ICC WTC 2023: ಐಪಿಎಲ್ ಮುಗಿದ ಬೆನ್ನಲ್ಲೇ ಟೀಮ್ ಇಂಡಿಯಾಕ್ಕಿದೆ ದೊಡ್ಡ ಸವಾಲು: ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಯಾವಾಗ?

ICC WTC 2023: ಐಪಿಎಲ್ ಮುಗಿದ ಬೆನ್ನಲ್ಲೇ ಟೀಮ್ ಇಂಡಿಯಾಕ್ಕಿದೆ ದೊಡ್ಡ ಸವಾಲು: ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಯಾವಾಗ?
Team India Testv

ಭಾರತ ಕ್ರಿಕೆಟ್ ತಂಡದ ಆಟಗಾರರು ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬ್ಯುಸಿ ಆಗಿದ್ದಾರೆ. ರೋಚಕ ಘಟ್ಟದತ್ತ ತಲುಪಿರುವ ಐಪಿಎಲ್ 2023 (IPL 2023) ಈ ತಿಂಗಳ ಅಂತ್ಯಕ್ಕೆ ಕೊನೆಗೊಳ್ಳಲಿದೆ. ಮೇ 28 ರಂದು ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯುವ ಮೂಲಕ 16ನೇ ಆವೃತ್ತಿಯ ಐಪಿಎಲ್​ಗೆ ತೆರೆ ಬೀಳಲಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾ (Team India) ಆಟಗಾರರು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗಾಗಿ ಇಂಗ್ಲೆಂಡ್​ಗೆ ಪ್ರಯಾಣ ಬೆಳೆಸಲಿದ್ದಾರೆ. ಐಪಿಎಲ್​ ಫೈನಲ್​ನಲ್ಲಿ ಆಡುವ ಆಟಗಾರರನ್ನು ಹೊರತು ಪಡಿಸಿ ಉಳಿದ ಆಟಗಾರರು ಬೇಗನೆ ಲಂಡನ್​ಗೆ ತೆರಳಲಿದ್ದಾರೆ. ಹಾಗಾದರೆ, ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (ICC WTC Final) ಪಂದ್ಯ ಯಾವಾಗ?, ಯಾರ ವಿರುದ್ಧ?.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಈ ಪಂದ್ಯ ಜೂನ್ 7 ರಿಂದ 11ರ ವರೆಗೆ ನಡೆಯಲಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನ ಈ ಐತಿಹಾಸಿಕ ಕಾದಾಟಕ್ಕೆ ಸಾಕ್ಷಿಯಾಗಲಿದೆ. ಈಗಾಗಲೇ ಈ ಮಹತ್ವದ ಟೂರ್ನಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಟೀಮ್ ಇಂಡಿಯಾವನ್ನು ಕೂಡ ಪ್ರಕಟ ಮಾಡಿದೆ.

IPL 2023 Points Table: CSK ಗೆ ಜಯ, RCB ಗೆ ಸೋಲು: ಪಾಯಿಂಟ್ಸ್​ ಟೇಬಲ್​ನಲ್ಲಿ ಮಹತ್ವದ ಬದಲಾವಣೆ

ಈ ಹಿಂದೆ ಟೆಸ್ಟ್ ತಂಡದಿಂದ ಹೊರಬಿದ್ದ ಅಜಿಂಕ್ಯಾ ರಹಾನೆ ಕಮ್​ಬ್ಯಾಕ್ ಮಾಡಿದ್ದಾರೆ. ಸದ್ಯ ಸಾಗುತ್ತಿರುವ ಐಪಿಎಲ್​ನಲ್ಲಿ ಸಿಎಸ್​ಕೆ ಪರ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿರುವ ರಹಾನೆ ಸ್ಥಾನ ಪಡೆದುಕೊಂಡಿದ್ದಾರೆ. ರೋಹಿತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದು ಶುಭ್​ಮನ್ ಗಿಲ್ ಆಯ್ಕೆ ಆಗಿದ್ದಾರೆ. ಕೆಎಸ್ ಭರತ್ ವಿಕೆಟ್ ಕೀಪರ್ ಆಗಿರಲಿದ್ದಾರೆ.

ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಮಧ್ಯಮ ಕ್ರಮಾಂಕದ ಬಲವಾಗಿದ್ದಾರೆ. ಆಲ್ರೌಂಡರ್​ಗಳಾಗಿ ನಾಲ್ವರು ಆಯ್ಕೆ ಆಗಿದ್ದು ರವಿಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಥಾಕೂರ್ ಹಾಗೂ ರವಿಚಂದ್ರನ್ ಅಶ್ವಿನ್ ಇದ್ದಾರೆ. ವೇಗಿಗಳ ವಿಭಾಗದಲ್ಲಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಜಯದೇವ್ ಉನಾದ್ಕಟ್ ಸ್ಥಾನ ಪಡೆದುಕೊಂಡಿದ್ದಾರೆ.

ಕೆಲ ಸ್ಟಾರ್ ಪ್ಲೇಯರ್ಸ್ ಹೊರಕ್ಕೆ:

ಇಂಜುರಿಯಿಂದ ಗುಣಮುಖರಾಗದ ಜಸ್​ಪ್ರೀತ್ ಬುಮ್ರಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಿಂದ ಹೊರಗುಳಿದಿದ್ದಾರೆ. ಅಂತೆಯೆ ಶ್ರೇಯಸ್ ಅಯ್ಯರ್ ಹಾಗೂ ರಿಷಭ್ ಪಂತ್​​ಗೆ ವಿಶ್ರಾಂತಿ ಬೇಕಿರುವ ಕಾರಣ ಅವರುಕೂಡ ಅಲಭ್ಯರಾಗಿದ್ದಾರೆ. ಇದರ ನಡುವೆ ಐಪಿಎಲ್​ನಲ್ಲಿ ಇಂಜುರಿಗೆ ತುತ್ತಾಗಿರುವ ಕೆಎಲ್ ರಾಹುಲ್ ಕೂಡ ಈ ಮಹತ್ವದ ಟೂರ್​ನಿಯನ್ನು ತಪ್ಪಿಸಿಕೊಂಡಿದ್ದಾರೆ. ಮೇ 1 ರಂದು ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ರಾಹುಲ್ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಬಿಸಿಸಿಐ ರಾಹುಲ್ ಜಾಗಕ್ಕೆ ಬದಲಿ ಆಟಗಾರನನ್ನು ಇನ್ನೂ ಹೆಸರಿಸಿಲ್ಲ. ವಿಕೆಟ್ ಕೀಪರ್ ಅಗತ್ಯವಿರುವ ಕಾರಣದಿಂದ ಇಶಾನ್ ಕಿಶನ್ ಅಥವಾ ವೃದ್ದಿಮಾನ್ ಸಾಹ ಆಯ್ಕೆ ಆಗುವ ಸಾಧ್ಯತೆ ಇದೆ.

WTC ಫೈನಲ್​ಗೆ ಭಾರತದ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

source https://tv9kannada.com/sports/cricket-news/ind-vs-aus-wtc-final-the-biggest-challenge-for-team-india-after-the-ipl-2023-when-is-the-icc-world-test-championship-final-vb-572122.html

Leave a Reply

Your email address will not be published. Required fields are marked *