Horoscope 8 April: ದಿನಭವಿಷ್ಯ;ಸಾಮಾಜಿಕ ಚಟುವಟಿಕೆಗಳಲ್ಲಿ ನಿಮ್ಮ ಮಹತ್ವದ ಕೊಡುಗೆಯಿಂದಾಗಿ ನಿಮ್ಮ ಗೌರವವೂ ಹೆಚ್ಚಾಗುತ್ತದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಚತುರ್ದಶಿ, ನಿತ್ಯನಕ್ಷತ್ರ: ಉತ್ತರಭಾದ್ರ, ಯೋಗ: ಬ್ರಹ್ಮ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:57ರಿಂದ 09:29ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:02 ರಿಂದ ಮಧ್ಯಾಹ್ನ 12:34 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:07 ರಿಂದ ಮಧ್ಯಾಹ್ನ 03:40ರ ವರೆಗೆ.

ಮೇಷ ರಾಶಿ: ನಿಮ್ಮ ಆತ್ಮವಿಶ್ವಾಸವೇ ಎಲ್ಲ ಕಾರ್ಯಗಳನ್ನು ಅನಾಯಾಸವಾಗಿ ಮಾಡುವಂತೆ ಮಾಡುತ್ತದೆ. ಹೊಸ ಸ್ನೇಹಿತರನ್ನು ಪಡೆಯುವಿರಿ. ಪ್ರೀತಿಪಾತ್ರರ ಜೊತೆ ಇಂದು ವಿಹಾರ ಮಾಡುವಿರಿ. ವಿದ್ಯಾರ್ಥಿಗಳು ಯಂತ್ರೋಪಕರಣಗಳನ್ನು ಪಡೆದು ಆನಂದಿಸುವರು. ಕೆಲಸವನ್ನು ನಿರ್ಧರಿಸುವಾಗ ಯಾವುದೇ ಒತ್ತಡಗಳಿಗೆ ಅವಕಾಶ ಕೊಡಬೇಡಿ. ಬೇಕಾದಷ್ಟು ಕಾರ್ಯಗಳಿರುತ್ತವೆ. ಸಮಯವನ್ನು ಹಾಗೇ ವ್ಯರ್ಥವಾಗಿ ಕಳಡಯಬೇಡಿ. ಸ್ನೇಹಿತರ ಬೆಂಬಲವು ನಿಮ್ಮ ಧೈರ್ಯ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವುದು. ಸಾಮಾಜಿಕ ಚಟುವಟಿಕೆಗಳಲ್ಲಿ ನಿಮ್ಮ ಮಹತ್ವದ ಕೊಡುಗೆಯಿಂದಾಗಿ ನಿಮ್ಮ ಗೌರವವೂ ಹೆಚ್ಚಾಗುತ್ತದೆ. ವ್ಯವಹಾರದಲ್ಲಿ ಹೊಸ ಕೊಡುಗೆಗಳನ್ನು ಕಾಣಬಹುದು. ರಾಜಕೀಯದಿಂದ ನಿಮ್ಮ ವ್ಯವಹಾರಕ್ಕೆ ಹೊಸ ದಿಕ್ಕನ್ನು ಸಿಗಬಹುದು. ಹಳೆಯ ಯಂತ್ರಗಳ ದುರಸ್ತಿಗೆ ಹಣವು ಖರ್ಚಾಗುವುದು. ನಿಮ್ಮಿಂದಾಗದ ಕೆಲಸವನ್ನು ಬೇರೆಯವರು ಮಾಡಿಯಾರು.

