16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ (CSK vs GT) ನಡುವಣ ಫೈನಲ್ ಪಂದ್ಯ ಮಳೆಗೆ ಕೊಚ್ಚಿ ಹೋಯಿತು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸುರಿದ ರಣಭೀಕರ ಮಳೆಗೆ (Rain) ಟಾಸ್ ಪ್ರಕ್ರಿಯೆ ಕೂಡ ನಡೆಸಲಾಗಿಲ್ಲ. ಸದ್ಯ ಪಂದ್ಯವನ್ನು ಮೀಸಲು ದಿನವಾದ ಇಂದು ಸೋಮವಾರಕ್ಕೆ ಮುಂದೂಡಲಾಗಿದೆ.