ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಧನಿಷ್ಠಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಮಂಗಳ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಪುನರ್ವಸು, ಯೋಗ : ಆಯುಷ್ಮಾನ್, ಕರಣ : ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 55 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 37 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:46 ರಿಂದ 02:14ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:23 ರಿಂದ 09:51ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:19 ರಿಂದ ಮಧ್ಯಾಹ್ನ 12:46ರ ವರೆಗೆ.

ಮೇಷ ರಾಶಿ: ಅಪರಿಚಿತರು ನಿಮ್ಮ ಬಗ್ಗೆ ಸಕಾರಾತ್ಮಕವಾಗಿ ಮಾತನಾಡುವುದು ಖುಷಿ ಕೊಡುವುದು. ನಾನಾ ಪ್ರಕಾರಗಳಿಂದ ನಿಮಗೆ ಖರ್ಚಿನ ಮಾರ್ಗವೇ ಕಾಣಿಸುವುದು. ದುರ್ಬಲತೆಯನ್ನು ನೀವು ದುರುಪಯೋಗ ಮಾಡಿಕೊಳ್ಳುವಿರಿ. ನಿಮ್ಮ ವ್ಯವಹಾರದ ಬಗ್ಗೆ ಸಲ್ಲದ ಮಾತುಗಳು ಕೇಳಿಬರಹುದು. ಕಿವಿಗೆ ಹಾಕಿಕೊಳ್ಳುವ ಅವಶ್ಯಕತೆ ಇಲ್ಲ. ಮಕ್ಕಳ ಜಗಳದಲ್ಲಿ ಮಧ್ಯಪ್ರವೇಶಿಸಿ ಸಮಾಧಾನ ಮಾಡುವಿರಿ. ಆಪ್ತರಿಗೆ ಉಡುಗೊರೆ ಕೊಡಲಿದ್ದೀರಿ. ಬೇಕೆಂದೇ ವಿವಾದದಲ್ಲಿ ಸಿಕ್ಕಿಕೊಳ್ಳುವಿರಿ. ಅಕಾರಣವಾಗಿ ಬರುವ ಕೋಪವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಿರಿ. ನಿಜವಾದ ಮಿತ್ರನ ಬಗ್ಗೆ ನಿಮಗೆ ಗೊತ್ತಾಗಲಿದೆ. ನೀವು ನಿಮ್ಮ ನಿಯಂತ್ರಣದಲ್ಲಿ ಇದ್ದರೆ ಯಾವ ಏರಿಳಿತವೂ ನಿಮ್ಮನ್ನು ಏನೂ ಮಾಡಲಾಗದು. ಸುಖದ ನಿರೀಕ್ಷೆಯು ನಿಮ್ಮನ್ನು ಸಂತೋಷದಿಂದ ಇಡುವುದು. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ.
ವೃಷಭ ರಾಶಿ: ಇಂದು ಅಸಹಾಯಕರಿಗೆ ಸಹಕಾರವನ್ನು ಮಾಡುವಿರಿ. ಸಣ್ಣ ಕೆಲಸಗಳು ಬಹಳಷ್ಟು ಇರಲಿವೆ. ಇನ್ನೊಬ್ಬರ ಕುಂದು, ಕೊರತೆಯನ್ನು ಆಡಿಕೊಳ್ಳುವುದು ಬೇಡ. ನಿಮ್ಮ ಆದಾಯದ ಬಗ್ಗೆ ನಿಮಗೆ ನಂಬಿಕೆ ಅಗತ್ಯ. ಹಳೆಯದನ್ನು ಹೊಸತನ್ನಾಗಿಸುವ ವಿಧಾನವು ಗೊತ್ತಿದೆ. ಉದ್ಯಮಿಗಳ ಕೆಲಸದಲ್ಲಿ ಅಡೆತಡೆಗಳು ಬರಬಹುದು. ಅದನ್ನು ಗಣನೆಗೆ ತೆಗೆದುಕೊಳ್ಳದೇ ಮುಂದುವರಿಯುವಿರಿ. ಸೂಕ್ಷ್ಮತೆಯನ್ನು ಅರಿತು ವ್ಯವಹಾರವನ್ನು ಮಾಡಿ. ಕಳೆದುಕೊಂಡಿದ್ದನ್ನು ನೀವು ಪುನಃ ಪಡೆದುಕೊಳ್ಳುವ ಪ್ರಯತ್ನದಲ್ಲಿ ನೀವು ಇರುವಿರಿ. ಲೆಕ್ಕಕ್ಕೆ ಸಿಗದೇ ಇರುವ ಎಷ್ಟೋ ಹಣವನ್ನು ಕಳೆದುಕೊಳ್ಳಬೇಕಾಗುವುದು. ಅತಿಯಾದ ಸಂತೋಷದ ಕ್ಷಣವು ನಿಮ್ಮ ಪಾಲಿಗೆ ಇರಲಿದೆ. ದೀರ್ಘಕಾಲದ ಸ್ನೇಹವು ಮತ್ತೆ ಹೊಸದಾಗಿ ಆರಂಭವಾಗಲಿದೆ. ವ್ಯವಹಾರದಲ್ಲಿ ಗೊಂದಲವಿಟ್ಟುಕೊಳ್ಳುವುದು ಬೇಡ. ಕೆಲವು ಸತ್ಯವು ನಿಮ್ಮ ಅನುಭವಕ್ಕೆ ಬರುವುದು.
ಮಿಥುನ ರಾಶಿ: ಇಂದು ಅತಿಯಾದ ಪ್ರಯಾಣದಿಂದ ನಿಮಗೆ ಆಯಾಸವಾಗುವುದು. ವ್ಯಾಪಾರವನ್ನು ವಿಸ್ತರಿಸುವ ಬಗ್ಗೆ ಗಂಭೀರವಾದ ಚಿಂತನೆ ಇರುವುದು. ಯಾವುದೋ ಅಸತ್ಯವಾದ ಉದ್ಯೋಗಕ್ಕೆ ಮನಸೋತು ಹಣವನ್ನು ಕಳೆದುಕೊಳ್ಳಬೇಕಾದೀತು. ವ್ಯಾಪಾರದ ನಷ್ಟವನ್ನು ಇನ್ನಾವುದರಿಂದಲೇ ತುಂಬಿಕೊಳ್ಳುವಿರಿ. ಮನೆಯ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವುದಿಲ್ಲ. ನಿಮ್ಮ ಶ್ರಮವು ಯಾರಿಗೂ ಕಾಣಿಸದೇಹೋಗಬಹುದು. ಹೂಡಿಕೆಯನ್ನು ನಿಲ್ಲಿಸುವ ಮನಸ್ಸಾಗುವುದು. ನಿಮಗೆ ಆಗದವರ ಮೇಲೆ ಸಲ್ಲದ ದೂರನ್ನು ಕೊಡುವಿರಿ. ತೀರ್ಥಕ್ಷೇತ್ರಗಳಿಗೆ ಹೋಗುವ ಮನಸ್ಸಾಗುವುದು. ನೀರಿನ ವಿಷಯದಲ್ಲಿ ಜಾಗಾರೂಕತೆ ಇರಲಿ. ಶಿಸ್ತನ್ನು ಕಾಪಾಡಿಕೊಂಡು ಕೆಲಸಮಾಡಿಕೊಳ್ಳುವಿರಿ. ಕೆಲವರ ತಂತ್ರಕ್ಕೆ ಸಿಲುಕಿ ನೀವು ಒದ್ದಾಡಬೇಕಾಗುವುದು. ನಟರಿಗೆ ಅವಕಾಶವು ಸಿಕ್ಕೂ ಸಿಗದಂತೆ ಆಗಬಹುದು.
ಕರ್ಕ ರಾಶಿ: ಇಂದು ನಿಮಗೆ ಸಂತೋಷವನ್ನು ಅನುಭವಿಸುವ ಮಾನಸಿಕ ಸ್ಥಿತಿ ಇರದು. ಅಜ್ಞಾತವಾಗಿ ಹಣಹೂಡಿಕೆ ಮಾಡಿ ಕೈ ಸುಟ್ಟುಕೊಳ್ಳುವಿರಿ. ಮನೆಗೆಲಸವು ನಿಮಗೆ ಹಿತವೆನಿಸುವುದು. ಮನ್ನಣೆಯ ದಾಹಕ್ಕೆ ಬಿದ್ದು ನಿಮ್ಮ ಸುಖವನ್ನು ನಷ್ಟಮಾಡಿಕೊಳ್ಳುವಿರಿ. ಚಟುವಟಿಕೆಯಿಂದ ಇದ್ದರೂ ನಿಮ್ಮ ಕೆಲಸ ಮಾತ್ರ ಆಗದೇ ಇರುವುದು. ಪಾಲುದಾರಿಕೆಯನ್ನು ಪಡೆಯುವ ಮೊದಲು ಸಾಧ್ಯಾಸಾಧ್ಯತೆಗಳ ಬಗ್ಗೆ ಗಮನವಿರಲಿ. ನಿಮ್ಮ ಉದ್ಯೋಗಕ್ಕೆ ಯಾರಿಂದಲಾದರೂ ಹೂಡಿಕೆಯನ್ನು ಮಾಡಿಸಿಕೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳಿಂದ ನಿಮಗೆ ವಂಚನೆಯಾಗಿದೆ ಎಂದನಿಸಬಹುದು. ದಾರಿ ಮುಕ್ತಾಯವಾಯಿತು ಎಂಬ ಆತಂಕ ಬೇಡ. ನಿಮ್ಮ ನಿಯಮಿತ ಚೌಕಟ್ಟನ್ನು ಬಿಟ್ಟು ಆಚೆ ಬರಲು ಆಗದು. ನಿಮ್ಮ ನಡತೆಯಿಂದ ಕುಲಕ್ಕೆ ಅವಮಾನವಾಗಬಹುದು. ನಿದ್ರೆಯನ್ನು ಹೆಚ್ಚು ಮಾಡುವಿರಿ. ಯಾವುದನ್ನೂ ಬಿಡುವ ಮನಸ್ಸಾಗದು.
ಸಿಂಹ ರಾಶಿ: ಇಂದು ಸ್ನೇಹಿತರು ನಿಮಗೆ ಕೆಲಸದ ಸರಳ ತಂತ್ರವನ್ನು ಹೇಳಿಕೊಟ್ಟಾರು. ಉದ್ವೇಗವನ್ನು ಪ್ರಯತ್ನ ಪೂರ್ವಕವಾಗಿ ನಿಷ್ಕ್ರಿಯ ಮಾಡುವಿರಿ. ನಿಮ್ಮ ಪ್ರೀತಿಯನ್ನು ನೀವು ಪ್ರಕಟಪಡಿಸಿದ್ದು ಸರಿಯಾಗದು. ಕೆಲಸದಲ್ಲಿ ಪೂರ್ವ ಯೋಜನೆ ಮತ್ತು ಉತ್ಸಾಹವು ನಿಮ್ಮ ಆಲೋಚನೆಗೆ ಬಲವನ್ನು ಕೊಡುವುದು. ಇಂದು ಉದ್ಯೋಗಿಗಳಿಗೆ ಕಛೇರಿಯಲ್ಲಿ ಎಲ್ಲರ ಜೊತೆ ಉತ್ತಮ ಸಮಯ ಕಳೆಯುವ ಅವಕಾಶವು ಸಿಗುವುದು. ತಪ್ಪನ್ನು ಮಾಡಿ ಅನಂತರ ಅದನ್ನು ಸರಿ ಮಾಡಿಕೊಳ್ಳಲು ವಿವಿಧ ಪ್ರಯತ್ನವನ್ನು ಮಾಡುವಿರಿ. ನೀರಿನಿಂದ ಭಯವು ಉಂಟಾಗುವುದು. ಕಛೇರಿಯ ಕಾರ್ಯವನ್ನು ಮನೆಯಲ್ಲಿ ಇದ್ದು ಮಾಡಬೇಕಾಗಬಹುದು. ಇಂದು ವ್ಯಾಪಾರವನ್ನು ಮಾಡುವ ಮನಸ್ಸು ಇಲ್ಲದಿದ್ದರೂ ಮನೆಯಲ್ಲಿ ಕುಳಿತು ಬೇಸರವಾಗಬಹುದು. ನಿಮಗೆ ಬೇಕಾದ ವ್ಯವಸ್ಥೆಯನ್ನು ನೀವು ಮಾಡಿಕೊಳ್ಳುವಿರಿ. ಸಾಮಾಜಿಕ ತಾಣದಲ್ಲಿ ಹೆಚ್ಚು ಸಮಯ ಕಳೆಯುವಿರಿ. ಸ್ನೇಹಿತರ ತಮಾಷೆಯು ನಿಮಗೆ ಇಷ್ಟವಾಗದು. ಸುಮ್ಮನೆ ಉಪದೇಶ ಮಾಡಿ ಸಮಯವನ್ನು ಹಾಳುಮಾಡಿಕೊಳ್ಳುವಿರಿ.
ಕನ್ಯಾ ರಾಶಿ: ಇಂದು ನೀವು ಬೇಸರಗೊಳ್ಳುವ ಸಮಯ ಬಂದರೂ ಮತ್ಯಾರೋ ಅದನ್ನು ಸರಿ ಮಾಡುವರು. ನಿಮ್ಮ ಶಕ್ತಿಯನ್ನು ಮೂರನೇ ವ್ಯಕ್ತಿಗಳು ಹೇಳಿ ಕ್ರಿಯಾಶೀಲರನ್ನಾಗಿ ಮಾಡಬೇಕಿದೆ. ಇಂದು ಹಣಕಾಸಿನ ಕಾಳಜಿಯನ್ನು ಹೆಚ್ಚುಮಾಡಿಕೊಳ್ಳುವಿರಿ. ಲಾಭಗಳನ್ನು ಪಡೆಯಲು ಅವಕಾಶಗಳಿದ್ದರೂ ಅರ್ಥಮಾಡಿಕೊಳ್ಳಲಾರಿರಿ. ಒತ್ತಡದ ನಡುವೆಯೂ ತಾಳ್ಮೆಯನ್ನು ನೀವು ಕಂಡುಕೊಳ್ಳುವುದು ಸೂಕ್ತ. ಹಳೆಯ ವಾಹನವನ್ನು ಪಡೆದುಕೊಳ್ಳುವಿರಿ. ಹಿರಿಯರಿಗೆ ಎದುರು ಮಾತನಾಡಿ ಅನಂತರ ಪಶ್ಚಾತ್ತಾಪಪಡುವಿರಿ. ನೆನಪಿನ ಶಕ್ತಿಗೆ ಸೂಕ್ತವಾದ ಪರಿಹಾರವನ್ನು ಮೊದಲು ಮಾಡಿಕೊಳ್ಳಬೇಕಾಗುವುದು. ಬೇಡವಾದುದರ ಬಗ್ಗೆ ಆಸೆ ಬೇಡ. ನಿಮ್ಮಷ್ಟಕ್ಕೇ ಇರಿ. ಬಂದು ಸೇರುವುದು. ಮಾತುಗಾರರು ಎಂದಿನ ವಾಚಾಳಿತನವನ್ನು ಕಡಿಮೆಮಾಡುವರು. ಸಿಕ್ಕ ಅವಕಾಶದಲ್ಲಿ ತೃಪ್ತಿ ಪಡೆಯುವುದು ಮುಖ್ಯವಾಗಿರಲಿ. ಮನೆಯ ಕಾರ್ಯದಲ್ಲಿ ಸಮಯವು ಕಳೆದುಹೋಗುವುದು.
ತುಲಾ ರಾಶಿ: ನಿಮ್ಮ ಧನಾತ್ಮಕ ದೃಷ್ಟಿಕೋನವು ನಿಮ್ಮ ಗುರಿಗೆ ಸಹಾಯವಾಗಲಿದೆ. ನಿಮ್ಮ ಪ್ರಯತ್ನಕ್ಕೆ ಇತರರ ಸಹಾಯವೂ ಪೂರಕವಾಗಿ ಇರುವುದು. ಹೊಸ ಒಪ್ಪಂದಕ್ಕೆ ಆಹ್ವಾನವಿದ್ದರೂ ನಿರಾಕರಿಸುವಿರಿ. ಇಂದು ಪ್ರಣಯದಲ್ಲಿ ತಿರುವು ಸಿಗುವುದು. ಹಣಕಾಸಿನ ವೆಚ್ಚಗಳ ಬಗ್ಗೆ ವಿಶೇಷವಾಗಿ ಕಾಳಜಿ ಬೇಕು. ಸ್ನೇಹತರ ಜೊತೆ ಮೋಜಿನಲ್ಲಿ ದಿನವನ್ನು ಮುಗಿಸುವಿರಿ. ಜಾಹಿರಾತು ವಿಭಾಗದಲ್ಲಿ ಇರುವವರಿಗೆ ಅವಕಾಶವು ಹೆಚ್ಚು ಸಿಗಬಹುದು. ವಾಗ್ಮಿಗಳು ಸಿಕ್ಕ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವರು. ಸಂಪ್ರದಾಯದ ವಿಚಾರದಲ್ಲಿ ನಿಮಗೆ ಆಸಕ್ತಿಯು ಹೆಚ್ಚಾಗಬಹುದು. ನಿಮ್ಮ ಉಪಕಾರಕ್ಕೆ ಪ್ರತ್ಯುಪಕಾರವು ಸಿಗದೇ ಇರಬಹುದು. ಬಂಧುಗಳಿಂದ ಕೆಲವನ್ನು ನಿರೀಕ್ಷಿಸಲು ಸಾಧ್ಯವಾಗದು. ನಿಮ್ಮ ಕರ್ತವ್ಯವನ್ನು ಮಾಡಲು ಹಿಂದೇಟು ಹಾಕುವಿರಿ. ಲೆಕ್ಕಪತ್ರದ ವಿಚಾರದಲ್ಲಿ ನಿಷ್ಠುರವಾದ ಮನೋಭಾವವನ್ನು ಇಟ್ಟುಕೊಳ್ಳುವಿರಿ.
ವೃಶ್ಚಿಕ ರಾಶಿ: ಇಂದು ಪ್ರವಾಸ, ವಿಹಾರಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವಿರಿ. ಇಂದು ನಿಮ್ಮ ಉತ್ಸಾಹವನ್ನು ನೀವೇ ಹೆಚ್ಚಿಸಿಕೊಳ್ಳುವಿರಿ. ನಿಮ್ಮ ಸಮಯವನ್ನು ನಿಷ್ಕ್ರಿಯಗೊಳಿಸುವ ಬದಲು, ನಿಮ್ಮ ಗಳಿಕೆಯ ಸಾಮರ್ಥ್ಯವನ್ನು ಹೆಚ್ಚಿಸುವ ಚಟುವಟಿಕೆಗಳನ್ನು ಪರಿಗಣಿಸಿ. ನಿಮ್ಮ ಕುಟುಂಬ ಸದಸ್ಯರಿಗೆ ಸಮಯ ನೀಡಿ. ಏಕಾಗ್ರತೆಯಿಂದ ಕೆಲಸ ಮಾಡಿದರೆ ಅನಾಯಾಸವಾಗಿ ಗುರಿಯನ್ನು ತಲುಪಬಹುದು. ಲಾಭಾಕ್ಕಾಗಿ ವ್ಯಾಪಾರದಲ್ಲಿ ಹೊಸದಾದ ಆಕರ್ಷ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಮಕ್ಕಳ ಜೊತೆ ಚಿಂತೆಯನ್ನೆಲ್ಲ ಬಿಟ್ಟು ಸಂತೋಷದಿಂದ ಕಾಲವನ್ನು ಕಳೆಯುವಿರಿ. ಔದಾಸೀನ್ಯದಿಂದ ವ್ಯಾಪಾರದಲ್ಲಿ ನಷ್ಟವಾಗಲಿದೆ. ಇಂದಿನ ಪ್ರಯಾಣದಿಂದ ಹಿಂಸೆ ಆಗಬಹುದು. ಮಿತ್ರರಿಂದ ಸಿಗಬೇಕಾದ ಹಣಕ್ಕೆ ಕತ್ತರಿ ಬೀಳುವುದು. ಆಸ್ತಿಯ ಖರೀದಿಯ ವಿಚಾರದಲ್ಲಿ ನೀವು ಸರಿಯಾದ ಮಾಹಿತಿಯನ್ನು ಪಡೆಯುವುದು ಸೂಕ್ತ. ಸಹೋದ್ಯೋಗಿಗಳ ಮೇಲೆ ನಿಮಗೆ ಅಸೂಯೆ ಉಂಟಾಗಬಹುದು. ಕೆಲಸ ಮಾಡುತ್ತಿದ್ದರೂ ಗಮನ ಎಲ್ಲಿಯೋ ಇರುವುದು.
ಧನು ರಾಶಿ: ನಿಮ್ಮ ನಕಾರಾತ್ಮಕ ಆಲೋಚನೆಗಳನ್ನು ಇನ್ನೊಬ್ಬರ ಮೇಲೆ ಹೇರುವಿರಿ. ಮಾನಸಿಕ ಆರೋಗ್ಯದಿಂದ ನಿಮಗೆ ಹಿನ್ನಡೆಯಾಗಬಹುದು. ಮಾತುಗಾರಿಗೆ ಉತ್ತಮ ಅವಕಾಶಗಳು ಲಭ್ಯವಾಗಬಹುದು. ಕ್ರೀಡಾಳುಗಳಿಗೆ ಹೆಚ್ಚು ಅವಕಾಶಗಳು ಸಿಗುವುದು. ಉದ್ಯೋಗವನ್ನು ಅರಸುತ್ತಿರುವ ನೀವು ದುಡಿಕಿ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಉತ್ತಮ ಕೆಲಸವನ್ನು ನಷ್ಟ ಮಾಡಿಕೊಳ್ಳುವಿರಿ. ಯಂತ್ರದ ವ್ಯಾಪಾರದಿಂದ ನಿಮಗೆ ಲಾಭವು ಅಧಿಕವಾಗುವುದು. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡಿಕೊಂಡು ಅನಂತರ ಬೇಸರಿಸುವರು. ವಿದೇಶದ ಜೊತೆಗೆ ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ. ಅಚಾತುರ್ಯದಿಂದ ಹಣವನ್ನು ಕಳೆದುಕೊಳ್ಳಬೇಕಾದೀತು. ಬೇಡದ ಕಾರ್ಯಕ್ಕೆ ಯಾರಾದರೂ ಪ್ರಚೋದಿಸಿಯಾರು. ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು. ಒಂದು ಕಾರ್ಯಕ್ಕೆ ವಿಘ್ನಗಳು ಬರುತ್ತಿದ್ದು ದೈವಜ್ಞರನ್ನು ಸಂಪರ್ಕಿಸಿ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಉತ್ತಮ.
ಮಕರ ರಾಶಿ: ಇಂದು ನಿಮ್ಮ ಸಂಗಾತಿಯ ಉತ್ಸಾಹವನ್ನು ಹೆಚ್ಚಿಸಬಹುದು. ವೇಗವಾಗಿ ಹಣದಲ್ಲಿ ಅಭಿವೃದ್ಧಿಯ ಕಾಣುವ ಬಗ್ಗೆ ಬಯಕೆ ಇರವುದು. ನಿಮ್ಮ ಸಂತೋಷದಾಯಕ ಮತ್ತು ಶಕ್ತಿಯುತ ವರ್ತನೆಯು ನಿಮ್ಮವರಿಗೆ ಸಂತೋಷವನ್ನು ಕೊಡುವುದು. ಪ್ರೀತಿಯ ವಿಷಯಗಳಲ್ಲಿ ತಪ್ಪು ಮಾಡಿಕೊಳ್ಳುವ ಸಾಧ್ಯತೆ ಇದೆ. ನೀವು ತಮ್ಮ ಹಠಮಾರಿತನದಿಂದ ಬೇರೆಯವರ ಹೃದಯವನ್ನು ನೋಯಿಸಬಹುದು. ಮೇಲಧಿಕಾರಿಗಳಿಗೆ ನೇರ ನುಡಿಯ ಪ್ರತಿಕ್ರಿಯೆಯನ್ನು ನೀಡುವುದು ಬೇಡ. ದಿನನಿತ್ಯದ ಬಳಕೆಯ ವಸ್ತುಗಳ ವ್ಯಾಪಾರ ಮಾಡುವವರ ಮಾರಾಟ ನಿರೀಕ್ಷೆಗಿಂತ ಹೆಚ್ಚಾಗಿರುತ್ತದೆ. ಸರ್ಕಾರ ಕಾರ್ಯವು ಇಂದು ಪೂರ್ಣವಾಗದು ಎಂದು ಅಂದುಕೊಂಡಿದ್ದರೂ ಕೊನೆಗೆ ಕೆಲಸವಾಗುವುದು. ಎಲ್ಲರ ಮೇಲೂ ಅನುಮಾನ ಪಡುವ ದುರಭ್ಯಾಸವು ಬೆಳೆಯಬಹುದು. ಮನೆಯ ಸಮೀಪದಲ್ಲಿಯೇ ನಿಮ್ಮ ಉದ್ಯೋಗವು ಸಿಗಲಿದೆ. ಮನೆಯಲ್ಲಿ ತಾಳ್ಮೆಯಿಂದ ವ್ಯವಹರಿಸಿ. ನಿಮ್ಮ ವಾಹನಕ್ಕಾಗಿ ಖರ್ಚನ್ನು ಮಾಡಬೇಕಾಗುವುದು.
ಕುಂಭ ರಾಶಿ: ಇಂದು ನೀವು ಎಂದೋ ಖರೀದಿಸಿದ ಭೂಮಿಯನ್ನು ಮಾರಾಟ ಮಾಡಲು ಬಯಸುವವರು. ಇಂದು ಲಾಭವನ್ನು ನೀವು ಮಾಡಿಕೊಳ್ಳುವಿರಿ. ಯಾರದೋ ಮೂಲಕ ನಿಮಗೆ ಶುಭ ಸಂದೇಶವು ಬರಲಿದೆ. ಇಂದು ನಿಮ್ಮ ಇಷ್ಟದವರಿಂದ ದೂರವಿರುವುದು ನಿಮಗೆ ಸವಾಲಿನ ಸಂಗತಿಯಾಗಿದೆ. ನಿಮ್ಮ ಕಾರ್ಯದ ಅನುಭವವು ಇಂದು ಪ್ರಯೋಜನಕ್ಕೆ ಬರಲಿದ್ದು, ಎಲ್ಲರೂ ನಿಮ್ಮ ಸಲಹೆಯನ್ನು ಪಡೆಯುವರು. ಇಂದು ನಿಮಗೆ ಸಾಮಾಜಿಕ ಕಾರ್ಯಗಳಿಗೆ ಪ್ರೇರಣೆ ಸಿಗಬಹುದು. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಓಡಾಟವು ಅಧಿಕವಾಗಿ ಇರುವುದು. ಸ್ನೇಹಿತರು ನಿಮಗೆ ಸುಳ್ಳು ಹೇಳುವರು. ಮಕ್ಕಳ ವಿದ್ಯಾಭ್ಯಾಸಕ್ಕೆ ನೀವೇ ವಿಶೇಷ ಕಾಳಜಿಯನ್ನು ತೋರಿ ಅವರನ್ನು ಓದಿಗೆ ಪ್ರೇರಣೆ ಕೊಡಬೇಕಾಗುವುದು. ದಿನದ ಕೆಲಸವೇ ಇಂದು ಬಹಳ ಆಗಲಿದ್ದು ಇನ್ನೊಬ್ಬರ ಕೆಲಸವನ್ನು ಮಾಡಿಕೊಡಲು ತಾಳ್ಮೆ ಇರಲಾರದು. ನಿಮ್ಮ ಕೆಲಸವನ್ನು ಅನ್ಯ ಕಾರಣಗಳಿಂದ ಮಾಡಿಕೊಳ್ಳಲಾಗದು.
ಮೀನ ರಾಶಿ: ಇಂದು ನೀವು ಜೀವನವನ್ನು ಪೂರ್ಣವಾಗಿ ಸ್ವೀಕರಿಸುವಾಗ ಸಂಪೂರ್ಣ ಆನಂದದಲ್ಲಿ ಪಾಲ್ಗೊಳ್ಳುವಿರಿ. ಪ್ರತಿ ಕ್ಷಣವನ್ನು ಆನಂದದಿಂದ ಇರಲು ಇಚ್ಛಿಸುವಿರಿ. ಬರಬೇಕಿದ್ದ ಹಣವು ಇಂದು ನಿಮ್ಮ ಕೈ ಸೇರಿ, ಆರ್ಥಿಕ ಸ್ಥಿತಿಯು ಸುಧಾರಿಸುತ್ತದೆ. ಇಂದು ಕಾರ್ಯದ ಸ್ಥಳದಲ್ಲಿ ಆಶ್ಚರ್ಯವಾಗಬಹುದು. ಕಾರ್ಯದಲ್ಲಿ ಸಂಪೂರ್ಣ ಜಾಗರೂಕರಾಗಿ ನಿರ್ವಹಿಸುವಿರಿ. ಕಛೇರಿ ಕೆಲಸದಿಂದ ನಿಮ್ಮ ಸ್ವಂತ ಕೆಲಸಕ್ಕೆ ತೊಂದರೆಯಾಗಬಹುದು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುವರು. ಯಾರದೋ ವಿವಾಹದ ಕಾರ್ಯಕ್ಕೆ ಓಡಾಟ ಮಾಡಬೇಕಾದೀತು. ಒಂದಿಷ್ಟು ಆಯಾಸ ಬಿಟ್ಟರೆ, ಮತ್ತೇನೂ ಆಗದು. ಇನ್ನೊಬ್ಬರ ಬಗ್ಗೆ ನಿಮ್ಮಲ್ಲಿ ಕುತೂಹಲ ಇರಲಿದೆ. ಸಜ್ಜನರ ಜೊತೆ ಸಮಯ ಕಳೆಯುವ ಅವಕಾಶ ಸಿಗುವುದು. ಸಂಗಾತಿಯ ಜೊತೆ ಭಿನ್ನಮತವು ಬರಬಹುದು. ಕುಟುಂಬದ ಹಿರಿಯರ ಅನಾರೋಗ್ಯದ ಕಾರಣ ನಿಮ್ಮ ಸ್ವಂತ ಕಾರ್ಯವನ್ನು ಮಾಡಿಕೊಳ್ಳಲಾಗದು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1