2024 ಮೇ 19ರ ದಿನ ಭವಿಷ್ಯ: ಭಾನುವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ರಾಶಿ ಭವಿಷ್ಯ ಹೇಗಿರಲಿದೆ? ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಹಸ್ತಾ, ಯೋಗ: ಹರ್ಷಣ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 53 ನಿಮಿಷಕ್ಕೆ, ರಾಹು ಕಾಲ ಸಂಜೆ 05:17 ರಿಂದ 06:53ರ ವರೆಗೆ, ಯಮಘಂಡ ಕಾಲ 12:29 ರಿಂದ ಮಧ್ಯಾಹ್ನ 02:05ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:41 ರಿಂದ ಸಂಜೆ 05:17ರ ವರೆಗೆ.
ಮೇಷ ರಾಶಿ: ನೀವು ಅಪಾರ ಆತ್ಮವಿಶ್ವಾಸವನ್ನು ಪಡೆದಿದ್ದರೂ ಸರಿಯಾದ ಸಹಕಾರ ಸಿಗದೇ ಕಾರ್ಯವು ಪೂರ್ಣವಾಗದು ಅಥವಾ ಮತ್ತೇನಾದರೂ ಆಗಬಹುದು. ನಿಮ್ಮ ಸಕಾರಾತ್ಮಕ ಮತ್ತು ಸಮಕಾಲೀನ ಚಿಂತನೆಯು ಪ್ರಮುಖ ಕಾರ್ಯಗಳನ್ನು ಯೋಜಿತ ರೀತಿಯಲ್ಲಿ ಸಾಧಿಸಲು ಸಾಧ್ಯ. ಮಕ್ಕಳನ್ನು ಸ್ಪರ್ಧಾತ್ಮಕವಾಗಿ ತಯಾರಿ ಮಾಡಬೇಕಾಗಿ ಬರುವುದು. ಸಮಯಕ್ಕೆ ಸರಿಯಾಗಿ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಸೋಮಾರಿತನವು ನಿಮ್ಮ ಕ್ರಿಯೆಗಳನ್ನು ತಪ್ಪಿಸಲು ಪ್ರಯತ್ನಿಸುವಂತೆ ಮಾಡುತ್ತದೆ. ವ್ಯಾಪಾರದಲ್ಲಿ ಚಟುವಟಿಕೆಗಳು ಸ್ವಲ್ಪ ನಿಧಾನವಾಗಿರುತ್ತವೆ. ಬಂಧುಗಳ ಆರೋಗ್ಯದ ಆರೈಕೆಯನ್ನು ನೀವು ಮಾಡಬೇಕಾದೀತು. ನಿಕಟವರ್ತಿಗಳ ಮಾತನ್ನು ನಗಣ್ಯ ಮಾಡುವಿರಿ. ಅವಾಚ್ಯ ಮಾತುಗಳಿಂದ ನಿಮ್ಮನ್ನು ಯಾರಾದರೂ ನಿಂದಿಸಬಹುದು. ಅಲಕ್ಷ್ಯ ಮಾಡಿದರೆ ಉತ್ತಮ. ಗೊತ್ತಿಲ್ಲದೇ ನಿಮ್ಮದಲ್ಲದ ವಸ್ತುವನ್ನು ತೆಗೆದುಕೊಳ್ಳುವಿರಿ.
ವೃಷಭ ರಾಶಿ: ಮಕ್ಕಳಿಂದ ಋಣಾತ್ಮಕವಾದದ್ದನ್ನು ತಿಳಿದುಕೊಳ್ಳುವುದು ನಿರಾಶಾದಾಯಕವಾಗಿರುತ್ತದೆ. ಈ ಸಮಯದಲ್ಲಿ ಯಾರಿಂದಲೂ ಸಾಲ ಪಡೆಯುವುದು ಸೂಕ್ತವಲ್ಲ. ಇದು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಬಹುದು. ನಿಮ್ಮ ಕೆಲಸಕ್ಕೆ ಹೆಚ್ಚಿನ ಶ್ರಮ ಬೇಕಾಗುತ್ತದೆ. ಸಹೋದ್ಯೋಗಿಗಳ ಜೊತೆ ಸೌಹಾರ್ದತೆ ಇರಲಿ. ಹೆಚ್ಚು ಒತ್ತಡವನ್ನು ತೆಗೆದುಕೊಳ್ಳಬೇಡಿ. ಯಾರ ಒತ್ತಾಯಕ್ಕೋ ಮಣಿಯಬೇಡಿ. ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು ಸ್ಥಿರಾಸ್ತಿಯನ್ನು ಮಾರಾಟ ಮಾಡಲೂ ನಿಮಗೆ ಕಷ್ಟವಾದೀತು. ನಿಮ್ಮ ಜೊತೆಗಿರುವವರೇ ನಿಮ್ಮ ವಸ್ತುವನ್ನು ಅಪಹರಿಸುವರು. ಪ್ರೇಮವು ನಿಮಗೆ ಹಾಯೆನಿಸುವುದು. ವೃತ್ತಿಯ ಏಕತಾನತೆಯಿಂದ ಹೊರಬರಲು ಬಯಸುವಿರಿ. ಆಪ್ತರು ಕಾರಣಾಂತರಗಳಿಂದ ದೂರಾಗಬಹುದು. ಸಕಾರಾತ್ಮಕ ಆಲೋಚನೆಯನ್ನು ನೀವು ಹೆಚ್ಚು ಮಾಡಿ. ಪ್ರಯಾಣದಲ್ಲಿ ಆರೋಗ್ಯದ ಸಮಸ್ಯೆ ಕಾಡುವುದು.
ಮಿಥುನ ರಾಶಿ: ಸರಳತೆಯನ್ನು ರೂಢಿಸಿಕೊಳ್ಳುವ ಅಗತ್ಯವಿದೆ. ವ್ಯಕ್ತಿತ್ವದಿಂದ ನೀವು ಸಮಾಜದಲ್ಲಿ ವಿಶೇಷ ಸ್ಥಾನವನ್ನು ಪಡೆದುಕೊಳ್ಳುತ್ತೀರಿ. ಕೌಟುಂಬಿಕ ಕಲಹಗಳನ್ನು ಬಗೆಹರಿಸಿಕೊಳ್ಳಲು ಇದು ಸೂಕ್ತ ಸಮಯ. ಈ ಕ್ಷಣದಲ್ಲಿ ಇದು ನಿಮಗೆ ಅನುಕೂಲಕರ ಮತ್ತು ಆಹ್ಲಾದಕರ ಪರಿಸ್ಥಿತಿಯಾಗಲಿದೆ. ಹತ್ತಿರದ ಸಂಬಂಧಿಯಿಂದ ದುಃಖದ ಸುದ್ದಿಯನ್ನು ಸ್ವೀಕರಿಸಬೇಕಾಗಬಹುದು. ಮನೆಯಲ್ಲಿ ನೆಮ್ಮದಿಯ ವಾತಾವರಣ ಇರುತ್ತದೆ. ಯಾರ ಜೊತೆಗೂ ಬೆರೆಯಲು ಇಷ್ಟವಾಗದು. ಪ್ರಯಾಣವು ಹಿತವಾಗದೇ ಇರುವುದು. ನಿಮಗೆ ಬೇಕಾದುದನ್ನು ಕೇಳಿ ಪಡೆಯುವಿರಿ. ನಿಮ್ಮ ಮನಸ್ಸಿನ ಮೇಲೆ ಆಕ್ರಮಣಗಳು ಆಗಬಹುದು. ಇಂದು ಒತ್ತಡವಿಲ್ಲದೇ ಕಾರ್ಯವನ್ನು ಮುಗಿಸುವಿರಿ. ದುರಭ್ಯಾಸವನ್ನು ರೂಢಿಸಿಕೊಂಡಿದ್ದು ಅರಿವಿಗೆ ಬರುವುದು. ನಿಮಗೆ ಪರೀಕ್ಷೆಯ ದಿನವಾಗಿರುವುದು. ಆತ್ಮವಿಶ್ವಾಸದ ಕೊರತೆಯನ್ನು ನೀಗಿಸಿಕೊಳ್ಳುವುದು ಮುಖ್ಯವಾಗುವುದು. ನಿಮ್ಮ ಸಾಮಾಜಿಕ ಕಾರ್ಯಕ್ಕೆ ಬೆಂಬಲವನ್ನು ಅಪೇಕ್ಷಿಸುವಿರಿ.
