ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ, ಜ. 2
ಫ್ಯಾಷನ್ ದೇವ ಸ್ಟಾರ್ ಸಂಸ್ಥೆಯ ಆಶ್ರಯದಲ್ಲಿ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ನಡೆದ ಐಕಾನ್ ಆಫ್ ಇಂಡಿಯಾ 2025 – ಸೀಸನ್ 2 ಸ್ಪರ್ಧೆಯಲ್ಲಿ ಚಿತ್ರದುರ್ಗದ ಯುವ ಪ್ರತಿಭೆ ಸಮರ್ಥ ದೇವರು ಟೈಟಲ್ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ.
ಚಿತ್ರದುರ್ಗ ಮೂಲದ ಸಮರ್ಥ ದೇವರು ಪ್ರಸ್ತುತ ನೃತ್ಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದು, ನಗರದ ಸಮು ಡ್ಯಾನ್ಸ್ ಅಕಾಡೆಮಿಯನ್ನು ನಡೆಸುತ್ತಿದ್ದಾರೆ. ತಮ್ಮ ವಿಭಿನ್ನ ನೃತ್ಯ ಶೈಲಿ, ಆತ್ಮವಿಶ್ವಾಸ ಮತ್ತು ವೇದಿಕೆ ಪ್ರದರ್ಶನದ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾಗಿ ಈ ಮಹತ್ವದ ಸಾಧನೆ ಮಾಡಿದ್ದಾರೆ.
ರಾಜ್ಯ ಮಟ್ಟದ ಈ ಸಾಧನೆಯ ಮೂಲಕ ಸಮರ್ಥ ದೇವರು ಚಿತ್ರದುರ್ಗ ಜಿಲ್ಲೆಯ ಕೀರ್ತಿಯನ್ನು ರಾಜ್ಯಮಟ್ಟದಲ್ಲಿ ಹೆಚ್ಚಿಸಿದ್ದು, ಯುವ ಪ್ರತಿಭೆಗಳಿಗೆ ಪ್ರೇರಣೆಯಾಗಿದ್ದಾರೆ ಎಂದು ಫ್ಯಾಷನ್ ದೇವ ಸ್ಟಾರ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Views: 10