2024 ಜೂನ್ 15 ದಿನ ಭವಿಷ್ಯ: ಶನಿವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ರಾಶಿ ಭವಿಷ್ಯ ಹೇಗಿರಲಿದೆ? ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ಸಿದ್ಧಿ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:19 ರಿಂದ 10:56ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:10 ರಿಂದ 03:47ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:05 ರಿಂದ 07:42ರ ವರೆಗೆ.
ಮೇಷ ರಾಶಿ: ಮನೆಯವರು ನಿಮ್ಮ ಮಾತಿನಿಂದ ಕಟ್ಟಿಹಾಕಬಹುದು. ಉಳಿದೆಲ್ಲ ಸಮಸ್ಯೆಗಿಂತ ಗುರಿಯೇ ನಿಮಗೆ ಮುಖ್ಯವಾಗಿರಲಿ. ನಿಮ್ಮ ಕಾರ್ಯದ ಶಿಸ್ತಿಗೆ ಸಹೋದ್ಯೋಗಿಗಳ ಸಹಾಯ ಪಡೆಯಿರಿ. ನಿಮ್ಮ ಮೇಲೆ ವಿಶ್ವಾಸವು ಮೂಡುವ ದಿನವಾಗಿದೆ. ಅದನ್ನು ಉಳಿಸಿಕೊಳ್ಳುವ ಪ್ರಯತ್ನವನ್ನೂ ಅನವರತ ಮಾಡಬೇಕಾದ ಸ್ಥಿತಿಯೂ ಇದೆ. ಕೃತಕವಾಗಿ ಬರುವ ಧಾರ್ಮಿಕ ಶ್ರದ್ಧೆಯಿಂದ ಯಾವ ಪರಿಣಾಮವಾಗದು. ನಿಮ್ಮ ಅನುಕೂಲಕ್ಕೆ ತಕ್ಕ ನಿಯಮಗಳನ್ನು ಬೇರೆಯವರ ಮೇಲೆ ಹೇರಬೇಡಿ. ಆಹಾರಕ್ಕಾಗಿ ದೂರ ಪ್ರಯಾಣ ಮಾಡಬೇಕಾದೀತು. ನಿಮಗೆ ಸಹಕಾರ ನೀಡದವರೆಲ್ಲ ಕೆಟ್ಟವರಲ್ಲ. ಕ್ಷಮೆಯಿಂದ ನೀವು ದೊಡ್ಡವರಾಗುವಿರಿ. ಮನೆಯ ಕಾರ್ಯದಲ್ಲಿ ಇಂದು ಮಗ್ನರಾಗುವಿರಿ. ನಿಮ್ಮ ಬಗ್ಗಯೇ ನೀವು ಹೇಳಿಕೊಳ್ಳುವುದು ಉಚಿತವಾಗದು. ಕೆಲವು ಸಂದರ್ಭವು ನಿಮ್ಮ ನಿಯಂತ್ರಣವನ್ನು ಮೀರಿ ತಪ್ಪು ಆಗಬಹುದು. ಯೋಗ್ಯವಾದದನ್ನು ದಾನ ಮಾಡಿ.
ವೃಷಭ ರಾಶಿ: ಅಂದುಕೊಂಡಂತೆ ವೇಗವಾಗಿ ಸಮಯಕ್ಕೆ ಸರಿಯಾಗಿ ಕೆಲಸ ಆಗಲಿದ್ದು, ಅನಂತರ ಸ್ವಲ್ಪ ವಿಶ್ರಾಂತಿಯನ್ನೂ ಪಡೆಯುವಿರಿ. ಸಾಲಕ್ಕೆ ಸಂಬಂಧಿಸಿದ ವಿಷಯಗಳು ಇತ್ಯರ್ಥವಾಗಲಿವೆ. ನಕಾರಾತ್ಮಕ ಪ್ರತಿಕ್ರಿಯೆಯನ್ನು ಕೊಟ್ಟು ಎಲ್ಲರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ. ಅಧಿಕಾರದ ಆಮಿಷಕ್ಕೆ ತುತ್ತಾಗಿ ಇಲ್ಲದ ಕೆಲಸವನ್ನು ಮಾಡಬೇಕಾಗಬಹುದು. ಯಾರ ಮಾತನ್ನೂ ತಳ್ಳಿಹಾಕದೇ ಗಂಭೀರವಾಗಿ ಪರಿಗಣಿಸುವಿರಿ. ಉದ್ಯೋಗಿಗಳು ಬಹಳ ಪರಿಶ್ರಮದಿಂದ ಲಾಭವನ್ನು ಪಡೆಯಬೇಕಾಗಿದೆ. ಮಾಡಲು ಸಾಧ್ಯವಾಗುವ ಕೆಲಸಕ್ಕೆ ಕಾರಣವನ್ನು ಹುಡುಕುತ್ತ ಅವಕಾಶವಂಚಿತರಾಗಬೇಡಿ. ನೆಮ್ಮದಿಯು ಕೆಡಲು ಮಾರ್ಗಗಳು ಹಲವು ಇದ್ದರೂ ಅಲ್ಲಿ ಒಳ್ಳೆಯದನ್ನು ಆರಿಸಿಕೊಳ್ಳಿ. ಸ್ನೇಹಿತರನ್ನು ದೂರ ಮಾಡಿಕೊಂಡು ಒಂಟಿಯಾಗಿ ಇರಲು ಇಚ್ಛಿಸುವಿರಿ. ಯಾರ ಮೇಲೂ ಹಗುರಾದ ಮನೋಭಾವ ಬೇಡ. ದುಃಸ್ವಪ್ನವು ನಿಮ್ಮ ನಿದ್ರೆಯನ್ನು ಕೆಡಿಸೀತು. ದೀರ್ಘಕಾಲದ ಗೆಳೆತನವು ಮಾತಿನಿಂದ ಒಡೆದುಹೋಗಬಹುದು.
ಮಿಥುನ ರಾಶಿ: ಇಂದು ಹೊಸದಾಗಿ ವೃತ್ತಿಯನ್ನು ಆರಂಭಿಸಿದವರಿಗೆ ತಮ್ಮ ವೃತ್ತಿಜೀವನದ ಬಗ್ಗೆ ಗೊಂದಲದಲ್ಲಿ ಇರುವರು. ಹೊಸ ಕೆಲಸವನ್ನು ತಯಾರಿಸಲು ಉತ್ತಮ ಸಮಯ. ನಿಮ್ಮ ಕೆಲಸದ ಗುಣಮಟ್ಟವನ್ನು ಸುಧಾರಿಸಲು ಪ್ರಯತ್ನಿಸಿ. ಪರಿಣಾಮಗಳನ್ನು ಪರಿಗಣಿಸಿ ಮುನ್ನಡೆಯಬೇಕು. ನಿಮಗೆ ಇನ್ನೊಬ್ಬರ ವ್ಯಕ್ತಿತ್ವ ಇಷ್ಟವಾಗದಿದ್ದರೆ ಅವರ ಬಳಿಯೇ ಹೇಳಿ. ಅದನ್ನು ಯಾರದೋ ಸಮೀಪ ಸಲ್ಲದ ಮಾತುಗಳನ್ನು ಆಡಿ ಅವರ ಮಾನವನ್ನು ಕಳೆಯಬೇಡಿ. ನಿಮ್ಮ ಆಯ್ಕೆ ಗುಣಮಟ್ಟದ್ದೇ ಆಗಿರಲಿದೆ. ದಾಂಪತ್ಯದ ಕಲಹದಲ್ಲಿ ಮಕ್ಕಳು ನಿಮ್ಮ ಪರವಾಗಿ ಇರುವರು.ಕಣ್ಣಿನ ತೊಂದರೆಯು ಸ್ವಲ್ಪ ಕಡಿಮೆ ಆದಂತೆ ತೋರುತ್ತದೆ. ನಿಮ್ಮ ಹಣವು ಕರಗುವ ಬಗ್ಗೆ ಚಿಂತೆ ಆಗಲಿದೆ. ನಿಮ್ಮ ಬಗ್ಗೆ ಆಡಿಕೊಳ್ಳುತ್ತಿರುವವರು ಸುಮ್ಮನಾಗುವರು. ಹೃದಯವೈಶಾಲ್ಯದಿಂದ ಪ್ರಶಂಸೆ ಸಿಗುವುದು. ವಾಹನದ ಮೇಲಿನ ವ್ಯಾಮೋಹ ಕಡಿಮೆಯಾಗುವುದು. ಸಂಗಾತಿಯ ವರ್ತನೆಯು ಹಿಡಿಸದೇ ಇದ್ದೀತು. ವಿದೇಶದಲ್ಲಿ ಇರವವರಿಗೆ ಅಸಮಾಧಾನ ಹೆಚ್ಚಿರುವುದು.
