ಚಿತ್ರದುರ್ಗದಲ್ಲಿ ಘೋರ ದುರಂತ : ಮಲದ ಗುಂಡಿಯಲ್ಲಿ ಉಸಿರುಗಟ್ಟಿ ಕಾರ್ಮಿಕ ಸಾವು.!

ಡಿ.18 ರಂದು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಮಲದ ಗುಂಡಿಗೆ ಇಳಿದಿದ್ದ ಕಾರ್ಮಿಕರೊಬ್ಬರು ಉಸಿರುಗಟ್ಟೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತರನ್ನು ಗಾಂಧಿನಗರ ಬಡಾವಣೆಯ ರಂಗಸ್ವಾಮಿ (48) ಎಂದು ಗುರುತಿಸಲಾಗಿದ್ದು,ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *