2ನೇ ಪಿಯುಸಿ ವಾರ್ಷಿಕ ಪರೀಕ್ಷೆ -2ಕ್ಕೆ ಭಾರಿ ಒಲವು.

 ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ಕ್ಕೆ 1.60 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳು ಈ ಬಾರಿ ನಡೆಸುತ್ತಿರುವ ವರ್ಷಕ್ಕೆ ಮೂರು ಪರೀಕ್ಷೆ ಅನುಕೂಲ ತೆಗೆದುಕೊಳ್ಳಲು ಸಿದ್ದರಾಗಿದ್ದಾರೆ.

ಇಷ್ಟು ವರ್ಷ ವಾರ್ಷಿಕ ಪರೀಕ್ಷೆ ನಡೆದ ನಂತರ ಫೇಲಾದ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಂಡಳಿಯು ಪೂರಕ ಪರೀಕ್ಷೆ ನಡೆಸಿ ಸುಮ್ಮನಾಗುತ್ತಿತ್ತು. ಆದರೆ ಈ ವರ್ಷದಿಂದ ವರ್ಷಕ್ಕೆ ಮೂರು ವಾರ್ಷಿಕ ಪರೀಕ್ಷೆ ನಡೆಸುತ್ತಿರುವ ಪರಿಣಾಮ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿಯಿಂದ ಎರಡನೇ ಪರೀಕ್ಷೆಗೆ ಹಾಜರಾಗಲು ಬಯಸಿದ್ದಾರೆ.

ಹಾಗೆ ನೋಡಿದ್ದಲ್ಲಿ, ನೋಂದಾಯಿಸಿರುವ ವಿದ್ಯಾರ್ಥಿಗಳ ಪ್ರಮಾಣ ಹೆಚ್ಚಿನ ಪ್ರಮಾಣದಲ್ಲಿ ಇಲ್ಲ. ಏಕೆಂದರೆ 2023ರ ಪೂರಕ ಪರೀಕ್ಷೆಗೆ 1.58  ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಇದರಿಂದ ನೋಂದಾಯಿಸಿದ ವಿದ್ಯಾರ್ಥಿಗಳ ಪ್ರಮಾಣದಲ್ಲಿ ಕೇವಲ 2ಸಾವಿರದಷ್ಟೇ ಹೆಚ್ಚಳವಾಗಿದೆ.

ದ್ವಿತೀಯ ಪಿಯು ಪರೀಕ್ಷೆ-2  ಏಪ್ರಿಲ್ 29ರಿಂದ ಮೇ 16ರ ವರೆಗೆ ನಡೆಯಲಿದೆ. 2024ರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 81.15 ಫಲಿತಾಂಶ ಬಂದಿದ್ದು, 5.52 ಲಕ್ಷ ವಿದ್ಯಾರ್ಥಿಗಳು ಪಾಸಾಗಿದ್ದರು. ಫೇಲ್ ಆಗಿದ್ದ 1.28  ಲಕ್ಷ ವಿದ್ಯಾರ್ಥಿಗಳ ಜೊತೆಗೆ ಖಾಸಗಿ ಅಭ್ಯರ್ಥಿಗಳು ಮತ್ತು ಫಲಿತಾಂಶ ಹೆಚ್ಚಿಸಿಕೊಳ್ಳುವುದಕ್ಕಾಗಿ ಕೆಲವು ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಬಂದಿದ್ದರೂ 2ನೇ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *