ಭಾರತ- ಆಸೀಸ್ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಗಾಬಾದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡ ನಂತರ ಇದೀಗ ಉಭಯ ತಂಡಗಳು ಮೇಲ್ಬೋರ್ನ್​ನಲ್ಲಿ ನಡೆಯಲ್ಲಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೆ ತಯಾರಿ ಆರಂಭಿಸಿವೆ. ಈಗಾಗಲೇ ನಡೆದಿರುವ ಮೂರು ಪಂದ್ಯಗಳಲ್ಲಿ ಎರಡೂ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿರುವ ಕಾರಣ ಯಾವ ತಂಡಕ್ಕೂ ಸರಣಿಯಲ್ಲಿ ಮುನ್ನಡೆ ಸಾಧಿಸಲು ಸಾಧ್ಯವಾಗಿಲ್ಲ. ಹೀಗಾಗಿ ಬಾಕ್ಸಿಂಗ್ ಡೇ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಇರಾದೆಯಲ್ಲಿ ಉಭಯ ತಂಡಗಳಿಗಿದೆ. ಇದಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ಗೇರಲು ಎರಡೂ ತಂಡಗಳಿಗೆ ಈ ಪಂದ್ಯದ ಗೆಲುವು ಬಹಳ ಮುಖ್ಯವಾಗಿದೆ. ಹೀಗಾಗಿ ಎರಡು ತಂಡಗಳು ಗೆಲುವಿನ ಮೇಲೆ ಕಣ್ಣಿಟ್ಟಿವೆ. ಆದರೆ ಅದಕ್ಕೂ ಮುನ್ನ ಪಂದ್ಯ ಯಾವಾಗ? ಎಲ್ಲಿ? ಎಷ್ಟು ಗಂಟೆಗೆ ಆರಂಭ? ನೇರ ಪ್ರಸಾರ ಯಾವ ಚಾನೆಲ್​ನಲ್ಲಿ ಎಂಬುದರ ವಿವರ ಇಲ್ಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಯಾವಾಗ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಡಿಸೆಂಬರ್ 26, 2024 ರಂದು ಪ್ರಾರಂಭವಾಗಿ ಡಿಸೆಂಬರ್ 30 ರಂದು ಕೊನೆಗೊಳ್ಳಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ನಾಲ್ಕನೇ ಟೆಸ್ಟ್ ಪಂದ್ಯವು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಭಾರತದಲ್ಲಿ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಭಾರತ vs ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಬೆಳಿಗ್ಗೆ 5.00 ಗಂಟೆಗೆ ಪ್ರಾರಂಭವಾಗಲಿದ್ದು, ಟಾಸ್ 4.30 ಕ್ಕೆ ನಡೆಯಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ವೀಕ್ಷಿಸಬೇಕು?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ವೀಕ್ಷಿಸಬಹುದಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬೇಕು?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ+ ಹಾಟ್‌ಸ್ಟಾರ್ ಅಧಿಕೃತ ಅಪ್ಲಿಕೇಶನ್ ಅಥವಾ ವೆಬ್‌ಸೈಟ್‌ನಲ್ಲಿ ಲೈವ್ ಆಗಿ ಲಭ್ಯವಿರುತ್ತದೆ.

ಉಭಯ ತಂಡಗಳು

ಭಾರತ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಅಭಿಮನ್ಯು ಈಶ್ವರನ್, ದೇವದತ್ ಪಡಿಕ್ಕಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

ಆಸ್ಟ್ರೇಲಿಯಾ : ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೊಲ್ಯಾಂಡ್, ಅಲೆಕ್ಸ್ ಕ್ಯಾರಿ (ಉಪನಾಯಕ), ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ನಾಥನ್ ಲಿಯಾನ್, ಮಿಚ್ ಮಾರ್ಷ್, ನಾಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಬ್ಯೂ ವೆಬ್‌ಸ್ಟರ್.

Source : https://tv9kannada.com/sports/cricket-news/boxing-day-test-schedule-live-streaming-psr-952879.html

Leave a Reply

Your email address will not be published. Required fields are marked *