ಶಾಲಿವಾಹನ ಶಕವರ್ಷ 1947ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಕೃಷ್ಣ ಪಕ್ಷದ ತೃತೀಯಾ ತಿಥಿ, ಸೋಮವಾರ ಪ್ರಶಂಸೆಯಿಂದ ಉತ್ಸಾಹ, ಆಸ್ತಿಕತೆಯ ಬೆಳವಣಿಗೆ, ಅಪಕ್ವ ಆಹಾರ ಸೇವನೆ, ಸಾಹಸದಲ್ಲಿ ಸೋಲುವುದು.ಸುಪ್ತವಾಗಿದ್ದ ವಿದೇಶದ ಕನಸು ಅಂಕುರಿಸಬಹುದು. ಈ ದಿನದ ರಾಶಿ ಭವಿಷ್ಯ ತಿಳಿಯಿರಿ.

ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರಾ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಸೋಮ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಸ್ವಾತಿ, ಯೋಗ : ಧ್ರುವ, ಕರಣ : ವಣಿಜ, ಸೂರ್ಯೋದಯ – 06 – 40 am, ಸೂರ್ಯಾಸ್ತ – 06 – 42 pm, ಇಂದಿನ ಶುಭಾಶುಭಕಾಲ : ರಾಹು ಕಾಲ 08:10 – 09:41, ಯಮಘಂಡ ಕಾಲ 11:11 – 12:41, ಗುಳಿಕ ಕಾಲ 14:11 – 15:42.
ಮೇಷ ರಾಶಿ: ಇಂದು ಅತಿಯಾದ ಉದ್ಯೋಗದ ಕಾರಣಕ್ಕೆ ನಿಮ್ಮ ಆರೋಗ್ಯದ ಸಮಸ್ಥಿತಿ ತಪ್ಪಬಹುದು. ಇನ್ನೊಬ್ಬರ ಪ್ರಶಂಸೆಯಿಂದ ನೀವು ಸಂತೋಷಗೊಳ್ಳುವಿರಿ. ಮನೆಯ ವಾತಾವರಣವು ಯಾವುದೋ ಕಾರಣದಿಂದ ಕೆಟ್ಟದಾಗಬಹುದು. ನಿಮ್ಮ ಉದ್ವೇಗ ಮತ್ತು ಶಾಂತತೆಯನ್ನು ಕಾಪಾಡಿಕೊಳ್ಳಿ. ಕೆಲವು ಅಡಚಣೆಗಳು ಇರಬಹುದು. ಇಂದು ನಿಮ್ಮ ಸಂಗಾತಿಯ ಜೊತೆ ತುಂಬಾ ಆಪ್ತವಾಗಿ ವ್ಯವಹರಿಸುವಿರಿ. ನಿಮ್ಮ ವೈವಾಹಿಕ ಜೀವನದ ಕೆಲವು ಹಳೆಯ ನೆನಪುಗಳು ಖುಷಿಯನ್ನು ಕೊಡುವುದು. ಹೊರಗಿನ ಆಹಾರವನ್ನು ತ್ಯಜಿಸಲು ಆರೋಗ್ಯವನ್ನು ಹೆಚ್ಚಿಸಿಕೊಳ್ಳಿ. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವಿರಿ. ಮಕ್ಕಳ ಮೇಲೆ ಒಂದು ಕಣ್ಣಿರಲಿ. ನಿಮ್ಮನ್ನು ಅರ್ಥಮಾಡಿಕೊಳ್ಳುವವರ ಬಗ್ಗೆ ನಿಮಗೆ ಪ್ರೀತಿ ಹೆಚ್ಚಾಗುವುದು. ಅನಾಗರಿಕರಂತೆ ವರ್ತಿಸುವುದು ಬೇಡ. ಕಲೆಯ ಆಸಕ್ತಿಯು ನಿಮ್ಮನ್ನು ಇನ್ನೊಂದು ದಿಕ್ಕಿಗೆ ಕರೆದೊಯ್ಯಬಹುದು.
ವೃಷಭ ರಾಶಿ: ನಿಮಗೆ ಕೃಷಿಯ ಬಗ್ಗೆ ಆಸಕ್ತಿಯು ಉಂಟಾಗಬಹುದು. ಅಸತ್ಯವಾದ ನಿಮ್ಮ ಮಾತನ್ನು ನಂಬುವವರಿದ್ದಾರೆ. ನಿಮ್ಮ ಉದ್ಯೋಗದ ಕನಸು ನನಸಾಗುವ ಹಂತಕ್ಕೆ ತಲುಪಬಹುದು. ಯಾವುದೇ ನಿರ್ಧಾರ ತೆಗೆದುಕೊಳ್ಳುವಾಗ ನಿಮ್ಮ ಆತ್ಮಸಾಕ್ಷಿಯ ಮಾತನ್ನು ಆಲಿಸಿ. ಒಡಹುಟ್ಟಿದವರೊಂದಿಗಿನ ಸಂಬಂಧದಲ್ಲಿ ಮಾಧುರ್ಯವನ್ನು ಕಾಪಾಡಿಕೊಳ್ಳಿ. ನೀವು ಅಶಿಸ್ತಿನ ವ್ಯವಸ್ಥೆಯಿಂದ ಸಿಟ್ಟಾಗುವಿರಿ. ಸುಪ್ತವಾಗಿದ್ದ ವಿದೇಶದ ಕನಸು ಅಂಕುರಿಸಬಹುದು. ನಿಮ್ಮ ಮೂಗಿನ ನೇರಕ್ಕೆ ಎಲ್ಲವನ್ನೂ ನೀವು ಕಾಣುವುದು ಸಮಂಜಸವಲ್ಲ. ಗುರುವಿನ ದರ್ಶನವನ್ನು ಪಡೆದು ಖುಷಿಪಡುವಿರಿ. ನಿಮ್ಮ ಸಕಾರಾತ್ಮಕ ನಿಲುವು ಹಲವರಿಗೆ ಇಷ್ಟವಾಗುವುದು. ನೀವು ಕೆಲಸದಲ್ಲಿ ಪಾರದರ್ಶಕತೆಯನ್ನು ಹೆಚ್ಚು ಇಷ್ಟಪಡುವಿರಿ. ಸಣ್ಣ ವ್ಯವಸ್ಥೆಯಾದರೂ ಅಚ್ಚುಕಟ್ಟುತನವಿರಲಿದೆ. ವ್ಯಾಪಾರವನ್ನು ನಮ್ರರಾಗಿ ಮಾಡಿ, ಆದಾಯವನ್ನು ಹೆಚ್ಚು ಮಾಡಿಕೊಳ್ಳುವಿರಿ. ಬೆಲೆ ಬಾಳುವ ವಸ್ತುಗಳನ್ನು ಖರೀದಿಸುವಿರಿ. ದೂರ ಎಲ್ಲಿಗಾದರೂ ಹೋಗಬೇಕು ಎನಿಸಬಹುದು.
ಮಿಥುನ ರಾಶಿ: ಕನಸಿನಲ್ಲಿ ಕಳೆದುಹೋಗುವ ಸಾಧ್ಯತೆ ಇದೆ. ವಾಸ್ತವಕ್ಕೆ ಹತ್ತಿರವಾಗಿ. ಬಂಧುಗಳಿಂದ ಹೊಸ ವಸ್ತುಗಳು ಪ್ರಾಪ್ತವಾಗಬಹುದು. ವ್ಯಾಪಾರಸ್ಥರು ಸುಲಭದಲ್ಲಿ ಲಾಭವನ್ನು ಗಳಿಸುವುದು ಕಷ್ಟವಾದೀತು. ವಿದ್ಯಾರ್ಥಿಗಳು ನಿರೀಕ್ಷೆಯಂತೆ ಫಲಿತಾಂಶ ಪಡೆದು ಆತ್ಮವಿಶ್ವಾಸವನ್ನು ಹೆಚ್ಚುಮಾಡಿಕೊಳ್ಳುವರು. ಭಾವೋದ್ವೇಗದಲ್ಲಿ ತೆಗೆದುಕೊಂಡ ನಿರ್ಧಾರವು ತಪ್ಪು ಎಂದು ಸಾಬೀತುಪಡಿಸಬಹುದು. ಮನಸ್ಸು ಸ್ವಲ್ಪ ನಿರಾಶೆಗೊಳ್ಳಬಹುದು. ಇಂದು ಮನೆಯ ವಾತಾವರಣ ಪ್ರಶಾಂತವಾಗಿರುವುದು. ನಿಮ್ಮ ಕಾರ್ಯದ ಪರಿಶೀಲನೆಗೆ ಅಧಿಕಾರಿಗಳು ಬರಬಹುದು. ಪ್ರಶಂಸೆ ಸಿಗುವ ಸಾಧ್ಯತೆಯೂ ಇದೆ. ನಿಮ್ಮ ಏಳ್ಗೆಯನ್ನು ಕಂಡು ದಾಯಾದಿಗಳು ಅಸೂಯೆ ಪಡಲಡುವರು. ಶುಭ ಕಾರ್ಯಗಳಿಗೆ ನೀವು ಪ್ರೇರಣೆ ಕೊಡುವಿರಿ. ಯಾವುದಾದರೂ ಒಂದು ಆರೋಪದಲ್ಲಿ ಸಿಕ್ಕಿಹಾಕಿಕೊಳ್ಳುವ ಸನ್ನಿವೇಶವು ಬರಬಹುದು. ನಿಮ್ಮ ಮೇಲೂ ನಿಮ್ಮವರ ಮೇಲೆ ನಂಬಿಕೆ ಇಟ್ಟುಕೊಳ್ಳಿ. ದೇಹದ ಅಸಮತೋಲನದಿಂದ ನಿಮಗೆ ತೊಂದರೆಯಾದೀತು.