ವೃಷಭ ರಾಶಿ: ಇಂದು ನಿಮಗೆ ನ್ನೊಬ್ಬರ ಕೆಲಸದ ಕಡೆ ಗಮನ ಹರಿಸಲಾಗದಷ್ಟು ಒತ್ತಡ ಇರಲಿದೆ. ಅನ್ಯರ ಕಾರ್ಯದ ಸಹವಾಸ ಬೇಡ. ನೀವು ನಿಮ್ಮ ಅಂತರಂಗವನ್ನು ಮುಚ್ಚಿಡಲು ಪ್ರಯತ್ನಿಸಿದರೂ ಅದು ನಿಲ್ಲದು. ಸ್ನೇಹಿತರು ನಿಮ್ಮ ಜೊತೆಗೇ ಇದ್ದು ನಿಮ್ಮ ಎಲ್ಲ ಆಗುಹೋಗುಗಳಿಗೂ ಜೊತೆಯಾಗುವರು. ಪ್ರೀತಿಯಿಂದ ಎಲ್ಲರೊಂದಿಗೆ ಮಾತನಾಡಿ. ಕುಟುಂಬದ ಮೋಜಿನ ಚಟುವಟಿಕೆಗಳನ್ನು ಮಾಡುತ್ತ ಕಾಲ ಕಳೆಯುವಿರಿ. ಮನೆಯ ನಿರ್ವಹಣೆಯ ಕೆಲಸದಲ್ಲಿಯೂ ನೀವು ಆಸಕ್ತಿ ಇರುವುದು. ಸ್ವಂತ ಕೆಲಸವನ್ನು ಬಹಳ ಅಚ್ಚು ಕಟ್ಟಾಗಿ ಮಾಡಿ ಮುಗಿಸುವಿರಿ. ವ್ಯಾಪಾರ ವಲಯದಲ್ಲಿ ಹೆಚ್ಚಿನ ಜಾಗರೂಕತೆ ಅಗತ್ಯ. ನೌಕರರ ನಿರ್ಲಕ್ಷ್ಯದಿಂದ ಆಗುವ ಹೊಣೆಯನ್ನೂ ಹೊರಬೇಕಾಗುವುದು. ಕೆಲವು ರೀತಿಯ ಹಾನಿಯ ಬಗ್ಗೆಯೂ ಚಿಂತಿಸುವುದು ಅಗತ್ಯ. ಸರ್ಕಾರಿ ಕೆಲಸದಲ್ಲಿ ಯಾವುದೇ ತೊಂದರೆ ಇಲ್ಲ.

ಮಿಥುನ ರಾಶಿ: ಇಂದು ನಿಮ್ಮ ಸಂಗಾತಿಯ ಪ್ರಶ್ನೆಗಳಿಗೆ ಉತ್ತರಿಸಲಾಗದೇ ಸೋಲಬಹುದು. ಮನೆಯ ಕಾರ್ಯಗಳಲ್ಲಿ ಮಗ್ನರಾಗಿ ಆಯಾಸವನ್ನು ತರಿಸಿಕೊಳ್ಳುವಿರಿ. ನಿಮ್ಮ ತಿಳಿವಳಿಕೆಯ ಮಟ್ಟ ಎಷ್ಟೆಂದು ನಿಮ್ಮ ವರ್ತನೆಯಿಂದ ತಿಳಿಯುತ್ತದೆ. ಮಾನಸಿಕ ಒತ್ತಡಕ್ಕೆ ಸಿಲುಕದೇ ನಿಶ್ಚಿಂತೆಯಿಂದ ಇರಲು ಪ್ರಯತ್ನಿಸಿ. ಇಂದು ನಿಮ್ಮ ದಕ್ಷತೆಯಿಂದ ಉತ್ತಮ ರೀತಿಯಲ್ಲಿ ಅನೇಕ ವಿಷಯಗಳನ್ನು ಸಾಧಿಸಲು ಇದು ನಿಮಗೆ ಸಹಾಯ ಮಾಡುತ್ತದೆ. ಹೂಡಿಕೆ ಮಾಡಲು ಯಾವುದೇ ಯೋಜನೆ ಇದ್ದರೆ, ಅದು ಲಾಭದಾಯಕವಾಗಿರುತ್ತದೆ. ಆಪ್ತ ಸ್ನೇಹಿತರ ಬೆಂಬಲವೂ ನಿಮ್ಮ ಮನಸ್ಥಿತಿಯನ್ನು ಹೆಚ್ಚಿಸುತ್ತದೆ. ನಿಮ್ಮ ಕೋಪವನ್ನು ನಿಯಂತ್ರಿಸಿ. ಕೆಲವೊಮ್ಮೆ ಸ್ವಭಾವದಲ್ಲಿ ಭ್ರಮೆಯಿಂದ ಕೋಪದ ಸ್ಥಿತಿ ಇರಬಹುದು. ನಿಮ್ಮಲ್ಲಿರುವ ನ್ಯೂನತೆಗಳನ್ನು ನೀವೇ ತಿಳಿದು ಸರಿಪಡಿಸಿ.

ಕರ್ಕ ರಾಶಿ: ಇಂದು ನಿಮ್ಮ ಇಷ್ಟದವರ ಜೊತೆ ಖುಷಿಯಿಂದ ವ್ಯವಹರಿಸಿ. ಕೆಲವು ಮಾತುಗಳಿಂದ ಅವರಿಗೆ ನೋವಾಗಬಹುದು.‌ ನ್ಯಾಯಾಲಯಕ್ಕೆ ಸಂಬಂಧಿಸಿದ್ದನ್ನು ತುರ್ತಾಗಿ ಮಾಡುವಿರಿ. ಎಷ್ಟೋ ದಿನದ ನಿಮ್ಮ ಜಟಿಲತೆಗಳು ಮಂದಗತಿಯಲ್ಲಿ ಸಾಗುತ್ತಿದ್ದು ಇಂದು ವೇಗವನ್ನು ಪಡೆಯುತ್ತದೆ. ನಿಮ್ಮ ಸುತ್ತಲಿನ ಜಗತ್ತಿಗೆ ನೀವು ಅಚ್ಚರಿಯ ಆಸಾಮಿಯಾಗುತ್ತೀರಿ. ಮನೆ ಮತ್ತು ವ್ಯವಹಾರದಲ್ಲಿ ಸರಿಯಾದ ಸಾಮರಸ್ಯ ಇರುತ್ತದೆ. ಇಂದು ಮನೆಯ ಎಲ್ಲ ಸದಸ್ಯರು ಪರಸ್ಪರ ಆನಂದಿಸುವರು. ಮಗುವಿನ ಚಟುವಟಿಕೆಗಳು ಮತ್ತು ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುವುದು ಬಹಳ ಮುಖ್ಯ. ಭೂಮಿ ಅಥವಾ ವಾಹನಕ್ಕೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳಿವೆ. ಯಾವುದೇ ರೀತಿಯ ವ್ಯವಹಾರಕ್ಕೆ ನಿಮ್ಮ ಕೆಲಸದ ಗುಣಮಟ್ಟಕ್ಕೆ ಹೆಚ್ಚಿನ ಗಮನ ಬೇಕಾಗುತ್ತದೆ. ಈ ಸಮಯದಲ್ಲಿ ಸಾಲದ ವ್ಯವಹಾರವನ್ನು ಮಾಡಬೇಡಿ. ಉದ್ಯೋಗಾಕಾಂಕ್ಷಿಗಳು ಕೆಲಸವನ್ನು ಪಡೆದುಕೊಳ್ಳಬಹುದು.

ಸಿಂಹ ರಾಶಿ: ಇಂದು ಸಂಗಾತಿಯಿಲ್ಲದೇ ಚಟಪಡಿಸುವ ಸ್ಥಿತಿ ಬಂದೀತು. ಬಹಳ ದಿನಗಳ ಅನಂತರ ಮನೆಯ ಕಡೆ ಹೋಗುವಿರಿ. ಎಷ್ಟೋ ದಿನದ ಅನಂತರ ಇಂತಹ ಅಪರೂಪದ ಉಲ್ಲಾಸದ ಕ್ಷಣ ನಿಮ್ಮ ಪಾಲಿಗಿ ಇರಲಿದೆ. ವ್ಯಾಪಾರಸ್ಥರು ಗ್ರಾಹಕರ ಜೊತೆಗೆ ಸಮಾಧಾನದಿಂದ‌ ಮಾತನಾಡಿ ಆದಾಯವನ್ನು ಹೆಚ್ಚು ಮಾಡಿಕೊಳ್ಳಬೇಕಿದೆ. ಎಂದೋ ಉಳಿಸಿಟ್ಟ ಕಾಸು ಇಂದು ತುರ್ತಿಮನ ಕಾಲಕ್ಕೆ ಬಳಕೆಗೆ ಬರುತ್ತದೆ. ಇಂದು ನಿಮ್ಮ ಮನಸ್ಸಿಗೆ ಹಿತವಾದ ಯಾವುದಾರೂ ಒಂದು ಕೆಲಸವನ್ನು ಮಾಡಿ. ಸಮಯವು ನಿಮಗಾಗಿ ಅವಕಾಶವನ್ನು ಕೊಡಬಹುದು. ಮಗುವಿನ ಬಗ್ಗೆ ಸ್ವಲ್ಪ ಕಾಳಜಿ ಇರುತ್ತದೆ. ಋಣಾತ್ಮಕ ಚಿಂತನೆಯನ್ನು ಬಿಡುವುದು ಉತ್ತಮ. ವ್ಯವಹಾರದಲ್ಲಿ ನೀವು ತೆಗೆದುಕೊಳ್ಳುವ ತ್ವರಿತ ನಿರ್ಧಾರಗಳು ಸಕಾರಾತ್ಮಕವಾಗಿರುತ್ತವೆ. ಈ ಸಮಯದಲ್ಲಿ ಯಾವುದೇ ಹೊಸ ಕೆಲಸ ಅಥವಾ ಯೋಜನೆಯನ್ನು ಪ್ರಾರಂಭಿಸಬೇಡಿ. ಪ್ರಸ್ತುತ ಚಟುವಟಿಕೆಗಳ ಮೇಲೆ ಕೇಂದ್ರೀಕರಿಸಿ.

ಕನ್ಯಾ ರಾಶಿ: ಇಂದು ಕಾರ್ಯದಲ್ಲಿನ ಬದ್ಧತೆಯಿಂದ ಎಲ್ಲರೂ ಅಚ್ಚರಿಪಡುತ್ತಾರೆ. ಹಣದ ಹೂಡಿಕೆಯ ಮಾರ್ಗಗಳನ್ನು ಅನ್ಯರ ಮೂಲಕ ಪಡೆದುಕೊಳ್ಳುವಿರಿ. ಯಾರಿಗೂ ಮಾತನ್ನು ಕೊಡಲು ಹೋಗಬೇಡಿ. ನಿಮ್ಮ ನೋವನ್ನು ಆಲಿಸುವ ಕಿವಿಗಳ ಕೊರತೆ ಇದೆ. ನೀವು ನೀಡುವ ಅಭಿಪ್ರಾಯಗಳು ಬಾಲಿಶ ಎಂದು ಮನೆಯವರಿಗೆ ಅನ್ನಿಸಬಹುದು. ದೇಹ ಹಾಗೂ ಮಾನಸಿಕ ನೋವುಗಳನ್ನು ನನೆನೆನೆದು ಸಂಕಟಪಡುವಿರಿ. ನಿಮ್ಮ ಭವಿಷ್ಯದ ಯೋಜನೆಯ ಸರಿಯಾದ ಚಿತ್ರಣವು ನಿಮ್ಮಲ್ಲಿ ಇರಲಿ. ತಪ್ಪುಗಳೇ ಇಂದು ಹೆಚ್ಚು ಕಾಣಿಸುವುದು. ನಿಮ್ಮ ಕೆಲಸದ ಸಾಮರ್ಥ್ಯದ ಮೂಲಕ ಸಕಾರಾತ್ಮಕ ಫಲಿತಾಂಶಗಳನ್ನು ಸಾಧಿಸುವಿರಿ. ನಿಮ್ಮ ಆಲೋಚನೆಗಳ ಬಗ್ಗೆ ಯೋಚಿಸುವುದು ಕೆಲವು ಪರಿಣಾಮಗಳನ್ನು ಉಂಟುಮಾಡಬಹುದು. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳು ಹೆಚ್ಚು ಸಮಯ ಕಳೆದು, ಅಧ್ಯಯನವನ್ನು ನಿರ್ಲಕ್ಷಿಸಬಹುದು. ನೌಕರರಿಂದ ಕೆಲವು ಅಡಚಣೆಗಳೂ ಇರಬಹುದು. ಉತ್ಪಾದನೆಯಿಂದ ಅಧಿಕ ಲಾಭವನ್ನು ನಿರೀಕ್ಷಿಸಬಹುದು. ಉದ್ಯೋಗಿಗಳಿಗೆ ಅಧಿಕೃತ ಕೆಲಸದಲ್ಲಿ ಕೆಲವು ಸಮಸ್ಯೆಗಳು ಕಂಡುಬರುತ್ತವೆ.

