

ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡ ಇಂದು ತನ್ನ ತವರು ಮೈದಾನವಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸುತ್ತಿದೆ. ಆಡಿರುವ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿರುವ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ತಂಡ ಇಂದಿನ ಪಂದ್ಯದಲ್ಲಿ ಗೆದ್ದು ಹ್ಯಾಟ್ರಿಕ್ ಗೆಲುವು ದಾಖಲಿಸುವ ಯತ್ನದಲ್ಲದೆ. ಇತ್ತ ಕೋಲ್ಕತ್ತಾ ತನ್ನ ಎರಡನೇ ಗೆಲುವಿಗೆ ಪ್ರಯತ್ನಿಸಲಿದೆ. ಗುಜರಾತ್ ತನ್ನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದರೆ, ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿತು. ಅದೇ ಸಮಯದಲ್ಲಿ ಕೋಲ್ಕತ್ತಾ ತನ್ನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋತರೆ, ಎರಡನೇ ಪಂದ್ಯದಲ್ಲಿ ಬಲಿಷ್ಠ ಆಟ ಪ್ರದರ್ಶಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿತು.