2024 ಮೇ 16ರ ದಿನ ಭವಿಷ್ಯ: ಗುರುವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ರಾಶಿ ಭವಿಷ್ಯ ಹೇಗಿರಲಿದೆ? ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ನವಮೀ, ನಿತ್ಯನಕ್ಷತ್ರ: ಮಘಾ, ಯೋಗ: ವೃದ್ಧಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 52 ನಿಮಿಷಕ್ಕೆ, ರಾಹು ಕಾಲ 14:05ರಿಂದ 15:41ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:06 ರಿಂದ 07:42ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:18ರಿಂದ 10:53ರ ವರೆಗೆ.
ಮೇಷ ರಾಶಿ :ಒಂದೇ ರೀತಿಯ ಕೆಲಸದಿಂದ ಆಸಕ್ತಿ ಕುಂದಬಹುದು. ಮಧ್ಯ ಸಣ್ಣ ವಿರಾಮವನ್ನು ನೀವು ಬಯಸುವಿರಿ. ನಿಮ್ಮನ್ನು ಲಕ್ಷಿಸಲು ಸಾಧ್ಯವಾಗದ ದೊಡ್ಡ ವ್ಯಕ್ತಿತ್ವ ನಿಮ್ಮದಾಗುವುದು. ಸ್ವಕೀಯರೇ ನಿಮ್ಮ ನಿಜವಾದ ವೇಗವನ್ನು ಕುಂಠಿತಗೊಳಿಸುವರು. ಹೇಳಿದ ಸಮಯಕ್ಕೆ ನಿಮ್ಮ ಕಾರ್ಯವನ್ನು ಮಾಡಲಾಗದು. ನಿಮ್ಮ ಪ್ರಯತ್ನವನ್ನು ಇತರರಿಗೂ ತಿಳಿಸುವ ಸಮಯ ಇಂದು. ತಪ್ಪು ಮಾಹಿತಿ ನೀಡಿ ನಿಮ್ಮ ದಾರಿ ತಪ್ಪಿಸಬಹುದು. ನಿಮ್ಮ ಕೈಲಾಗುವ ಕೆಲಸವನ್ನು ಮಾಡಿ ಕಿಂಚಿತ್ ಆದಾಯವನ್ನು ಮಾಡಿಕೊಳ್ಳುವಿರಿ. ನಿಮ್ಮ ಪ್ರಗತಿಯ ಬಗ್ಗೆ ಇತರರು ಪ್ರಶಂಸಿಸಬಹುದು. ಉದ್ಯಮದ ವಿಚಾರದಲ್ಲಿ ನೌಕರರಿಂದ ಹಿನ್ನಡೆಯಾಗಲಿದೆ. ಅವಶ್ಯಕತೆ ಇರುವಷ್ಟನ್ನು ಮಾತ್ರ ಖರೀದಿಸಿ. ಇನ್ನೊಬ್ಬರನ್ನು ನೋಡುವುದು ಬೇಡ.
ವೃಷಭ ರಾಶಿ :ಇಂದು ನೀವು ಮನಸ್ಸಿಗೆ ಹಿಡಿಸಿದ್ಸನ್ನು ಮಾತ್ರ ಮಾಡುವಿರಿ. ನಿಮ್ಮ ಪೂರ್ವ ನಿಶ್ಚಿತ ಯೋಜನೆಯನ್ನು ಬದಲಾಯಿಸುವಿರಿ. ನಿಮ್ಮ ದೌರ್ಬಲ್ಯವನ್ನು ಉಪಯೋಗಿಸಿಕೊಳ್ಳಬಹುದು. ನಿಮ್ಮ ಕೆಲಸಕ್ಕೆ ಪ್ರಶಂಸೆ ಸಿಗುವುದು. ಯಾರ ಒತ್ತಾಯವೂ ನಿಮಗೆ ಇಷ್ಟವಾಗದು. ನಿಮ್ಮ ಏಳಿಗೆ ಕಂಡು ಅಸೂಯೆ ಪಡುವವರ ಸಂಖ್ಯೆ ಹೆಚ್ಚಾಗಲಿದೆ. ಇನ್ನೊಬ್ಬರನ್ನು ನೀವು ನಯವಾಗಿ ವಂಚಿಸುವಿರಿ. ಅದಕ್ಕೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ಪ್ರವೃತ್ತರಾಗಿ ಕಾರ್ಯದಲ್ಲಿ ನಿಷ್ಠೆಯನ್ನು ತೋರಿಸಿ. ಮನೆಯ ವಾಸವನ್ನು ಬದಲಾಯಿಸುವಿರಿ. ಪ್ರೀತಿಯ ಸುಖದಿಂದ ವಂಚಿತರಾಗುವಿರಿ. ವಿದೇಶಪ್ರಯಾಣದ ಗುಂಗಿನಿಂದ ಹೊರ ಬನ್ನಿ. ನಿಮ್ಮ ಮೇಲೆ ವಿರೋಧಿಗಳ ಆಕ್ರಮಣವು ಆಗಬಹುದು.
ಮಿಥುನ ರಾಶಿ :ನಿಮ್ಮ ಬಗ್ಗೆ ಯಾರಾದರೂ ಪ್ರೀತಿ ತೋರಿಸಿದರೆ ಮುಜುಗರವಾಗುವುದು. ಯಾರನ್ನೇ ಆದರೂ ಅವರನ್ನು ಒಂದು ಹಂತದವರಗೆ ಮಾತ್ರ ಒಳಗೆ ಕರೆಯುವುದು ಸೂಕ್ತ. ನೆರೆಯವರು ನಿಮ್ಮ ವ್ಯವಹಾರದಲ್ಲಿ ಪ್ರವೇಶಪಡೆಯಬಹುದು. ಜಾಗರೂಕರಾಗಿ ಜನರಿಂದ ದೂರವಿರುವುದು ಒಳ್ಳೆಯದು. ನಿಮ್ಮ ಹುಸಿತನವು ಪ್ರಕಟವಾಗಬಹುದು. ಹಣವನ್ನು ಕೇಳಿ ಬಂದವರಿಗೆ ಇಲ್ಲ ಎನ್ನಲಾರಿರಿ. ನಿಮ್ಮದೇ ಆದ ಕುಟುಂಬದಲ್ಲಿ ಹಲವರು ಕಿರಿಕಿರಿ ಮಾಡಬಹುದು. ಹಿಂದೆ ಮುಂದೆ ಯೋಚಿಸದೆ ಏಕಾಏಕಿಯಾಗಿ ಯಾರಿಗೂ ಮಾತು ಕೊಡುವುದು ಬೇಡ. ಸಣ್ಣ ವಿಚಾರಕ್ಕೆ ದ್ವೇಷ ಸಾಧಿಸುವುದು ಸರಿಯಾಗದು. ಹೊಂದಾಣಿಕೆಯ ಕಡೆ ನಿಮ್ಮ ಗಮನವಿರಲಿ. ವಿದ್ಯಾಭ್ಯಾಸಕ್ಕೆ ಯಾರಿಂದಲಾದರೂ ಇನ್ಪ್ಲುಯನ್ಸ್ ಬೇಕಾಗುವುದು. ಪ್ರತ್ಯಕ್ಷವಾಗಿ ಕಾಣುವ ವ್ಯಕ್ತಿಗಳಿಗೆ ನಿಮ್ಮ ಬಗೆಗಿನ ದೃಷ್ಟಿಕೋನವೇ ಬದಲಾಗುವುದು.
ಕಟಕ ರಾಶಿ :ಇಂದು ನಿಮ್ಮ ಪ್ರೇಮವು ಸಫಲವಾಗುವುದು. ಕೆಲಸದ ಸ್ಥಳದಲ್ಲಿ ಹಿರಿಯರು ಮಾರ್ಗದರ್ಶನ ಪಡೆಯಿರಿ. ನಿಮಗೆ ಇಂದು ಬಹಳ ಸಮಯ ಇರುವಂತೆ ತೋರುತ್ತದೆ. ಮುಖ್ಯವಾಗುವುದು. ಮನಸ್ಸಿಗೆ ಮಂಕು ಕವಿದಂತೆ ಇರುವಿರಿ. ಕುಟುಂಬದ ಸಮಸ್ಯೆಯನ್ನು ಹಾಗೆಯೇ ಬಿಟ್ಟುಬಿಡುವಿರಿ. ಜೀವನದಲ್ಲಿ ಚುರುಕುತನ ಕಂಡುಕೊಳ್ಳಲು ದಾರಿಯನ್ನು ಕಂಡುಕೊಳ್ಳಿ. ಒತ್ತಡವನ್ನು ಹೇರಿ ಕೆಲಸವನ್ನು ಮಾಡಿಸಿಕೊಳ್ಳುವಿರಿ. ನಿಮಗೆ ಸಂಬಂಧಿಸಿದ ವಿಚಾರದಲ್ಲಿ ಮಾತ್ರ ನಿಮ್ಮ ಹಸ್ತಕ್ಷೇಪ ಇರಲಿ. ಪೋಷಕರಿಗೆ ಮಹತ್ವಾಕಾಂಕ್ಷೆಯನ್ನು ಬಹಿರಂಗಪಡಿಸುವಿರಿ. ಇಂದು ತಲ್ಲೀನರಾಗಿ ಎಲ್ಲ ಕಾರ್ಯವನ್ನು ಮಾಡುವಿರಿ. ಬಂಧುಗಳು ನಿಮ್ಮನ್ನು ಪ್ರಶಂಸಿಸಿ ಕಾರ್ಯವನ್ನು ಸಾಧಿಸಿಕೊಳ್ಳುವರು.
ಸಿಂಹ ರಾಶಿ :ಇಂದು ನೀವು ಅನಾಯಾಸವಾಗಿ ವೃತ್ತಿಯಲ್ಲಿ ತೊಡಗುವಿರಿ. ಕುಟುಂಬದಲ್ಲಿ ನಡೆಯಲಿರುವ ವಿವಾಹ ಕಾರ್ಯದ ಓಡಾಟವಿರುವುದು. ಉತ್ತಮ ಯೋಚನಾ ಶಕ್ತಿಯಿಂದ ಮಾರ್ಗವನ್ನು ಹುಡುಕುವಿರಿ. ಭೂ ಸಂಬಂಧಿತ ವ್ಯಾಪಾರ ಲಾಭವಿರುತ್ತದೆ. ಆಲಸ್ಯ ಮನೋಭಾವದಿಂದ ಹೊರಬರುವುದು ಕಷ್ಟವಾಗುವುದು. ಯಾರನ್ನೂ ದೂಷಿಸುವುದು ನಿಮಗೆ ಹೇಳಿಸಿದ್ದಲ್ಲ. ಕೃಷಿಗೆ ಸಂಬಂಧಿಸಿದ ಕಾರ್ಯವನ್ನು ವೇಗವಾಗಿ ಮಾಡಿಕೊಳ್ಳಿ. ಮಕ್ಕಳ ವಿವಾಹದ ಚಿಂತೆಯು ಕಾಡಬಹುದು. ಅಧಿಕಾರ ಮತ್ತು ವರ್ಚಸ್ಸು ಹೆಚ್ಚಿಸಿಕೊಳ್ಳುವ ಅವಕಾಶ ಬರುವುದು. ಔಷಧದ ವ್ಯಾಪಾರದಿಂದ ನಿಮಗೆ ಅಧಿಕ ಲಾಭವಾಗಬಹುದು. ಧೈರ್ಯದಿಂದ ಮುನ್ನಡೆಯುವ ಇಚ್ಛಾಶಕ್ತಿಯನ್ನು ರೂಢಿಸಿಕೊಳ್ಳಿ. ಸಾಮಾಜಿಕವಾಗಿ ಏನನ್ನಾದರೂ ಮಾಡಬೇಕು ಎಂದೆನಿಸಬಹುದು. ಸ್ವಂತ ಉದ್ಯೋಗವನ್ನು ನಡೆಸಲು ಚಿಂತಿಸುವುದು ಉತ್ತಮ.