ಕರ್ಕಾಟಕ ರಾಶಿ: ಇಂದು ನಿಮ್ಮ ಕಾರ್ಯಗಳು ಸುಲಭದಲ್ಲಿ ಪೂರ್ಣಗೊಳ್ಳುವುದು. ಪದೇ ಪದೇ ಆಗಿಹೋದುದರ ಬಗ್ಗೆ ಯೋಚಿಸಿ ಮಾನಸಿಕವಾಗಿ ಹಿಂಸೆ ಮಾಡಿಕೊಳ್ಳುವಿರಿ. ನಿಮ್ಮ ಇಷ್ಟದ ಜನರಿಂದ ನೀವು ಬೆಂಬಲವನ್ನು ಪಡೆಯುತ್ತಿರುವಿರಿ. ಎಲ್ಲರ ಜೊತೆ ಬೆರೆಯಬೇಕು ಎನ್ನುವ ಇಚ್ಛೆ ಇದ್ದರೂ ನಿಮ್ಮನ್ನು ಸೇರಿಕೊಳ್ಳದೇ ಇರುವರು. ಕೆಲಸವೂ ಇಲ್ಲದೇ ಸುಮ್ಮನೆಯೂ ಇರಲಾಗದೇ ಸುತ್ತಾಡುವಿರಿ. ಎಂದಿನ ಉತ್ಸಾಹವಿಲ್ಲದೇ ಇಂದು ಇರದು. ದೂರದ ಊರಿನ ಉದ್ಯೋಗವನ್ನು ಮಾಡಲು ಹಿಂಜರಿಯುವಿರಿ. ಆತ್ಮೀಯರ ಮಾತು ನಿಮಗೆ ಕಹಿ ಎನ್ನಿಸಲೂಬಹುದು. ದೇಹ ಆರೋಗ್ಯವಾಗಿದ್ದರೂ ಮನಸ್ಸು ನಿಮ್ಮನ್ನು ಕಟ್ಟಿಹಾಕುವುದು. ಪ್ರೇಮವು ಕಾಮವಾಗಿ ಪರಿವರ್ತನೆ ಆಗಬಹುದು. ಸಂಬಂಧದಲ್ಲಿನ ಕೆಲವು ಸವಾಲುಗಳನ್ನು ನೀವು ಎದುರಿಸುವುದು ಅನಿವಾರ್ಯವಾದೀತು. ಮಕ್ಕಳಿಗಾಗಿ ಹಣವನ್ನು ಖರ್ಚು ಮಾಡುವಿರಿ. ಯಾರಾದರೂ ಪ್ರಾಬಲ್ಯವನ್ನು ಸಾಧಿಸಬಹುದು. ಆಲಸ್ಯದಿಂದ ಈ ದಿನವನ್ನು ಕಳೆಯುವಿರಿ.
ಸಿಂಹ ರಾಶಿ: ಇಂದು ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆಯಲು ಕಷ್ಟವಾಗುವುದು. ನೀವು ಆತ್ಮವಿಶ್ವಾಸವು ಶಕ್ತಿಯಿಂದ ತುಂಬಿರುವಿರಿ. ಬಹಳ ದಿನಗಳ ಅನಂತರ ಹೊರಗಿನ ಸುತ್ತಾಟವು ಹಿತವೆನಿಸುವುದು. ಸಮಯವನ್ನು ಮಾಡಿಕೊಂಡು ತಂದೆ ಹಾಗೂ ತಾಯಿಯರನ್ನು ಭೇಟಿಯಾಗಿ ನೆಮ್ಮದಿ ಕಾಣುವಿರಿ. ಅವರ ಮಾತುಗಳು ನಿಮಗೆ ಸಂಕಟವನ್ನು ತಂದರೂ ಅವರ ಮನಸ್ಸು ಹಗುರಾಗುವುದು. ನಿಯಮಿತ ಕಾರ್ಯಗಳನ್ನು ಮಾಡುತ್ತ ಸಂತೋಷವಾಗಿ ಇರುವಿರಿ. ನಿಮ್ಮ ಮೇಲಿನ ಆರೋಪಕ್ಕೆ ಹುರುಳಿಲ್ಲದೇ ಸ್ತಬ್ಧವಾಗಲಿದೆ. ಅವಕಾಶಗಳನ್ನು ಬಿಟ್ಟುಕೊಡುವುದು ಔದಾರ್ಯವಲ್ಲ, ಆಲಸ್ಯವಾಗುವುದು. ಕೆಲ ದಿನಗಳಿಂದ ನಿಮ್ಮ ಆರೋಗ್ಯ ಹದಗೆಟ್ಟಿದ್ದು, ಮನಸ್ಸೂ ಸರಿಯಾಗಿರದು. ಎಲ್ಲರ ಜೊತೆ ವಾದಕ್ಕಿಳಿಯುವ ಮನಸ್ಸಿನಲ್ಲಿ ಇರುವಿರಿ. ಶಿಸ್ತಿನಿಂದ ಇಂದಿನ ಕಾರ್ಯವನ್ನು ಮಾಡುವಿರಿ. ಮಕ್ಕಳಿಂದ ಅನಾದರವಾಗಬಹುದು. ನಿಮ್ಮ ಬಗ್ಗೆ ಸುಳ್ಳು ವಿಚಾರವನ್ನು ಹೇಳುವರು. ಬಹಳ ಕೆಲಸವಿದ್ದರೂ ಒತ್ತಡದಲ್ಲಿ ಇರುವಂತೆ ತೋರಸಲಾರಿರಿ.
ಕನ್ಯಾ ರಾಶಿ: ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ಸಂತೋಷಿಸುವಿರಿ. ಅವಶ್ಯಕ ವಸ್ತುವನ್ನು ಕಣ್ಮರೆ ಮಾಡಿಕೊಳ್ಳುವಿರಿ. ಇಂದು ಅನುಕೂಲಕರ ಸಮಯ. ಅನಗತ್ಯ ಮೋಜಿನಲ್ಲಿ ಸಮಯ ವ್ಯರ್ಥ ಮಾಡಬಾರದು. ಇಂದಿನ ನಿಮ್ಮ ನಡೆ ಬಹಳ ಗೌಪ್ಯವಾಗಿದ್ದು ನಿಮ್ಮ ಹೆಜ್ಜೆಯನ್ನು ಯಾರೂ ಗುರುತಿಸಲಾರರು. ಕೃಷಿಯು ನಿಮಗೆ ಹಿಡಿಸದ ಕೆಲಸವಾದರೂ ಅದನ್ನು ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾದೀತು. ಸಂಗಾತಿಯ ಮಾನಸಿಕತೆಯನ್ನು ಅರ್ಥಮಾಡಿಕೊಳ್ಳಲಾಗದು. ಪರಿಚಿತ ವ್ಯಕ್ತಿಯೊಡನೆಯೇ ಕಲಹವಾಗಲಿದೆ. ಇನ್ನೊಬ್ಬರ ಮಾತಿಗೆ ಕಿವಿಗೊಟ್ಟು ನಿಮ್ಮದನ್ನು ಕಳೆದುಕೊಳ್ಳುವ ಕೆಲಸಕ್ಕೆ ಕೈ ಹಾಕಬೇಡಿ. ಯಾರನ್ನೋ ಮೆಚ್ಚಿಸಲು ಕೆಲಸಮಾಡಬೇಕಾಗುವುದು. ತಪ್ಪುಗಳನ್ನು ಸರಿ ಮಾಡಿಯೇ ನಿಮಗೆ ಇಂದಿನ ಶ್ರಮವೆಲ್ಲ ವ್ಯರ್ಥವಾಗುವುದು. ಯಾವುದೇ ಊಹೆಗಳಿಗೆ ಬೆಲೆ ಕೊಡದೇ ಸ್ಪಷ್ಟವಾದುದನ್ನು ನಂಬಿ. ಹಣಕಾಸಿನಲ್ಲಿ ವ್ಯವಹಾರದಲ್ಲಿ ಪಾರದರ್ಶಕತೆ ಇದ್ದಷ್ಟು ಉತ್ತಮ.
ತುಲಾ ರಾಶಿ: ನಿಮ್ಮ ಇಂದಿನ ಕೆಲವು ನಡೆಗಳು ವ್ಯವಹಾರದ ಪ್ರಗತಿಗೆ ಮಾರಕವಾಗುವುದು. ಹೊಸ ಕೆಲಸವನ್ನು ಪ್ರಾರಂಭಿಸುವುದು ನಿಮಗೆ ಸಂತೋಷವನ್ನು ನೀಡುತ್ತದೆಯಾದರೂ ಕ್ರಮಬದ್ಧ ಮಾಡಿಕೊಳ್ಳದಿದ್ದರೆ ಅದೂ ಗೊಂದಲವಾದೀತು. ಇಬ್ಬರ ನಡುವಿನ ಕಲಹದಲ್ಲಿ ತುಪ್ಪವನ್ನು ಸುರಿಯುವ ಕೆಲಸಕ್ಕೆ ಹೋಗಬೇಡಿ. ಕಾಲವು ಕೂಡಿಬಂದಾಗ ಎಲ್ಲವೂ ತನ್ನಿಂದ ತಾನೇ ಆಗುತ್ತದೆ. ನಿಮ್ಮ ಪ್ರಯತ್ನದಿಂದಲೇ ಎಲ್ಲವೂ ಸಿದ್ಧಿಸಬೇಕು ಎನ್ನುವುದು ಮೂರ್ಖತನ. ಜನರೊಡನೆ ಬಾಂಧವ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಿ. ಅವರ ಸಹಾಯ ಮುಂದೊಂದುದಿನ ಬೇಕಾದೀತು. ನಿಮ್ಮ ಗುರಿಯ ಬಗ್ಗೆ ಅಸ್ಪಷ್ಟತೆ ಇರಲಿ. ದೀರ್ಘಕಾಲದ ವೈರವು ಮುಕ್ತಾಯವಾಗುವುದು. ಮಾತನ್ನು ಚೆನ್ನಾಗಿ ಬಲ್ಲವರಾಗಿದ್ದರು ಕಟುವಾದ ಮಾತುಗಳನ್ನು ಆಡಬೇಡಿ. ಹೊಸ ಉದ್ಯೋಗಿಗಳನ್ನು ನಿಯೋಜಿಸಿಕೊಂಡು ಕಾರ್ಯವನ್ನು ವಿಸ್ತರಿಸಿ ಲಾಭವನ್ನು ಪಡೆಯುವ ದೀರ್ಘಕಾಲದ ಯೋಜನೆಯ ಕನಸನ್ನು ಕಾಣುವಿರಿ. ನೇರವಾಗಿ ಯಾರನ್ನೂ ದೂರುವುದಿಲ್ಲ. ಎಂತಹ ನೈಪುಣ್ಯವಿದ್ದರೂ ವ್ಯವಹಾರದಲ್ಲಿ ಒಮ್ಮೆ ಎಚ್ಚರ ತಪ್ಪುವ ಸಾಧ್ಯತೆ ಇದೆ.
ವೃಶ್ಚಿಕ ರಾಶಿ: ಇಂದು ಅನವಶ್ಯಕ ಸಮಸ್ಯೆಗಳನ್ನು ಬೇಕೆಂದೇ ಎಳೆದುಕೊಳ್ಳುವಿರಿ. ಯಾವುದೇ ಪ್ರತಿಕೂಲ ಪರಿಸ್ಥಿತಿಯಲ್ಲಿ ನಿಮ್ಮ ಆತ್ಮಸ್ಥೈರ್ಯವು ಕುಸಿಯದಂತೆ ಇರಬೇಕಾಗುವುದು. ನಿಮ್ಮನ್ನು ಸಕಾರಾತ್ಮಕವಾಗಿ ಇಟ್ಟುಕೊಂಡು ಮುಂದಾಗಿ. ವೈವಾಹಿಕ ಜೀವನ ಸುಖಮಯವಾಗಿರಲು ನಿಮ್ಮ ಮಾತುಗಳೂ ಮುಖ್ಯ. ಕಳ್ಳರ ಭೀತಿಯು ಕಾಡಬಹುದು. ನಿಮ್ಮನ್ನು ಯಾರಾದರೂ ಮೋಸಗೊಳಿಸಲೂಬಹುದು. ಅನಾರೋಗ್ಯಕ್ಕೆ ಕಾರಣವು ಸಿಗದೇ ವಿವಿಧ ಔಷಧಗಳನ್ನು ಮಾಡುವಿರಿ. ಪ್ರಣಯಪ್ರಸಂಗದಲ್ಲಿ ಆಕಸ್ಮಿಕ ತಿರುವು ನಿಮಗೆ ಸಂತೋಷವನ್ನು ತೆಬಹುದು. ಬಹಳ ಚಂಚಲವಾದ ಮನಸ್ಸನ್ನು ಶುಭವಾದ ಕಾರ್ಯದಲ್ಲಿ ಜೋಡಿಸಿ. ತಾಳ್ಮೆಯಿಂದ ಇದ್ದರೆ ಎಲ್ಲವನ್ನೂ ಸಾಧಿಸಲು ಸಾಧ್ಯ. ನಿಮ್ಮ ಸಂಕಟವನ್ನು ಹೇಳಿಕೊಂಡರೂ ತೊಂದರೆ, ಸುಮ್ಮನೆ ಇದ್ದರೂ ತೊಂದರೆ ಆಗುವುದು. ಅಪರಿಚಿತ ಕರೆಗಳು ಹೆಚ್ಚಾಗುವುದು. ನಿಮ್ಮನ್ನು ನೀವು ಕೆಲಸದ ಮೂಲಕ ಪರಿಚಯಿಸಿಕೊಳ್ಳುವಿರಿ.
ಧನು ರಾಶಿ: ಇಂದು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಣವನ್ನು ಖರ್ಚುಮಾಡಬೇಕಾಗುವುದು. ನಿಮ್ಮನ್ನು ನೀವೇ ಏಕಾಂಗಿ ಎಂದು ಲೆಕ್ಕಿಸುವುದು ಬೇಡ. ನಿಮ್ಮ ವೃತ್ತಿಜೀವನವನ್ನು ಮುನ್ನಡೆಸಲು ಮಾರ್ಗದರ್ಶನವನ್ನು ಪಡೆಯುತ್ತೀರಿ. ನಿಮ್ಮ ಕರ್ಮಗಳು ಇತರರಿಗೆ ಮಾದರಿಯಾದೀತು. ಯಾರ ಮಧ್ಯದಲ್ಲಿಯೂ ನೀವು ವಾದದ ನಿರ್ಣಾಯಕರಾಗಿ ಹೋಗಬೇಡಿ. ಸಂಗಾತಿಯ ತಪ್ಪುಗಳನ್ನು ಹೇಳುವ ರೀತಿಯಲ್ಲಿ ಹೇಳಿ. ನೋವಾಗದ ರೀತಿಯಲ್ಲಿ ಹೇಳಿದರೆ ಸಂಬಂಧವು ಚೆನ್ನಾಗಿರುವುದು. ಇರುವುದರಲ್ಲಿ ತೃಪ್ತಿ ಇರಲಿ. ಆಗದವರಿಗೆ ನೀವು ಇಂದು ಸಹಾಯ ಮಾಡಲಿದ್ದೀರಿ. ನಿಮ್ಮ ಗುಣಮಟ್ಟವನ್ನು ಕಾಯ್ದಿರಿಸಿಕೊಳ್ಳುವುದು ಕಷ್ಟವಾದೀತು. ಇಂದು ಶತ್ರುವಿನ ಆಗಲಿಕೆಯಿಂದ ಸಂತೋಷವಾಗುವುದು. ನಿಮ್ಮ ವಿದ್ಯಾಭ್ಯಾಸದ ಸಾಮರ್ಥ್ಯವನ್ನು ತೋರಿಸುವಿರಿ. ನಿಮ್ಮ ನಿಮಗೆ ಸಿಕ್ಕ ಬೆಂಬಲವನ್ನು ಇನ್ನೊಬ್ಬರಿಗೂ ಕೊಡುವ ಮನಸ್ಸು ಮಾಡಿ. ಅತಿಯಾದ ಸಲುಗೆಯಿಂದ ನಿಮಗೆ ತೊಂದರೆ ಆಗಬಹುದು.
ಮಕರ ರಾಶಿ: ನಿಮ್ಮ ನಕಾರಾತ್ಮಕ ಆಲೋಚನೆಗಳು ಅನ್ಯರ ಇಷ್ಟವಾಗದು. ನಿಮ್ಮ ಸಾಂಸಾರಿಕ ತೊಂದರೆಗೆ ನಿಮ್ಮ ಸಹೋದರ ಸಹೋದರಿಯರಿಂದ ಸರಿಯಾದ ಪರಿಹಾರವು ಪ್ರಾಪ್ತವಾಗಲಿದೆ. ನಿಮ್ಮ ಪ್ರಯತ್ನಕ್ಕೆ ಯೋಗ್ಯವಾದ ಫಲವು ಸಿಗಬಹುದು. ವೃತ್ತಿಯಲ್ಲಿ ಹೆಚ್ಚಿನ ಪ್ರಗತಿ ಇರಲಿದೆ. ದುಡುಕಿನ ನಿರ್ಧಾರದಿಂದ ದುಃಖಪಡಬೇಕಾದೀತು. ಶತ್ರುಗಳು ನಿಮ್ಮ ಸಂಪತ್ತನ್ನು ಕರಗಿಸಲು ತಂತ್ರವನ್ನು ಹೆಣೆಯಬಹುದು. ಕೆಳಸ್ತರದವರ ಜೊತೆ ಬಹಳ ಅಸಹ್ಯವಾಗಿ ನಡೆದುಕೊಳ್ಳುವುದು ಬೇಡ. ಇಂದಿನ ಕಛೇರಿಯ ಕೆಲಸದಲ್ಲಿ ಪೂರ್ಣ ಮನಸ್ಸು ಇರಲಾರದು. ಹಳೆಯ ಸ್ನೇಹಿತರನ್ನು ನೀವು ಭೇಟಿಯಾಗಿ ಎಲ್ಲ ಸಂಗತಿಗಳನ್ನು ಹಂಚಿಕೊಳ್ಳುವಿರಿ. ಚರಾಸ್ತಿಯ ವಿಷಯದಲ್ಲಿ ನೀವು ಅಸ್ವತಂತ್ರರಾಗಿ ಇರುವಿರಿ. ಮನೆಯ ಕಾರ್ಯದಲ್ಲಿ ನಿಮಗೆ ಒತ್ತಡವು ಅಧಿಕವಾಗಿ ಇರಲಿದೆ. ಯಾವುದೋ ಅಜ್ಞಾತ ಸಂಸ್ಥೆಯಲ್ಲಿ ಹಣ ಹೂಡಿಕೆಯನ್ನು ಮಾಡಲು ಹೋಗುವಿರಿ.
ಕುಂಭ ರಾಶಿ: ನೀವು ಅಗತ್ಯದ ಖರ್ಚುಗಳನ್ನೂ ನಿಯಂತ್ರಿಸಲು ಹೋಗಿ ಎಡವಟ್ಟು ಮಾಡಿಕೊಳ್ಳಬಹುದು. ಆಧ್ಯಾತ್ಮಿಕ ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ಸ್ವಲ್ಪ ಸಮಯವನ್ನು ಕಳೆದು ನೆಮ್ಮದಿಯನ್ನು ಪಡೆಯುವಿರಿ. ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೆಚ್ಚು ಶ್ರಮವಹಿಸಬೇಕಾದೀತು. ಪ್ರೀತಿಯಲ್ಲಿ ಆಕಸ್ಮಿಕ ತಿರುವಿನಿಂದ ಹತಾಶರಾಗುವಿರಿ. ಸ್ವತಂತ್ರವಾಗಿ ತೀರ್ಮಾನವನ್ನು ತೆಗದುಕೊಳ್ಳಲು ಕಷ್ಟವಾದರೂ ನೀವೇ ತೆಗೆದುಕೊಳ್ಳಿ. ನಿಮ್ಮ ಇಚ್ಛೆಗೆ ಅನುಸಾರವಾಗಿ ನಡೆಯುವುದು ಕಷ್ಟವಾಗುವುದು. ಇಂದು ಕಷ್ಟಕರವಾಗಿದ್ದರೂ ಪ್ರಯಾಣವನ್ನು ಮಾಡಲೇ ಬೇಕಾಗಿದೆ. ಬಂಧುಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣ ಇರಲಿದೆ. ನಿಮ್ಮ ಆರೋಗ್ಯದ ಸಮಸ್ಯೆಯನ್ನು ತಳ್ಳಿಹಾಕುವುದು ಬೇಡ. ಗುರಿಯ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ವೈಫಲ್ಯಕ್ಕೆ ಕಾರಣವಾಗುವುದು. ದುರ್ಬಲವಾದ ಮನಸ್ಸನ್ನು ನೀವು ಬಲಮಾಡಿಕೊಳ್ಳುವ ಅವಶ್ಯಕತೆ ಇರಲಿದೆ.
ಮೀನ ರಾಶಿ: ಇಂದು ಕಾರ್ಯದ ಸರಿಯಾದ ಫಲವನ್ನು ಪಡೆಯದಿದ್ದರೂ ಸಂಯಮದಿಂದ ವರ್ತಿಸಿ. ಯಾರಾದರೂ ಸಾಲವನ್ನು ಕೇಳಿ ಬರಬಹುದು. ನಯವಾಗಿ ತಳ್ಳಿಹಾಕುವಿರಿ. ಕೋಪಗೊಳ್ಳುವ ಬದಲು ಶಾಂತರೀತಿಯಿಂದ ಸಮಸ್ಯೆಯನ್ನು ಪರಿಹರಿಸಿ. ಸಮಸ್ಯೆಗಳು ಬಂದಾಗ ಉದ್ವೇಗಕ್ಕೆ ಒಳಗಗಾದೇ ಬಗೆಹರಿಸಿಕೊಳ್ಳಿ. ರಾಜಕೀಯ ವ್ಯಕ್ತಿಗಳ ಸಹವಾಸದಿಂದ ನಿಮ್ಮ ಕಾರ್ಯಗಳು ಸಲೀಸಾಗಿ ಆಗಲಿದೆ. ಅಪಮಾನವಾಗುವ ಘಟನೆಗಳು ನಡೆಯಬಹುದು. ಆರ್ಥಿಕ ಸಂಕಷ್ಟಕ್ಕೆ ನಿಮ್ಮ ಉಪಾಯಗಳನ್ನು ಆರಂಭಿಸುವಿರಿ. ಆಸ್ತಿ ವ್ಯವಹಾರದಲ್ಲಿ ಸ್ವಲ್ಪಮಟ್ಟಿಗೆ ಕಲಹಾದಿಗಳು ಆಗಿ ಬಗೆ ಹರಿಯುವುದು. ಉದ್ಯೋಗದ ಸ್ಥಳದಲ್ಲಿ ಸಹೋದ್ಯೋಗಿಗಳ ನೆರವು ಸಿಗಲಿದೆ. ಕುಟುಂಬದ ಜೊತೆ ಸಮಯವನ್ನು ಕಳೆಯಬೇಕು ಎಂದುಕೊಂಡರೂ ಅದು ಆಗದು. ನಿಮ್ಮ ಆತ್ಮೀಯವಾದ ಮಾತಿನಿಂದ ಅಪರಿಚಿತರ ಸ್ನೇಹವನ್ನು ಗಳಿಸುವಿರಿ.