ಕಟಕ ರಾಶಿ: ಪರಿಸ್ಥಿತಿ ಅನುಕೂಲಕರವಾಗಿದೆ. ಯುವಕರು ತಮ್ಮ ವೃತ್ತಿಜೀವನದ ಬಗ್ಗೆ ತಿಳಿದಿರಬೇಕು. ಯಾರೊಂದಿಗಾದರೂ ವಿವಾದಕ್ಕೆ ಸಿಲುಕುವುದು ನಿಮಗೆ ನೋವುಂಟು ಮಾಡುತ್ತದೆ. ನೀವು ನಿಮ್ಮ ಕೆಲಸವನ್ನು ಮುಂದುವರಿಸಿದರೆ ಒಳ್ಳೆಯದು. ವಾಹನ ದುರಸ್ತಿಯಿಂದ ನೀವು ಹಣವನ್ನು ಕಳೆದುಕೊಳ್ಳುವಿರಿ. ಮನೆಯ ಹಿರಿಯ ಸದಸ್ಯರನ್ನು ಗೌರವಿಸಿ ಮತ್ತು ಅವರ ಮಾರ್ಗದರ್ಶನವನ್ನು ಅನುಸರಿಸಿ. ವೃತ್ತಿಕ್ಷೇತ್ರದ ಎಲ್ಲ ಕೆಲಸಗಳು ಸರಿಯಾಗಿ ನಡೆಯುತ್ತವೆ. ಕೆಲವು ವಿಚಾರಕ್ಕೆ ಬುದ್ಧಿಯು ಸೂಚಿಸದೇ ಇರಬಹುದು. ನಿಮ್ಮ ಶ್ರಮಕ್ಕೆ ಯೋಗ್ಯ ವರಮಾನ ಸಿಗದು ವ್ಯವಹಾರವು ಪ್ರಾಮಾಣಿಕವಾಗಿ ಇರಲಿ. ಕುಟುಂಬವರ ಜೊತೆ ಸಮಯವನ್ನು ಕಳೆಯುವುದು ಆಗದು. ಆಪ್ತರ ಬಗ್ಗೆ ನಿಮ್ಮ ಭಾವನೆ ನಕಾರಾತ್ಮಕವಾಗಿ ಇರುವುದು. ಕಾನೂನಿನ ಚೌಕಟ್ಟಿನಲ್ಲಿ ನಿಮ್ಮ ನಡೆವಳಿಕೆ ಇರಲಿ. ಕಾರಣಾಂತರಗಳಿಂದ ನಿಮ್ಮ ಜೀವನದ ಮಾರ್ಗವು ಬದಲಾಗುವುದು. ಸಮಯವನ್ನು ಸದುಪಯೋಗ ಮಾಡಿಕೊಳ್ಳುವುದು ಮುಖ್ಯ.
