IPL 2023: ಪ್ಲೇಆಫ್​​ಗೆ ಎಂಟ್ರಿ ಕೊಟ್ಟ ಗುಜರಾತ್ ಟೈಟಾನ್ಸ್: 2 ತಂಡಗಳು ಔಟ್

IPL 2023: ಐಪಿಎಲ್​ನ 62ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಗುಜರಾತ್ ಟೈಟಾನ್ಸ್ 34 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಪ್ಲೇಆಫ್ ಪ್ರವೇಶಿಸಿದ ಮೊದಲ ತಂಡವಾಗಿ ಹಾರ್ದಿಕ್ ಪಾಂಡ್ಯ ಪಡೆ ಹೊರಹೊಮ್ಮಿದೆ.ಇದುವರೆಗೆ ಆಡಿರುವ 13 ಪಂದ್ಯಗಳಲ್ಲಿ 9 ಜಯ ಸಾಧಿಸಿರುವ ಗುಜರಾತ್ ಟೈಟಾನ್ಸ್ ತಂಡವು ಒಟ್ಟು 18 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್ ಪ್ರವೇಶಿಸಿದೆ. ಇನ್ನು ಕೊನೆಯ ಮ್ಯಾಚ್​ನಲ್ಲಿ ಸೋತರೂ ಟಾಪ್-2 ನಲ್ಲಿ ಕಾಣಿಸಿಕೊಳ್ಳುವುದು ಖಚಿತ.ಮತ್ತೊಂದೆಡೆ ಗುಜರಾತ್ ಟೈಟಾನ್ಸ್ ವಿರುದ್ಧದ ಸೋಲಿನೊಂದಿಗೆ ಸನ್​ರೈಸರ್ಸ್ ಹೈದರಾಬಾದ್ ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಆಡಿರುವ 12 ಪಂದ್ಯಗಳಲ್ಲಿ ಕೇವಲ 4 ಮ್ಯಾಚ್​ನಲ್ಲಿ ಮಾತ್ರ ಗೆದ್ದಿರುವ ಎಸ್​ಆರ್​ಹೆಚ್​ ತಂಡವು ಕೊನೆಯ 2 ಪಂದ್ಯಗಳಲ್ಲಿ ಜಯ ಸಾಧಿಸಿದರೂ ಕೇವಲ 12 ಅಂಕ ಪಡೆಯಲಿದೆ.ಇತ್ತ ಈಗಾಗಲೇ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ (18 ಅಂಕಗಳು), ಸಿಎಸ್​ಕೆ (15 ಅಂಕಗಳು), ಮುಂಬೈ ಇಂಡಿಯನ್ಸ್ (14 ಅಂಕಗಳು) ಹಾಗೂ ಲಕ್ನೋ ಸೂಪರ್ ಜೈಂಟ್ಸ್​ 13 ಅಂಕಗಳನ್ನು ಹೊಂದಿರುವ ಕಾರಣ ಕೊನೆಯ 2 ಪಂದ್ಯಗಳಲ್ಲಿ ಜಯ ಸಾಧಿಸಿದರೂ ಸನ್​ರೈಸರ್ಸ್​ಗೆ ಪ್ಲೇಆಫ್​​ಗೆ ಪ್ರವೇಶಿಸಲಾಗುವುದಿಲ್ಲ.ಹಾಗೆಯೇ ಇದಕ್ಕೂ ಮುನ್ನ 12 ಪಂದ್ಯಗಳಲ್ಲಿ 4 ಜಯ ಸಾಧಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿತ್ತು. ಇದೀಗ ಅಂತಿಮ ಸುತ್ತಿಗೆ ಪ್ರವೇಶಿಸುವ ಪಟ್ಟಿಯಿಂದ ಹೊರಬಿದ್ದ 2ನೇ ತಂಡವಾಗಿ ಸನ್​ರೈಸರ್ಸ್ ಹೈದರಾಬಾದ್ ಗುರುತಿಸಿಕೊಂಡಿದೆ.ಇದಾಗ್ಯೂ ಅಂಕಪಟ್ಟಿಯಲ್ಲಿ 2ನೇ, 3ನೇ ಹಾಗೂ 4ನೇ ಸ್ಥಾನಕ್ಕಾಗಿ 7 ತಂಡಗಳ ನಡುವೆ ಪೈಪೋಟಿ ಇದೆ. ಇದರಲ್ಲಿ ಸಿಎಸ್​ಕೆ, ಮುಂಬೈ ಇಂಡಿಯನ್ಸ್, ಲಕ್ನೋ ಸೂಪರ್ ಜೈಂಟ್ಸ್, ಪಂಜಾಬ್ ಕಿಂಗ್ಸ್ ಹಾಗೂ ಆರ್​ಸಿಬಿ ನಡುವೆ ನೇರ ಪೈಪೋಟಿ ಇರುವುದು ವಿಶೇಷ. ಇನ್ನು ಈ ವಾರದ ಪಂದ್ಯಗಳ ಫಲಿತಾಂಶಗಳು ಟಾಪ್-4 ನಲ್ಲಿ ಕಾಣಿಸಿಕೊಳ್ಳುವ ತಂಡಗಳನ್ನು ನಿರ್ಧರಿಸಲಿದೆ. ಹೀಗಾಗಿಯೇ ಮುಂದಿನ ಪಂದ್ಯಗಳಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದಾಗಿದೆ.

source https://tv9kannada.com/photo-gallery/cricket-photos/ipl-2023-gujarat-titans-qualify-for-playoffs-2-teams-out-kannada-news-zp-579963.html

Leave a Reply

Your email address will not be published. Required fields are marked *