ಕರ್ಕಾಟಕ ರಾಶಿ: ಆಯುಧಗಳ ಜೊತೆ ಜೋಪಾನವಾಗಿ ನೀವು ಇರಬೇಕಾಗುವುದು. ನಿಮ್ಮ ಮಾತು ಅರ್ಥಪೂರ್ಣವಾಗಿ ಇರಲಿ. ಉದ್ಯಮದಲ್ಲಿ ಶತ್ರುಗಳು ಹುಟ್ಟಿಕೊಳ್ಳಬಹುದು. ನಿಮ್ಮ ಸ್ಥಗಿತಗೊಂಡ ಕೆಲಸವು ಪೂರ್ಣವಾಗುವ ಹಂತಕ್ಕೆ ಹೋಗಬಹುದು. ಆದಾಯಕ್ಕೆ ಯೋಗ್ಯವಾಗಿ ವೆಚ್ಚ ಇರಲಿ. ವ್ಯವಹಾರದ ದೃಷ್ಟಿಯಿಂದ ಸಮಯವು ಲಾಭದಾಯಕವಾಗಿರುತ್ತದೆ. ಕೌಟುಂಬಿಕ ಜೀವನ ಸುಖಕರವಾಗಿರಬಹುದು. ಮಾನಸಿಕ ಒತ್ತಡ ಮತ್ತು ರಕ್ತದೊತ್ತಡಕ್ಕೆ ಸಂಬಂಧಿಸಿದ ಸಮಸ್ಯೆಗಳು ಇರಬಹುದು. ಸ್ವಪ್ರತಿಷ್ಠೆಯನ್ನು ಬಿಡುವುದು ಉತ್ತಮ. ಚರಾಸ್ತಿಯ ವ್ಯಯವಾದರೂ ದೊಡ್ಡ ಸಮಸ್ಯೆ ಅನ್ನಿಸದು. ಪ್ರೇಮದ ವಿಚಾರದಲ್ಲಿ ನೀವು ಎಚ್ಚರಿಕೆಯಿಂದ ಮುಂದುವರಿಯಿರಿ. ಶತ್ರುಗಳಿಂದ ಕೆಲಸಗಳಿಗೆ ತೊಂದರೆಯಾಗಬಹುದು. ಹೆಚ್ಚು ಪ್ರಯತ್ನವಿದ್ದರೂ ಸ್ವಲ್ಪ ಫಲವು ಇರಲಿದೆ. ಅವಕಾಶದ ಕೊರತೆಯು ನಿಮ್ಮ ಹತಾಶಗೊಳಿಸಬಹುದು. ಅಂತರಂಗದ ಶುದ್ಧೀಕರಣ ಮಾಡಿಕೊಳ್ಳುವುದು ನಿಮಗೆ ಮುಖ್ಯವಾಗಲಿದೆ. ನಿಯೋಜಿತ ಕಾರ್ಯಕ್ಕೆ ಸಮಯ ಕೊಡಿ.
