Horoscope Today April 29 2024: ದಿನಭವಿಷ್ಯ, ಈ ರಾಶಿಯವರ ದಾಂಪತ್ಯ ಜೀವನದಲ್ಲಿ ಕಲಹ.

2024 ಏಪ್ರಿಲ್ 29ರ ದಿನ ಭವಿಷ್ಯ: ಸೋಮವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಇಂದಿನ ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

ರಾಶಿ ಭವಿಷ್ಯ (Horoscope) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಏಪ್ರಿಲ್​​​​​ 29ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಪೂರ್ವಾಷಾಢಾ, ಯೋಗ: ಸಿದ್ಧ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 12 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 48 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:47 ರಿಂದ 09:21 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:56 ರಿಂದ ಮಧ್ಯಾಹ್ನ 12:30 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:05 ರಿಂದ 03:39 ರ ವರೆಗೆ

ಮೇಷ ರಾಶಿ: ಇಂದು ಶ್ರಮಪಟ್ಟು ಮಾಡಿದ ಕೆಲಸವು ಕೊನೆಯ ಕ್ಷಣದಲ್ಲಿ ಹಾಳಾಗುವುದು, ನಿಮಗೆ ಬೇಸರವುಂಟಾಗಬಹುದು. ಕರ್ತವ್ಯಗಳನ್ನು ನಿಷ್ಠೆಯಿಂದ ಮಾಡಿ. ಹಿರಿಯರ ದಿನವನ್ನು ಶ್ರದ್ಧೆಯಿಂದ ಮಾಡಿ.‌ ಅನೇಕ ಲಾಭಗಳು ನಿಮಗಾಗಲಿವೆ. ನಿಮ್ಮ ಕಾರ್ಯಗಳಿಗೆ ಅಪರಿಚಿತರೂ ಸಹಾಯ ಮಾಡಲಿದ್ದಾರೆ. ಕೃತಜ್ಞತೆಯನ್ನು ಅರ್ಪಿಸಲು ಮರೆಯಬೇಡಿ. ನಿಮ್ಮ ಒಳ್ಳೆತನ ನಿಮಗೆ ವರವಾಗಿಯೇ ಇರಲಿದೆ. ದುಡುಕಿದ ಕಾರ್ಯದಿಂದ ಪಶ್ಚಾತ್ತಾಪವಾಗುವುದು. ಬೇಡವೆಂದು ಬಿಟ್ಟ ಕಾರ್ಯಗಳಿಂದಲೇ ಪ್ರಯೋಜನವಾದೀತು. ವಿದ್ಯಾರ್ಥಿಗಳಲ್ಲಿ ಉತ್ಸಾಹಿಗಳು ಎದ್ದು ಕಾಣಲಿವೆ. ಕೃಷಿಯ ಕುರಿತು ಕುತೂಹಲ ಹಾಗೂ ಆಸೆಯು ಬರಬಹುದು. ಸಣ್ಣ ಕಲಾವಿದರಿಗೆ ಪ್ರೋತ್ಸಾಹವು ಸಿಗಲಿದೆ. ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಮನೆಯಿಂದ ದೂರ ಕಳಿಸುವಿರಿ. ಹಿರಿಯರ ಭೇಟಿಯಿಂದ ಜೀವನಕ್ಕೆ ಹಲವು ಪ್ರಯೋಜನಗಳು ಆಗಲಿವೆ. ಸ್ಥಾನಮಾನವನ್ನು ಪಡೆಯಲು ಏನಾದರೂ ಮಾಡುವಿರಿ.

ವೃಷಭ ರಾಶಿ: ಹಣವು ಯಾವುದೋ ಒಂದು ರೀತಿಯಲ್ಲಿ ಖರ್ಚಾಗುವ ಸಾಧ್ಯತೆ ಇದ್ದು, ಅದನ್ನು ನಿಭಾಯಿಸಿ. ಶತ್ರುಗಳು ನಿಮ್ಮ ಪತನವನ್ನು ನಿರೀಕ್ಷಿಸುತ್ತಿರುತ್ತಾರೆ. ಜಾರಿ ಬಿದ್ದು ನೋವನ್ನು ಅನುಭವಿಸುವಿರಿ. ಜಾಗರೂಕರಾಗಿ ಹೆಜ್ಜೆಯನ್ನು ಹಾಕಿ. ದೂರದ ಪ್ರಯಾಣ ವ್ಯರ್ಥವಾಗಬಹುದು. ಯಾರ ಸಹಕಾರವನ್ನೂ ಪಡೆಯದೇ ನಿಮ್ಮ ಕಾರ್ಯಗಳನ್ನು ಮಾಡಿಕೊಳ್ಳುವಿರಿ. ಇಷ್ಟವಾಗದವರ ಜೊತೆ ವೃಥಾ ಕಾಲಹರಣ ಮಾಡುವುದು ಬೇಡ. ನಿಮ್ಮಷ್ಟಕ್ಕೆ ನೀವು ಇದ್ದುಬಿಡಿ. ಹಣಕಾಸಿನ ತೊಂದರೆಯನ್ನು ಸರಿ ಮಾಡಿಕೊಳ್ಳುವ ಮಾರ್ಗದ ಅನ್ವೇಷಣೆ ಮಾಡುವಿರಿ. ನೀರಿನ ಭೀತಿಯು ಇರಲಿದೆ. ಅತಿಯಾದ ಮನೆಯ ಕೆಲಸದಿಂದ ಆಯಾಸವಾಗಬಹುದು. ಅನಿರೀಕ್ಷಿತ ವಾರ್ತೆಯನ್ನು ನೀವು ನಂಬಲಾರಿರಿ. ಬಂಧುಗಳ ಬಗ್ಗೆ ಸಮಾಧಾನವಿರದು.

ಮಿಥುನ ರಾಶಿ: ನಾಲ್ಕು ಜನರನ್ನು ಕೇಳಿಯಾದರೂ ತೊಂದರೆಯಿಲ್ಲ, ನೀವಿಡುವ ಹೆಜ್ಜೆಗಳು ಸರಿಯಾಗಿರಿಲಿ. ಉನ್ನತ ಚಿಂತನೆಗಳು ನಿಮ್ಮನ್ನು ಉತ್ತಮ ಸ್ತರಕ್ಕೆ ಕೊಂಡೊಯ್ಯುವುದು. ಎಲ್ಲರ ಜೊತೆಗೆ ಸ್ನೇಹದಿಂದ ಮಾತನಾಡುವಿರಿ. ಆಪ್ತಬಂಧುಗಳ ಅಗಲಿಕೆಯಿಂದ ನೋವಾಗಬಹುದು. ಒತ್ತಡದಿಂದ ನೀವು ಉದ್ವೇಗಕ್ಕೆ ಒಳಗಾಗಬಹುದು. ನಂಬಿಕೆಯನ್ನು ಗಳಿಸಲು ಸತತ ಪ್ರಯತ್ನವನ್ನು ಮಾಡುವಿರಿ. ಶ್ರೇಷ್ಠ ವ್ಯಕ್ತಿಗಳ ಭೇಟಿಯಿಂದ ಹೊಸ ಕಾರ್ಯಗಳನ್ನು ಮಾಡಲು ಉತ್ಸುಕರಾಗಿರುವಿರಿ. ನಿಮ್ಮ‌ಮಾತಿಗೆ ಸಮಜಾಯಿಷಿ ಕೊಡಬೇಕಾದೀತು. ಕುಟುಂಬಕ್ಕೆ ಸಾಕಷ್ಟು ಸಮಯವನ್ನು ನೀಡುವುದಿಲ್ಲ ಬೇಸರವೂ ಇರುವುದು. ಆರ್ಥಿಕ ಪರಿಸ್ಥಿತಿ ಸುಧಾರಿಸಿ ನೆಮ್ಮದಿ ಸಿಗುವುದು. ಉದ್ಯೋಗದಲ್ಲಿ ನಿಮ್ಮ ಸ್ಥಾನಕ್ಕೆ ಬರಲು ಯಾರಾದರೂ ಕಾಯುತ್ತಿರಬಹುದು. ಹಿತಶತ್ರುಗಳ ಕಿರುಕುಳವನ್ನು ನೀವು ಸಹಿಸಲಾರಿರಿ. ಮನೆಯ ವಾತಾವರಣವು ಸಂತೋಷವನ್ನು ಕೊಟ್ಟೀತು.

ಕಟಕ ರಾಶಿ: ಇಂದು ಮನೆಯ ಹಿರಿಯರ ಸಹವಾಸವನ್ನು ಮಾಡುವಿರಿ.‌ ಅವರ ಸೇವೆಯಿಂದ ತೃಪ್ತಿ ಇರಲಿದೆ. ತಂತ್ರಜ್ಞರು ಉನ್ನತ ಸ್ಥಾನದ ಬಯಕೆಯಿಂದ ಕಛೇರಿಯನ್ನು ಬಿಡಬಹುದು. ಅನಿರೀಕ್ಷಿತ ವಾರ್ತೆಯು ನಿಮ್ಮನ್ನು ಚಿಂತೆಗೆ ದೂಡಲಿದೆ. ಪ್ರಶಾಂತವಾದ ವಾತಾವರಣದಲ್ಲಿ ಕೆಲವು ಸಮಯವನ್ನು ಕಳೆದು ಬನ್ನಿ. ಉನ್ನತ ಹುದ್ದೆಗಾಗಿ ಬರೆಯುವ ಪರೀಕ್ಷೆಯಲ್ಲಿ ನಿಮಗೆ ಜಯ ಸಿಗಲಿದೆ. ದೂರದ ಊರಿಗೆ ಪ್ರಯಾಣ ಮಾಡಲಿದ್ದೀರಿ. ನಿಮ್ಮ ಸಕಾರಾತ್ಮಕ ಆಲೋಚನೆಗಳೂ ನಿಮಗೆ ಸಹಕಾರವನ್ನು ಕೊಡದು. ಕುಟುಂಬದಲ್ಲಿ ಜವಾಬ್ದಾರಿಯ ಸ್ಥಾನವನ್ನು ಪಡೆಯಬೇಕಾಗುವುದು. ನಿಮ್ಮ ಮಾತು ಸುಳ್ಳಾಗಬಹುದು. ವಸ್ತುಗಳ ಖರೀದಿಯು ಖರ್ಚನ್ನು ಹೆಚ್ಚು ಮಾಡುವುದು. ಯಾರ ಜೊತೆಗೂ ನಿಮ್ಮ ವರ್ತನೆಯು ಸಹಜತವಾಗಿ ಇರದು. ಯಂತ್ರಗಳ ಕೆಲಸವು ನಿಮಗೆ ಸಾಕೆನಿಸಬಹುದು. ಆಸ್ತಿಯ ವಿಚಾರದಲ್ಲಿ ಆಕಸ್ಮಿಕ ತಿರುವು ಬರಬಹುದು.

ಸಿಂಹ ರಾಶಿ: ನಿಮ್ಮ ಅನಾರೋಗ್ಯದಿಂದ ಅಭ್ಯಾಸಕ್ಕೆ ತೊಂದರೆಯಾಗಲಿದೆ. ಪೂರ್ಣವಿಶ್ರಾಂತಿಗೆ ನೀವು ಒಳಪಡಬೇಕಾದೀತು. ಅರ್ಥಿಕತೆಯು ಏರಿಕೆಯಾಗಲಿದೆ. ಸ್ನೇಹಿತರ ಜೊತೆ ಮೋಜಿನಲ್ಲಿ ಇರುವ ಮನಸ್ಸು ಮಾಡುವಿರಿ. ಅನಾಹುತಕ್ಕೆ ಎಡೆಮಾಡಿಕೊಡಬೇಡಿ. ಮಕ್ಕಳಿಂದ ನಿಮ್ಮ ಕೀರ್ತಿಯು ಹಾಳಾಗಬಹುದು‌‌. ನಿಮ್ಮ ಮಾತಿಗೆ ಬೆಲೆಯು ಬರುವಂತೆ ಮಾತನಾಡಿ. ಆದಾಯದಲ್ಲಿ ಇತರರಿಗೆ ಸಮಾನವಾಗಿದ್ದರೂ ಖರ್ಚು ಹಾಗಿರುವುದಿಲ್ಲ. ಏನಾದರೊಂದು ಹುಟ್ಟಿಕೊಳ್ಳುತ್ತದೆ. ಶಕ್ತಿ ಮೀರಿದ ಕೆಲಸವನ್ನು ಮಾಡಿ ಆಯಾಸ ಮಾಡಿಕೊಳ್ಳುವುದು ಬೇಡ. ಕುಟುಂಬಕ್ಕೆ ನಿಮ್ಮಿಂದ ಧನಸಹಾಯದ ಅಪೇಕ್ಷೆ ಇರುವುದು. ನಿಮ್ಮ ಕೈ ಮೀರಿದ ಕೆಲಸದಲ್ಲಿ ನಿಮಗೆ ಆತಂಕ ಬೇಡ. ಪ್ರೇಮವು ನಿಮಗೆ ಬಂಧನದಂತೆ ಕಾಣಿಸುವುದು. ನಿಮ್ಮ ಸೋಲನ್ನು ನೀವು ಒಪ್ಪಿಕೊಳ್ಳಲಾರಿರಿ.

ಕನ್ಯಾ ರಾಶಿ: ನೀವು ಕುಟುಂಬಕ್ಕೆ ಯೋಗ್ಯವಾದ ಹೆಸರನ್ನು ತಂದುಕೊಡಲಿದ್ದೀರಿ. ವಿದೇಶಕ್ಕೆ ಹೋಗಲು ನಿಮಗೆ ಕಛೇರಿಯಲ್ಲಿ ಅನುಮೋದನೆ ಸಿಗಬಹುದು. ಹೊರದೇಶದಲ್ಲಿ ಹೊಸದಾಗಿ ಕೆಲಸವನ್ನು ಹುಡುಕುತ್ತಿದ್ದರೆ ಅದನ್ನು ನಿಲ್ಲಿಸಿ.‌ ಸದ್ಯ ವಿದೇಶದ ಕಡೆಗೆ ಗಮನವನ್ನು ಕೊಡಬೇಡಿ. ಇರುವ ಸ್ಥಳದಲ್ಲಿಯೇ ಸಿಕ್ಕ ಉತ್ತಮ‌ ಕೆಲಸವನ್ನು ಮಾಡಿ. ನಿಮ್ಮನ್ನು ಆಡಿಕೊಳ್ಳುವ ಜನರು ನಿಮ್ಮ ಪಕ್ಕದಲ್ಲಿಯೇ ಇರುತ್ತಾರೆ. ಅವರಿಗೆ ಕಾಣಿಸುವಂತೆ ಏನನ್ನೂ ಮಾಡಬೇಡಿ. ಇಂದು ಆರಂಭಿಸಿದ ಕೆಲಸಗಳನ್ನು ಇಂದೇ ಮುಗಿಸುವಂತೆ ನೋಡಿಕೊಳ್ಳಿ. ಸಾಮಾಜಿಕ‌ ಕೆಲಸಗಳು ನಿಮಗೆ ಇನ್ನಷ್ಟೂ ಉತ್ಸಾಹವನ್ನು ಕೊಡುವುದು. ವೈದ್ಯರು ಇಂದು ಒತ್ತಡದಿಂದ ಇರುವರು.‌ ನೀವು ಕಷ್ಟವನ್ನು ಆನಂದದಿಂದ ಕಳೆಯುವಿರಿ. ಇಂದು ಕೆಲಸಕ್ಕಿಂತ ಪ್ರಯಾಣವೇ ಹೆಚ್ಚಾಗಿರುವುದು.

ತುಲಾ ರಾಶಿ: ನಿಮ್ಮ ಒಳ್ಳೆಯತನಕ್ಕೆ ಯಾವ ಫಲವಿಲ್ಲ ಎಂಬ ಬೇಸರವಿರಲಿದೆ. ಎಲ್ಲ ನಿರ್ಥಕ ಎನ್ನುವ ಭಾವನೆಯು ನಿಮ್ಮಲ್ಲಿ ಬರಬಹುದು. ಯಾವ ಸಸಿಯೂ ನೆಟ್ಟ ಮರುಕ್ಷಣವೇ ಫಲವನ್ನು ಕೊಡುವುದಿಲ್ಲ ಎಂಬ ವಿಚಾರವು ನಿಮ್ಮೊಳಗೆ ಸರಿಯಾಗಿ ಬೇರೂರಿರಲಿ. ಆಲಸ್ಯದಿಂದ ನಿಮ್ಮ ಕಾರ್ಯಗಳು ನಿಧಾನವಾಗಲಿದೆ. ವ್ಯಾಪರಸ್ಥರಿಗೆ ತಕ್ಕಮಟ್ಟಿನ ಲಾಭವು ಸಿಗಲಿದೆ. ಇಂದು ನಿಮ್ಮ ಭವಿಷ್ಯದ ಗುರಿಯನ್ನು ನಿರ್ಧಾರ ಮಾಡಿಕೊಳ್ಳುವುದು ಉತ್ತಮ. ಆಧ್ಯಾತ್ಮಿಕ ಚಿಂತನೆಯನ್ನು ಹೆಚ್ಚು ಮಾಡುವಿರಿ. ನಿಮ್ಮ ತುಮುಲವನ್ನು ಅರಿತುಕೊಳ್ಳಲಾರರು. ಹತ್ತಿರದ ಬಂಧುಗಳ ಒಡನಾಟವು ಹೆಚ್ಚಿರಲಿದೆ. ಹಣಕಾಸಿನ ವಿಚಾರಕ್ಕೆ ಸಂಗಾತಿಯ ಜೊತೆ ಮಾತಾಗಬಹುದು. ನೇರ ನುಡಿಯಿಂದ ಆಪ್ತರು ದೂರ ಸರಿಯಬಹುದು. ಮನೋರಂಜನೆಯಿಂದ ನಿಮಗೆ ಸಮಾಧಾನ ಸಿಗಲಿದೆ. ಕೆಲವು ವಿಚಾರಗಳಿಗೆ ಸುಮ್ಮನೇ ಪ್ರತಿಕ್ರಿಯೆ ನೀಡಬೇಕಿಲ್ಲ.

