ಚಿತ್ರದುರ್ಗ ಸೆ. 25
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಗಾಂಧೀವಾದಿ, ಹಿರಿಯ ರಾಜಕೀಯ ಮುತ್ಸದ್ಧಿ, ರಾಜ್ಯಸಭಾ ಮಾಜಿ ಸದಸ್ಯರಾದ ದಿವಂಗತ ಹೆಚ್. ಹನುಮಂತಪ್ಪನವರ ಸ್ಮರಣಾರ್ಥ ನುಡಿ ನಮನ ಕಾರ್ಯಕ್ರಮವನ್ನು ಸೆ. 27ರ ಭಾನುವಾರ ನಗರದ ತ.ರಾ.ಸು. ರಂಗಮಂದಿರದಲ್ಲಿ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಮುಖಂಡರು ನಗರಸಭೆಯ ಮಾಜಿ ಅಧ್ಯಕ್ಷರು ಶ್ರೀ ಛಲವಾದಿ ಮಹಾಸಂಸ್ಥಾನ ಗುರುಪೀಠ ಟ್ರಸ್ಟ್ (ರಿ)ನ ಖಂಜಾಚಿಗಳಾದ ನಿರಂಜನ ಮೂರ್ತಿ ತಿಳಿಸಿದ್ದಾರೆ.
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಹನುಮಂತಪ್ಪನವರ ಛಲವಾದಿ ಸಮುದಾಯದಲ್ಲಿ ಹುಟ್ಟಿದರು ಸಹಾ ಅವರು ಎಲ್ಲಾ ಸಮುದಾಯದವರನ್ನು ಸಹಾ ಪ್ರೀತಿ ವಿಶ್ವಾಸದಿಂದ ನೋಡುತ್ತಿದ್ದರು ಅವರು ಸಹಾ ಅದೇ ರೀತಿಯಲ್ಲಿ ಹನುಮಂತಪ್ಪರವರನ್ನು ಕಾಣುತ್ತಿದ್ದರು. ಚಿತ್ರದುರ್ಗದ ಹೆಸರನ್ನು ದೆಹಲಿಯಲ್ಲಿ ರಾರಾಜಿಸಿದವರು ಹನುಮಂತಪ್ಪರವರು ಅದೇ ರೀತಿ ಚಿತ್ರದುರ್ಗದಲ್ಲಿ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭ ಮಾಡಿ ಮಕ್ಕಳಿಗೆ ಕಾನೂನು ಶಿಕ್ಷಣ ದೂರುವಂತೆ ಮಾಡಿದರು. ಅವರ ನುಡಿ ನಮನ ಕಾರ್ಯಕ್ರಮವನ್ನು ಒಂದು ಸಮುದಾಯದ ಮೇಲೆ ಮಾಡದ ಅವರ ಅಭಿಮಾನಿ ಬಳಗದವತಿ ಯಿಂದ ಮಾಡಲಾಗುತ್ತಿದೆ ಎಂದರು.
ಕಾರ್ಯಕ್ರಮದ ಸಾನಿದ್ಯವನ್ನು ಛಲವಾದಿ ಗುರುಪೀಠದ ಶ್ರೀ ಬಸವನಾಗೀದೇವ ಶರಣರು, ಮುರುಘಾ ಮಠದ ಶ್ರೀ ಡಾ. ಬಸವ ಕುಮಾರಸ್ವಾಮಿಗಳು, ಸಿದ್ದಯ್ಯನಕೋಟಯ ಶ್ರೀ ಬಸವಲಿಂಗ ಸ್ವಾಮೀಜಿ ವಹಿಸಲಿದ್ದಾರೆ. ಸಮಾರಂಭವನ್ನು ಕರ್ನಾಟಕ ಸರ್ಕಾರ ಉಪಮುಖ್ಯಮಂತ್ರಿಗಳು ಮತ್ತು ಕಂದಾಯ, ಯುವಜನ ಸೇವೆ ಹಾಗೂ ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶ್ರೀ ಛಲವಾದಿ ಮಹಾಸಂಸ್ಥಾನ ಗುರುಪೀಠ ಟ್ರಸ್ಟ್ (ರಿ)ನ ಅಧ್ಯಕ್ಷರಾದ ಎನ್.ಲಕ್ಷ್ಮೀನರಸಯ್ಯ ವಹಿಸಲಿದ್ದಾರೆ. ಸಮಾಜ ಕಲ್ಯಾಣ ಸಚಿವರಾದ ಕೆ.ಹೆಚ್. ಮುನಿಯಪ್ಪ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ. ರಘುಮೂರ್ತಿ, ಶಾಸಕರು & ಮಾಜಿ ಸಚಿವರಾದ ಹೆಚ್.ಸಿ. ಮಹದೇವಪ್ಪ, ಸಂಸದರಾದ ಗೋವಿಂದ ಎಂ. ಕಾರಜೋಳ, ಶಾಸಕರು ಹಾಗೂ ಕೊಳಚೆ ನಿರ್ಮೂಲನ ಮಂಡಲಿ, ಅಧ್ಯಕ್ಷರಾದ ಪ್ರಸಾದ್ ಅಬ್ಬಯ್ಯ ಸೇರಿದಂತೆ ಜಿಲ್ಲೆಯ ಶಾಸಕರು, ವಿವಿಧ ನಿಗಮ ಮಂಡಳಿಯ ಅಧ್ಯಕ್ಷರು, ಮಾಜಿ ಸಚಿವರು, ಮಾಜಿ ಶಾಸÀಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಂಸದರು, ಡಿಸಿಸಿ ಅಧ್ಯಕ್ಷರು ಸೇರಿದಂತೆ ಹನುಮಂತಪ್ಪ ರವರ ಅಭಿಮಾನಿಗಳು, ಹಿತೈಷಿಗಳು ಭಾಗವಹಿಸಲಿದ್ದಾರೆ.
ಪತ್ರಿಕಾ ಗೋಷ್ಟಿಯಲ್ಲಿ ಶ್ರೀ ಛಲವಾದಿ ಮಹಾಸಂಸ್ಥಾನ ಗುರುಪೀಠ ಟ್ರಸ್ಟ್ (ರಿ)ನ ಜಂಟಿ ಕಾರ್ಯದರ್ಶಿಗಳಾದ ನಟರಾಜ್, ನಿರ್ದೇಶಕರಾದ ಎಸ್.ವಿ.ಗುರುಮೂರ್ತಿ ಜಯರಾಮ, ಪ್ರಹ್ಲಾದ್ ಭಾಗವಹಿಸಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j