Ajwain : ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು. ಅಂತಹ ಒಂದು ಗಿಡಗಳಲ್ಲಿ ದೊಡ್ಡಪತ್ರೆಯೂ ಒಂದು.

ಆರೋಗ್ಯ ಹದಗೆಟ್ಟ ತಕ್ಷಣ ಆಸ್ಪತ್ರೆಗೆ ಓಡುವ ಬದಲು ಒಮ್ಮೆ ಮನೆಯ ಹಿತ್ತಲಿನಲ್ಲಿ ಕಣ್ಣಾಡಿಸಿ, ಅಥವಾ ಆಯುರ್ವೇದ ವೈದ್ಯರನ್ನು ಒಮ್ಮೆ ಸಂಪರ್ಕಿಸಿ ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಮನೆಯಲ್ಲೇ ಸಿಗುವ ಪದಾರ್ಥಗಳಿಂದ ಹೇಗೆ ಅನಾರೋಗ್ಯವನ್ನು ಸರಿಪಡಿಸಿಕೊಳ್ಳುವುದು ಎಂದು ಹೇಳುತ್ತಾರೆ.
ಇದು ಸಾಮಾನ್ಯ ಶೀತ, ಜ್ವರಕ್ಕೆ ಉತ್ತಮ ಮನೆಮದ್ದಾಗಿದೆ.
- ಸಾಮಾನ್ಯವಾಗಿ ಆಹಾರ ಸೇವನೆಯಲ್ಲಿ ಬದಲಾವಣೆ, ಹವಾಮಾನದಲ್ಲಿನ ವ್ಯತ್ಯಾಸದಿಂದ ಶ್ವಾಸಕೋಶದಲ್ಲಿ ಕಫ ಕಟ್ಟಿಕೊಳ್ಳುತ್ತದೆ. ಇದರಿಂದ ಶೀತವಾದರೆ ಎಷ್ಟು ದಿನವಾದರೂ ಕಡಿಮೆಯಾಗುವುದಿಲ್ಲ. ಇದಕ್ಕೆ ದೊಡ್ಡ ಪತ್ರೆ ಸೊಪ್ಪು ಉತ್ತಮ ಮನೆಮದ್ದಾಗಿದೆ. ಇನ್ನಂತೂ ಮಾವಿನ ಹಣ್ಣಿನ ಸೀಸನ್ ಆರಂಭವಾಗುತ್ತದೆ. ಹೀಗಾಗಿ ಕಫ, ಶೀತ ಸಾಮಾನ್ಯವಾಗಿರುತ್ತದೆ. ಚಿಕ್ಕ ಮಕ್ಕಳಿಗೂ ಕೂಡ ಈ ದೊಡ್ಡ ಪತ್ರೆ ಸೊಪ್ಪನ್ನು ಔಷಧವಾಗಿ ಬಳಸಬಹುದಾಗಿದೆ.
- ದೊಡ್ಡ ಪತ್ರೆ ಸೊಪ್ಪನ್ನು ಕೊಯ್ದು ತಂದು ಬೆಂಕಿಯಲ್ಲಿ ಸುಟ್ಟು ಅದರ ರಸವನ್ನು ತೆಗದು ಅದಕ್ಕೆ ಅರ್ಧ ಚಮಚ ಬೆಲ್ಲ ಸೇರಿಸಿ ಕುಡಿದರೆ ಒಂದೆ ದಿನದಲ್ಲಿ ಶೀತ, ಕಟ್ಟಿದ ಮೂಗಿನ ಸಮಸ್ಯೆ ನಿವಾರಣೆಯಾಗುತ್ತದೆ.
- ದೊಡ್ಡ ಪತ್ರೆ ಸೊಪ್ಪನ್ನು ಬೆಂಕಿಯ ಮೇಲೆ ಇಟ್ಟು ಬಾಡಿಸಿ ನಂತರ ಅದನ್ನು ನೆತ್ತಿಗೆ ಹಾಕಿದರೆ ದೇಹದಲ್ಲಿನ ತಣ್ಣನೆಯ ಅಂಶ ನಿವಾರಣೆಯಾಗಿ ಜ್ವರ, ಶೀತ ಕಡಿಮೆಯಾಗುತ್ತದೆ. ಮಕ್ಕಳಿಗೆ ಇದು ಬೆಸ್ಟ್ ಔಷಧವಾಗಿದೆ.
- ದೊಡ್ಡ ಪತ್ರೆಯಲ್ಲಿ ವಿಟಮಿನ್ ಸಿ, ಫೈಬರ್ ಮತ್ತು ಕ್ಯಾಲ್ಸಿಯಂ ಗುಣ ಹೇರಳವಾಗಿದೆ. ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಬಲಗೊಳಿಸಲು ಸಹಾಯ ಮಾಡುತ್ತದೆ.
- ಕೀಟಗಳು ಕಚ್ಚಿದಾಗ ಕೆಂಪು ಗುಳ್ಳೆಗಳು ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಉರಿ, ಬಾವು ಕಾಣಿಸಿಕೊಳ್ಳುತ್ತದೆ. ದೊಡ್ಡ ಪತ್ರೆ ರಸವನ್ನು ತೆಗೆದು ಕೀಟಕಚ್ಚಿದ ಜಾಗದಲ್ಲಿ ಹಚ್ಚಿದರೆ ಗಂಟೆಗಳೊಳಗೆ ಶಮನವಾಗುತ್ತದೆ.
- ದೊಡ್ಡ ಪತ್ರೆ ಸೊಪ್ಪನ್ನು ಚಟ್ನಿ, ತಂಬುಳಿ ಅಥವಾ ಕರಕಲಿ ಮಾಡುವ ಮೂಲಕ ಸೇವಿಸಬಹುದಾಗಿದೆ. ಅಲ್ಲದೆ ದೋಸೆ ಮಾಡುವಾಗಲೂ ದೊಡ್ಡ ಪತ್ರೆ ಎಲೆಯನ್ನು ಬಳಸಬಹುದಾಗಿದೆ. ಇದು ಹೆಚ್ಚು ರುಚಿಯೊಂದಿಗೆ ಆರೋಗ್ಯವನ್ನೂ ವೃದ್ಧಿಸುತ್ತದೆ.
- ದೊಡ್ಡ ಪತ್ರೆಯ ಗಿಡದ ಎಲೆಯನ್ನು ತಂದು ಬಾಡಿಸಿ ರಸ ತೆಗೆದು ಜೇನುತುಪ್ಪ ಸೇರಿಸಿ ಕುಡಿದರೆ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ.
- ಅರಿಸಿನ ಕಾಮಾಲೆ ಇದ್ದವರಿಗೂ ದೊಡ್ಡ ಪತ್ರೆ ಸೊಪ್ಪು ಉತ್ತಮ ಮನೆ ಮದ್ದಾಗಿದೆ. ಈ ಎಲೆಯನ್ನು ಆಹಾರ ರೂಪದಲ್ಲಿ ಅಂದರೆ ಚಟ್ನಿ, ತಂಬುಳಿ ಮಾಡಿ ಸೇವಿಸಿದರೆ ಕೆಲವೇ ದಿನಗಳಲ್ಲಿ ಕಾಯಿಲೆ ಚೇತರಿಕೆಯನ್ನು ಕಾಣುತ್ತದೆ.
- ಕಂಬಳಿ ಹುಳ, ಇಸುಬು ಇಂತಹ ಕೀಟಗಳು ಕಚ್ಚಿದ್ದರೆ ಸಹಿಸಲಾರದ ಉರಿ ಚರ್ಮಕ್ಕಾಗುತ್ತದೆ. ಇದನ್ನು ತಡೆಯಲು ಈ ದೊಡ್ಡ ಪತ್ರೆ ಸೊಪ್ಪು ಸಹಾಯಕವಾಗಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1