ವೃಶ್ಚಿಕ ರಾಶಿ: ಇಂದು ನಿಮ್ಮ ಉತ್ತಮ‌ ನಡತೆಗೆ ಪ್ರಶಂಸೆ ಸಿಗಲಿದೆ. ಕೃಷಿ ಚಟುವಟಿಕೆಯಲ್ಲಿ ಆಸಕ್ತಿಯನ್ನು ತೋರಿಸುವಿರಿ. ವಾಹನಕ್ಕೋಸ್ಕರ ಸಾಲಮಾಡುವ ಸ್ಥಿತಿಯು ಬರಬಹುದು. ಸರ್ಕಾರಿ ಕೆಲಸಕ್ಕೆ ಅರ್ಜಿ ಹಾಕಿದ್ದರೆ ಸಂತೋಷಕರವಾದ ಸುದ್ದಿಯೊಂದು ನಿಮ್ಮ ಪಾಲಿಗೆ ಇರುತ್ತದೆ. ನಿರುತ್ಸಾಹಿಗಳಾಗಿ ಕುಳಿತುಕೊಳ್ಳದೇ ಏನನ್ನಾದರೂ ಸಾಧಿಸಬೇಕು ಎಂಬ ಮನಸ್ಸು ನಿಮಗೆ ಬರುತ್ತದೆ. ಒತ್ತಡದಿಂದ ಯಾವುದನ್ನೂ ಮಾಡಲು ಹೋಗಬೇಡಿ. ಕುಟುಂಬದ ಜೊತೆ ನಿಕಟ ಸಂಬಂಧವನ್ನು ಇಟ್ಟುಕೊಳ್ಳುವ ಮನಸ್ಸಾಗುವುದು.‌ ಕಾರ್ಯಗಳಿಂದ ಹೆಚ್ಚಿನ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಉದ್ಯಮದಲ್ಲಿ ಜನರ ವಿಶ್ವಾಸವನ್ನು ಗಳಿಸುವುದು ಮುಖ್ಯವಾಗಿರುವುದು. ಪ್ರವಾಸ ಹೋಗುವ ಮನಸ್ಸಾದೀತು. ಅಧಿಕಾರಿಗಳು ನಿಮ್ಮ ಉದ್ಯಮವನ್ನು ಪರಿಶೀಲಿಸಬಹುದು. ನಿಮಗೆ ಬೇಡ ಎನಿಸಿದ ವಿಚಾರವೇ ಮತ್ತೆ ಮತ್ತೆ ಕೇಳಿ ಬಂದು‌ ಮಾನಸಿಕ ಹಿಂಸೆಯಾದೀತು.

ಧನು ರಾಶಿ: ಇಂದು ನೀವು ನೋಡಲು ಸಾಮಾನ್ಯರಂತೆ ಕಂಡರೂ ನಿಮ್ಮ ಪ್ರಭಾವವು ಅಧಿಕವಾಗಿರುತ್ತದೆ‌. ಸಾಮಾಜಿಕವಾಗಿ ನಿಮ್ಮನ್ನು ಗುರುತಿಸಿ ಸಮ್ಮಾನಿಸಬಹುದು. ಕಲಾವಿದರಾಗುವ ಆಸೆ ಪೂರ್ಣವಾಗುವುದು. ಆಕಸ್ಮಿಕ ಧನಲಾಭವು ನಿಮ್ಮ ಬದುಕನ್ನು ಖುಷಿಯಾಗಿ ಇಡಲಿದೆ. ಮತ್ತೊಬ್ಬರಿಗೆ ಸಹಾಯ ಮಾಡುವ ಅವಕಾಶ ಬಂದಾಗ ಅದನ್ನು ಅಲ್ಲಗಳೆಯಬೇಡಿ. ಉದ್ಯೋಗದ ಸ್ಥಳ ನಿಮಗೆ ಅನೇಕ ಅನುಕೂಲಗಳನ್ನು ಮಾಡಬಹುದು. ವಿದ್ಯಾಭ್ಯಾಸಕ್ಕೆ ಅತಿಯಾದ ಹಣಕಾಸಿನ ಖರ್ಚು ಬರಲಿದ್ದು, ನಿಮಗೆ ಕಷ್ಟವಾಗುವುದು. ಅಸೂಯೆಯಿಂದಾಗಿ ನಿಮ್ಮ ವ್ಯಕ್ತಿತ್ವವನ್ನು ಹಾಳು ಮಾಡಿಕೊಳ್ಳುವ ಸಾಧ್ಯತೆ ಇದೆ. ಆಕಸ್ಮಿಕವಾಗಿ ಧನಲಾಭವು ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು. ಮನಸ್ಸಿನ ಸ್ಥಿರತೆಯಲ್ಲಿ ಅಭಾವವಿದ್ದು ನಿಮ್ಮ ಗುರಿಯೂ ಬದಲಾಗುವುದು. ಪ್ರೇಮವು ಕೊನೆಗೂ ಅಂದುಕೊಂಡಂತೆ ಆಗಲಿದೆ.