ಸಿಂಹ ರಾಶಿ: ವಿದೇಶೀಯ ವ್ಯವಹಾರಕ್ಕೆ ಅಧಿಕ ಬಂಡವಾಳದ ಅವಶ್ಯಕತೆ ಇರುವುದು. ಶತ್ರುಗಳು ನಿಮ್ಮನ್ನು ಗೆಲ್ಲಲು ಪ್ರಯತ್ನಿಸಬಹುದು. ದುಡಿಯುವವು ತಮ್ಮ ಶ್ರಮಕ್ಕೆ ಉಚಿತ ಫಲಿತಾಂಶವನ್ನು ನಿರೀಕ್ಷಿಸುವರು. ಯಾವುದೇ ಮೊಂಡುತನ ನಿಮಗೆ ತೊಂದರೆ ಕೊಡಬಹುದು. ವ್ಯವಹಾರದಲ್ಲಿ ಕೆಲವು ಸಮಸ್ಯೆಗಳು ಮತ್ತು ತೊಂದರೆಗಳು ಉಂಟಾಗುತ್ತವೆ. ನಿಮ್ಮ ಆಸೆಯನ್ನು ಇನ್ನೊಬ್ಬರ ಎದುರು ಪ್ರಕಟಪಡಿಸಲು ಮುಜುಗರ ಆಗಬಹುದು. ಸಂಗಾತಿಗೆ ಸಿಟ್ಟು ಬರುವಂತೆ ನೀವು ಉದ್ದೇಶಪೂರ್ವಕವಾಗಿ ನಡೆದುಕೊಳ್ಳುವಿರಿ. ನಿಮಗೆ ಸಿಕ್ಕ ಅನಾದರದಿಂದ ಬೇಸರಗೊಳ್ಳುವಿರಿ. ಮಕ್ಕಳ ಉದ್ಯಮಕ್ಕೆ ನೀವು ಸಹಾಯ ಮಾಡುವಿರಿ. ದ್ವೇಷದಿಂದ ನಿಮ್ಮ ಜೀವನವು ಮಾರ್ಗಭ್ರಷ್ಟವು ಆಗಬಹುದು. ಧನಾತ್ಮಕ ಚಿಂತನೆಯಿಂದ ಕಳೆದುಕೊಂಡ ಉತ್ಸಾಹವು ಮತ್ತೆ ಬರುವುದು. ಪ್ರಭಾವೀ ಮುಖಂಡರ ಜೊತೆ ನೀವು ಸಾಮಾಜಿಕ ಕಾರ್ಯಗಳ ಬಗ್ಗೆ ಚರ್ಚಿಸುವಿರಿ. ಕೆಲವು ಮಾನಸಿಕ ಸ್ಥಿತಿಯನ್ನು ನೀವು ಬದಲಿಸಿಕೊಳ್ಳಬೇಕಾದೀತು.
ಕನ್ಯಾ ರಾಶಿ: ಇಂದು ಜಾಣ್ಮೆಯಿಂದ ತಪ್ಪಿ ಹೋಗುವ ಉದ್ಯಮವನ್ನು ನಿಮ್ಮದಾಗಿಸಿಕೊಳ್ಳುವಿರಿ. ಒಡಕುಗಳಿಗೆ ಅವಕಾಶವನ್ನು ಕೊಡುವುದು ಬೇಡ. ನಿಮ್ಮ ಕೆಲಸದ ಬಗ್ಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಹಕಾರ ಲಭ್ಯ. ಹಿತೈಷಿಗಳ ಸಹಾಯದಿಂದ ನಿಮ್ಮ ಯಾವುದೇ ಆಸೆಗಳನ್ನು ಈಡೇರಿಸಲಾಗುವುದು. ತರಾತುರಿಯಲ್ಲಿ ಮತ್ತು ಭಾವೋದ್ವೇಗದಲ್ಲಿ ತೆಗೆದುಕೊಂಡ ನಿರ್ಧಾರವು ತಪ್ಪು ಎಂದು ಸಾಬೀತುಪಡಿಸಬಹುದು. ವ್ಯಾಪಾರಸ್ಥರಾದ ನೀವು ಆರ್ಥಿಕ ಸ್ಥಿತಿಯನ್ನು ಬಲಪಡಿಸಿಕೊಳ್ಳುವಿರಿ. ವಾಹನವನ್ನು ಖರೀದಿಸಲು ನೀವು ಸಮಯದ ನಿರೀಕ್ಷೆಯಲ್ಲಿ ಇರುವಿರಿ. ಮಗುವಿನ ಆರೋಗ್ಯದ ಚಿಂತೆ ಇಂದು ಕಾಡಬಹುದು. ದಾಯಾದಿ ಕಲಹವು ತಾರಕಕ್ಕೆ ಹೋಗಬಹುದು. ಇತರರ ಬೆಂಬಲವು ನಿಮಗೆ ಕಡಿಮೆ ಆಗಬಹುದು. ಸಹೋದ್ಯೋಗಿಗಳು ನಿಮ್ಮ ಬಗ್ಗೆ ದೂರಬಹುದು. ಎಂದೋ ಮಾಡಿದ ಸಾಮಾಜಿಕ ಕೆಲಸಗಳಿಂದ ಗೌರವ ಸಿಗುವ ಸಂದರ್ಭವು ಇದೆ. ಹಠವನ್ನು ಬಿಟ್ಟರೆ ಸಂತೋಷದ ಸಂಗತಿಗಳು ನಿಮ್ಮ ಹುಡುಕಿಕೊಂಡು ಬರಬಹುದು. ರಾಜಕೀಯ ಒತ್ತಡದಿಂದ ನಿಮ್ಮ ಕಾರ್ಯವು ಕೈಮೀರಬಹುದು.
ತುಲಾ ರಾಶಿ: ನೀವು ಮೊದಲೇ ಚಿಂತಿಸಿದಂತೆ ಏನೂ ಆಗದಿರುವುದು ನಿಮ್ಮನ್ನು ಕಾಡಬಹುದು. ಕುಟುಂಬದ ಹಿರಿಯರ ಆರೋಗ್ಯದ ಚಿಂತೆ ಇರಲಿದೆ. ಬಂಧುಗಳು ನಿಮ್ಮ ಸಹಾಯವನ್ನು ಕೇಳಿ ಬರಬಹುದು. ನಿಮ್ಮ ವೈಯಕ್ತಿಕ ವಿಚಾರದಲ್ಲಿ ಯಾವುದೇ ಹೊರಗಿನವರನ್ನು ತಲೆ ಹಾಕಲು ಬಿಡಬೇಡಿ.ಯಾವುದೇ ಯೋಜನೆಯನ್ನು ರೂಪಿಸುವ ಮೊದಲು ಮತ್ತೊಮ್ಮೆ ಯೋಚಿಸುವುದು ಅವಶ್ಯಕ. ಆಸ್ತಿಯ ವಿಚಾರವಾಗಿ ನೀವು ಕಾನೂನು ಹೋರಾಟವನ್ನು ಮಾಡುವುದು ಒಳ್ಳೆಯದು. ವಿಳಂಬವಾದರೂ ಮಾರ್ಗ ಸರಿಯಾಗಿರಲಿದೆ. ನಿಮ್ಮ ಮಾತಿನ ಮೇಲೆ ನಂಬಿಕೆ ಕಡಿಮೆ ಆಗುವುದು. ಕಲಾವಿದರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವರು. ನಿಮ್ಮ ಬಗ್ಗೆ ಇನ್ನೊಬ್ಬರ ಅಭಿಪ್ರಾಯವನ್ನು ಪಡೆಯುವಿರಿ. ಬೆನ್ನಿನ ನೋವು ಮತ್ತೆ ಕಾಣಿಕೊಂಡು ಸಂಕಟಪಡಬೇಕಾದೀತು. ಇಂದಿನ ಕಾರ್ಯವು ಪೂರ್ಣವಾಗುವ ತನಕ ನಿಮಗೆ ಮಾನಸಿಕ ವಿಶ್ರಾಂತಿಯು ಇರದು. ನಿಮ್ಮ ಮಾತು ವಿವಾದವನ್ನು ಹುಟ್ಟುಹಾಕಬಹುದು. ಯಾರಿಂದಲಾದರೂ ಪ್ರಭಾವಿತರಾಗುವಿರಿ.
ವೃಶ್ಚಿಕ ರಾಶಿ: ಇಂದು ನಿಮಗೆ ಸಿಗುವ ವ್ಯಕ್ತಿಗಳಿಂದ ಬೇಕಾದುದನ್ನು ಮಾಡಿಸಿಕೊಳ್ಳುವಿರಿ. ಮಕ್ಕಳಿಗೆ ವಿದೇಶದಲ್ಲಿ ವಿದ್ಯಾಭ್ಯಾಸವನ್ನು ಕೊಡುವ ಮನಸ್ಸಿರುವುದು. ವಿವಾಹಿತರ ಜೀವನವು ಆನಂದದಿಂದ ಇರುವುದು. ಕೆಲವು ಜನರು ನಿಮ್ಮ ಸರಳ ಸ್ವಭಾವದ ಲಾಭವನ್ನು ಪಡೆಯಬಹುದು. ನೀವು ಕೆಲವು ಲಾಭದಾಯಕ ಅವಕಾಶಗಳನ್ನು ಕಳೆದುಕೊಳ್ಳಬಹುದು. ಪ್ರಸ್ತುತ ಸಮಯ ಯಶಸ್ವಿಯಾಗಬಹುದು. ನಿಮ್ಮ ಆರ್ಥಿಕ ಸ್ಥಿತಿಯು ಸಾಮಾನ್ಯವಾಗಿದ್ದು ಹತಾಶ ಭಾವವಿರುವುದು. ಈ ಸಮಯದಲ್ಲಿ ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಕೊಡಬೇಕು. ಮಂಗಲ ಕಾರ್ಯಕ್ಕೆ ಸಾಲವನ್ನು ಮಾಡಬೇಕಾಗುವುದು. ಕಛೇರಿಯಲ್ಲಿ ನಿಮ್ಮ ಮಾತು ಮತ್ತು ನಡವಳಿಕೆಯ ಬಗ್ಗೆ ಗಮನವಿರುವುದು. ವ್ಯಾಪಾರಸ್ಥರಿಗೆ ಸಾಮಾನ್ಯವಾಗಿ ಇರುವುದು. ಭೂಮಿಯ ದಾಖಲೆಗಳನ್ನು ಸರಿಯಾಗಿ ಪಡೆದುಕೊಂಡು ವ್ಯವಹರಿಸಿ. ಭವಿಷ್ಯದ ಕುರಿತು ಬಹಳ ಆಲೋಚನೆ ಇರುವುದು. ಸಾಧು, ಸಜ್ಜನರ ಭೇಟಿಯಿಂದ ಮನಸ್ಸು ಆಹ್ಲಾದಕರವಾಗಲಿದೆ.
ಧನು ರಾಶಿ: ಇಂದು ಉತ್ತಮವಾದ ಆದಾಯ ಮೂಲವನ್ನು ಪಡೆಯಲು ನೀವು ಯಶಸ್ವಿಯಾಗುವಿರಿ. ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಲಹೆಯನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡುವಿರಿ. ಎಲ್ಲರ ಮಾರ್ಗವನ್ನೇ ನೀವು ಅನುಸರಿಸಲು ಇಷ್ಟಪಡುವುದಿಲ್ಲ. ನಿಮಗೆ ನಿಮ್ಮದೇ ಹಣ ಬರುವ ಸಾಧ್ಯತೆ ಇದೆ. ಉದ್ಯೋಗಸ್ಥ ಮಹಿಳೆಯರು ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ಪೂರೈಸಲು ಸಾಧ್ಯವಾಗುತ್ತದೆ. ನಕಾರಾತ್ಮಕ ಚಟುವಟಿಕೆಯ ಕೆಲವು ಜನರು ನಿಮ್ಮನ್ನು ಟೀಕಿಸುತ್ತಾರೆ. ಸಂಗಾತಿಯ ಜೊತೆ ಭಿನ್ನಾಭಿಪ್ರಾಯವು ಹೆಚ್ಚಾಗಬಹುದು. ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ. ಕಷ್ಟಗಳು ನಿಮ್ಮ ಧೈರ್ಯಕ್ಕೆ ಶರಣಾಗಬಹುದು. ಉತ್ತಮ ಅವಕಾಶಗಳು ಸಣ್ಣ ಅಂತರದಲ್ಲಿ ಕೈ ತಪ್ಪಿವುದು. ಆಕಸ್ಮಿಕವಾಗಿ ಉದ್ಯೋಗವು ನಿಮ್ಮ ಪಾಲಿಗೆ ಬರುವುದು. ನೀವೇ ಹಾಕಿಕೊಂಡ ಯೋಜನೆಯಲ್ಲಿ ತಪ್ಪುಗಳು ಕಾಣಲಿದ್ದು, ಅದನ್ನು ಬದಲಾಯಿಸಲೂ ಆಗದ ಸ್ಥಿತಿಯೂ ಬರುವುದು. ವಿನ್ಯಾಸಕಾರರಿಗೆ ಅವಕಾಶಗಳು ಸಿಗಬಹುದು.
ಮಕರ ರಾಶಿ: ಇಂದು ತಂತ್ರಜ್ಞರು ಹೆಚ್ಚು ಕಾರ್ಯವನ್ನು ಮಾಡುವರು. ಸ್ವಂತ ಉದ್ಯಮಿಗಳಿಗೆ ಕಾರ್ಮಿಕರ ಕೊರತೆ ಆಗುವ ಸಾಧ್ಯತೆ ಇದೆ. ಸ್ಥಿರಾಸ್ತಿಯ ಜೊತೆ ಚರಾಸ್ತಿಯೂ ನಿಮ್ಮದಾಗಬಹುದು. ಯಾರನ್ನೂ ಕುರುಡಾಗಿ ನಂಬವುದು ಬೇಡ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಮಾಡಬೇಡಿ. ತಾಳ್ಮೆಯನ್ನು ಕಾಪಾಡಿಕೊಳ್ಳಿ. ನೀವು ಕೆಲವು ಆಸ್ತಿಯಿಂದ ಹಣವನ್ನು ಪಡೆಯಬಹುದು. ನಿಮಗೆ ಸ್ನೇಹಿತರಿಂದಲೂ ಬೆಂಬಲ ಸಿಗುತ್ತದೆ. ಬೌದ್ಧಿಕ ಕೆಲಸದಿಂದ ಆದಾಯ ಹೆಚ್ಚಾಗುವ ಸಾಧ್ಯತೆ ಇದೆ. ಅವಕಾಶವು ಮತ್ತೆ ಮತ್ತೆ ನಿಮ್ಮ ಬಳಿ ಬರದು. ಬಂದದ್ದನ್ನು ಬರಮಾಡಿಕೊಳ್ಳಿ. ಉದ್ಯಮಿಗಳಿಗೆ ರಪ್ತು ವ್ಯವಹಾರವು ಬಹಳ ಕಷ್ಟವೆನಿಸಲಿದೆ. ಪಾಲುದಾರಿಕೆಯನ್ನು ಕೈಬಿಡುವುದು ಒಳ್ಳೆಯದು. ಆರೋಗ್ಯವೂ ಅತಿಯಾದ ಒತ್ತಡದಿಂದ ಹಾಳಾಗುವುದು. ಸಲ್ಲದ ಮಾತುಗಳ ಮೇಲೆ ನಿಯಂತ್ರಣದ ಅವಶ್ಯಕತೆ ಇರಲಿದೆ. ನೇರ ಮಾತು ಎಲ್ಲರಿಗೂ ಹಿಡಿಸದು. ಮಕ್ಕಳ ವಿಚಾರದಲ್ಲಿ ಕಾಳಜಿಯ ಅವಶ್ಯಕತೆ ಇರಲಿದೆ. ಕೆಲವು ಸನ್ನಿವೇಶಗಳಿಗೆ ಪ್ರತಿಸ್ಪಂದಿಸುವ ಬಗೆ ಗೊತ್ತಾಗದೇ ಹೋಗಬಹುದು.
ಕುಂಭ ರಾಶಿ: ಪ್ರಯಾಣವನ್ನು ಜಾಗರೂಕತೆಯಿಂದ ಮಾಡಿ. ವಸ್ತುಗಳು ಕಣ್ಮರೆಯಾಗಬಹುದು. ಅಗತ್ಯದ ಕಾರ್ಯವನ್ನು ಇತರರ ಸಹಾಯವನ್ನು ಪಡೆದು ಮುಗಿಸುವಿರಿ. ನಿಮ್ಮ ಉದ್ಯೋಗಸ್ಥರು ಕಚೇರಿಯಲ್ಲಿ ಮೇಲಿನವರಿಂದ ಹೆಚ್ಚಿನ ಬೆಂಬಲವನ್ನು ಪಡೆಯುವರು. ಹಣದ ಪರಿಸ್ಥಿತಿ ಉತ್ತಮವಾಗಿದ್ದರೂ, ಯಥಾಯೋಗ್ಯವಾದ ಖರ್ಚೂ ಇರಲಿದೆ. ಕೆಲಸದಲ್ಲಿ ಅಧಿಕಾರಿಗಳೊಂದಿಗೆ ಸಾಮರಸ್ಯವನ್ನು ಕಾಪಾಡಿಕೊಳ್ಳಿ. ಪ್ರಗತಿಯ ಸಾಧ್ಯತೆಗಳಿವೆ. ಆದರೆ ಸ್ಥಳ ಬದಲಾವಣೆಯೂ ಆಗಬಹುದು. ವ್ಯವಹಾರದಲ್ಲಿ ಯಶಸ್ಸು ಸಿಗುವ ಸಾಧ್ಯತೆಗಳಿವೆ. ಸಂಗಾತಿಯ ಜೊತೆ ಕುಳಿತು ದುಃಖದಿಂದ ಸಮಾಧಾನ ಮಾಡುವಿರಿ. ಆರೋಗ್ಯವಾಗಿರಲು, ನೀವು ಅಸಂಬದ್ಧ ಚಿಂತೆಗಳಿಂದ ದೂರವಿರಬೇಕು. ಕೋಪದಲ್ಲಿ ಏನನ್ನಾದರೂ ಹೇಳಿ ಮನಸ್ಸನ್ನು ವಿಕಾರ ಮಾಡಿಕೊಳ್ಳುವಿರಿ. ತಂದೆಯ ಮಾತು ನಿಮಗೆ ಹಿತವೆನಿಸೀತು. ಧಾರ್ಮಿಕ ಕಾರ್ಯದಲ್ಲಿ ಅಲ್ಪ ಆಸಕ್ತಿಯು ಕಂಡುಬರುವುದು. ಇಂದಿನ ಘಟನೆಯು ನಿಮ್ಮ ಎಲ್ಲ ಆಸಕ್ತಿಯನ್ನು ಕುಗ್ಗಿಸುವುದು. ಕೆಲಸವನ್ನು ಹಂಚಿಕೊಂಡು ಮಾಡಿ.
ಮೀನ ರಾಶಿ: ದೈವಕೃಪೆಯನ್ನು ಪ್ರಾರ್ಥಿಸಿ ಇಂದಿನ ನಿಮ್ಮ ಕಾರ್ಯವನ್ನು ಆರಂಭಿಸಿ. ವಿದ್ಯಾಭ್ಯಾಸದಲ್ಲಿ ಶಿಸ್ತನ್ನು ರೂಢಿಸಿಕೊಳ್ಳುವುದು ಉತ್ತಮ. ಉದ್ಯಮದಲ್ಲಿ ಬರುವ ಸಮಸ್ಯೆಯನ್ನೂ ನಿವಾರಿಸಿಕೊಳ್ಳುವಿರಿ. ಯಾವುದೇ ಕಾರಣಕ್ಕೂ ಧೈರ್ಯಗೆಡದಿರಲು ಕಾರಣ ಪೋಷಕರಿಂದ ನಿಮಗೆ ಬೆಂಬಲ. ಉದ್ಯೋಗ ಕ್ಷೇತ್ರದಲ್ಲಿ ವಿಸ್ತರಣೆ ಕಂಡುಬರಲಿದೆ. ನೀವು ಆರ್ಥಿಕ ಏರಿಳಿತಗಳನ್ನು ಎದುರಿಸಬಹುದು. ನಿಮ್ಮ ಆರ್ಥಿಕ ಸ್ಥಿತಿಯು ಮಧ್ಯಮಕ್ಕಿಂತ ಉತ್ತಮವಾಗಿರುವುದು. ವೈವಾಹಿಕ ಜೀವನದಲ್ಲಿ ಖುಷಿ ಇರುವುದು. ಆರೋಗ್ಯದ ದೃಷ್ಟಿಯಿಂದ ಇಂದು ಅನುಕೂಲವೇ. ನೂತನ ವಸ್ತುಗಳನ್ನು ಖರೀದಿಸಿದರೂ ಅದನ್ನು ಉಪಯೋಗಿಸಲು ಆಗದೇ, ಇಂದು ಅದನ್ನು ಬಳಸುವಿರಿ. ಕಾನೂನಿಗೆ ವಿರುದ್ಧವಾಗಿ ಕಾರ್ಯವನ್ನು ಮಾಡುವ ಆಲೋಚನೆಯನ್ನು ಬಿಡುವುದು ಇದ್ದರೆ, ಅಂತಹ ಸಾಹಸದಲ್ಲಿ ತೊಡಗಿಕೊಳ್ಳುವುದು ಬೇಡ. ಬೇಸರಿಸದೇ ಬಂದ ಕೆಲಸವನ್ನು ಶ್ರದ್ಧೆಯಿಂದ ಮಾಡಿ. ಬಂಧುಗಳ ಜೊತೆ ಇಂದು ವಿನಾಕಾರಣ ವಿವಾದ ಮಾಡಿಕೊಂಡು ಬೇಸರಿಸುವಿರಿ.