ಬೆಂಗಳೂರು : ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದರು.

ದಾಖಲೆಯ 15 ನೇ ಬಜೆಟ್ ನ್ನು ಸುದೀರ್ಘ 3 ಗಂಟೆ 15 ನಿಮಿಷ ಕಾಲ ಮಂಡಿಸಿದರು. ಮಧ್ಯದಲ್ಲಿ ಯಾವುದೇ ಬ್ರೇಕ್ ತೆಗೆದುಕೊಳ್ಳದೇ ಸುದೀರ್ಘ 3 ಗಂಟೆ 15 ನಿಮಿಷ ಕಾಲ ಬಜೆಟ್ ಮಂಡಿಸಿದರು. ಬಜೆಟ್ ಭಾಷಣ ಮುಕ್ತಾಯ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಸದನವನ್ನು ಸಭಾಪತಿಗಳು ಸೋಮವಾರಕ್ಕೆ ಮುಂದೂಡಿದರು. ಇಂದಿನ ಬಜೆಟ್ ನಲ್ಲಿ ಕೃಷಿ, ಆರೋಗ್ಯ,ಕ್ರೀಡೆ, ಶಿಕ್ಷಣ, ಪ್ರವಾಸೋದ್ಯಮ ಸೇರಿ ಹಲವು ಕ್ಷೇತ್ರಗಳಿಗೆ ಕೊಡುಗೆ ಘೋಷಣೆ ಮಾಡಿದ್ದಾರೆ.
ಬಜೆಟ್ ನ ಪ್ರಮುಖ ಅಂಶಗಳು.
ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂ.
- ಜಿಎಸ್ಟಿ ಸಂಗ್ರಹದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ
- ಮದ್ಯದ ದರ ಮತ್ತೆ ಹೆಚ್ಚಳ: ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
- ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ಬಜೆಟ್‌ನಲ್ಲಿ ನಿರ್ಧಾರ
- ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್
- ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ, ಬೆಂಗಳೂರು ಗ್ರಾ. ಜಿಲ್ಲೆ ಮೂಗೆನಹಳ್ಳಿ ಬಳಿ ಆಹಾರ ಪಾರ್ಕ್ ನಿರ್ಮಾಣ
- ವಿಜಯಪುರ ಜಿಲ್ಲೆಯಲ್ಲಿ ತೋಟಗಾರಿಕೆ ಕಾಲೇಜು
- ಮೀನುಗಾರರ ರಕ್ಷಣೆಗೆ ಸಮುದ್ರ ಆಂಬುಲೆನ್ಸ್: ಸಿಎಂ ಘೋಷಣೆ
- ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಭದ್ರಾವತಿಯಲ್ಲಿ ಹೈಟೆಕ್ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು.
- ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ
- ಬೆಂಗಳೂರು ಉಪ ರೈಲು ಯೋಜನೆ ಚುರುಕುಗೊಳಿಸಲು ನಿರ್ಧಾರ
- ಮಂಗಳೂರಿನಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ
- 2024ರ ಮೇನಲ್ಲಿ ಕಾವೇರಿ ಹಂತ-5 ಕಾರ್ಯಾರಂಭ
- 76 ಗೋದಾಮುಗಳ ನಿರ್ಮಾಣಕ್ಕೆ 376 ಕೋಟಿಗಳ ವಿಶೇಷ ಪ್ಯಾಕೇಜ್
- ಗೃಹಲಕ್ಷ್ಮೀ ಯೋಜನೆಗೆ 28 ಸಾವಿರದ 608 ಕೋಟಿ ರೂಪಾಯಿ ಮೀಸಲು
- ಸುಳ್ಳು ಸುದ್ದಿ ತಡೆಗೆ ಸತ್ಯಶೋಧನಾ ತಂಡ
- 2 ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆ
- ಸೈನ್ಸ್ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿಗೆ 10 ಕೋಟಿ ರೂ.
- ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ 100 ಕೋಟಿ ರೂ
- ಖಾಲಿ ಇರುವ ಶಿಕ್ಷಕರ, ಉಪನ್ಯಾಸಕರ ನೇಮಕಕ್ಕೆ ಕ್ರಮ
- ಬೆಂಗಳೂರಿನ ಬಡಜನರಿಗೆ ಉಚಿತ ಪ್ರಯೋಗಾಲಯ ಸೇವೆ
- ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್,ಗ್ರ್ಯಾಚುಟಿ ಸೌಲಭ್ಯ
- 1,500 ವಿಶೇಷ ಚೇತನರಿಗೆ ದ್ವಿಚಕ್ರ ವಾಹನಗಳ ವಿತರಣೆ
- 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಮನೆ ಬಾಗಿಲಿಗೆ ಆಹಾರ: ಅನ್ನ ಸುವಿಧಾ ಯೋಜನೆ ಘೋಷಣೆ
- ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್
- ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಸೂಫಿ ಅಧ್ಯಯನ ಪೀಠ, ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಸಿದ್ದರಾಮೇಶ್ವರ ಅಧ್ಯಯನ ಪೀಠ ರಚನೆ
- ಬೆಂಗಳೂರಿನ 4 ಸ್ಥಳಗಳಲ್ಲಿ ಹೈಟೆಕ್ ಕ್ರೀಡಾ ಸಂಕೀರ್ಣ
- ರಾಜ್ಯದ 14 ವರ್ಷದ ಕ್ರೀಡಾಪಟುಗಳಿಗೆ ಮಿನಿ ಒಲಿಂಪಿಕ್ಸ್ ಆಯೋಜನೆ
- ಕನ್ನಡ ಭಾಷಾಂತರಕ್ಕೆ ನೂತನ ತಂತ್ರಾಂಶ ಕನ್ನಡ ಕಸ್ತೂರಿ ಅಭಿವೃದ್ಧಿ
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1