ಸಿಂಹ ರಾಶಿ: ನೀವು ಮನಸ್ಸಿಗೆ ಹಿಡಿಸದ ಸಂಗತಿಗಳ ವಿರುದ್ಧ ಧೈರ್ಯವಾಗಿ ನಿಲ್ಲುವ ಸಾಮರ್ಥ್ಯ ಇರುವುದು. ನಿಮ್ಮ ಪ್ರಾಮಾಣಿಕ ಪ್ರಯತ್ನಗಳು ಫಲ ನೀಡುತ್ತವೆ. ಸಮೀಪದ ಸಂಬಂಧಿಗಳ ಆರೋಗ್ಯದಲ್ಲಿ ಸುಧಾರಣೆಯು ಕಾಣಬಹುದು. ಭಾವೋದ್ವೇಗಕ್ಕೆ ಒಳಗಾಗಿ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಡಿ. ಸಮಯದ ಅಭಾವದಿಂದ ನೀವು ಅದನ್ನು ನಿಭಾಯಿಸಲು ಸಾಧ್ಯವಾಗುವುದಿಲ್ಲ. ರಾಜಕೀಯ ಪ್ರೇರಿತದಿಂದ ನಿಮ್ಮ ಬಗ್ಗೆ ಸುಳ್ಳು ಸುದ್ದಿಗಳು ಬರಬಹುದು. ಪ್ರಭಾವೀ ಜನರು ನಿಮ್ಮನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಕಾರ್ಯವನ್ನು ಸಾಧಿಸಿಕೊಳ್ಳುವರು. ಮಕ್ಕಳ ಏಳಿಗೆಯಲ್ಲಿ ನಿಮಗೆ ಸಂತೋಷ ಇರುವುದು. ನಿಂದನೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದು ಬೇಡ. ರಕ್ಷಣೆಯ ಸ್ಥಾನದಲ್ಲಿ ಇರುವವರಿಗೆ ಭಯವಿರುವುದು. ಸಂಕಟವನ್ನು ಪರಿಹರಿಸಿಕೊಳ್ಳಲು ಮಾರ್ಗವು ಸಿಗದೇ ಹೋಗಬಹುದು.
ಕನ್ಯಾ ರಾಶಿ: ಇಂದು ಕುಟುಂಬವನ್ನು ಆರ್ಥಿಕವಾಗಿ ಗಟ್ಟಿ ಮಾಡುವ ಬಗ್ಗೆ ಯೋಚನೆ ಇರುವುದು. ಸಮಯದಲ್ಲಿ ನೀವು ಕ್ರಿಯಾತ್ಮಕ ಚಟುವಟಿಕೆಯಲ್ಲಿ ತೊಡಗಿಕೊಳ್ಳುವಿರಿ. ಇಂದು ಸಮಯವನ್ನು ವ್ಯರ್ಥ ಮಾಡಬೇಡಿ. ನಿಮ್ಮ ಆಲೋಚನೆಗಳಿಗೆ ಆದ್ಯತೆ ನೀಡಿ. ಈ ಸಮಯದಲ್ಲಿ ವ್ಯಾಪಾರದಲ್ಲಿ ಕೆಲವು ಹೊಸ ಕೊಡುಗೆಗಳು ಇರಬಹುದು. ಹೆಚ್ಚು ಯೋಚಿಸಿ ಸಮಯ ವ್ಯರ್ಥ ಮಾಡಬೇಡಿ. ವಾತಾವರಣದ ಬದಲಾವಣೆಯಿಂದ ಆರೋಗ್ಯವು ಹಾಳಾಗಬಹುದು. ನಾನಾ ರೀತಿಯಲ್ಲಿ ಹೂಡಿಕೆಯನ್ನು ಮಾಡುವ ಮನಸ್ಸಾಗುವುದು. ಸ್ವಾಭಿಮಾನವನ್ನು ಬಿಟ್ಟು ಇರುವುದು ಅಸಾಧ್ಯ ಎನಿಸಬಹುದು. ಕೆಲವರಿಂದ ತಪ್ಪಿಸಿಕೊಳ್ಳಲು ನೋಡುವಿರಿ. ಅನಾರೋಗ್ಯವು ನೆಪವಾಗಬಹುದು. ಯಾವುದೋ ಕಾರ್ಯಕ್ಕೆ ಸಹಾಯವು ಸಿಗದೇ ಕಷ್ಟವಾಗುವುದು. ಸ್ತ್ರೀಯರಿಗೆ ಸಹಾಯ ಮಾಡಲು ಹೋಗಿ ಹಾಸ್ಯಕ್ಕೆ ಒಳಗಾಗುವಿರಿ. ಹೂಡಿಕೆಯನ್ನು ಮಾಡುವುದು ನಿಮಗೆ ಅನಿವಾರ್ಯವಾಗಬಹುದು.
