ಚಿತ್ರದುರ್ಗ ಅ. 11
ವರದಿ ಮತ್ತು ಪೋಟೋ ಸುರೇಶ್ ಪಟ್ಟಣ್
ಸರ್ಕಾರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಯನ್ನು ಈಡೇರಿಸದಿದ್ದರೆ ಸೆ.5ರ ಶಿಕ್ಷಕರ ದಿನಾಚರಣೆಯನ್ನು ಬಹಿಷ್ಕಾರ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ.
ಚಿತ್ರದುರ್ಗ ನಗರದಲ್ಲಿ ಸೋಮವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿತ್ರದುರ್ಗ ಜಿಲ್ಲಾ ಸಂಘದ ಅಧ್ಯಕ್ಷರಾದ ಜಿ.ಬಿ.ಮಹಾಂತೇಶ್ ಸರ್ಕಾರ 2017ರವರೆಗೆ ನೇಮಕವಾದ ಶಿಕ್ಷಕರನ್ನು 1 ರಿಂದ 7ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಿ, 2017 ರವರೆಗೆ ನೇಮಕವಾದ ಶಿಕ್ಷಕರನ್ನು 1 ರಿಂದ 7ಕ್ಕೆ ನೇಮಕವಾದ ಶಿಕ್ಷಕರ ಉಲ್ಲೇಖ (1)ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು, 2017ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು ಹಾಗೂ ಯಾವುದೇ ಕಾರಣಕ್ಕೂ 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರ ಪದವೀಧರ ಶಿಕ್ಷಕರೆಂದು” ಹಾಗೂ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ ಪದನಾಮೀ ಕರಿಸುವುದು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು. ಅನ್ಯ ಕಾರ್ಯಗಳಿಂದ ಹಾಗೂ ಆನ್‍ಲೈನ್ ಕೆಲಸಗಳಿಂದ ಶಿಕ್ಷಕರ ಮೇಲೆ ಆಗುತ್ತಿರುವ ಒತ್ತಡ ಕಡಿಮೆ ಮಾಡುವುದು. ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರತಿದಿನ ದಿನಚರಿ ಬರೆಯುವ ಪದ್ಧತಿ ಕೈಬಿಡುವಂತೆ ನಮ್ಮ ಬೇಡಿಕೆಗಳು ಇವುಗಳನ್ನು ಸರ್ಕಾರ ಈಡೇರಿಸಬೇಕಿದೆ ಎಂದು ಆಗ್ರಹಿಸಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿತ್ರದುರ್ಗ ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಟಿ.ಹನುಮಂತಪ್ಪ ಮಾತನಾಡಿ, ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು ಸುಧೀರ್ಘವಾದ ಸಭೆಯನ್ನು 04-09-2024 ನಡೆಸಿ “ಒಂದು ಸಮಿತಿಯನ್ನು ರಚಿಸಿ’ 30 ದಿನಗಳಲ್ಲಿ ಸಮಿತಿಯಿಂದ ವರದಿಯನ್ನು ಪಡೆದು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವುದಾಗಿ ಸ್ಪಷ್ಟವಾದ ಭರವಸೆಯನ್ನು ನೀಡಲಾಗಿತ್ತು ಆದರೆ ಇಲ್ಲಿಯವರೆಗೂ ಭರವಸೆ ಈಡೇರದೇ ಇರುವುದರಿಂದ ಶಿಕ್ಷಕರಿಗೆ ತೀವ್ರ ನೋವಾಗಿದ್ದು ಶಿಕ್ಷಕರಿಗೆ ಆಗಿರುವ ಹಾಗೂ ಕಳೆದ ವರ್ಷ ಅನ್ಯಾಯಕ್ಕೆ ನ್ಯಾಯ ದೊರಕಿಸುವಂತೆ ಆಗ್ರಹಿಸಿ ಫ್ರೀಡಂ ಪಾರ್ಕನಲ್ಲಿ ಹೋರಾಟವನ್ನು ನಡೆಸಲಾಗಿತ್ತು. ಜಿಲ್ಲಾ ಮಟ್ಟದಲ್ಲಿ ದಿನಾಂಕ:12-08-2024ರ ಐತಿಹಾಸಿಕ ಹೋರಾಟವನ್ನು ಸರ್ಕಾರಕ್ಕೆ ನೆನಪಿಸುವ ಮತ್ತು ಮುಂದಿನ ಹೋರಾಟದ ಬಗ್ಗೆ ಎಚ್ಚರಿಕೆಯನ್ನು ನೀಡಲು ಪ್ರತಿ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಹಾಗೂ ತಾಲ್ಲೂಕಿನ ಎಲ್ಲಾ ಚುನಾಯಿತ ಪದಾಧಿಕಾರಿಗಳು, ಪ್ರತಿನಿಧಿಗಳು, ನಾಮನಿರ್ದೇಶಿತ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಆ. 12 ರಂದುಉಸ್ತುವಾರಿ ಸಚಿವರ,ಜಿಲ್ಲಾಧಿಕಾರಿಗಳ,ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಹಾಗೂ ಉಪನಿರ್ದೇಶಕರ ಮೂಲಕ ಮುಖ್ಯಮಂತ್ರಿಗಳಿಗೆ, ಶಿಕ್ಷಣ ಸಚಿವರಿಗೆ, ಪ್ರಧಾನ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ಬೇಡಿಕೆ ಈಡೇರಿಸುವಂತೆ ಹಕ್ಕೊತ್ತಾಯ ಹಾಗೂ ಹೋರಾಟ ನಡೆಸುವ ಕುರಿತು ಪತ್ರ ಸಲ್ಲಿಸುವುದು ಎಂದರು.
ಆ,25 ರೊಳಗೆ ಬೇಡಿಕೆ ಈಡೇರಿಸುವಂತೆ ಒತ್ತಾಯಿಸುವುದು. ಆ 26 ರಂದು ಸರ್ಕಾರಕ್ಕೆ ಮತ್ತು ಇಲಾಖೆಗೆ ಹೋರಾಟದ ಕುರಿತು ಪತ್ರ ರವಾನಿಸಲಾಗುವುದು ದಿನಾಂಕ: 27ರೊಳಗಾಗಿ ಬೇಡಿಕೆ ಈಡೇರದಿದ್ದಲ್ಲಿ ದಿನಾಂಕ: 03-09-2025ರಂದು ರಾಜ್ಯದ ಶಿಕ್ಷಕರೊಡಗೂಡಿ ಎಲ್ಲಾ ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದ ಚುನಾಯಿತ ಪದಾಧಿಕಾರಿ, ಪ್ರತಿನಿಧಿಗಳು, ನಾಮನಿರ್ದೇಶನ ಸದಸ್ಯರನ್ನೊಳಗೊಂಡು ಎಲ್ಲಾ ಶಿಕ್ಷಕರು ಸಾಂದರ್ಭಿಕ ರಜೆಯನ್ನು ಹಾಕಿ ರಾಜ್ಯ ಮಟ್ಟದ ಬೃಹತ್ ಅಂತಿಮ ಹೋರಾಟ ಮಾಡಲು “ಫ್ರೀಡಂಪಾರ್ಕ್ ಚಲೋ” ಅದೇ ದಿನ 6 ರಿಂದ 8ನೇ ತರಗತಿಗಳ ಪಾಠ ಬೋಧನೆ ಬಹಿಷ್ಕಾರ ಮಾಡಿ 1 ರಿಂದ 5ನೇ ತರಗತಿಯವರೆಗೆ ಮಾತ್ರ ಪಾಠ ಬೋಧನೆ ಮಾಡಲು ತೀರ್ಮಾನಿಸಲಾಗುವುದು. ದಿನಾಂಕ: 03-09-2025ರಂದು ಯಾವುದೇ ನಿರ್ಣಯ ಬರದಿದ್ದಲ್ಲಿ ರಾಜ್ಯಾದ್ಯಂತ ಇರುವ ಎಲ್ಲಾ ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದ ಚುನಾಯಿತ ಪದಾಧಿಕಾರಿ, ಪ್ರತಿನಿಧಿಗಳು, ನಾಮನಿರ್ದೇಶಿತ ಸದಸ್ಯರೊಡಗೂಡಿ ದಿನಾಂಕ: 04-09-2025 ರಿಂದ 05-09-2025ರವರೆಗೆ ಅಹೋರಾತ್ರಿ ಧರಣಿ ನಡೆಸುವುದು. ಹೋರಾಟದ ಭಾಗವಾಗಿ “ಫ್ರೀಡಂಪಾರ್ಕ್”ನಲ್ಲಿಯೇ ಎಲ್ಲಾ ಪದಾಧಿಕಾರಿಗಳ, ಪ್ರತಿನಿಧಿಗಳ ನೇತೃತ್ವದಲ್ಲಿ “ಶಿಕ್ಷಕರ ದಿನಾಚರಣೆ”ಯನ್ನು ಆಚರಿಸುವುದು ಹಾಗೆಯೇ ಬೇಡಿಕೆ ಈಡೇರುವವರೆಗೆ ಹೋರಾಟವನ್ನು ಮುಂದುವರೆಸಲಾಗುವುದು ಎಂದರು.
ಗೋಷಟಿಯಲ್ಲಿ ಸಂಘದ ಗೌರವಾಧ್ಯಕ್ಷರಾದ ಕೆ.ವೀರಣ್ಣ, ಕಾರ್ಯಾಧ್ಯಕ್ಷರಾದ ಆರ್.ಕೃಷ್ಣಪ್ಪ, ಖಂಜಾಚಿ ಎ.ಮಲ್ಲಿಕಾರ್ಜನಪ್ಪ, ತಾಲ್ಲೂಕು ಅಧ್ಯಕ್ಷ ಕೆಂಚಪ್ಪ ಭಾಗವಹಿಸಿದ್ದರು.
Views: 29