ತುಲಾ ರಾಶಿ: ಇಂದು ಏನನ್ನೋ ಮಾಡಲು ಹೋಗಿ ಮತ್ತೇನೋ ಆಗಬಹುದು. ಮಕ್ಕಳಿಂದಾಗಿ ಆರ್ಥಿಕನಷ್ಟವನ್ನು ಕಾಣಬೇಕಾಗಬಹುದು. ಪ್ರೀತಿಸುವುದನ್ನು ಕಲಿತರೆ ನಿಮ್ಮ ಸುತ್ತಲು ಎಂತಹದೇ ನಕಾರಾತ್ಮಕ ಅಂಶಗಳಿರಲಿ ಅವುಗಳು ಸಕಾರಾತ್ಮಕವಾಗಿ ನಿಮಗೆ ತೋರುತ್ತವೆ. ವಾಹನ ಸೌಕರ್ಯವನ್ನು ಬಳಸಿಕೊಂಡು ಕಾರ್ಯವನ್ನು ಸಾಧಿಸುವಿರಿ. ನಿಮ್ಮ ನೆಚ್ಚಿನ ಕೆಲಸಗಳು ತೃಪ್ತಿಕರ ರೀತಿಯಲ್ಲಿ ಪೂರ್ಣಗೊಳ್ಳುವುದು. ಸಂಬಂಧಿಕರ ಜೊತೆ ಸಂತೋಷದ ಸಮಯವನ್ನು ಕಳೆಯುವಿರಿ. ಇದರಿಂದ ನಿಮ್ಮ ಮನಸ್ಸು ಹಗುರಾಗುವುದು. ಕೆಲವು ಆರ್ಥಿಕ ಸಮಸ್ಯೆಗಳನ್ನು ಅನಿವಾರ್ಯವಾಗಿ ಎದುರಿಸಬೇಕಾಗಬಹುದು. ನಿಮಗೆ ಎದುರಾಗುವ ಸಂಕಟಗಳ ಬಗ್ಗೆ ಗಮನವಿರಲಿ. ವೈಯಕ್ತಿಕ ಸಮಸ್ಯೆಗಳನ್ನು ವ್ಯವಹಾರಕ್ಕೆ ತಂದುಕೊಳ್ಳುವುದು ಬೇಡ.‌ ಇಂದು ನೀವು ಉದ್ಯೋಗದ ವ್ಯವಸ್ಥೆಯನ್ನು ಸುಧಾರಿಸಲು ಹೆಚ್ಚಿನ ಸಮಯವನ್ನು ನೀಡಬೇಕಾಗಿದೆ.

ವೃಶ್ಚಿಕ ರಾಶಿ: ಇಂದು ಯಾವುದನ್ನೂ ಅತಿರೇಕ ಮಾಡಿಕೊಳ್ಳುವುದು ಬೇಡ. ಭವಿಷ್ಯದಲ್ಲಿ ಭರವಸೆಯನ್ನು ಇಟ್ಟು ಮುಂದಡಿ ಇಡುವುದು ಅನಿವಾರ್ಯ.‌ ಇಂದಿನ ಜೀವನ ಸಂತೋಷದಿಂದ ಕೂಡಿರುವುದು. ಅತ್ಯಾಪ್ತರಿಂದ ಅಪರೂಪದ ಬಹುಮಾನ ಸಿಗಲಿದೆ. ಪ್ರಭಾವೀ ವ್ಯಕ್ತಿಗಳ ಭೇಟಿಯಾಗುವುದು. ನಿಮ್ಮ ಜೀವನದ ದಿಕ್ಕಿಗೆ ಹೊಸ ಮಾರ್ಗವೂ ಸೇರ್ಪಡೆಯಾಗುವುದು. ವಿದ್ಯಾರ್ಥಿಗಳು ಓದಿನ ಕಡೆಗೆ ಗಮನಹರಿಸಲಿ. ಮನೆಯಲ್ಲಿ ಕೆಲವು ನವೀಕರಣ ಕಾರ್ಯಗಳನ್ನು ಮಾಡಿಸುವಿರಿ. ಹಣಕಾಸಿನ ಸಮಸ್ಯೆಗಳು ದೂರವಾಗುತ್ತವೆ. ಇಂದು ನಿಮ್ಮ ಭಾವನೆಗಳನ್ನು ನಿಯಂತ್ರಿಸುವುದು ಅವಶ್ಯಕ. ವಿದ್ಯಾರ್ಥಿಗಳು ಅಧ್ಯಯನದ ಮೇಲೆ ಕೇಂದ್ರೀಕರಿಸಲಾರು. ಖರೀದಿಸುವಾಗ ಅನುಭವಿಗಳ ಸಲಹೆಯನ್ನು ತೆಗೆದುಕೊಳ್ಳಲು ಮರೆಯದಿರಿ. ಸರ್ಕಾರಿ ನೌಕರರು ಹೆಚ್ಚಿನ ಕೆಲಸದ ಕಾರಣದಿಂದ ಇಂದು ಹೆಚ್ಚಿನ ಸಮಯವನ್ನು ಮಾಡಬೇಕಾಗಬಹುದು. ಪ್ರೇಮ ಸಂಬಂಧದ ಕೋಪದಿಂದ ನೀವು ಭಾವನಾತ್ಮಕ ದೂರವಾಗುವಿರಿ.

ಧನು ರಾಶಿ: ಇಂದು ನಿಮ್ಮ ಮನೆಯ ಒತ್ತಡದದ ಕಾರಣ ಯಾವ ಕಾರ್ಯವನ್ನೂ ಪೂರ್ಣಗೊಳಿಸಲಾಗದು. ಹಣವನ್ನು ಸಂಪೂರ್ಣವಾಗಿ ಇತರೇತರ ಕಾರ್ಯಗಳಿಗೆ ಖರ್ಚು ಮಾಡಿ ತುರ್ತಿಗೆ ಹಣವಿಲ್ಲದಂತೆ ಮಾಡಿಕೊಳ್ಳುವಿರಿ. ಸುತ್ತ ನಡೆಯುವ ವಿದ್ಯಮಾನಗಳನ್ನು ಗಮನಿಸಿಕೊಂಡು ಜೀವನವನ್ನು ಸಾಗಿಸಿ. ಅನೇಕ ಬದಲಾವಣೆಗಳು ನಿಮ್ಮ ಜೀವನಕ್ಕೆ ಅಗತ್ಯವಿದೆ. ಎಲ್ಲವನ್ನೂ ಸರಿ ಮಾಡಬಲ್ಲೆನೆಂಬ ಮನಃಸ್ಥಿತಿಯಿಂದ ಹೊರಗುಳಿದು ಯೋಚಿಸಿ. ನಿಮ್ಮ ಸಾಮರ್ಥ್ಯವನ್ನು ಸಮಾಜದ ಎದುರು ತೆರೆದಿಡುವಿರಿ. ಉಳಿತಾಯಕ್ಕೆ ಬೇಕಾದ ಅನುಕೂಲವು ಸೃಷ್ಟಿಯಾಗುವುದು. ಸಂಬಂಧಿಕರಿಂದ ನಿಮ್ಮ ಬಗ್ಗೆ ದೂರುಗಳು ಬರಬಹುದು. ಆದರೆ ಉತ್ತಮ ಸಂಬಂಧಗಳನ್ನು ಕಾಪಾಡಿಕೊಳ್ಳಲು ಪ್ರಯತ್ನವೂ ಅಗತ್ಯ. ವಿದ್ಯಾರ್ಥಿಗಳು ಅಧ್ಯಯನದಿಂದ ದೂರವಾಗುತ್ತಾರೆ. ವ್ಯಾಪಾರವನ್ನು ಹೆಚ್ಚಿಸಲು ಸೂಕ್ತ ವಿಧಾನಗಳನ್ನು ಅಳವಡಿಸಿಕೊಳ್ಳಿ. ನಿಮ್ಮ ಕೆಲಸದಲ್ಲಿ ಗೌಪ್ಯತೆ ಇರಲಿ. ಸ್ಪರ್ಧಾತ್ಮಕ ವಿಚಾರದಲ್ಲಿ ಸಂಪೂರ್ಣವಾಗಿ ಎಚ್ಚರವಾಗಿರುವುದು ಅಗತ್ಯ.

ಮಕರ ರಾಶಿ: ಯಾರ ಮಾತನ್ನೂ ಗಂಭೀರವಾಗಿ ತೆಗೆದುಕೊಳ್ಳಲಾರಿರಿ. ಬೇಡದ್ದನ್ನೂ ಮನಸ್ಸಿನಲ್ಲಿ ಹಾಕಿಕೊಂಡು ಸಂಕಟಪಡುವಿರಿ. ದೂರದ‌ ಪ್ರಯಾಣವನ್ನು ಮಾಡಬೇಡಿ. ಹಣದ ಅಗತ್ಯತೆ ಇಂದು ತುಂಬಾ ಕಾಡಲಿದೆ. ಸಂಗಾತಿಯ ಜೊತೆ ಸಂತೋಷದಿಂದ ಕಳೆಯಲು ಇಚ್ಛಿಸುವಿರಿ. ಕಛೇರಿಯಲ್ಲಿ ಗ್ರಾಹಕರ ಜೊತೆ ಮಾತುಗಳನ್ನು ಆಡುವಾಗ ಎಚ್ಚರವಿರಲಿ. ಕಛೇರಿಯಲ್ಲಿ ನಿಮ್ಮ‌ ಮೇಲಿನ ಅಭಿಪ್ರಾಯ ಬದಲಾಗಬಹುದು. ನೀವು ಸಂಬಂಧಗಳನ್ನು ಬಳಸದೇ ಸಡಿಲಾಗಬಹುದು. ವಿದ್ಯಾರ್ಥಿಗಳು ಅಧ್ಯಯನ ಮಾಡುವುದರ ಕಡೆ ಇರುವುದು. ಕಛೇರಿಯಲ್ಲಿ ನೀವು ಬಹಳ ಚಿಂತನಶೀಲವಾಗಿ ಕೆಲಸ ಮಾಡುವಿರಿ. ನಿಮ್ಮ ಮೇಲೆ ಯಾರಾದರೂ ಪಿತೂರಿ ಮಾಡಬಹುದು. ಇಂದಿನ ನಿಮ್ಮ ಪ್ರಯಾಣದಿಂದ ಕಷ್ಟವಾಗಬಹುದು. ಕಠಿಣ ಪರಿಶ್ರಮದ ಹೊರತಾಗಿ ಸರಿಯಾದ ಫಲಿತಾಂಶವನ್ನು ಸಾಧಿಸಲಾಗುವುದಿಲ್ಲ. ಯುವಕರು ಸಂಶೋಧನೆಯ ಚಟುವಟಿಕೆಗಳಲ್ಲಿ ಯಶಸ್ಸನ್ನು ಸಾಧಿಸುವರು. ವ್ಯಾಪಾರದ ಏರುಪೇರುಗಳಿಂದ ಅಲ್ಪ ಅಸಮಾಧಾನ ಇರುವುದು. ಕುಟುಂಬದೊಂದಿಗೆ ಮೋಜಿನಲ್ಲಿ ದಿನ ಕಳೆಯುವುದು.

ಕುಂಭ ರಾಶಿ: ನೀವು ಭವಿಷ್ಯಕ್ಕಾಗಿ ಆರ್ಥಿಕತೆಯ ಬಗ್ಗೆ ಅಧಿಕ ಆಲೋಚನೆ ಮಾಡುವಿರಿ. ನಿಮ್ಮ ಅಂತಸ್ಸತ್ತ್ವವೇ ಎಲ್ಲ ಕಾರ್ಯಗಳನ್ನು ಖುಷಿಯಿಂದ ಮಾಡಲು ಸಹಕಾರಿಯಾಗುವುದು. ಹಾಸ್ಯಪ್ರಜ್ಞೆಯು ನಿಮ್ಮ ಎಲ್ಲ ದುಃಖಗಳನ್ನು ಮರೆಸೀತು. ಸ್ನೇಹಿತರ ಜೊತೆ ಸಂತೋಷದಿಂದ ಸಮಯವನ್ನು ಕಳೆಯುವಿರಿ. ಸಂಗಾತಿಯ ಜೊತೆ ಕಾಲದ ಮಿತಿಯಿಲ್ಲದೇ ಹರಟೆಯನ್ನು ಹೊಡೆಯುವಿರಿ. ಯಾರದೋ ಮಾತಿಗೆ ಕಿವಿಯಾಗಬೇಡಿ. ನಿಮ್ಮ ಪ್ರತಿಭೆಯನ್ನು ಗುರುತಿಸಿ, ಅವುಗಳನ್ನು ನಿರ್ದಿಷ್ಟ ಕಾರ್ಯಕ್ಕೆ ಬಳಸಿ. ನೀವು ಉತ್ತಮ ಫಲಿತಾಂಶಗಳನ್ನು ಪಡೆಯುವಿರಿ. ಗೃಹಾಲಂಕಾರದ ಬಗ್ಗೆ ಹೆಚ್ಚು ಚಟುವಟಿಕೆಯಿಂದ ಇರುವಿರಿ. ನಿಮ್ಮ ಕೆಲಸವನ್ನು ಇತರರ ಜೊತೆ ಹಂಚಿಕೊಳ್ಳಲು ಕಲಿಯಿರಿ. ಅದು ನಿಮ್ಮ ಕೆಲಸದ ಹೊರೆಯನ್ನು ತಗ್ಗಿಸುತ್ತದೆ. ವ್ಯವಹಾರಕ್ಕೆ ಸಂಬಂಧಿಸಿದಂತೆ ಯಾವುದಾದರೂ ನಿರ್ಧಾರವನ್ನು ತೆಗೆದುಕೊಳ್ಳುವಾಗ, ಉತ್ತಮ ಅನುಭವಿ ವ್ಯಕ್ತಿಯನ್ನು ಸಂಪರ್ಕಿಸಿ. ಇಂದು ಹಣಕಾಸಿನ ವಿಚಾರದಲ್ಲಿ ಯಾರನ್ನೂ ಅತಿಯಾಗಿ ನಂಬಬೇಡ. ರಾಜಿಯೂ ಬೇಡ. ಕುಟುಂಬದ ಎಲ್ಲ ಸದಸ್ಯರಿಗೆ ಸಂತೋಷವನ್ನು ನೀವು ಕೊಡುವಿರಿ.

ಮೀನ ರಾಶಿ: ನಿಮ್ಮ ಸಂಗಾತಿಯ ಆರೋಗ್ಯವು ಕೆಟ್ಟ ಕಾರಣ ನಿಮ್ಮ ಮಾನಸಿಕ ಸ್ಥಿತಿಯು ಸ್ತಿಮಿತದಲ್ಲಿ ಇರದು. ನಿಮ್ಮ ಆಸಕ್ತಿಗೆ ಯೋಗ್ಯವಾದ ಕಾರ್ಯವು ಸಿಗುವತನಕ ಕಾಯಬೇಕಾಗುವುದು. ಇತರರ ಮಾತನ್ನು ಕೇಳಿ ಖರೀದಿಯನ್ನು ಮಾಡಲು ಮುಂದಾಗಬೇಡಿ. ನಿಮ್ಮವರ ಜೊತೆ ಆನಂದದಿಂದ ಕಾಲವನ್ನು ಕಳೆಯುವಿರಿ. ಪರಸ್ಪರ ಚರ್ಚೆಯ ಮೂಲಕ ಹಳೆಯ ಹಲವು ಸಮಸ್ಯೆಗಳು ಬಗೆಹರಿಯಲಿವೆ. ನಿಮ್ಮ ವಿಶೇಷ ಪ್ರತಿಭೆಯು ಜನರಗೆ ಗೊತ್ತಾದೀತು. ಹೊಸ ವ್ಯವಹಾರವನ್ನು ಪ್ರಾರಂಭಿಸಲು ಎಚ್ಚರಿಕೆಯಿಂದ ಯೋಚಿಸಿ ಮುಂದುವರಿಯಿರಿ. ಪ್ರೀತಿಯಲ್ಲಿ ಪಾರದರ್ಶಕತೆ ಇರುವುದು ಬಹಳ ಮುಖ್ಯ. ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಹಣಕಾಸಿನ ವಹಿವಾಟಿನ ಜೊತೆ ವ್ಯವಹರಿಸುವಾಗ ಜಾಗರೂಕತೆ ಇರಲಿ. ಆರೋಗ್ಯದಲ್ಲಿ ಜಾಗರೂಕತೆ ಅವಶ್ಯವಾಗಿ ಇರಲಿ. ದೂರಪ್ರಯಾಣಕ್ಕೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳಿ. ನಿಮ್ಮ ವಿವಾಹವು ಮುಂದೆ ಅನ್ಯಾನ್ಯ ಕಾರಣಗಳು ಇರಬಹುದು.

Source : https://tv9kannada.com/horoscope/nitya-bhavishya-aries-to-pisces-april-8th-horoscope-in-kannada-ggs-812920.html

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *