ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಕರ್ನಾಟಕ ವಾರ್ತೆ(ಚಿತ್ರದುರ್ಗ).ನ.03:
ಹಿರಿಯೂರು ತಾಲ್ಲೂಕಿಗೆ ಅಭಿವೃದ್ಧಿಯ ಲಕ್ಷ್ಮೀ ಕರೆತಂದು ನಿಮ್ಮ ಮುಂದೆ ನಿಂತಿದ್ದೇವೆ. ಮಾಜಿಸಚಿವ ದಿವಂಗತ ಡಿ.ಸುಧಾಕರ್ ಅವರು ಕನುಸು ಕಂಡಿದ್ದ ಕ್ಷೇತ್ರದ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡಿದ್ದೇನೆ. ಅನುದಾನ ಬಿಡುಗಡೆ ಮಾಡಿದ ಸಂತಸದಲ್ಲಿ ನಿಮ್ಮ ಮುಂದೆ ನಿಂತಿಲ್ಲ. ಅಗಲಿದ ಗೆಳೆಯ ಡಿ.ಸುಧಾಕರ್ ಅವರ ಅಭಿವೃದ್ಧಿ ಕಾಮಗಾರಿ ಮುಂದುವರಿಸುವ ಭಾರ ಹೊತ್ತ ದುಃಖದಿಂದ ಇಲ್ಲಿಗೆ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾವುಕರಾಗಿ ನುಡಿದರು.

ಹಿರಿಯೂರು ತಾಲ್ಲೂಕಿನ ಜೆ.ಜೆ.ಹಳ್ಳಿ ಹೋಬಳಿಯ ದಿಂಡಾವರ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಜೆ.ಜೆ.ಹಳ್ಳಿ ಹೋಬಳಿ 16 ಕೆರೆಗಳಿಗೆ ಮತ್ತು ಗಾಯಿತ್ರಿ ಜಲಾಶಯಕ್ಕೆ ಕುಡಿಯುವ ನೀರು ತುಂಬಿಸುವ ಹಾಗೂ ಅಂರ್ತಜಲ ಅಭಿವೃದ್ಧಿ ಯೋಜನೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಸುಮಾರು ರೂ.2,238 ಕೋಟಿ ರೂಪಾಯಿಗೂ ಹೆಚ್ಚಿನ ವೆಚ್ಚದ ಮೊತ್ತಕ್ಕೆ ಮುಂಜೂರಾತಿ ನೀಡಿ, ಭೂಮಿ ಪೂಜೆ ನೆರವೇರಿಸುವ ಮೂಲಕ ರೈತರ ಬದುಕಿಗೆ ಹೊಸ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ. ಆತ್ಮೀಯರಾಗಿದ್ದ ಹಾಗೂ ಈ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದ ಮುಖಂಡರಾದ ಸುಧಾಕರ್ ಅವರ ಕನಸನ್ನು ನನಸು ಮಾಡಲು ಮತ್ತು ಅವರು ನೀಡಿದ್ದ ಮಾತುಗಳನ್ನು ಉಳಿಸಿಕೊಳ್ಳಲು ತಾವು ಬಂದಿದ್ದೇನೆ. “ಜೈ ಹಿಂದ್, ಜೈ ಕಿಸಾನ್” ಎನ್ನುವುದೇ ನಮ್ಮ ಸರ್ಕಾರದ ಮೂಲ ಮಂತ್ರ. ಹಳ್ಳಿ ಉಳಿದರೆ ರಾಜ್ಯ, ರಾಜ್ಯ ಉಳಿದರೆ ದೇಶ ಉಳಿಯುತ್ತದೆ. ಅನ್ನದಾತರಾದ ರೈತರಿಗೆ ಶಕ್ತಿ ತುಂಬಲು ಮತ್ತು ಅವರ ಅಭಿವೃದ್ಧಿಗೆ ಸರ್ಕಾರ ಸದಾ ಬದ್ಧವಾಗಿದೆ ಎಂದು ತಿಳಿಸಿದರು.
ಜೆ.ಜೆ.ಹಳ್ಳಿಯ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯು ರೂ.244 ಕೋಟಿ ವೆಚ್ಚದ್ದಾಗಿದ್ದು, ಈ ಭಾಗದ ಕೆರೆಗಳಿಗೆ ಹಾಗೂ ಅಕ್ಕಪಕ್ಕದ ಭೂಮಿಗಳಿಗೆ ನೀರು ಒದಗಿಸಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಉದ್ದೇಶವನ್ನು ಹೊಂದಿದೆ. ಯೋಜನೆ ಅನುಷ್ಠಾನಕ್ಕೆ ಈಗಾಗಲೇ ಟೆಂಡರ್ ಕರೆಯಲಾಗಿದೆ. 30 ತಿಂಗಳ ಒಳಗಾಗಿ ಯೋಜನೆ ಪೂರ್ಣಗೊಳ್ಳಲಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಲಾಗಿದ್ದ 5,400 ಕೋಟಿ ರೂ.ಗಳಲ್ಲಿ ಒಂದು ಪೈಸವನ್ನು ಬಿಡುಗಡೆ ಮಾಡಿಲ್ಲ. ಈ ಬಗ್ಗೆ ನೀತಿ ಆಯೋಗದ ಸಭೆಯಲ್ಲಿ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಾನು ಧ್ವನಿಯತ್ತಿದ್ದೇವೆ. ಈ ಭಾಗದ ಸಂಸದರು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಒತ್ತಾಯವನ್ನು ಮಾಡುವ ಕೆಲಸ ಮಾಡಿಲ್ಲ ಎಂದು ಆರೋಪಿಸಿದರು.
ಗೃಹಲಕ್ಷ್ಮಿ ಕಂತು ಬಿಡಿಗಡೆ ಆದೇಶ:
ತಾಯಂದಿರಿಗೆ ಉಚಿತವಾಗಿ ಪ್ರಯಾಣ ಮಾಡಲಿಕ್ಕೆ ಶಕ್ತಿ ಯೋಜನೆಯನ್ನು ಕೊಟ್ಟು, ಹೆಣ್ಣು ಕುಟುಂಬದ ಕಣ್ಣು ಎಂದು ಹೇಳಿ ಪ್ರತಿ ಕುಟುಂಬಕ್ಕೂ ಕೂಡ ಆರ್ಥಿಕವಾದ ಶಕ್ತಿ ಕೊಡಬೇಕು ಎಂದು ಹೇಳಿ ಈ ಗೃಹಲಕ್ಷ್ಮಿ ಯೋಜನೆಯನ್ನು ತಂದು ಎಲ್ಲ ತಾಯಂದಿರಿಗೂ ಕೂಡ 2,000 ರೂಪಾಯಿ ಹಣವನ್ನು ಬಿಡುಗಡೆ ಮಾಡುವಂತ ಕೆಲಸ ಮಾಡಲಾಗಿದೆ. ಇಲ್ಲಿಗೆ ಬರುವುದಕ್ಕಿಂತ ಮುಂಚಿತವಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ನಾನು ಮರಳಿ ಬೆಂಗಳೂರಿಗೆ ಹೋಗುವುದರೊಳಗೆ ಅಕ್ಟೋಬರ್ ತಿಂಗಳ ವರೆಗಿನ ಗೃಹಲಕ್ಷ್ಮೀ ಕಂತು ನೇರವಾಗಿ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಯುವಕರಿಗೆ ಉದ್ಯೋಗವಿಲ್ಲದೆ ಹೋದವರಿಗೆ ಯುವನಿಧಿಯಡಿ ನಿರುದ್ಯೋಗ ಭತ್ಯ ನೀಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ.ಅಕ್ಕಿ ನೀಡುತ್ತಿದ್ದೇವೆ. ಇವು ಸಿದ್ದರಾಮಯ್ಯನವರ ಒ ಕನಸಿನ ಯೋಜನೆಗಳು. ಅವೆಲ್ಲವೂ ಕೂಡ ಇಂದು ಜಾರಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಕನಕಪುರದಷ್ಟೇ ಹಿರಿಯೂರು ಮುಖ್ಯ
ಕನಕಪುರ ಕ್ಷೇತ್ರ ಎಷ್ಟು ಮುಖ್ಯವೋ ನನಗೆ ಹಿರಿಯೂರು ಕ್ಷೇತ್ರ ಕೂಡ ಅಷ್ಟು ಮುಖ್ಯ. ಇಂದು ನನ್ನೊಂದಿಗೆ 10 ಜನ ಮಂತ್ರಿಗಳು ಬಂದು ನಿಮ್ಮ ಹಳ್ಳಹಳ್ಳಿಗೂ ಓಡಾಡಿ ಜನಕ್ಕೆ ಶಕ್ತಿಯನ್ನು ತುಂಬಿ ಅಭಿವೃದ್ಧಿಯ ಲಕ್ಷ್ಮಿಯನ್ನು ಕರೆತಂದಿದ್ದಾರೆ.ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿಗೆ ಮತ್ತು ಕುಡಿಯುವ ನೀರು ಹಾಗೂ ರಸ್ತೆಗಳ ಅಭಿವೃದ್ಧಿಗೆ ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ ವಿಶೇಷ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ಸಣ್ಣ ನೀರಾವರಿ ಸಚಿವ ಅಜಯ್ ಸಿಂಗ್ ಮಾತನಾಡಿ, ಕಳೆದ 50 ವರ್ಷಗಳಲ್ಲೇ ಕಾಣದಂತಹ ಭೀಕರ ಬರಗಾಲವನ್ನು ರಾಜ್ಯ ಎದುರಿಸುತ್ತಿದೆ. ರಾಜ್ಯದ 240 ತಾಲ್ಲೂಕುಗಳ ಪೈಕಿ 226 ತಾಲ್ಲೂಕುಗಳನ್ನು ಸರ್ಕಾರ ಬರಪೀಡಿತ ಎಂದು ಘೋಷಿಸಿದೆ. ಹಿರಿಯೂರು ತಾಲ್ಲೂಕು ಕೂಡ ಬರಕ್ಕೆ ತತ್ತರಿಸಿದ್ದು, ಇಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿದಿದೆ. ಬೋರ್‌ವೆಲ್ ಕೊರೆಸಿದರೆ 1,000 ಅಡಿ ಆಳಕ್ಕೆ ಹೋದರೂ ನೀರು ಸಿಗದ ಪರಿಸ್ಥಿತಿ ಇದೆ. ರೈತರ ಈ ಸಂಕಷ್ಟಕ್ಕೆ ಸ್ಪಂದಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಹೋಬಳಿಯ 16 ಕೆರೆಗಳು ಹಾಗೂ ಗಾಯತ್ರಿ ಜಲಾಶಯಕ್ಕೆ ಕುಡಿಯುವ ನೀರು ತುಂಬಿಸುವ ಮತ್ತು ಅಂತರ್ಜಲ ಅಭಿವೃದ್ಧಿಪಡಿಸುವ ಈ ಭಾಗದ ಜನರ ದಶಕಗಳ ಕನಸಾಗಿದ್ದ ಈ ಯೋಜನೆಗೆ ಮುಖ್ಯಮಂತ್ರಿಗಳು ರೂ.244 ಕೋಟಿ ಅನುದಾನ ಒದಗಿಸಿದ್ದಾರೆ. ಕೇವಲ 20 ತಿಂಗಳ ಒಳಗೆ ಈ ಯೋಜನೆಯ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಉದ್ಘಾಟನೆ ನೆರವೇರಿಸಲಾಗುವುದು ಎಂದು ಭರವಸೆ ನೀಡಿದರು.
ವೇದಾವತಿ ನದಿಗೆ ಅಡ್ಡಲಾಗಿ 'ಸಬ್‌ಮರ್ಸಿಬಲ್ ಡೈವರ್ಷನ್ ವೀರ್' ನಿರ್ಮಿಸಿ, ಒಟ್ಟು 0.3 ಟಿಎಂಸಿ ನೀರನ್ನು ಸಂಗ್ರಹಿಸಿ ಪಂಪ್ ಮಾಡಲಾಗುತ್ತದೆ. ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯ 10 ಕೆರೆಗಳು ಹಾಗೂ ಜಿಲ್ಲಾ ಪಂಚಾಯತ್ ವ್ಯಾಪ್ತಿಯ 6 ಕೆರೆಗಳು ಸೇರಿದಂತೆ ಒಟ್ಟು 16 ಕೆರೆಗಳಿಗೆ ನೀರು ತುಂಬಿಸಲಾಗುವುದು. ಇದಕ್ಕಾಗಿ 28 ಕಿ.ಮೀ. ಎಂ.ಎಸ್ ಪೈಪ್‌ಲೈನ್ ಹಾಗೂ 16 ಕಿ.ಮೀ. ಹೆಚ್.ಡಿ.ಪಿ.ಇ. ಪೈಪ್‌ಲೈನ್ ಅಳವಡಿಸಲಾಗುವುದು. ನೀರನ್ನು ಪಂಪ್ ಮಾಡಲು 2,000 ಹೆಚ್.ಪಿ. ಸಾಮರ್ಥ್ಯದ ವರ್ಟಿಕಲ್ ಟರ್ಬೈನ್ ಪಂಪ್‌ಗಳನ್ನು ಬಳಸಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ , ಪೌರಾಡಳಿತ ಸಚಿವ ಹೆಚ್.ಸಿ.ಬಾಲಕೃಷ್ಣ, ಸಮಾಜ ಕಲ್ಯಾಣ ಸಚಿವ ಕೆ.ಹೆಚ್.ಮುನಿಯಪ್ಪ, ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೇ,ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ, ಮುಜುರಾಯಿ ಖಾತೆ ಸಚಿವ ಬಸಂತಪ್ಪ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷ ಹಾಗೂ ಶಾಸಕ ಬಿ.ಜೆ. ಗೋವಿಂದಪ್ಪ,ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ. ಬಿ. ಯೋಗೇಶ್ ಬಾಬು, ಆದಿ ಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್. ಮಂಜುನಾಥ, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು, ಬೊವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ.ಬಿ, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್ ಆರೊಗೆರೆ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಕುಣಿಗಲ್ ಶಾಸಕ ಡಾ.ರಂಗನಾಥ್, ವಿಧಾನ ಪರಿಷತ್ ಶಾಸಕ ಡಿ.ಟಿ. ಶ್ರೀನಿವಾಸ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರು ಶಿವಣ್ಣ ಆರ್. ಗಂಜಿಗಟ್ಟೆ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್‌ಪೀರ್, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಎಂ.ಚಂದ್ರಪ್ಪ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಜಿಲ್ಲಾಧಿಕಾರಿ ರಮ್ಯಾ, ಜಿ.ಪಂ.ಸಿಇಓ ಡಾ.ಆಕಾಶ್.ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಸಣ್ಣ ನೀರವಾರಿ ಕಾರ್ಯಪಾಕಲ ಅಭಿಯಂತರ ಕೃಷ್ಣ ಸೇರಿದಂತೆ ಮತ್ತಿತರು ಇದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು