ಚಿತ್ರದುರ್ಗ, ನ.03:
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಹಿರಿಯೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸುಮಾರು ರೂ.2,200 ಕೋಟಿಗೂ ಅಧಿಕ ಮೊತ್ತದ ಅನುದಾನವನ್ನು ವಿವಿಧ ಇಲಾಖೆಗಳ ಮೂಲಕ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಹಿರಿಯೂರು ತಾಲ್ಲೂಕಿನ ಧರ್ಮಪುರ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ, ನೂತನ ಕೆ.ಎಸ್.ಆರ್.ಟಿ. ಬಸ್ ನಿಲ್ದಾಣ ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆ ಅಭಿವೃದ್ಧಿ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಬಡವರ ಪರವಾಗಿ ವಾಸದ ಮನೆಗಳಿಲ್ಲದ 5 ಲಕ್ಷ ಮಂದಿಗೆ ಈ ವರ್ಷವೇ ನಿವೇಶನ (ಸೈಟ್) ಹಂಚಿಕೆ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ ಅವರು, ಎಲ್ಲೆಲ್ಲಿ ಸರ್ಕಾರಿ ಜಾಗವಿದೆಯೋ ಅಲ್ಲೆಲ್ಲಾ ಬಡವರಿಗೆ ಅಗತ್ಯ ಸೌಕರ್ಯ ಕಲ್ಪಿಸಲು ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದರು. ಒಂದು ವೇಳೆ ಜಾಗವಿಲ್ಲದಿದ್ದರೆ ಖಾಸಗಿ ಜಮಿನನ್ನು ಖರೀದಿ ಮಾಡಿ, ಎಲ್ಲರಿಗೂ ಸೈಟ್ ಹಾಗೂ ಮನೆ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ.
ಪ್ರಜಾಸೇವೆ ಇಲಾಖೆಯ ಮುಖಾಂತರ ಜನರ ಮನೆ ಬಾಗಿಲಗೆ ಬಂದು ಅರ್ಜಿಗಳನ್ನು ಪಡೆದು, ಜನರಿಗೆ ಯಾವ ಕೆಲಸಗಳು ಆಗಬೇಕಿದೆ ಎಂಬುದನ್ನು ಅರ್ಜಿಯಲ್ಲಿ ಗುರತು ಮಾಡುತ್ತಾರೋ, ಆ ಕೆಲಸವನ್ನು ಅಧಿಕಾರಿಗಳೇ ಮಾಡಿಕೊಡಲಿದ್ದಾರೆ. ಸಾರ್ವಜನಿಕರ ಅಹವಾಲು ಸ್ವೀಕರಿಸಿ ಸೈಟ್, ಮನೆ, ಪಿಂಚಣಿ ಹಾಗೂ ಇತರೆ ಸೌಲಭ್ಯಗಳನ್ನು ನೇರವಾಗಿ ಒದಗಿಸಲು ಪ್ರಜಾಸೇವೆ ಅಭಿಯಾನ ಆರಂಭಿಸಲಾಗುವುದು ಎಂದರು.
ಮಾಜಿ ಸಚಿವ ಸುಧಾಕರ್ ಒಡನಾಟ ನೆನದ ಮುಖ್ಯಮಂತ್ರಿ
‘ನಾನು ಮಂತ್ರಿಯಾಗಿದ್ದಿದ್ದರೂ ಪರವಾಗಿಲ್ಲ ನನ್ನ ಆತ್ಮೀಯ ಸ್ನೇಹಿತ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಎಲ್ಲರ ಮುಂದೆ ಬಹಿರಂಗವಾಗಿ ನನ್ನ ಮಿತ್ರ ಡಿ.ಸುಧಾಕರ್ ಘೋಷಿಸಿದ್ದರು ಎಂದು ಮಾಜಿ ಸಚಿವ ಸುಧಾಕರ್ ಒಡನಾಟವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಮರಿಸಿದರು. ತಾವು ಯಾವುದೇ ಜಾತಿ, ಧರ್ಮ ನೋಡದೆ ಎಲ್ಲ ವರ್ಗದ ಜನರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಪ್ರವೃತ್ತಿ ಹೊಂದಿದ್ದು, ಸರ್ಕಾರದ ಜನಪರ ಯೋಜನೆಗಳನ್ನು ತಳಮಟ್ಟಕ್ಕೆ ಕೊಂಡೊಯ್ಯುವ ಕೆಲಸ ಮಾಡುತ್ತಿದ್ದೇನೆ ಎಂದರು.
ದೇಶದಲ್ಲಿ ಬೆಲೆ ಏರಿಕೆ ಗಗನಕ್ಕೇರುತ್ತಿದ್ದರೆ, ಜನಸಾಮಾನ್ಯರ ಆದಾಯ ಮಾತ್ರ ಪಾತಾಳಕ್ಕೆ ಕುಸಿಯುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಕಳವಳ ವ್ಯಕ್ತಪಡಿಸಿದರು. ಹೆಣ್ಣುಮಕ್ಕಳು ಹಾಗೂ ರೈತರ ಬದುಕನ್ನು ಉಳಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ. ರೈತರ ಅನುಕೂಲಕ್ಕಾಗಿ ಇಂಧನ ಇಲಾಖೆಯಿಂದ ಉಚಿತ ಫ್ರೀ ಪಂಪ್ಸೆಟ್ಗಳನ್ನು ಒದಗಿಸುವ ವಿದ್ಯುತ್ ಶಕ್ತಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ನೆರೆಹೊರೆ ರಾಜ್ಯಗಳಲ್ಲಿ ಇಲ್ಲದ ಈ ಜನಪರ ಯೋಜನೆ ನಮ್ಮ ಸರ್ಕಾರದಲ್ಲಿ ಜಾರಿಯಲ್ಲಿದೆ. ಬರಗಾಲದ ಸಂದರ್ಭದಲ್ಲೂ ನೀರಾವರಿ ಹಾಗೂ ಇತರೆ ಜನಪರ ಕಾರ್ಯಗಳಿಗೆ ಯಾವುದೇ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ. ಹಿರಿಯೂರು ತಾಲ್ಲೂಕಿನ ನೀರಾವರಿ ಬಗ್ಗೆ ವಿಶೇಷ ಕಾಳಜಿ ವಹಿಸಲಾಗಿದ್ದು, ಧರ್ಮಪುರ ಹೋಬಳಿಯ ಕೆರೆಗಳಿಗೆ ನೀರು ತುಂಬಿಸಿ ರೈತರ ಬದುಕಿನಲ್ಲಿ ಬದಲಾವಣೆ ತರುವ ಐತಿಹಾಸಿಕ ತೀರ್ಮಾನವನ್ನು ನಮ್ಮ ಸರ್ಕಾರ ಕೈಗೊಂಡಿದೆ ಎಂದು ತಿಳಿಸಿದರು. ರೂ.3.5 ಕೋಟಿ ವೆಚ್ಚದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ರೂ.2,500 ಕೋಟಿಗೂ ಅಧಿಕ ಮೌಲ್ಯದ ಕೆಲಸಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಪ್ರಸ್ತಾವಿಕವಾಗಿ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಕ್ಕೆ ಬಂದ ನಂತರ ಜನಪರ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದಾರೆ. ಅದರಲ್ಲೂ ಮೊದಲ ಆದ್ಯತೆಯಾಗಿ ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಿ, ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ರೈತರಿಗೆ ಪೂರಕವಾದ ನೇಗಿಲಯೋಗಿ, ತೇಗದ ಸಿರಿ ಯೋಜನೆಗಳ ಜತೆಗೆ, ಸಾರ್ವಜನಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಮತ್ತು ಕೆಲಸಗಳು ಕಾಲಮಿತಿಯಲ್ಲಿ ಪೂರ್ಣಗೊಳ್ಳಲು ‘ಪ್ರಜಾಸೇವೆ’ ಎನ್ನುವ ನೂತನ ಕಾರ್ಯಕ್ರಮವನ್ನು ನಾಡಿನಲ್ಲಿ ಪ್ರಾರಂಭಿಸಲಾಗಿದೆ.
ಭದ್ರಾ ಮೇಲ್ದಂಡೆ ಯೋಜನೆಯು ಜನರಿಗೆ ತಲುಪುತ್ತಿದ್ದು, ಚಿತ್ರದುರ್ಗ ಜಿಲ್ಲೆಗೆ ನೀರನ್ನು ಪ್ರಾಯೋಗಿಕವಾಗಿ ಹರಿಸುವ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದ್ದು, ಹಿರಿಯೂರು ತಾಲ್ಲೂಕಿನ ಐಮಂಗಳ ಹೋಬಳಿಯಲ್ಲಿ 1.35 ಟಿಎಂಸಿ ನೀರು ಹರಿದಿದೆ. ವೇದಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಚೆಕ್ಡ್ಯಾಮ್ಗಳಿಗೆ ಹಾಗೂ ಚಳ್ಳಕೆರೆ ಕ್ಷೇತ್ರಕ್ಕೆ ಹೆಚ್ಚಿನ ನೀರು ಒದಗಿಸಲು ಹಾಗೂ ಉಳಿದ ಕೆರೆಗಳನ್ನು ತುಂಬಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ಜವಗೊಂಡನಹಳ್ಳಿ ಹೋಬಳಿಯಲ್ಲಿ ರೂ.144 ಕೋಟಿ ವೆಚ್ಚದಲ್ಲಿ 16 ಕೆರೆಗಳನ್ನು ತುಂಬಿಸುವ ಯೋಜನೆ ಸೇರಿದಂತೆ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳು ಚುರುಕುಗೊಂಡಿವೆ.

ಹಿರಿಯೂರು ತಾಲ್ಲೂಕಿಗೆ ಸಂಬಂಧಿಸಿದಂತೆ ಎಲ್ಲಾ ನಾಲ್ಕು ಹೋಬಳಿ ಕೇಂದ್ರಗಳಲ್ಲಿ ಒಟ್ಟು ರೂ.2,200 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಧರ್ಮಪುರದಲ್ಲಿ ರೂ.3.35 ಕೋಟಿ ವೆಚ್ಚದಲ್ಲಿ ನೂತನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಂಘಸ್ಥಾಪನೆ ಮಾಡಲಾಗಿದೆ. ದಿವಂಗತ ಸಚಿವ ಡಿ. ಸುಧಾಕರ್ ಅವರ ಆಶಯಗಳು ಮತ್ತು ಅಭಿವೃದ್ಧಿ ಕನಸುಗಳನ್ನು ಮುಂದುವರಿಸಿಕೊಂಡು ಹೋಗಲಾಗುತ್ತಿದ್ದು, ತಾಲ್ಲೂಕಿನಾದ್ಯಂತ ಕುಡಿಯುವ ನೀರು, ರಸ್ತೆ ಮತ್ತು ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ವಿರೋಧ ಪಕ್ಷದವರು ಚುನಾವಣಾ ಗಿಮಿಕ್ ಎಂದು ಏನೇ ಟೀಕೆ ಮಾಡಿದರೂ, ನಾಳೆಯಿಂದಲೇ ಅಭಿವೃದ್ಧಿ ಕೆಲಸಗಳು ಕಾರ್ಯರೂಪಕ್ಕೆ ಬರಲಿವೆ ಎಂದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಹೆಚ್.ಮುನಿಯಪ್ಪ, ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೇ,ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್, ಸಣ್ಣ ನೀರಾವರಿ ಖಾತೆ ಸಚಿವ ಅಜಯ್ ಸಿಂಗ್, ಮುಜುರಾಯಿ ಖಾತೆ ಸಚಿವ ಬಸಂತಪ್ಪ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷ ಹಾಗೂ ಶಾಸಕ ಬಿ.ಜೆ. ಗೋವಿಂದಪ್ಪ,ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ. ಬಿ. ಯೋಗೇಶ್ ಬಾಬು, ಆದಿ ಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್. ಮಂಜುನಾಥ, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು, ಬೊವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ.ಬಿ, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್ ಆರೊಗೆರೆ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಕುಣಿಗಲ್ ಶಾಸಕ ಡಾ.ರಂಗನಾಥ್, ವಿಧಾನ ಪರಿಷತ್ ಶಾಸಕ ಡಿ.ಟಿ. ಶ್ರೀನಿವಾಸ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರು ಶಿವಣ್ಣ ಆರ್. ಗಂಜಿಗಟ್ಟೆ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್ಪೀರ್, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಎಂ.ಚಂದ್ರಪ್ಪ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಜಿಲ್ಲಾಧಿಕಾರಿ ರಮ್ಯ, ಜಿ.ಪಂ.ಸಿಇಓ ಡಾ.ಆಕಾಶ್.ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಸೇರಿದಂತೆ ಮತ್ತಿತರು ಇದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು