ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಡಿ. 18
ರಾಜ್ಯ ಸರ್ಕಾರ ಮಹಿಳೆಯರಿಗೆ ಪ್ರಸಕ್ತ ವರ್ಷದ ಫೆಬ್ರವರಿ, ಮಾರ್ಚ್ ತಿಂಗಳಲ್ಲಿ 1.28 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ 75 ಸಾವಿರ ಕೋಟಿ ಹಣ ನೀಡಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿಕೆ ನೀಡುವ ಮೂಲಕ ಸದನಕ್ಕೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಹನುಮಂತೇಗೌಡ ತಿಳಿಸಿದ್ದಾರೆ.
ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಸಚಿವರು ಕಲಾಪದಲ್ಲಿ ಈ ಎರಡು ತಿಂಗಳ ಹಣವನ್ನು ಜಮೆ ಮಾಡಿರುವುದಾಗಿ ಹೇಳಿಕೆ ನೀಡಿದ್ದಾರೆ. ಆದರೆ ಅದಕ್ಕೆ ದಾಖಲೆಯಿಲ್ಲ. ಎರಡು ತಿಂಗಳಿನ ಕಂತು ಸುಮಾರು ಐದು ಸಾವಿರ ಕೋಟಿ ಹಣವನ್ನು ಫಲಾನುಭವಿಗಳಿಗೆ ನೀಡಿಲ್ಲ ಎಂದು ಸದನದಲ್ಲಿ ನಮ್ಮ ಪಕ್ಷದ ಮುಂಖಡರು ದಾಖಲೆ ಸಮೇತ ನೀಡಿದ್ದಾರೆ. ಸಚಿವ ಲಕ್ಷ್ಮಿ ಹೆಬ್ಬಾಳಕರ ಅವರು ಸುಳ್ಳು ಮಾಹಿತಿ ನೀಡುವ ಮೂಲಕ ಕಲಾಪಕ್ಕೆ ಅಗೌರವ ತೋರಿದ್ದು ಸಚಿವರ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗಹಿಸಿ ಯಾವುದೇ ಸುಳ್ಳು ಮಾಹಿತಿ ನೀಡುವ ಮೂಲಕ ಅಗೌರವ ತರುವ ಕೆಲಸ ಮಾಡಬಾರದು ಎಂದರು.
ಸದನದ ಗೌರವವನ್ನು ಸಚಿವರಾದಿಯಾಗಿ ಎಲ್ಲರೂ ಕಾಪಾಡಬೇಕು. ಸುಳ್ಳು ಮಾಹಿತಿ ನೀಡಬಾರದು ಎಂದು ಎಚ್ಚರಿಸಿದರು. ನಮ್ಮ ಮುಖಂಡರ ಪ್ರಯತ್ನದಿಂದ ರಾಜ್ಯದ 1.28 ಕೋಟಿ ಫಲಾನುಭವಿಗಳ ಖಾತೆಗೆ ಎರಡೂ ತಿಂಗಳಿನ ಗೃಹಲಕ್ಷ್ಮಿ ಹಣವು ಪಾವತಿಯಾಗಲಿದೆ ಎಂದು ಬಿಜೆಪಿ ಮುಖಂಡ ಹನುಮಂತೇಗೌಡ ತಿಳಿಸಿದರು.
Views: 31