ಪ್ರಾಚೀನ ಕಾಲದಿಂದಲೂ ತಾಮ್ರದ ಪಾತ್ರೆಗಳು ಬಳಕೆಯಲ್ಲಿದ್ದು, ನಮ್ಮ ಹಿರಿಯರು ಈ ತ್ರಾಮದ ಪಾತ್ರೆಯಲ್ಲಿಯೇ ನೀರು ಕುಡಿಯುವುದು ಆಹಾರವನ್ನು ಸೇವಿಸುತ್ತಿದ್ದರು. ಆದರೆ ಇತ್ತೀಚೆಗಿನ ದಿನಗಳಲ್ಲಿ ತ್ರಾಮದ ಪಾತ್ರೆಗಳ ಬದಲಾಗಿ ಗಾಜಿನ ಪಾತ್ರೆ, ಸ್ಟೀಲ್ ಪಾತ್ರೆಗಳಲ್ಲಿ ಆಹಾರವನ್ನು ಸೇವಿಸುವ ಹಾಗೂ ನೀರನ್ನು ಕುಡಿಯುವ ಅಭ್ಯಾಸವಿದೆ. ಆದರೆ ತಾಮ್ರದ ಪಾತ್ರೆ ಅಥವಾ ಬಾಟಲಿಯಲ್ಲಿ ತುಂಬಿಸಿಟ್ಟ ನೀರನ್ನು ಕುಡಿಯುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿದ್ದು, ಹಲವಾರು ಆರೋಗ್ಯ ಸಮಸ್ಯೆಗಳಿಂದ ಹೊರ ಬರಬಹುದು.

ಪ್ರತಿನಿತ್ಯ ದೇಹಕ್ಕೆ ನೀರಿನ ಅಗತ್ಯವು ಬಹಳಷ್ಟು ಇವೆ. ಹೀಗಾಗಿ ಪ್ರತಿದಿನ ಕನಿಷ್ಠ 7ರಿಂದ 8 ಲೋಟಗಳಷ್ಟು ನೀರನ್ನು ಕುಡಿಯಲೇ ಬೇಕು. ಸರಿಯಾದ ಪ್ರಮಾಣದಲ್ಲಿ ನೀರು ಕುಡಿಯುವುದರಿಂದ ದೇಹದ ಎಲ್ಲಾ ಭಾಗಗಳು ಸರಿಯಾಗಿ ಕಾರ್ಯನಿರ್ವಹಿಸುತ್ತವೆ. ಆದರೆ ಕೆಲವರು ತ್ರಾಮದ ಬಾಟಲಿಯಲ್ಲಿ ಅಥವಾ ತ್ರಾಮದ ಪಾತ್ರೆಯಲ್ಲಿ ಶೇಖರಿಸಿಟ್ಟ ನೀರನ್ನು ಕುಡಿಯುತ್ತಾರೆ. ಈ ಅಭ್ಯಾಸವು ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಕಾರಿಯಾಗಿದ್ದು, ನಾನಾ ರೀತಿಯ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿದೆ.
ತ್ರಾಮದ ಪಾತ್ರೆಯಲ್ಲಿನ ನೀರು ಕುಡಿಯುವುದರಿಂದ ಆರೋಗ್ಯ ಲಾಭಗಳು
* ಜೀರ್ಣ ಕ್ರಿಯೆಯನ್ನು ಸುಧಾರಿಸುತ್ತದೆ : ತ್ರಾಮದ ಬಾಟಲಿಯಲ್ಲಿನ ನೀರು ಮಾಲಿನ್ಯಕಾರಕಗಳು ಮತ್ತು ಹಾನಿಕಾರಕ ಸೂಕ್ಷ್ಮಜೀವಿಗಳನ್ನು ನಾಶಪಡಿಸಿ, ಚಯಾಪಚಯ ಕ್ರಿಯೆಯೂ ಸರಿಯಾಗಿ ಆಗುವಂತೆ ನೋಡಿಕೊಳ್ಳುತ್ತದೆ.
* ರಕ್ತಹೀನತೆಯನ್ನು ಕಡಿಮೆಮಾಡುತ್ತದೆ: ಹಿಮೋಗ್ಲೋಬಿನ್ ಉತ್ಪಾದನೆಗೆ ದೇಹದಲ್ಲಿ ತ್ರಾಮದ ಅಗತ್ಯವಿದೆ. ಹೀಗಾಗಿ ಆಹಾರದಲ್ಲಿನ ಕಬ್ಬಿಣದ ಅಂಶವನ್ನು ಹೀರಲು ಈ ತ್ರಾಮವು ಸಹಾಯ ಮಾಡಿ ರಕ್ತಹೀನತೆಯನ್ನು ನಿವಾರಿಸುತ್ತದೆ.
