ಐಸಿಸಿ ಬಿಡುಗಡೆ ಮಾಡಿರುವ ಇತ್ತೀಚಿನ ರ‍್ಯಾಂಕಿಂಗ್ ನಲ್ಲಿ ಶುಭಮನ್ ಗಿಲ್ ಮತ್ತು ಮೊಹಮ್ಮದ್ ಸಿರಾಜ್‌ಗೆ ನಂಬರ್ ಒನ್ ಪಟ್ಟಕ್ಕೆ ಏರಿದ್ದಾರೆ.
Shubman Gill No.1 ODI Batsman : ಭಾರತದ ಇಬ್ಬರು ಆಟಗಾರರಿಗೆ ಐಸಿಸಿ ಶುಭ ಸುದ್ದಿ ನೀಡಿದೆ. ಹೌದು, ಶುಭಮನ್ ಗಿಲ್ ಮತ್ತು ಮೊಹಮ್ಮದ್ ಸಿರಾಜ್ ಗೆ ಬಹುದೊಡ್ಡ ಗಿಫ್ಟ್ ಇದು. ಐಸಿಸಿ ಬಿಡುಗಡೆ ಮಾಡಿರುವ ಇತ್ತೀಚಿನ ರ‍್ಯಾಂಕಿಂಗ್ ನಲ್ಲಿ ಶುಭಮನ್ ಗಿಲ್ ಮತ್ತು ಮೊಹಮ್ಮದ್ ಸಿರಾಜ್‌ಗೆ ನಂಬರ್ ಒನ್ ಪಟ್ಟಕ್ಕೆ ಏರಿದ್ದಾರೆ. ಪಾಕಿಸ್ತಾನದ ಬಾಬರ್ ಅಜಮ್ ಅವರನ್ನು ಹಿಂದಿಕ್ಕಿರುವ ಶುಭಮನ್ ಗಿಲ್ ಏಕದಿನ ಕ್ರಿಕೆಟ್ ನ ನಂಬರ್ 1 ಬ್ಯಾಟ್ಸ್‌ಮನ್ ಆಗಿ ಹೊರ ಹೊಮ್ಮಿದ್ದಾರೆ. ಇನ್ನು ಮೊಹಮ್ಮದ್ ಸಿರಾಜ್ ಏಕದಿನ ಕ್ರಿಕೆಟ್ ನ ನಂಬರ್ 1 ಬೌಲರ್ ಎನಿಸಿಕೊಂಡಿದ್ದಾರೆ.
ODI ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದ ICC :
ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಬಿಡುಗಡೆ ಮಾಡಿರುವ ಇತ್ತೀಚಿನ ಏಕದಿನ ರ‍್ಯಾಂಕಿಂಗ್ ನಲ್ಲಿ ಶುಭ್‌ಮನ್ ಗಿಲ್ ನಂಬರ್-1 ಬ್ಯಾಟ್ಸ್‌ಮನ್ ಆಗಿ ಆಯ್ಕೆಯಾಗಿದ್ದಾರೆ. ಇಲ್ಲಿಯವರೆಗೆ ನಂಬರ್ ಒನ್ ಪಟ್ಟವನ್ನು ಅಲಂಕರಿಸಿದ್ದ ಬಾಬರ್ ಅಜಮ್ ನಂಬರ್ ಒನ್ ಸ್ಥಾನದಿಂದ ಕೆಳಗಿಳಿದಿದ್ದಾರೆ. ಗಿಲ್ 830 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದರೆ, ಬಾಬರ್ ಅಜಮ್ 824 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದಾರೆ. ವಿರಾಟ್ ಕೊಹ್ಲಿ 770 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದರೆ, ಭಾರತದ ನಾಯಕ ರೋಹಿತ್ ಶರ್ಮಾ 739 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದು ಆರನೇ ಸ್ಥಾನದಲ್ಲಿದ್ದಾರೆ.
ಬೌಲರ್‌ಗಳಲ್ಲಿ ಸಿರಾಜ್ ನಂಬರ್-1 :
ಮೊಹಮ್ಮದ್ ಸಿರಾಜ್ ಏಕದಿನ ಬೌಲರ್‌ಗಳಲ್ಲಿ ನಂಬರ್-1 ಆಗಿ ಆಯ್ಕೆಯಾಗಿದ್ದಾರೆ. ಸಿರಾಜ್ 709 ರೇಟಿಂಗ್ ಅಂಕಗಳನ್ನು ಹೊಂದಿದ್ದಾರೆ. ಮೊಹಮ್ಮದ್ ಶಮಿ ಟಾಪ್-10 ಬೌಲರ್‌ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಶಮಿ 635 ರೇಟಿಂಗ್ ಅಂಕಗಳೊಂದಿಗೆ 10ನೇ ಸ್ಥಾನದಲ್ಲಿದ್ದಾರೆ. 2023 ರ ವಿಶ್ವಕಪ್‌ನಲ್ಲಿ ಆಡಿದ ಕೇವಲ 4 ಪಂದ್ಯಗಳಲ್ಲಿ ಶಮಿ 16 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದರಲ್ಲಿ ಎರಡು ಬಾರಿ 5 ವಿಕೆಟ್ ಪಡೆದಿರುವ ಖ್ಯಾತಿ ಇದೆ. ಶಮಿ ಹೊರತುಪಡಿಸಿ ಕುಲದೀಪ್ ಯಾದವ್ ನಾಲ್ಕನೇ ಸ್ಥಾನದಲ್ಲಿದ್ದಾರೆ.
ODIನಲ್ಲಿ ನಂಬರ್-1 ಆದ ಭಾರತೀಯ ಬ್ಯಾಟ್ಸ್‌ಮನ್‌ಗಳ ಪಟ್ಟಿ :
ಶುಭಮನ್ ಗಿಲ್ ಅವರಿಗಿಂತ ಮೊದಲು, ಮಾಸ್ಟರ್ ಬ್ಲಾಸ್ಟರ್ ಎಂದು ಕರೆಯಲ್ಪಡುವ ಸಚಿನ್ ತೆಂಡೂಲ್ಕರ್ ಅವರು ಏಕದಿನದಲ್ಲಿ ನಂಬರ್-1 ಬ್ಯಾಟ್ಸ್‌ಮನ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಅದೇ ಸಮಯದಲ್ಲಿ, ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ಕೂಡಾ ಈ ಸಾಧನೆ ಮಾಡಿದ್ದಾರೆ. ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ನಂತರ ಶುಭಮನ್ ಗಿಲ್ ಅತ್ಯಂತ ವೇಗದ (ಇನ್ನಿಂಗ್ಸ್‌ನಲ್ಲಿ) ನಂಬರ್-1 ಬ್ಯಾಟ್ಸ್‌ಮನ್ ಆಗ ಮೂಡಿ ಬಂದಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1