ಗಾಳಿ ಸಹಿತ ಭಾರೀ ಮಳೆ: ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆ ಮುನ್ಸೂಚನೆ.

ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆ ಪ್ರಕಾರ, ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೆಪ್ಟೆಂಬರ್ 21 ಮತ್ತು 22ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಕೆಲವು ಭಾಗಗಳಲ್ಲಿ ಗಂಟೆಗೆ 40–50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.

ಸೆಪ್ಟೆಂಬರ್ 21ರ ಮಳೆ ಮುನ್ಸೂಚನೆ

  • ಭಾರಿ ಮಳೆ: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ; ಉತ್ತರ ಒಳನಾಡಿನ ಗದಗ, ಹಾವೇರಿ, ಕೊಪ್ಪಳ; ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ.
  • ಸಾಧಾರಣ ಮಳೆ: ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ (ಉತ್ತರ ಒಳನಾಡು) ಹಾಗೂ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು, ಶಿವಮೊಗ್ಗ, ತುಮಕೂರು (ದಕ್ಷಿಣ ಒಳನಾಡು).

ಸೆಪ್ಟೆಂಬರ್ 22ರ ಮಳೆ ಮುನ್ಸೂಚನೆ

  • ಭಾರಿ ಮಳೆ: ಕರಾವಳಿ ಜಿಲ್ಲೆಗಳು; ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ; ದಕ್ಷಿಣ ಒಳನಾಡಿನ ಬೆಂಗಳೂರು (ನಗರ/ಗ್ರಾಮಾಂತರ), ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮೈಸೂರು ಮತ್ತು ರಾಮನಗರ.
  • ಸಾಧಾರಣ ಮಳೆ: ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಶಿವಮೊಗ್ಗ, ತುಮಕೂರು ಸೇರಿದಂತೆ ಇತರ ಜಿಲ್ಲೆಗಳು.

ಕಳೆದ 24 ಗಂಟೆಗಳಲ್ಲಿ ಬೆಂಗಳೂರು ಕೆಐಎಎಲ್‌ನಲ್ಲಿ 9 ಮಿ.ಮೀ, ಎಚ್‌ಎಎಲ್ ವಿಮಾನ ನಿಲ್ದಾಣ ಹಾಗೂ ಹೊಸಕೋಟೆಯಲ್ಲಿ ತಲಾ 7 ಮಿ.ಮೀ ಮಳೆಯಾಗಿದೆ. ಪ್ರಸ್ತುತ ರಾಜ್ಯದ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಕರಾವಳಿಯಲ್ಲಿ ಕೊಂಚ ದುರ್ಬಲವಾಗಿದೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Whats App Channel: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *