
ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ, ಅರ್ಜಿ ಸಲ್ಲಿಕೆ ಮತ್ತು ಆಯ್ಕೆ ಪ್ರಕ್ರಿಯೆ ವಿವರ ಇಲ್ಲಿದೆ.
ಕರ್ನಾಟಕ ಉಚ್ಛ ನ್ಯಾಯಾಲಯದಿಂದ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಲಾಗಿದೆ. ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ ನ್ಯಾಯಾಧೀಶರ ಹುದ್ದೆಗಳು ಇವಾಗಿವೆ.
ಒಟ್ಟು 14 ಹುದ್ದೆಗಳ ನೇಮಕಾತಿ ನಡೆಯಲಿದೆ. ಈಗಾಗಲೇ ವಕೀಲಿ ವೃತ್ತಿಯಲ್ಲಿ ಅನುಭವ ಹೊಂದಿರುವ ವಕೀಲರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ, ಅರ್ಜಿ ಸಲ್ಲಿಕೆ ಮತ್ತು ಆಯ್ಕೆ ಪ್ರಕ್ರಿಯೆಗಳು ಈ ಕೆಳಗಿನಂತಿವೆ.
ಅಧಿಸೂಚನೆ
ಹುದ್ದೆ ವಿವರ: ಕರ್ನಾಟಕ ಹೈಕೋರ್ಟ್ನ ಅಧೀನದಲ್ಲಿರುವ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 14 ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಅಧಿಕೃತ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಹೊಂದಿರಬೇಕು.
ಅನುಭವ: ಅಭ್ಯರ್ಥಿಗಳು ಹೈಕೋರ್ಟ್ ಅಥವಾ ಅದರ ಅಧೀನ ನ್ಯಾಯಾಲಯದಲ್ಲಿ ಕನಿಷ್ಠ 7 ವರ್ಷ ಹುದ್ದೆ ನಿರ್ವಹಣೆ ಮಾಡಿರುವ ಅನುಭವ ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 45 ವರ್ಷ ವಯೋಮಿತಿ ಹೊಂದಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಗಮನಿಸಿ ಮುಂದುವರೆಯುವುದು ಅವಶ್ಯಕವಾಗಿದೆ. ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗೆ ಪ್ರತ್ಯೇಕ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪ್ರಿಲಿಮನರಿಗೆ ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 500 ರೂ, ಇತರ ಅಭ್ಯರ್ಥಿಗಳಿಗೆ 1000 ರೂ ಅರ್ಜಿ ಶುಲ್ಕ ಇರುತ್ತೆ.
ಮುಖ್ಯ ಪರೀಕ್ಷೆಗೆ ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ 750 ರೂ, ಇತರ ಅಭ್ಯರ್ಥಿಗಳಿಗೆ 1500 ರೂ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಪ್ರಿಲಿಮನರಿ, ಮುಖ್ಯ ಪರೀಕ್ಷೆ ಮತ್ತು ವೈವಾ ಮೂಲಕ ಆಯ್ಕೆ ಮಾಡಲಾಗುವುದು
ಈ ಹುದ್ದೆಗೆ ಅಕ್ಟೋಬರ್ 19ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್ 17 ಆಗಿದೆ. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ನವೆಂಬರ್ 18 ಆಗಿರುತ್ತದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗೆ karnatakajudiciary.kar.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1