ತುಲಾ ರಾಶಿ: ಇಂದು ನೀವು ಹಿಂದೆ ಪಡೆದ ಸಾಲವನ್ನು ಬೇರೆ ರೀತಿಯಲ್ಲಿ ಹಿಂದಿರುಗಿಸುವಿರಿ. ಸಮಯದಲ್ಲಿ ಅಹಿತಕರ ಸುದ್ದಿಗಳ ಸೂಚನೆಗಳೂ ಇವೆ. ಇಂದು ಮನಸ್ಸಿನಲ್ಲಿ ಭಯ ಮತ್ತು ಖಿನ್ನತೆಯಂತಹ ವಿಷಯಗಳಿಗೆ ಕಾರಣವಾಗಬಹುದು. ಸ್ನೇಹಿತರೊಂದಿಗೆ ಯಾವುದೇ ರೀತಿಯ ಸಹಯೋಗವನ್ನು ನಿರೀಕ್ಷಿಸಬೇಡಿ. ಸಂಗಾತಿಯ ಮತ್ತು ಕುಟುಂಬದ ಸದಸ್ಯರ ಸಹಕಾರವು ಇರಲಿದೆ. ಹೊಸತನ್ನು ಕಲಿಯುವ ಉತ್ಸಾಹವಿರಲಿದೆ. ನಿಮಗೆ ಧನಾತ್ಮಕ ಶಕ್ತಿಯನ್ನು ಪಡೆಯುವ ತಂತ್ರವು ತಿಳಿದಿರುತ್ತದೆ. ಭೂಮಿಯನ್ನು ಖರೀದಿಸುವ ಸಂದರ್ಭ ಬಂದರೂ ಪೂರ್ತಿ ಹಣವನ್ನು ಸೇರಿಸಲು ಆಗದು. ಯಾರ ಬಳಿಯೂ ಕೆಲಸವಿಲ್ಲ ಎಂದು ಹೇಳಬೇಡಿ. ಯಾರ ತಪ್ಪನ್ನೂ ನೇರವಾಗಿ ಹೇಳದೇ ಅರ್ಥ ಮಾಡಿಸಿ, ತಿದ್ದಿ. ನಿಮ್ಮ ಘನತೆಗೆ ಧಕ್ಕೆ ಬರುವುದು. ಸಹೋದ್ಯೋಗಿಗಳ ಜೊತೆ ಎಲ್ಲಿಗಾದರೂ ಪ್ರಯಾಣ ಮಾಡುವಿರಿ. ಸಮಯಪಾಲನೆಗೆ ಪ್ರಶಂಸೆಯು ಸಿಗುವುದು.
ವೃಶ್ಚಿಕ ರಾಶಿ: ಇಂದು ಭೇಟಿಯಾಗುವ ವ್ಯಕ್ತಿಗಳು ನಿಮ್ಮೊಳಗೆ ಧನಾತ್ಮಕ ಶಕ್ತಿಯನ್ನು ತುಂಬಿಸುವರು. ಕೆಲವು ವೈಫಲ್ಯಗಳು ನಿಮಗೆ ಪಾಠವಾಗಿ ಕಲಿಯಬೇಕು. ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲಿದ್ದೀರಿ. ಅಪರಿಚಿತ ಸ್ನೇಹಿತರ ಜೊತೆ ಹೆಚ್ಚು ಹತ್ತಿರವಾಗಬೇಡಿ. ನಿಮ್ಮ ವೈಯಕ್ತಿಕ ಕಾರ್ಯಗಳ ಮೇಲೆ ಗಮನವಿರಲಿ. ಪುಣ್ಯಕ್ಷೇತ್ರಗಳಿಗಾಗಿ ದೂರ ಪ್ರಯಾಣ ಮಾಡಬಹುದು. ಉದ್ಯೋಗವು ಅನುಕೂಲಕರವಾಗಿರುತ್ತದೆ. ಉದ್ಯಮದಲ್ಲಿ ಚಿಂತಿತ ಲಾಭ ಕಾಣದೇ ಚಿಂತೆಯಾಗುವುದು. ಉತ್ಸಾಹದಿಂದ ಇರಲು ನಿಮಗೆ ಮಾರ್ಗಗಳೂ ಕಡಿಮೆ ಇರಬಹುದು. ಇಷ್ಟವಿಲ್ಲದಿದ್ದರೂ ಉದ್ಯೋಗಕ್ಕೆ ತೆರಳಬೇಕಾದೀತು. ಉದ್ಯೋಗವನ್ನು ಬದಲಿಸುವ ಮೊದಲು ಸ್ನೇಹಿತರ ಸಲಹೆಯನ್ನು ಪಡೆಯುವಿರಿ. ಸಣ್ಣ ಕೆಲಸವಾದರೂ ಶ್ರದ್ಧೆಯಿಂದ ಮಾಡುವಿರಿ. ನಿಮ್ಮ ಹೆಚ್ಚಿನವರ ಭೇಟಿಯಾಗುವುದು. ಸಣ್ಣ ಉದ್ಯಮಿಗಳು ಬಂದ ಕೆಲಸವನ್ನು ಬಿಡದೇ ಮಾಡಬೇಕು.
ಧನು ರಾಶಿ: ನೀವು ಕುಟುಂಬದ ಸಮಸ್ಯೆಗಳನ್ನು ಕುಳಿತು ಮಾತನಾಡಬಹುದು. ಕೆಲವು ದುಃಖದ ಸುದ್ದಿಗಳು ಮನಸ್ಸನ್ನು ಹತಾಶೆಗೊಳಿಸಬಹುದು. ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಸ್ವಲ್ಪ ಸಮಯ ಕಳೆದರೆ, ಸಮಾಧಾನವಿರಲಿದೆ. ವೃತ್ತಿಜೀವನದಲ್ಲಿ ಏರಿಳಿತಗಳು ಆಗಲಿವೆ. ಸಂಬಂಧಿಸಿದ ಯೋಜನೆಯಲ್ಲಿ ವಿಫಲವಾಗಿ ಮತ್ತೆ ಪ್ರಯತ್ನಿಸಬೇಕಾಗಬಹುದು. ವ್ಯಾಪಾರದಲ್ಲಿ ಲಾಭವನ್ನು ಕಂಡು ಏನಾದರೂ ಯೋಜನೆಯನ್ನು ಮಾಡಿ ಕಷ್ಟಕ್ಕೆ ಸಿಲುಕಿಕೊಳ್ಳುವಿರಿ. ಒಂಟಿಯಾಗಿ ಇರಬೇಕು ಎನಿಸಬಹುದು. ಸಹೋದರಿಯರ ನಡುವೆ ಮನಸ್ತಾಪವು ಬರುತ್ತದೆ. ಉದ್ಯಮದಲ್ಲಿ ಕೆಲವು ಮಾರ್ಪಾಡಿನ ಅವಶ್ಯಕತೆ ಇರಲಿದೆ. ಪ್ರಶಂಸೆಯಿಂದ ಅಹಂಕಾರವು ಬರುವುದು. ಮಿತ್ರರಿಗೆ ವಂಚಿಸುವ ಆಲೋಚನೆ ಬರಲಿದೆ. ಯಂತ್ರಗಳನ್ನು ಬಳಸಿಕೊಂಡು ಸಣ್ಣ ಉದ್ಯೋಗವನ್ನು ಆರಂಭಿಸುವಿರಿ.
ಮಕರ ರಾಶಿ: ಇಂದು ನಿಮ್ಮ ಸಂಬಂಧವನ್ನು ಹೆಚ್ಚು ಆನಂದದಿಂದ ಇಟ್ಟುಕೊಳ್ಲಕುವಿರಿ. ಅಪಾಯಕಾರಿಯಾಗಿರುವ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬೇಡಿ. ಆರ್ಥಿಕ ಪರಿಸ್ಥಿತಿ ಹದಗೆಡಬಹುದು. ನಿಮ್ಮ ಮೇಲೆ ಹೊಸ ಜವಾಬ್ದಾರಿ ಬರುವುದರಿಂದ, ದಿನಚರಿಯು ಸ್ವಲ್ಪ ಒತ್ತಡದಿಂದ ಇರಲಿದೆ. ಹಿಂದಿನ ನಕಾರಾತ್ಮಕ ವಿಷಯಗಳು ವರ್ತಮಾನದ ಮೇಲೆ ಪ್ರಾಬಲ್ಯ ಸಾಧಿಸಲು ಬಿಡಬೇಡಿ. ಅಹಂಕಾರಕ್ಕೆ ಸಂಬಂಧಿಸಿದಂತೆ ಗಂಡ ಹೆಂಡತಿಯ ನಡುವೆ ಭಿನ್ನಾಭಿಪ್ರಾಯಗಳು ಬರಬಹುದು. ರಾಜಕೀಯ ವ್ಯಕ್ತಿಗಳಿಂದ ನಿಮಗೆ ಪ್ರೇರಣೆ ಸಿಗುವುದು. ಆರ್ಥಿಕ ಲಾಭದಿಂದ ನೀವು ಸಂತೋಷ ಇರುವುದು ನಿಮ್ಮ ಮುಖದಲ್ಲಿ ಕಾಣಿಸುವುದು. ಹಳೆಯ ವಾಹನವನ್ನು ನೀವು ಖರೀದಿಸುವಿರಿ. ವಿದ್ಯಾರ್ಥಿಗಳು ಓದಿನ ಸಮಯವನ್ನು ಬದಲಿಸಿಕೊಳ್ಳುವುದು ಸೂಕ್ತ. ಅನವಶ್ಯಕವಾಗಿ ಆಡುವ ಮಾತುಗಳು ನಿಮ್ಮ ಮೇಲಿನ ಗೌರವವನ್ನು ಕಡಿಮೆ ಮಾಡಿಸೀತು.
ಕುಂಭ ರಾಶಿ: ಇಂದು ನೀವು ಮಾತನಾಡುವ ರೀತಿ ಜನರನ್ನು ಆಕರ್ಷಿಸಬಹುದು. ಸಂಬಂಧದ ಜೊತೆ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಳ್ಳುವಿರಿ. ನಕಾರಾತ್ಮಕ ವಿಷಯಗಳನ್ನು ನೆನಪಿಟ್ಟುಕೊಳ್ಳಬೇಡಿ ಮತ್ತು ವರ್ತಮಾನದಲ್ಲಿ ಬದುಕಲು ಕಲಿಯಬೇಕಿದೆ. ಇಂದು ಆರ್ಥಿಕ ವಿಷಯಗಳ ಬಗ್ಗೆ ಯೋಚಿಸುವ ಅವಶ್ಯಕತೆಯಿದೆ. ಮುಗ್ಗರಿಸಬೇಡಿ. ದಾಂಪತ್ಯದಲ್ಲಿ ಬಾಂಧವ್ಯವನ್ನು ಸರಿ ಮಾಡಿಕೊಳ್ಳಿ. ನಿಮ್ಮ ನೆಮ್ಮದಿಗೆ ಸಂಗಾತಿಯು ಭಂಗವನ್ನು ಉಂಟುಮಾಡಬಹುದು. ನಿಮಗೆ ಗೊತ್ತೇ ಅಗದಂತೆ ವಂಚನೆಯಲ್ಲಿ ಸಿಕ್ಕಿಬೀಳುವಿರಿ. ಅರೋಗ್ಯದ ಸುಧಾರಣೆಗೆ ವೈದ್ಯರ ಸಲಹೆ ಅವಶ್ಯಕ. ಇಂದು ಆದ ನಿದ್ರಾಭಂಗದಿಂದ ದಿನವು ಸರಿಯಾಗದೇ ಹೋಗಬಹುದು. ಎಲ್ಲರ ಮೇಲೂ ವಿನಾ ಕಾರಣ ಕೋಪ ಮಾಡಿಕೊಳ್ಳುವಿರಿ. ಹಸಿವು ಹೆಚ್ಚಾಗಿ ಸಂಕಟಪಡುವಿರಿ. ರಾಜಕೀಯವನ್ನು ಬಂಧುಗಳ ನಡುವೆಯೂ ಮಾಡುವಿರಿ. ಆಸಕ್ತಿ ಇಲ್ಲದೇ ಇದ್ದರೂ ಕರ್ತವ್ಯದಲ್ಲಿ ಲೋಪವಿರಬಾರದು.
ಮೀನ ರಾಶಿ: ಇಂದು ನಿಮ್ಮನ್ನು ನೀವು ಆಶಾವಾದಿಯನ್ನಾಗಿ ಮಾರ್ಪಾಡು ಮಾಡಿಕೊಳ್ಳುವಿರಿ. ಯಶಸ್ಸಿನ ದಾರಿಯನ್ನು ತೋರಿಸುತ್ತದೆ. ಕುಟುಂಬದ ಸ್ನೇಹಿತರೊಂದಿಗೆ ಮೋಜು ಮಸ್ತಿಯಲ್ಲಿ ಕಳೆವ ಕ್ಷಣ ಸ್ಮರಣೀಯವಾಗಿರುತ್ತದೆ. ನಿಮ್ಮ ದೌರ್ಬಲ್ಯವು ಬಹಿರಂಗವಾಗಿಸಿಕೊಂಡು ಅವಮಾನವಾಗಲಿದೆ. ಸಹೋದರ ಸಹೋದರಿಯರ ಆರೋಗ್ಯದ ಬಗ್ಗೆ ಕಳವಳ ಉಂಟಾಗಬಹುದು. ವ್ಯಾಪಾರದಲ್ಲಿ ಪ್ರಗತಿಗೆ ಸರಿಯಾದ ಅವಕಾಶ ದೊರೆಯುತ್ತದೆ. ಪ್ರೇಮಾಕರ್ಷಣೆಯು ನಿಮ್ಮ ಗುರಿಯಿಂದ ನಿಮ್ಮನ್ನು ದೂರವಿಡಬಹುದು. ನಿಮ್ಮ ಮಾತಿನ ಮೇಲೆ ನಿಯಂತ್ರಣವಿರಲಿ. ನಿಮ್ಮ ವೃತ್ತಿಯು ನಿಮಗೆ ಗೌರವವನ್ನು ಕೊಡಿಸುವುದು. ಬೇಜವಾಬ್ದಾರಿತನದಿಂದ ನಿಮ್ಮ ಅಧಿಕಾರವನ್ನು ಕಳೆದುಕೊಳ್ಳಬೇಕಾಗುವುದು. ಅನಾರೋಗ್ಯದ ಸಮಸ್ಯೆಯನ್ನು ಅನುಭವಿಸಬೇಕಾಗುವುದು. ನಿಮ್ಮ ವಸ್ತುವು ಕಳ್ಳರಿಂದ ಅಪಹರಣ ಆಗುತಗತದೆವೆಂಬ ಭಯವು ಇರುವುದು. ಇನ್ನೊಬ್ಬರ ಬಳಿ ಇರುವ ನಿಮ್ಮ ವಸ್ತುವನ್ನು ಬಹಳ ಪ್ರಯತ್ನದಿಂದ ಪಡೆಯುವಿರಿ.
Views: 0