ಚಿತ್ರದುರ್ಗ: ಜಿಲ್ಲೆಯಲ್ಲಿ ಇಂದು ಧಾರುಣ ಘಟನೆಯೊಂದು ನಡೆದಿದೆ. ಅದೇ ಮಕ್ಕಳನ್ನು ಹೊಲದ ಬೇಲಿಗೆ ಬೆಂಕಿಯಿಟ್ಟು, ಅದರಲ್ಲಿ ತಳ್ಳಿ, ತಾಯಿಯೂ ತಾನು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಈ ಮೂಲಕ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಲ್ಲಸಂದ್ರ ಗ್ರಾಮದಲ್ಲಿ ಬಹಿರ್ದೆಸೆಗೆಂದು ಇಬ್ಬರು ಮಕ್ಕಳೊಂದಿಗೆ ತಾಯಿ ಮಾರಕ್ಕ ತೆರಳಿದ್ದಾರೆ.ಬೇಲಿಯೊಂದಕ್ಕೆ ಬೆಂಕಿಯಿಟ್ಟಂತ ಆಕೆ, ತನ್ನ 4 ವರ್ಷದ ಪುತ್ರ ನಯನ್ ಹಾಗೂ 2 ವರ್ಷದ ಹರ್ಷವರ್ಧನ್ ನನ್ನು ಬೆಂಕಿಗೆ ದೂಡಿದ್ದಾರೆ.
ಈ ಬಳಿಕ 24 ವರ್ಷದ ಮಾರಕ್ಕ ಕೂಡ ಅದೇ ಬೆಂಕಿಗೆ ಹಾರಿ ಸಜೀವ ದಹನವಾಗುವ ಮೂಲಕ ಆತ್ಮಹತ್ಯೆಗೆ ಶರಣಾಗಿರೋ ಶಂಕೆ ವ್ಯಕ್ತವಾಗಿದೆ.ಈ ವಿಷಯ ತಿಳಿದು ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ರಾಜಣ್ಣ ಭೇಟಿ ನೀಡಿ, ಪರಿಶೀಲಿಸಿ ಮಾಹಿತಿ ಪಡೆದರು. ಈ ದುರಂತಕ್ಕೆ ಕೌಟುಂಬಿಕ ಕಲಹ ಕಾರಣ ಎನ್ನಲಾಗುತ್ತಿದೆ. ಈ ಸಂಬಂಧ ತಳುಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1