IPL 2023: RCB ತಂಡದಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ: ಹೀಗಿರಲಿದೆ ಪ್ಲೇಯಿಂಗ್ ಇಲೆವೆನ್

IPL 2023 RCB Playing XI vs GT: ಐಪಿಎಲ್​ ಸೀಸನ್ 16ರ ಕೊನೆಯ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್​ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ.ಏಕೆಂದರೆ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ಪ್ಲೇಆಫ್​ಗೇರಬಹುದು. ಅತ್ತ ಈಗಾಗಲೇ ಪ್ಲೇಆಫ್​ಗೆ ಪ್ರವೇಶಿಸಿರುವ ಗುಜರಾತ್ ಟೈಟಾನ್ಸ್ ತಂಡಕ್ಕೆ ಈ ಪಂದ್ಯ ಔಪಚಾರಿಕ. ಈ ಪಂದ್ಯದಲ್ಲಿ ಆರ್​ಸಿಬಿ ಭರ್ಜರಿ ಜಯ ಸಾಧಿಸಿದರೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಭದ್ರಪಡಿಸಿಕೊಳ್ಳುವುದು ಖಚಿತ.ಹೀಗಾಗಿಯೇ ಈ ನಿರ್ಣಾಯಕ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ 1 ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ಅಂತಿಮ ಪಂದ್ಯದಲ್ಲಿ ಕರ್ಣ್ ಶರ್ಮಾ ಬದಲು ವೇಗಿ ವೈಶಾಕ್ ವಿಜಯಕುಮಾರ್ ಕಣಕ್ಕಿಳಿಯಬಹುದು.ಏಕೆಂದರೆ ಕಳೆದ ಪಂದ್ಯದಲ್ಲಿ ಕರ್ಣ್ ಶರ್ಮಾ 3 ಓವರ್​ಗಳಲ್ಲಿ 45 ರನ್ ನೀಡಿ ದುಬಾರಿಯಾಗಿದ್ದರು. ಇತ್ತ ವೈಶಾಕ್ ವಿಜಯಕುಮಾರ್​ಗೆ ಚಿನ್ನಸ್ವಾಮಿ ಸ್ಟೇಡಿಯಂ ತವರು ಮೈದಾನ. ಹೀಗಾಗಿ ಆರ್​ಸಿಬಿ ನಾಲ್ವರು ವೇಗಿಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.1- ಫಾಫ್ ಡುಪ್ಲೆಸಿಸ್ (ನಾಯಕ)2- ವಿರಾಟ್ ಕೊಹ್ಲಿ3- ಗ್ಲೆನ್ ಮ್ಯಾಕ್ಸ್​ವೆಲ್4- ಮಹಿಪಾಲ್ ಲೊಮ್ರೋರ್5- ದಿನೇಶ್ ಕಾರ್ತಿಕ್ 6- ಅನೂಜ್ ರಾವತ್ (ವಿಕೆಟ್ ಕೀಪರ್)7- ಮೈಕೆಲ್ ಬ್ರೇಸ್​ವೆಲ್
8- ವೈಶಾಕ್ ವಿಜಯಕುಮಾರ್9- ಹರ್ಷಲ್ ಪಟೇಲ್10- ಮೊಹಮ್ಮದ್ ಸಿರಾಜ್11- ವೇಯ್ನ್ ಪಾರ್ನೆಲ್
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

source https://tv9kannada.com/photo-gallery/cricket-photos/ipl-2023-rcb-playing-xi-vs-gt-rcb-playing-11-kannada-news-zp-583424.html

Leave a Reply

Your email address will not be published. Required fields are marked *