Healthy Food For Kids: ಮಕ್ಕಳ ಆರೋಗ್ಯವು ಅವರ ಆಹಾರದ ಮೇಲೆ ಅವಲಂಬಿತವಾಗಿರುತ್ತದೆ.ಅದು ಕೂಡಾ ಖಾಲಿ ಹೊಟ್ಟೆಯಲ್ಲಿ ಮಕ್ಕಳಿಗೆ ಯಾವ ಆಹಾರ ನೀಡುತ್ತಿರಿ ಎನ್ನುವುದು ಬಹಳ ಮುಖ್ಯ.

Healthy Food For Kids: ಪ್ರತಿಯೊಬ್ಬ ಪೋಷಕರು ತಮ್ಮ ಮಗು ಎಲ್ಲಾ ವಿಷಯಗಳಲ್ಲಿಯೂ ಮುಂಚೂಣಿಯಲ್ಲಿರಬೇಕು ಎಂದು ಬಯಸುತ್ತಾರೆ. ಮಗುವಿನ ಬುದ್ದಿ ಚುರುಕಾಗಿರಬೇಕು ಎಂದು ಬಯಸುತ್ತಾರೆ. ಮಕ್ಕಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿರುವಂತೆ ಪ್ರತಿಯೊಬ್ಬ ಪೋಷಕರು ಕೂಡಾ ಹಲವಾರು ರೀತಿಯ ಪ್ರಯತ್ನಗಳನ್ನು ಮಾಡುತ್ತಾರೆ.ಮಕ್ಕಳ ಆರೋಗ್ಯ ಮತ್ತು ಮಾನಸಿಕ ಬೆಳವಣಿಗೆಗೆ ಉತ್ತಮ ಆಹಾರ ಪದ್ಧತಿಯನ್ನು ಅನುಸರಿಸುವುದು ಬಹಳ ಮುಖ್ಯ.ಮಕ್ಕಳ ಆರೋಗ್ಯವು ಅವರ ಆಹಾರದ ಮೇಲೆ ಅವಲಂಬಿತವಾಗಿರುತ್ತದೆ.ಅದು ಕೂಡಾ ಖಾಲಿ ಹೊಟ್ಟೆಯಲ್ಲಿ ಮಕ್ಕಳಿಗೆ ಯಾವ ಆಹಾರ ನೀಡುತ್ತಿರಿ ಎನ್ನುವುದು ಬಹಳ ಮುಖ್ಯ.
ಫಿಟ್ ಆಗಿರಲು ಮಕ್ಕಳಿಗೆ ಯಾವಾಗಲೂ ಉತ್ತಮ ಪೋಷಣೆಯ ಅಗತ್ಯವಿರುತ್ತದೆ.ಮಕ್ಕಳಿಗೆ ಪ್ರತಿದಿನ ಜೀವಸತ್ವಗಳು, ಖನಿಜಗಳು ಮತ್ತು ಕೊಬ್ಬಿನಿಂದ ಸಮೃದ್ಧವಾಗಿರುವ ಆಹಾರವನ್ನು ನೀಡಬೇಕು.ಮಕ್ಕಳಿಗೆ ಖಾಲಿ ಹೊಟ್ಟೆಯಲ್ಲಿ ಬಾದಾಮಿ ನೀಡಬೇಕು. ಇದು ದೇಹವನ್ನು ಬಲಪಡಿಸುತ್ತದೆ.
ಪ್ರತಿದಿನ ಮಕ್ಕಳಿಗೆ ಸೇಬು ನೀಡಬೇಕು.ಮಕ್ಕಳ ದೃಷ್ಟಿಯನ್ನು ಸುಧಾರಿಸಲು ಇದು ತುಂಬಾ ಉಪಯುಕ್ತವಾಗಿದೆ.ಸೇಬುಗಳು ಉತ್ತಮ ಪ್ರಮಾಣದ ಕ್ಯಾಲ್ಸಿಯಂ,ಕಬ್ಬಿಣ ಮತ್ತು ಸತುವನ್ನು ಹೊಂದಿರುತ್ತವೆ.
ಮಕ್ಕಳು ಪ್ರತಿದಿನ ಬೆಳಿಗ್ಗೆ ಎದ್ದತಕ್ಷಣ ಉಗುರುಬೆಚ್ಚನೆಯ ನೀರನ್ನು ಕುಡಿಯಬೇಕು. ಹೀಗೆ ಮಾಡುವುದರಿಂದ ಅನೇಕ ರೋಗಗಳು ನಾಶವಾಗುತ್ತವೆ.ಇದು ನಿಮ್ಮ ಮಗು ಒಳಗಿನಿಂದಲೇ ಫಿಟ್ ಆಗಿ ಇರುವುದು ಸಾಧ್ಯವಾಗುತ್ತದೆ.
ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನಬೇಕು. ಹೊಟ್ಟೆಯ ಎಲ್ಲಾ ಸಮಸ್ಯೆಗಳನ್ನು ದೂರವಿಡಲು ಇದು ತುಂಬಾ ಪ್ರಯೋಜನಕಾರಿಯಾಗಿದೆ. ದೈಹಿಕವಾಗಿ ದುರ್ಬಲವಾಗಿರುವ ಮಕ್ಕಳಿಗೆ ಇದು ತುಂಬಾ ಪ್ರಯೋಜನಕಾರಿಯಾಗಿದೆ.

ಬೇಳೆ ಪ್ರೋಟೀನ್‌ಗೆ ಉತ್ತಮ ಮೂಲವಾಗಿದೆ. ಬೇಳೆಯಲ್ಲಿ ಸಾಕಷ್ಟು ಪ್ರಮಾಣದ ಪ್ರೋಟೀನ್ ಅಡಗಿರುತ್ತದೆ. ತೂಕವನ್ನು ಕಡಿಮೆ ಮಾಡಲು ಸಹ ಇದು ತುಂಬಾ ಪ್ರಯೋಜನಕಾರಿಯಾಗಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1