ಕನ್ಯಾ ರಾಶಿ :ನೀವು ಇನ್ನೊಬ್ಬರನ್ನು ದ್ವೇಷಿಸುವಿರಿ. ಹಣದ ತೊಂದರೆಗೆ ಅನ್ಯರ ಸಹಾಯವನ್ನು ಕೇಳಬೇಕಾಗುವುದು. ವಾಹನ ಸಂಚಾರದಲ್ಲಿ ನಿಮಗೆ ಅಡ್ಡಿಗಳು ಬರಬಹುದು. ಇಂದಿನ ಕೆಲಸಗಳು ಬೇಗ ಮುಕ್ತಾಯವಾಗಿ ನಿಶ್ಚಿಂತೆಯಿಂದ ಇರುವಿರಿ. ವೈದ್ಯಕೀಯ ಕ್ಷೇತ್ರದ ಕಲಿಕೆ ಬಹಳ ಕಷ್ಟವೆನಿಸಬಹುದು. ಮರೆವು ನಿಮಗೆ ವರವಾದಂತೆ ಅನ್ನಿಸುವುದು. ವಿದ್ಯಾಭ್ಯಾಸಕ್ಕೆ ಮನೆಯನ್ನು ಬಿಟ್ಟು ದೂರವಿರಲು ನಿರ್ಧಾರ ಮಾಡುವಿರಿ. ನಿಮ್ಮ ಇಂದಿನ ಆರ್ಥಿಕಲಾಭವು ನಿಮಗೆ ಹೆಚ್ಚು ಸುಖವನ್ನು ಕೊಡಬಹುದು. ನಿಮ್ಮ ಬಗ್ಗೆ ನಕಾರಾತ್ಮಕ ಮಾತುಗಳನ್ನು ಕೇಳಬೇಕಾಗುವುದು. ಒಮ್ಮೆಲೆ ಕಷ್ಟಗಳು ಬರುವುದರಿಂದ ಧೃತಿಗೆಡುವ ಅವಶ್ಯಕತೆ ಇರುವುದಿಲ್ಲ. ಉದ್ವೇಗದಿಂದ ಸಿಟ್ಟುಗೊಂಡು ಅಪ್ರಿಯರಾಗುವಿರಿ. ಸಣ್ಣ ಉದ್ಯೋಗವಾದರೂ ಕ್ರಮಬದ್ಧವಾಗಿರಲಿ.
ತುಲಾ ರಾಶಿ :ಅವಸರದಲ್ಲಿ ಉದ್ಯೋಗದ ತೀರ್ಮಾನವನ್ನು ತೆಗೆದುಕೊಳ್ಳಬೇಡ. ವ್ಯಾಪಾರದಲ್ಲಿ ಅಜ್ಞಾನದಿಂದ ನಷ್ಟವಾಗುತ್ತದೆ. ಮಕ್ಕಳಿಂದ ನೆಮ್ಮದಿಯು ನಿಮಗೆ ಸಿಗುತ್ತದೆ. ಹಣಕ್ಕಾಗಿ ಕಿರಿಕಿರಿಗಳು ಅಧಿಕವಾದಂತೆ ತೋರುವುದು. ವಿದ್ಯಾರ್ಥಿಗಳು ಮನೋಭಾವವನ್ನು ಬದಲಿಸಿಕೊಳ್ಳುವ ಅಗತ್ಯವಿದೆ. ವರ್ತನೆಯು ಹಾದಿ ತಪ್ಪಿದಂತೆ ಹೆಚ್ಚಿನವರಿಗೆ ತೋರುವುದು. ನಿಮಗೆ ಇಂದು ಬರುವ ಅಶುಭವಾರ್ತೆಯಿಂದ ತಲ್ಲಣಿಸಬಹುದು. ನಿಮ್ಮ ತಾಳ್ಮೆಯೇ ಗುರಿಯನ್ನು ತಲುಪಲು ಸಹಕಾರಿಯಾಗಿರುವುದು. ಮನಃಶಾಂತಿಗೆ ಧ್ಯಾನವನ್ನು ರೂಢಿ ಮಾಡಿಕೊಳ್ಳಿ. ಮಹಿಳೆಯರಿಗೆ ಈ ದಿನ ಶುಭವಿರುವುದು. ಅಧಿಕ ಆದಾಯದಿಂದ ನಿಮ್ಮ ನೆಮ್ಮದಿಯ ಹರಣವಾಗಿದೆ ಎಂದು ಅನ್ನಿಸಲೂಬಹುದು. ಒತ್ತಡ ಕಡಿಮೆಯಾಗಿ ಮನೆಯಲ್ಲಿ ನೆಮ್ಮದಿಯಿಂದ ಇರುವಿರಿ. ಬರಲಿರುವ ಹಣವನ್ನು ಸರಿಯಾಗಿ ವಿನಿಯೋಗವಾಗುವಂತೆ ನೋಡಿ.
ವೃಶ್ಚಿಕ ರಾಶಿ :ಇಂದು ಸ್ನೇಹಿತರು ನಿಮಗೆ ಬೇಕಾದ ಸಲಹೆಯನ್ನು ಪಡೆಯುವಿರಿ. ಅನಿರೀಕ್ಷಿತವಾಗಿ ಬಂದ ಜವಾಬ್ದಾರಿಗಳು ನೀವು ನಿರ್ವಹಿಸಬೇಕಾಗುವುದು. ಆದಾಯವನ್ನು ಉತ್ತಮ ಮಾಡಿಕೊಳ್ಳುವಿರಿ. ನಿಮ್ಮ ಮೇಲಿನ ಗೌರವು ಈ ಕಾರಣಕ್ಕೆ ಕಡಿಮೆ ಆಗಬಹುದು. ನಿಮ್ಮ ವ್ಯಾಪಾರ ವ್ಯವಹಾರದಲ್ಲಿ ಪಾರದರ್ಶಕತೆ ಮಾತ್ರ ಇರಲಿ. ಮಕ್ಕಳ ವಿವಾಹದ ಬಗ್ಗೆ ಚಿಂತಿಸಿ ಭಾವುಕರಾಗುವಿರಿ. ಸಹೋದ್ಯೋಗಿಗಳು ಉದ್ಯೋಗಕ್ಕೆ ಸಂಬಂಧಿಸಿದ ಗೊಂದಲವನ್ನು ಪರಿಹರಿಸಲು ಸಹಕಾರ ನೀಡಬಹುದು. ಅದೃಷ್ಟವನ್ನು ಮಾತ್ರ ನಂಬಿ ಕೆಲಸ ಮಾಡುವುದು ಬೇಡ. ನೀವು ಪಡೆದ ಸಾಲವನ್ನು ಮರುಪಾವತಿಸುವಿರಿ. ಸೃಜನಾತ್ಮಕವಾಗಿ ಏನನ್ನಾದರೂ ಮಾಡಲು ಹೋಗಿ ಎಡವುವಿರಿ. ಸ್ತ್ರೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ಸಿಗಬಹುದು. ಇನ್ನೊಬ್ಬರು ಇಟ್ಟ ನಂಬಿಕೆಯನ್ನು ಉಳಿಸಿಕೊಳ್ಳಿ.
ಧನು ರಾಶಿ :ಸಿಟ್ಟಿನ ಭರದಲ್ಲಿ ವಿವೇಚನೆಯನ್ನು ಕಳೆದುಕೊಳ್ಳುವಿರಿ. ಚಂಚಲ ಮನಸ್ಸಿನಿಂದ ಕಾರ್ಯವನ್ನು ಸಾಧಿಸಲಾಗದು. ಬಹಳ ದಿನಗಳ ಅನಂತರ ಸಹೋದರರ ಭೇಟಿಯಾಗಲಿದ್ದು, ಸಂತೋಷವು ಇಮ್ಮಡಿಸುವುದು. ಸಕಾರಾತ್ಮಕವಾಗಿ ಚಿಂತಿಸಿ ಕಾರ್ಯದಲ್ಲಿ ತೊಡಗಿಕೊಳ್ಳಿ. ಗೃಹ ನಿರ್ಮಾಣದಂತಹ ಕಾರ್ಯಕ್ಕೆ ಕೈ ಹಾಕುವುದು ಬೇಡ. ತೀರ್ಥ ಕ್ಷೇತ್ರದಲ್ಲಿ ವಾಸಮಾಡುವ ಸಂದರ್ಭವು ಬರಬಹುದು. ಪುಣ್ಯವೆಂದು ಭಾವಿಸಿ. ಅಧಿಕಾರ ಪ್ರಾಪ್ತಿಗಾಗಿ ನೀವು ತಂತ್ರ ಹೂಡುವಿರಿ. ಮಕ್ಕಳ ಮೇಲೆ ಪಕ್ಷಪಾತ ಮಾಡುವುದು ಬೇಡ. ಮಾತನಾಡುವಾಗ ಒಂದು ಮಿತಿಯಲ್ಲಿ ಇರಲಿ. ವ್ಯವಹಾರದಲ್ಲಿ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಅನಗತ್ಯ ವಾದ ವಿವಾದಗಳಿಂದ ದೂರವಿರಿ. ಇಂದು ಸೇವಿಸುವ ಆಹಾರದ ಬಗ್ಗೆ ನಿಮಗೆ ಸರಿಯಾದ ನಿಗಾ ಇರಲಿ. ಕಳೆದುಕೊಂಡಿದ್ದನ್ನು ಹೇಗಾದರೂ ಮಾಡಿ ಪಡೆದುಕೊಳ್ಳುವಿರಿ.
ಮಕರ ರಾಶಿ :ಇಂದು ವ್ಯವಹಾರದಲ್ಲಿ ಮಧ್ಯವರ್ತಿಗಳಿಂದ ಕೆಲವು ತೊಂದರೆಗಳನ್ನು ಎದುರಿಸಬೇಕಾಗುವುದು. ಕುಟುಂಬದವರ ಅನಾರೋಗ್ಯದ ಕಾಳಜಿ ಮಾಡಬೇಕಾಗುವುದು. ಮಿತ್ರರು ನಿಮ್ಮ ಮೇಲೆ ಅಪವಾದ ಹಾಕಬಹುದು. ಮನೆಯಲ್ಲಿಯೇ ಕುಳಿತು ಉದ್ಯೋಗವನ್ನು ಮಾಡಿ ಆರ್ಥಿಕತೆಯನ್ನು ಸುಧಾರಿಸಿಕೊಳ್ಳುವಿರಿ. ಅಧಿಕ ಖರ್ಚನ್ನು ನಿಯಂತ್ರಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಸಲಹೆಯನ್ನು ಏಕಚಿತ್ತದಿಂದ ಸ್ವೀಕರಿಸಿ, ನಿಮ್ಮ ವಿವೇಕದಿಂದ ಬಳಸಿಕೊಳ್ಳಿ. ಅನ್ಯರಿಂದ ಹಣಕಾಸಿನ ವಿಷಯದಲ್ಲಿ ಮೋಸ ಹೋಗುವ ಸನ್ನಿವೇಶವು ಬರಬಹುದು. ಅಶಕ್ತರಿಗೆ ಸಹಾಯ ನಿಮ್ಮಿಂದ ಸಹಕಾರ ನೀಡಿ. ಯಾರಾದರೂ ನಿಮ್ಮನ್ನು ಯಾವುದಾದರೂ ಕಾರ್ಯಕ್ಕೆ ಪ್ರೋತ್ಸಾಹಿಸಬಹುದು. ನಿಮ್ಮ ಬಗ್ಗೆ ನಿಮಗೆ ಗೊತ್ತಿರಲಿ. ಎಲ್ಲವೂ ನಿಮ್ಮಿಂದ ಆದರೂ ಹೇಳಿಕೊಳ್ಳುವಾಗ ಗೌಣವಾಗಿರಲಿ. ಕಲಾವಿದರಿಗೆ ಅವಕಾಶಗಳು ಸಿಗುವುದು.
ಕುಂಭ ರಾಶಿ :ಹೂಡಿಕೆಯಿಂದ ನಿಮ್ಮ ಖರ್ಚನ್ನು ಆದಾಯವಾಗಿ ಪರಿವರ್ತಿಸಲು ಮಾಡಿಕೊಳ್ಳುವಿರಿ. ಹಳೆಯ ರೋಗವು ಮರುಕಳಿಸಬಹುದು. ಪರಸ್ಪರ ಪ್ರೀತಿಯು ದಾಂಪತ್ಯದಲ್ಲಿ ಹೊಂದಾಣಿಕೆ ಬೆಳೆಯುವುದು. ಅಧಿಕ ಕೋಪದಿಂದ ಆಗಬೇಕಾದ ಕಾರ್ಯವನ್ನು ಹಾಳುಮಾಡಿಕೊಳ್ಳುವಿರಿ. ವ್ಯಾವಹಾರಿಕ ದಾಖಲೆಗಳನ್ನು ನೀವು ಭದ್ರವಾಗಿ ಇರಿಸಿಕೊಳ್ಳಿ. ಕಲಿಕೆಯಲ್ಲಿ ಚುರುಕುತನವನ್ನು ರೂಢಿಸಿಕೊಳ್ಳುವುದು ಭವಿಷ್ಯದ ದೃಷ್ಟಿಯಿಂದ ಉತ್ತಮ. ಇಂದು ನಿಮ್ಮಲ್ಲಿ ಆತ್ಮಸ್ಥೈರ್ಯವು ಇರಲಿದೆ. ಮೈಯ್ಯಲ್ಲ ಕಣ್ಣಿದ್ದರೂ ನಿಮಗೆ ವಂಚಿಸುವವರು ಇರುವರು. ದುಸ್ಸಾಹಸಕ್ಕೆ ಹೋಗಿ ಕೈ ಸುಟ್ಟುಕೊಳ್ಳುವಿರಿ. ನಿಮ್ಮ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ತಾಯಿಯ ಕಡೆಯಿಂದ ನಿಮಗೆ ಆರ್ಥಿಕ ಸಹಾಯವು ಸಿಗಬಹುದು. ಕಳೆದುಕೊಂಡು ವಸ್ತುವಿನ ಮೌಲ್ಯವು ಇಂದು ಗೊತ್ತಾಗುವುದು.
ಮೀನ ರಾಶಿ :ಇಂದು ನಿಮಗೆ ವ್ಯಾಪಾರದಲ್ಲಿ ಅಂದುಕೊಂಡಷ್ಟು ಸಾಧಿಸಲಾಗದೇ ಬೇಸರವಾಗಬಹುದು. ಧನವು ವ್ಯಯವಾಗುವ ಬಗ್ಗೆ ನಿಮಗೆ ಅಸಮಾಧಾನವಿದ್ದು, ಅದನ್ನು ಸರಿಯಾದ ರೀತಿಯಲ್ಲಿ ವ್ಯಯವಾಗುವಂತೆ ನೋಡಿಕೊಳ್ಳಿ. ಶತ್ರುಬಾಧೆಯಿಂದ ನಿಮ್ಮ ಕಾರ್ಯಗಳು ಹಿಂದುಳಿಯುವುದು. ಆತ್ಮೀಯರ ಜೊತೆ ಮನಸ್ತಾಪವಿರುವುದು. ಕಲಿತ ವಿದ್ಯೆಯ ಪ್ರದರ್ಶನಕ್ಕೆ ಅವಕಾಶವು ಸಿಗಲಿದೆ. ಆಧ್ಯಾತ್ಮಿಕ ಚಿಂತನೆಗಳಿಂದ ಮನಸ್ಸಿಗೆ ಶಾಂತತೆಯನ್ನು ಪಡೆಯುವಿರಿ. ವ್ಯಾಪಾರದ ಆದಾಯಕ್ಕೆ ನಿಮ್ಮದೇ ತಂತ್ರವನ್ನು ಬಳಸುವಿರಿ. ಮನೆ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ. ಕಾರ್ಯದಲ್ಲಿ ಶ್ರದ್ಧೆಯು ಕಡಿಮೆಯಾಗುವುದು. ಮಂದಗತಿಯಲ್ಲಿ ಸಾಗುವ ಕೆಲಸಗಳಿಗೆ ವೇಗವನ್ನು ಕೊಡುವಿರಿ. ನಿಮಗೆ ಆತ್ಮತೃಪ್ತಿಯು ಇರುವುದು. ವಾಹನ ಚಲಾಯಿಸುವಾಗ ಎಚ್ಚರ ಇರಲಿ. ನಿಮ್ಮನ್ನು ರೂಪಿಸಿಕೊಳ್ಳಲು ಪ್ರಯತ್ನಿಸುವಿರಿ. ಕಾನೂನಾತ್ಮಕ ಹೋರಾಟಕ್ಕೆ ನಿಮಗೆ ಯಾರಿಂದಲಾದರೂ ಬೆಂಬಲವು ಇರುವುದು.