ವರದಿ ಮತ್ತು ಫೋಟೋ ಕೃಪೆ ವೇದಮೂರ್ತಿ ಭೀಮಸಮುದ್ರ ಮೊ : 8088076203
ಭೀಮಸಮುದ್ರ: ಸಮೀಪದ ಸಿಂಗಾಪುರ ಗ್ರಾಮದ ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ‘ಹುಲ್ಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ’ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ಈ ಪ್ರತಿಭಾ ಪುರಸ್ಕಾರ ವೇದಿಕೆಯಲ್ಲಿ ಕುರುಬರಹಳ್ಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ (ಎಸ್.ಎಲ್.ವಿ) ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ, ತಾಲೂಕು ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ಈ ಕಲೋತ್ಸವದಲ್ಲಿ ಕ್ಲಸ್ಟರ್ ವ್ಯಾಪ್ತಿಯ 3 ಪ್ರೌಢಶಾಲೆಗಳು, 2 ಅನುದಾನ ರಹಿತ ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ 9 ಸರ್ಕಾರಿ ಪ್ರಾಥಮಿಕ ಶಾಲೆಗಳು ಸೇರಿ ಒಟ್ಟು 14 ಶಾಲೆಗಳು ಪಾಲ್ಗೊಂಡಿದ್ದವು. ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗಗಳನ್ನು ಒಳಗೊಂಡು ಒಟ್ಟು ಮೂರು ಹಂತಗಳಲ್ಲಿ 15 ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಗಳಲ್ಲಿ ಅದ್ಭುತ ಕೌಶಲ್ಯ ಮೆರೆದ ಎಸ್.ಎಲ್.ವಿ ಶಾಲೆಯ ವಿದ್ಯಾರ್ಥಿಗಳು 3 ಪ್ರಥಮ, 5 ದ್ವಿತೀಯ ಹಾಗೂ 6 ತೃತೀಯ ಬಹುಮಾನಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಇಸಿಓಗಳಾದ ಲೋಕೇಶ್, ಅಂಜನಪ್ಪ ಹಾಗೂ ಸಿಆರ್‌ಪಿ ಶಿವಕುಮಾರ್ ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಿಆರ್‌ಪಿ ಶಿವಕುಮಾರ್, “ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಸಹಪಠ್ಯ ಚಟುವಟಿಕೆಗಳು ಅತ್ಯಗತ್ಯ. ಸೋಲು-ಗೆಲುವಿಗಿಂತ ಸ್ಪರ್ಧೆಯಲ್ಲಿ ಭಾಗವಹಿಸುವುದು ಅತಿಮುಖ್ಯ. ಮಕ್ಕಳೊಳಗಿನ ಸುಪ್ತ ಕಲೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಂತಹ ವೇದಿಕೆಗಳು ಸಹಕಾರಿಯಾಗಿವೆ,” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ತೀರ್ಪುಗಾರರ ನಿಯೋಜನೆ ಹಾಗೂ ಸ್ಪರ್ಧೆಯ ನಿಯಮಗಳ ಬಗ್ಗೆಯೂ ಅವರು ಮಾಹಿತಿ ನೀಡಿದರು.
ಕಾರ್ಯಕ್ರಮದ ಕೊನೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನಗಳನ್ನು ವಿತರಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಜಯಪ್ರಕಾಶ್, ಶಿವಮೂರ್ತಿ, ಶಂಕರಮೂರ್ತಿ, ಪ್ರದೀಪ್ ಕುಮಾರ್ ಮತ್ತು ಶಿಕ್ಷಕರಾದ ಅಂಜನಪ್ಪ, ಭರಮಪ್ಪ, ಗೀತಾ, ವಿನುತ, ಜಬೀವುಲ್ಲಾ, ಫೈಜುನ್ನೀಸ, ಬಶೀರ್, ಸಲ್ಮಾ, ಮೋನಿಕಾ, ಸಾವಿತ್ರಮ್ಮ ಸೇರಿದಂತೆ ಹುಲ್ಲೂರು ಕ್ಲಸ್ಟರ್‌ನ ವಿವಿಧ ಶಾಲಾ ಮುಖ್ಯಸ್ಥರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು