
ಬೆಂಗಳೂರು: ಸರ್ಕಾರ ವಿವಿಧ ಇಲಾಖೆಗಳಲ್ಲಿ ‘ಸಮಾಲೋಚಕ’ ಸೇರಿ ವಿವಿಧ ಹುದ್ದೆಯಲ್ಲಿರುವ ನಿವೃತ್ತ ನೌಕರರಿಗೆ ಗೇಟ್ಪಾಸ್ ನೀಡಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ಎಲ್ಲ ಇಲಾಖೆಗಳಿಗೆ ಈ ಸಂಬಂಧ ಟಿಪ್ಪಣಿ ಹೊರಡಿಸಿದ್ದು, ತಕ್ಷಣದ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ.
ಸಿಎಂ ಟಿಪ್ಪಣಿಯಲ್ಲೇನಿದೆ?: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಹಿತ ಹಲವು ಇಲಾಖೆ – ಸಚಿವಾಲಯದಲ್ಲಿ ಅನಗತ್ಯವಾಗಿ ಹುದ್ದೆಗಳನ್ನು ಸೃಜಿಸಿ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಅಧಿಕಾರಿ, ನೌಕರರನ್ನು ಸಮಾಲೋಚಕ, ವಿಶೇಷ ಸಂಪನ್ಮೂಲ ವ್ಯಕ್ತಿಗಳನ್ನಾಗಿ ಹಾಗೂ ಕೆಲವು ಗ್ರೂಪ್-ಎ ವೃಂದದ ಹುದ್ದೆಗಳಿಗೂ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಈ ನಿವೃತ್ತ ನೌಕರರಿಗೆ ವೇತನ, ವಾಹನ ಸೌಲಭ್ಯ ಇನ್ನಿತರ ಸೌಲಭ್ಯ ನೀಡಲಾಗುತ್ತಿದೆ. ಇದರಿಂದ ಬೊಕ್ಕಸಕ್ಕೆ ಹೆಚ್ಚುವರಿ ಹೊರೆಯಾಗುವುದಲ್ಲದೆ, ಕಾರ್ಯಕ್ಷಮತೆಯ ಗುಣಮಟ್ಟ ಹಾಗೂ ಉತ್ತರದಾಯಿತ್ವದ ಕೊರತೆಯೂ ಎದ್ದು ಕಾಣುತ್ತಿದೆ. ಆದ್ದರಿಂದ, ಸದರಿ ಹುದ್ದೆಗಳಿಗೆ ಹಾಲಿ ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿ, ನೌಕರರನ್ನು ನಿಯೋಜಿಸಲು ಸೂಚಿಸಲಾಗಿದೆ.
ಹಾಗೆಯೇ, ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿವೃತ್ತ ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸೂಚನೆ ಆಧರಿಸಿ ಅಗತ್ಯ ಕ್ರಮಕೈಗೊಂಡು ವರದಿಯನ್ನು ತಮ್ಮ ಕಚೆೇರಿಗೆ ಸಲ್ಲಿಸುವಂತೆ ಸಿಎಎಸ್ ನಿರ್ದೇಶನ ನೀಡಿದ್ದಾರೆ.
ಸಚಿವಾಲಯ ನೌಕರರ ಸಂಘದ ಪ್ರಯತ್ನ: ನಿವೃತ್ತ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವುದಕ್ಕೆ ಸಚಿವಾಲಯ ನೌಕರರ ಸಂಘ ವಿರೋಧಿಸಿ ಹೋರಾಟ ಮಾಡಿತ್ತು. ಸಂಘದ ಹಿಂದಿನ ಅಧ್ಯಕ್ಷ ಪಿ. ಗುರುಸ್ವಾಮಿ, ಎನ್ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ ಹಾಗೂ ಇತರ ಮುಖಂಡರು ಸಾಕಷ್ಟು ಬಾರಿ ಮುಖ್ಯ ಕಾರ್ಯದರ್ಶಿ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/Telegram: https://t.me/+E1ubNzdguQ5jN2Y1
Views: 0