ಕರ್ನಾಟಕದಲ್ಲಿ ಕೊರೊನಾ ಅಬ್ಬರ.ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಗೈಡ್​​ ಲೈನ್ಸ್

ಬೆಂಗಳೂರು, (ಜೂನ್ 1): ಒಂದೆಡೆ ಬೇಸಿಗೆ ರಜೆ (Summer holidays) ಮುಗಿಸಿಕೊಂಡು ವಿದ್ಯಾರ್ಥಿಗಳು(Students) ವಾಪಸ್ ಶಾಲೆಗಳತ್ತ (Schools) ಹೊರಟ್ಟಿದ್ದಾರೆ. ಮತ್ತೊಂದೆಡೆ ಕರ್ನಾಟಕದಲ್ಲಿ ದಿನೇ ದಿನೇ ಕೊವಿಡ್ (Coronavirus) ಆತಂಕ ಹೆಚ್ಚಾಗುತ್ತಿದೆ. ಇದರಿಂದ ಮೊನ್ನೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ.

ಇದರ ಬೆನ್ನಲ್ಲೇ ಇದೀಗ ರಾಜ್ಯ ಆರೋಗ್ಯ ಇಲಾಖೆ (Karnataka Health Department), ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ(Covid guidelines) ಪ್ರಕಟಿಸಿದೆ.

ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಹೊಸ ಗೈಡ್ ಲೈನ್ಸ್​ ಪ್​ರಕಟಿಸಿ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ಕೋವಿಡ್​ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ ⁠ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು. ಹಾಗೇ ⁠ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ಶಾಲೆಗಳಿಗೆ ಸೂಚನೆ ನೀಡಲಾಗಿದೆ.

ಆರೋಗ್ಯ ಇಲಾಖೆಯ ಗೈಡ್​ಲೈನ್ಸ್​

  • ಮಕ್ಕಳಲ್ಲಿ ಜ್ವರ , ಕೆಮ್ಮು, ನೆಗಡಿ ಗುಣಲಕ್ಷಣಗಳು ಬಂದರೆ ಶಾಲೆಗೆ ಕಳುಹಿಸಬಾರದು.
  • ⁠ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗಳಿಗೆ ಕಳುಹಿಸಬೇಕು.
  • ⁠ಗುಣಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದರೆ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು.
  • ⁠ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು.
  • ⁠ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು.

ಬೆಂಗಳೂರು ಕೊರೊನಾ ಹಾಟ್​ ಸ್ಟಾಟ್

ರಾಜ್ಯದಲ್ಲಿ ಮಳೆ ನಡುವೆ ಕೊರೊನಾ ಕ್ರಿಮಿಯ ಅಬ್ಬರ ಜೋರಾಗುತ್ತಿದೆ. ರಾಜಧಾನಿ ಬೆಂಗಳೂರಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇದರ ಜೊತೆ ದೇಶದ ಹಲವು ರಾಜ್ಯದಲ್ಲೂ ಸೋಂಕಿನ ಸಂಖ್ಯೆ ಹೆಚ್ಚು ಆಗುತ್ತಿರುವುದು ತಲೆ ನೋವಾಗಿ ಪರಿಣಮಿಸಿದೆ. ರಾಜ್ಯದ ಒಟ್ಟು ಆಕ್ಟೀವ್ ಕೇಸ್ 234 ಇದ್ದು, ಅದರಲ್ಲಿ ಬೆಂಗಳೂರು ಒಂದರಲ್ಲೇ ಬರೋಬ್ಬರಿ 150ಕ್ಕೂ ಹೆಚ್ಚು ಆಕ್ಟೀವ್ ಕೇಸ್‌ಗಳು ದಾಖಲಾಗಿದೆ. ಬೆಂಗಳೂರು ಮತ್ತೆ ಕೊರೊನಾ ಹಾಟ್‌ಸ್ಪಾಟ್ ಆಗುತ್ತಿದೆ. ಕೋವಿಡ್ ನಿಯಂತ್ರಣ ಜೊತೆಗೆ ಡೆಂಗ್ಯೂ ಕಾಪಾಡಿಕೊಳ್ಳೋದು ಸವಾಲಾಗಿದೆ. ಮಳೆಗಾಲ ಆಗಿರುವುದರಿಂದ ಬಿಬಿಎಂಪಿ ಆರೋಗ್ಯ ವಿಭಾಗ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುತ್ತಿದೆ.

TV9 Kannada

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *