

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿಂದು (IPL 2023) ಮಹತ್ವದ ಪಂದ್ಯ ನಡೆಯುತ್ತಿದೆ. ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಹಾಗೂ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ (GT vs MI) ಮುಖಾಮುಖಿ ಆಗಿವೆ. ಎರಡೂ ತಂಡಗಳು ಬಲಿಷ್ಠವಾಗಿದ್ದು ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ. ಜಿಟಿ ಆಡಿದ ಆರು ಪಂದ್ಯಗಳಲ್ಲಿ ನಾಲ್ಕು ಗೆಲುವು, ಎರಡು ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇತ್ತ ಮುಂಬೈ ಆಡಿದ ಆರು ಪಂದ್ಯಗಳಲ್ಲಿ ತಲಾ ಮೂರರಲ್ಲಿ ಸೋಲು-ಗೆಲುವು ಕಂಡು ಏಳನೇ ಸ್ಥಾನಲ್ಲಿದೆ. ಪಾಯಿಂಟ್ ಟೇಬಲ್ನಲ್ಲಿ ಮೇಲಕ್ಕೇರಲು ಉಭಯ ತಂಡಗಳಿಗೆ ಗೆಲುವು ಅನಿವಾರ್ಯ.