ವರದಿ ಮತ್ತು ಫೋಟೋ ಕೃಪೆ ವೇದಮೂರ್ತಿ ಭೀಮಸಮುದ್ರ ಮೊ : 8088076203
ಚಿತ್ರದುರ್ಗ: ಭೀಮಸಮುದ್ರ ಸಮೀಪದ ಹಿರೇಗುಂಟನೂರು ಗ್ರಾಮದ ಪ್ರಸಿದ್ಧ ದ್ಯಾಮಲಂಬ ದೇವಸ್ಥಾನದ ಅರ್ಚಕರಾದ ಮಂಜುನಾಥ್ (46) ಅವರು ಶನಿವಾರ ಬೆಳಿಗ್ಗೆ 8:30ರ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಒಬ್ಬ ಮಗ ಹಾಗೂ ಓರ್ವ ಮಗಳನ್ನ ಅಗಲಿದ್ದಾರೆ.
ಅವರ ಅಂತಿಮ ವಿಧಿ-ವಿಧಾನ ಹಾಗೂ ಅಂತ್ಯಕ್ರಿಯೆಯು ಶನಿವಾರ ಸಂಜೆ 5:00 ಗಂಟೆಗೆ ಗ್ರಾಮದ ರುದ್ರಭೂಮಿಯಲ್ಲಿ ನೆರವೇರಿತು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಗಣ್ಯರಿಂದ ಮತ್ತು ಭಕ್ತರಿಂದ ಅಂತಿಮ ದರ್ಶನ
ಅರ್ಚಕರ ಅಕಾಲಿಕ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ಸೂಚಿಸಿದ್ದಾರೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕೆ.ಸಿ. ವೀರೇಂದ್ರ (ಪಪ್ಪಿ), ಮಾಜಿ ಶಾಸಕರಾದ ಬಸವರಾಜನ್, ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಿ.ಎಸ್. ಮಂಜುನಾಥ್ ಸೇರಿದಂತೆ ಹೊನ್ನಾಳಿ, ಚಿತ್ರದುರ್ಗ, ದಾವಣಗೆರೆ ಹಾಗೂ ಸುತ್ತಮುತ್ತಲಿನ ನೂರಾರು ಭಕ್ತರು ಸ್ಥಳಕ್ಕೆ ಆಗಮಿಸಿ ಮೃತರ ಅಂತಿಮ ದರ್ಶನ ಪಡೆದರು ಮತ್ತು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಕುಟುಂಬಕ್ಕೆ ಸಾಂತ್ವನ ಹೇಳಿದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j