* ಥೈರಾಯ್ಡ್ ಗ್ರಂಥಿಯ ಕಾರ್ಯವನ್ನು ಸುಧಾರಿಸುತ್ತದೆ: ಥೈರಾಯ್ಡ್ ಗ್ರಂಥಿಯನ್ನು ನಿಯಂತ್ರಿಸಲು ಪ್ರಮುಖ ಖನಿಜವಾದ ತ್ರಾಮವು ಅತ್ಯಗತ್ಯ. ತ್ರಾಮದ ನೀರನ್ನು ಸೇವನೆ ಮಾಡುವುದರಿಂದ ಥೈರಾಯ್ಡ್ ಗ್ರಂಥಿಯ ಕೆಲಸವನ್ನು ಇನ್ನಷ್ಟು ಚುರುಕುಗೊಳಿಸುತ್ತದೆ.
* ತೂಕ ನಷ್ಟಕ್ಕೆ ಸಹಾಯಕವಾಗಿದೆ : ತ್ರಾಮದ ಬಾಟಲಿಯಲ್ಲಿ ಶೇಖರಿಸಿಟ್ಟ ನೀರು ಕುಡಿಯುವುದರಿಂದ ಕೊಬ್ಬನ್ನು ಕಡಿಮೆ ಮಾಡಿ ತೂಕ ನಷ್ಟಕ್ಕೆ ಕಾರಣವಾಗುತ್ತದೆ. ತೂಕವನ್ನು ಕಡಿಮೆ ಮಾಡಿಕೊಳ್ಳಬೇಕೆನ್ನುವ ತ್ರಾಮದ ಪಾತ್ರೆಯಲ್ಲಿಟ್ಟ ನೀರನ್ನು ಕುಡಿಯುವುದು ಒಳ್ಳೆಯದು.
* ಕೀಲುಗಳು ಸಂಧಿವಾತದ ನೋವಿಗೆ ಪರಿಣಾಮಕಾರಿ: ತ್ರಾಮದ ನೀರು ಮೂಳೆಗಳನ್ನು ಬಲಪಡಿಸುತ್ತದೆ. ಹೀಗಾಗಿ ಸಂಧಿವಾತ ಸಮಸ್ಯೆ ಹೊಂದಿರುವವರು ತಾಮ್ರದ ನೀರನ್ನು ಕುಡಿಯುವುದರಿಂದ ಈ ಸಮಸ್ಯೆಯಿಂದ ಮುಕ್ತರಾಗಬಹುದು.
* ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಈ ತಾಮ್ರದ ನೀರಿನಲ್ಲಿ ನೈಸರ್ಗಿಕ ಆಂಟಿಬ್ಯಾಕ್ಟೀರಿಯಲ್ ಗುಣವಿದ್ದು , ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಯಾವುದೇ ಸೋಂಕು ಬಾರದಂತೆ ನೋಡಿಕೊಳ್ಳುತ್ತದೆ.
* ಚರ್ಮದ ಆರೋಗ್ಯವನ್ನು ಕಾಪಾಡಲು ಸಹಾಯಕಾರಿ : ಈ ತ್ರಾಮದ ನೀರು ಚರ್ಮವನ್ನು ಆರೋಗ್ಯವಾಗಿ ಇಡುವುದರ ಜೊತೆಗೆ ವಯಸ್ಸಾಗ ಹಾಗೆ ಕಾಣುವಂತೆ ಮಾಡುತ್ತದೆ. ಚರ್ಮಗಳಿಗೆ ಬಣ್ಣವನ್ನು ನೀಡಿ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ.
* ಹೃದಯದ ಆರೋಗ್ಯವನ್ನು ಕಾಪಾಡುತ್ತದೆ: ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಮಾಡಿ, ಆಹಾರದಲ್ಲಿರುವ ಕಬ್ಬಿಣಾಂಶವನ್ನು ದೇಹವು ಹೀರಿಕೊಳ್ಳಲು ಸಹಾಯ ಮಾಡಿ, ರಕ್ತ ಪರಿಚಲನೆಯನ್ನು ಉತ್ತೇಜಿಸುವ ಕೆಲಸ ಮಾಡುತ್ತದೆ. ಈ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1