರು ಕಾರ್ಮಿಕರು, ಅಭಿಮಾನಿಗಳು ಹಿತೈಷಿಗಳು, ಭಾಗವಹಿಸಲಿ ಪಾಸುಗಳನ್ನು ಕೇಳುತ್ತಿದ್ದಾರೆ. ಚಿತ್ರದುರ್ಗದಲ್ಲಿ ಮೇ.8 ರ ಸಂಜೆ ಯಡೆಯೂರಪ್ಪರವರ ಪುರ ಪ್ರವೇಶವಾಗಲಿದೆ ಈ ಸಮಯದಲ್ಲಿ ನಮ್ಮ ಕಲೆ, ಸಾಹಿತ್ಯ, ಸಂಸ್ಕøತಿಯನ್ನು ಆನಾವರಣ ಮಾಡುವಂತ ಕಾರ್ಯಕ್ರಮ ಇದಾಗಲಿದೆ ಏಕೆಂದರೆ ಚಿತ್ರದುರ್ಗ ಐತಿಹಾಸಿಕ ನಾಡಾಗಿದೆ, ಸಮಾರು 76 ಎಕರೆ ಪ್ರದೇಶದಲ್ಲಿ ಈ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಬರುವವರಿಗೆ ಕುಡಿಯುವ ನೀರುಮ ಉಪಹಾರ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಜನತೆ ಸ್ವಯಂ ಪ್ರೇರಣೆಯಿಂದ ಬಂದು ಕೆಲಸವನ್ನು ಮಾಡುತ್ತಿದ್ದಾರೆ ಎಂದರು.
ನಾಡಿಗೆ ಯಡಿಯೂರಪ್ಪ ನೀಡಿದ ಕೊಡುಗೆಗೆ ಎಲ್ಲ ವರ್ಗದವರೂ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಇದಕ್ಕಾಗಿ ಅರ್ಥಪೂರ್ಣ. ಭವ್ಯ ಕಾರ್ಯಕ್ರಮ ನಡೆಸುತ್ತಿದ್ದೇವೆ ರಾಜ್ಯದ ಮೂಲೆಮೂಲೆಗಳಿಂದ ಅಭಿಮಾನಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಜನರು ಬರಲಿದ್ದಾರೆ. ಒಂದು ಐತಿಹಾಸಿಕ ಕಾರ್ಯಕ್ರಮ ಇದಾಗಲಿದೆ ಎಂದು ವಿವರಿಸಿದರು.


ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಸಹಾ ಪ್ರಬಾರಿ ಎ.ಮುರಳಿ, ಕಾಡುಗೊಲ್ಲ ರಾಜ್ಯಾಧ್ಯಕ್ಷ ರಾಜಣ್ಣ, ಜಿ.ಪಂ.ಮಾಜಿ ಅಧ್ಯಕ್ಷ ಮೀಸೆ ಮಹಾಲಿಂಗಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ಯಾದವ್, ಮೋಹನ್ ಕುಮಾರ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಕೂಡಾ ಮಾಜಿ ಅದ್ಯಕ್ಷರಾದ ಸುರೇಶ್ ಸಿದ್ದಾಪುರ ಮಾಜಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಸಂಪತ್ ಕುಮಾರ್, ದಗ್ಗೆ ಶಿವಪ್ರಕಾಶ್, ಯವಮೊರ್ಚಾದ ಚಳ್ಳಕೆರೆ ಮಂಜು ಯಶವಂತ್ ಅರುಣ್ ಸೇರಿದಂತೆ ಇತರರು ಭಾಗವಹಿಸಿದ್ದರು.