ಮಕರ ರಾಶಿ: ನಿಮ್ಮ ಕಾರ್ಯದ ದಕ್ಷತೆಯನ್ನು ಗಮನಿಸಿ, ಉನ್ನತ ಸ್ಥಾನವು ಸುಗುವುದು. ಕೆಲವರಿಗೆ ವೃತ್ತಿಯನ್ನು ಬದಲಿಸಬೇಕಾಗಿ ಬರಬಹುದು. ಮನೆಯಲ್ಲಿ ಸುಂದರ ವಾತಾವರಣವಿರುತ್ತದೆ. ಸಂಗಾತಿಯಿಂದ ದೂರ ಉಳಿಯಬೇಕಾದ ಸ್ಥಿತಿ ಬರಬಹುದು. ಮಾತಿನಿಂದ ಯಾರನ್ನೂ ಟೀಕಿಸಲು ಹೋಗಬೇಡಿ. ನಿಮ್ಮನ್ನು ಟೀಕಿಸಲು ಜನರು ಕಾದುಕುಳಿತಿರುತ್ತಾರೆ. ಎಷ್ಟೋ ವಿಷಯಗಳು ಅರ್ಥವಾಗದೇ ಮುಗಿದುಹೋಗಿದೆ ಎಂದು ಅನ್ನಿಸುತ್ತಿರುತ್ತದೆ. ಇಂದು ನಿಮಗೆ ರಾಜಕೀಯ ವ್ಯಕ್ತಿಗಳ ಭೇಟಿಯಾಗುವುದು. ಮಾರುಕಟ್ಟೆಗೆ ಸಂಬಂಧಿತ ಕಾರ್ಯಗಳನ್ನು ಮಾಡಲು ಸರಿಯಾದ ಸಮಯ. ಹೊಸಬರನ್ನು ಸಾಮಾಜಿಕ ತಾಣದಲ್ಲಿ ಪರಿಚಯ ಮಾಡಿಕೊಳ್ಳುವಿರಿ. ತಂದೆಯ ಮಾತನ್ನು ಉಳಿಸಿಕೊಳ್ಳಲು ನಿಮ್ಮ ಶ್ರಮವು ಬಳಕೆಯಾಗುವುದು. ದಾಂಪತ್ಯದಲ್ಲಿ ಸಾಮರಸ್ಯದ ಕೊರತೆ ಬಗೆ ಹರಿಯಬಹುದು. ಕುಟುಂಬದ ನೆಮ್ಮದಿಯು ನಿಮ್ಮ ಮಾತಿನಿಂದ ವಿಚಲಿತವಾಗುವುದು.

ಕುಂಭ ರಾಶಿ: ಇಂದು ನಿಮ್ಮ ಸಂಬಂಧದ ಮೌಲ್ಯವು ತಿಳಿಯುವುದು. ಮನೆಯವರ ಚಿಂತೆಯು ನಿಮ್ಮನ್ನು ಬಹಳ ಕಾಡಬಹುದು. ಸಹೋದರರ ಜೊತೆ ಕಲಹವು ಏರ್ಪಟ್ಟು ಕೆಲವು ಕಾಲ ಮೌನವಹಿಸುವಿರಿ. ಕೃಷಿಯ ಜೀವನ ನಿಮಗೆ ಬಹಳ ಸುಖವನ್ನು ನೀಡುತ್ತದೆ ಎಂದನ್ನಿಸುತ್ತಿರುತ್ತದೆ‌. ಧಾರ್ಮಿಕ‌ ಕಾರ್ಯದಲ್ಲಿ ಆಸಕ್ತಿಯು ಹೆಚ್ಚಾಗಲಿದೆ.‌ ನೀವು ಇಂದು ಜನರೊಡನೆ ಬೆರೆಯಲು ಬಿಡುವಿನ ವೇಳೆಯನ್ನು ಹೊಂದಿದ್ದೀರಿ. ಏನಾದರೂ ಅವಘಡಗಳು ಸಂಭವಿಸಬಹುದು. ವೈವಾಹಿಕ ಸಂಬಂಧಗಳಲ್ಲಿ ಸಾಮರಸ್ಯ ಇರಲಿದೆ. ಮಕ್ಕಳ‌ ವಿದ್ಯಾಭ್ಯಾಸದ ಚಿಂತೆಯು ದೂರಾಗುವುದು. ಉತ್ತಮ ಸ್ಥಳವು ಸಿಕ್ಕಿದ್ದು ನಿಮಗೆ ಖುಷಿಯೂ ಆಗುವುದು. ಅಪರಿಚಿತರ ಜೊತೆ ಜಗಳವಾಡಿ ಸಮಯವನ್ನು ವ್ಯರ್ಥ ಮಾಡುವಿರಿ.‌ ಪ್ರೀತಿಗೆ ಯೋಗ್ಯರನ್ನು ಹುಡುಕುವಿರಿ. ವಿದ್ಯಾಭ್ಯಾಸದ ಪ್ರಗತಿಯಿಂದ ಮನೆಯಲ್ಲಿ ಖುಷಿ ಇರಲಿದೆ.

ಮೀನ ರಾಶಿ: ಇಂದು ನೀವು ಭೂಮಿಯ ವ್ಯವಹಾರವನ್ನು ಮಾಡಿದರೆ ಲಾಭವನ್ನು ಪಡೆಯುವಿರಿ. ನೀವು ಪ್ರಯತ್ನಿಸಿದ ಕಾರ್ಯಗಳು ಫಲವನ್ನು ಕೊಡಲಿವೆ. ವಾಹನವನ್ನು ಓಡಿಸುವ ಎಚ್ಚರಿಕೆಯಿಂದ ಇರಿ. ದೂರದ ಊರಿಗೆ ಅನಿವಾರ್ಯವಾಗಿ ಹೋಗಿ ಆರೋಗ್ಯವನ್ನು ಕೆಡಿಸಿಕೊಳ್ಳುವಿರಿ. ಯಾರದೋ ಸಿಟ್ಟನ್ನು ಯಾರ ಮೇಲೋ ತೀರಿಸಿಕೊಳ್ಳುವ ನಿಮ್ಮ ಸ್ವಭಾವವು ಒಳ್ಳೆಯದಲ್ಲ. ತಿದ್ದಿಕೊಳ್ಳಲು ಪ್ರಯತ್ನಿಸಿ. ನಿಮ್ಮ ಕರ್ತವ್ಯಗಳನ್ನು ಮಾಡಲು ಹಿಂದೇಟು ಹಾಕದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ. ನಿಮ್ಮ ಮದುವೆ ಈ ದಿನ ಒಂದು ತಿರುವನ್ನು ತೆಗೆದುಕೊಳ್ಳುತ್ತದೆ. ದಾಂಪತ್ಯದಲ್ಲಿ ನೆಮ್ಮದಿ ಇಲ್ಲದೇ ಪರಸ್ಪರ ಕಲಹವಾಗಬಹುದು. ನಿಮ್ಮ ಗುರಿಯ ಬಗ್ಗೆ ವಿಶ್ವಾಸವು ನಿಮಗಿರಲಿ. ನಿಮ್ಮಿಂದ ಸಹಾಯ ಪಡೆಯಲು ನಿಮ್ಮನ್ನು ಹೊಗಳುವರು. ಮನೆಯ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಜೀವನ ಸಂಗಾತಿಯು ಸಂಪೂರ್ಣ ಬೆಂಬಲವನ್ನು ನೀಡುತ್ತಾನೆ.

Source: https://tv9kannada.com/horoscope/dina-bhavishya-today-2024-april-29-horoscope-for-aries-to-pisces-in-kannada-ggs-823178.html

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsAppGroup:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *