ಬೆಂಗಳೂರು ಮಾರ್ಚ್ 30: ಪ್ರಥಮ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಲಿದ್ದು ವಿದ್ಯಾರ್ಥಿಗಳು ತಮ್ಮ ರಿಸಲ್ಟ್ ಮೊಬೈಲ್ ಮೂಲಕ ತಿಳಿಯಬಹುದು. ಹಾಗಾದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಇಂದು ಪ್ರಕಟಿಸಲಿರುವ ಪ್ರಥಮ ಪಿಯುಸಿ ಪರೀಕ್ಷೆಯ ಫಲಿತಾಂಶ ತಿಳಿಯುವುದು ಹೇಗೆ ಎಂದು ನೋಡೋಣ.
![](https://samagrasuddi.co.in/wp-content/uploads/2024/03/image-269.png)
ಪ್ರಥಮ ಪಿಯುಸಿ ಪರೀಕ್ಷೆಗಳು ಫೆಬ್ರವರಿ 12 ರಿಂದ 27 ರವರೆಗೆ ನಡೆದಿದ್ದವು. ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಬಹುಬೇಗ ಒದಗಿಸಲು ನಿರ್ಧರಿಸಲಾಗಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಫಲಿತಾಂಶ ಭಾರೀ ಕುತೂಹಲವನ್ನು ಮೂಡಿಸಿದೆ. ಫಲಿತಾಂಶವನ್ನು ತಿಳಿಯಲು ಬಯಸುವ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಮತ್ತು result.dkpucpa.com ಗೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದು. ವಿದ್ಯಾರ್ಥಿಗಳು ತಮ್ಮ ನೊಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ಸಮೂದಿಸುವ ಮೂಲಕ ಫಲಿತಾಂಶವನ್ನು ತಿಳಿಯಬಹುದು.
ಪ್ರಥಮ ಪಿಯುಸಿ ಪರೀಕ್ಷೆಯ ಫಲಿತಾಂಶ ತಿಳಿಯುವುದು ಹೇಗೆ?
* ಮೊದಲು ಅಧಿಕೃತ ವೆಬ್‌ಸೈಟ್ karresults.nic.in ಮತ್ತು result.dkpucpa.com ಗೆ ಭೇಟಿ ನೀಡಿ.
* ಇದರಲ್ಲಿ ಪ್ರಥಮ ಪಿಯುಸಿ ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ
* ಇದನ್ನು ಲಾಗ್ ಇನ್ ಮಾಡಲು ಹುಟ್ಟಿದ ದಿನಾಂಕವನ್ನು ನಮೋದಿಸಿ.
*ಅಥವಾ ನಿಮ್ಮ ನೋಂದಣಿ ಸಂಖ್ಯೆ/ SATS ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ಬಳಸಿಕೊಂಡು ಲಾಗಿನ್ ಮಾಡಿ
* ನಿಮ್ಮ ವಿವರಗಳನ್ನು ಸಲ್ಲಿಸಿದ ಬಳಿಕ ಫಲಿತಾಂಶಗಳನ್ನು ವೀಕ್ಷಿಸಬಹುದು.
* ಬೇಕಿದ್ದಲ್ಲಿ ನೀವು ಫಲಿತಾಂಶವನ್ನು ಡೌನ್‌ಲೋಡ್ ಕೂಡ ಮಾಡಿಕೊಳ್ಳಬಹುದು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1