KSET: ಕೆಸೆಟ್ ಪರೀಕ್ಷೆ ಫಲಿತಾಂಶ ಪ್ರಕಟ; ಚೆಕ್ ಮಾಡಲು ಬೇಕಾದ ಲಿಂಕ್ ಇಲ್ಲಿದೆ.

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನವೆಂಬರ್ 24ರಂದು ನಡೆಸಿದ ಕೆಸೆಟ್ 2024 (KSET 2024) ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ತಮ್ಮ ಲಾಗಿನ್‌ನಲ್ಲಿ ಪ್ರತ್ಯೇಕವಾಗಿ ಫಲಿತಾಂಶ ಚೆಕ್‌ ಮಾಡಬಹುದು.

ಕೆಸೆಟ್‌ 2024 ಪ್ರಾವಿಷನಲ್ ರಿಸಲ್ಟ್‌ ಚೆಕ್‌ ಹೇಗೆ ಮಾಡೋದು?

ಎಲ್ಲ ಅಭ್ಯರ್ಥಿಗಳ ವಿಷಯವಾರು ತಾತ್ಕಾಲಿಕ ಅಂಕಪಟ್ಟಿ ಫಲಿತಾಂಶವನ್ನು ಮೇಲಿನ ವಿಧಾನದಲ್ಲಿ https://cetonline.karnataka.gov.in/kea/kset2024 ವೆಬ್‌ಪೇಜ್‌ನಲ್ಲಿ ‘KSET 2024 ಫಲಿತಾಂಶ ಪಟ್ಟಿ’ ಎಂದಿರುವ ಲಿಂಕ್‌ ಕ್ಲಿಕ್ ಮಾಡಿ, ನೋಡಬಹುದು.

ಕೆಇಎ ವೆಬ್‌ಸೈಟ್‌ https://cetonline.karnataka.gov.in/kea/ ಗೆ ಭೇಟಿ ನೀಡಿ.

ಓಪನ್‌ ಆದ ವೆಬ್‌ಪೇಜ್‌ನಲ್ಲಿ ಪ್ರವೇಶ » ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ ( ಕೆಸೆಟ್ – 2024) ಆಯ್ಕೆ ಮಾಡಿ ಕ್ಲಿಕ್ ಮಾಡಿ.

ನಂತರ ಓಪನ್ ಆಗುವ ವೆಬ್‌ಪೇಜ್‌ನಲ್ಲಿ ತಾತ್ಕಾಲಿಕ ಫಲಿತಾಂಶ ಚೆಕ್‌ ಮಾಡಲು ’ KSET 2024 ಪ್ರಾವಿಶನಲ್ ಫಲಿತಾಂಶ ಲಿಂಕ್’ ಎಂದಿರುವಲ್ಲಿ ಕ್ಲಿಕ್ ಮಾಡಿ.

ನಂತರ ಓಪನ್ ಆಗುವ ವೆಬ್‌ಪೇಜ್‌ನಲ್ಲಿ ಅಪ್ಲಿಕೇಶನ್‌ ನಂಬರ್, ಜನ್ಮ ದಿನಾಂಕ ಮಾಹಿತಿ ನೀಡಿ.

Submit ಎಂದಿರುವಲ್ಲಿ ಕ್ಲಿಕ್ ಮಾಡಿ. ತಾತ್ಕಾಲಿಕ ಫಲಿತಾಂಶ ಪ್ರದರ್ಶಿತವಾಗುತ್ತದೆ. ಚೆಕ್‌ ಮಾಡಿಕೊಳ್ಳಿ.

ಆಕ್ಷೇಪಣೆಗೆ ಅವಕಾಶ

ಈ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಯನ್ನು ಸಲ್ಲಿಸಲು ಕೆಇಎ ಲಿಂಕ್ ಬಿಡುಗಡೆ ಮಾಡಿದೆ. ಈ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರದಲ್ಲಿ ವಿಷಯವಾರು ಅಂತಿಮ ಫಲಿತಾಂಶವನ್ನು ಬಿಡುಗಡೆ ಮಾಡಲಾಗುತ್ತದೆ.

ಕೆಇಎ ದಿನಾಂಕ 24-11-2024 ರಂದು ನಡೆಸಿದ ಕೆಸೆಟ್-2024 ಪರೀಕ್ಷೆಗೆ ಸಂಬಂಧಿಸಿದಂತೆ, ಒಟ್ಟು 41 ವಿಷಯಗಳ ಕೀ ಉತ್ತರಗಳನ್ನು ಪ್ರಕಟಿಸಿತ್ತು. ನಂತರ ದಿನಾಂಕ 29-11-2024 ರವರೆಗೆ ಅಭ್ಯರ್ಥಿಗಳಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.

ಪ್ರಕಟಿತ ಕೀ ಉತ್ತರಗಳಿಗೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಶಿಫಾರಸ್ಸಿನಂತೆ ಅಂತಿಮ ಕೀ ಉತ್ತರಗಳನ್ನು ದಿನಾಂಕ 13-12-2024 ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಂತಿಮ ಕೀ ಉತ್ತರಗಳನ್ವಯ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಸದರಿ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಲಿಂಕ್ ಮೂಲಕ ದಿನಾಂಕ 19-12-2024 ಮಧ್ಯಾಹ್ನ 12.30 ರೊಳಗೆ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಪೂರಕ ದಾಖಲೆಗಳಿಲ್ಲದೆ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೆಇಎ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ.

Source : https://kannada.news18.com/news/state/kset-kset-exam-results-announced-here-is-the-link-to-check-pgy-1947376.html

Leave a Reply

Your email address will not be published. Required fields are marked *