ಚಿತ್ರದುರ್ಗ ಬಿಜೆಪಿ ಸಂಘಟನೆ ಬಲಪಡಿಸಲು ಮಾ.2ಕ್ಕೆ ಮಹತ್ವದ ಕಾರ್ಯಾಗಾರ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಫೆ. 27

ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ, ಚಿತ್ರದುರ್ಗ ನಗರ ಮತ್ತು ಗ್ರಾಮಾಂತರ ಮಂಡಲದ ಬಿಜೆಪಿ ಪಕ್ಷದ ಃಐಂ2 ಮತ್ತು ಪದಾಧಿಕಾರಿಗಳ ಕಾರ್ಯಾಗಾರ ಸಭೆಯನ್ನು ಮಾ.2ರ ಸೋಮವಾರ ಕಮ್ಮರೆಡ್ಡಿ ಸಮುದಾಯ ಭವನದಲ್ಲಿ ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ನಗರಾಧ್ಯಕ್ಷ ಲೋಕೇಶ್ ಗ್ರಾಮಾಂತರ ಅಧ್ಯಕ್ಷ ನಾಗರಾಜ್ ತಿಳಿಸಿದ್ದಾರೆ.

ಈ ಸಭೆಗೆ ಮಾಜಿ ಶಾಸಕರಾದ ಜಿ.ಹೆಚ್. ತಿಪ್ಪಾರೆಡ್ಡಿ, ಲೋಕಸಭಾ ಸದಸ್ಯರಾದ ಗೋವಿಂದ ಕಾರಜೋಳ, ರಾಜ್ಯ ಬಿಜೆಪಿ ಪ್ರಧಾನಕಾರ್ಯದರ್ಶಿ ಪ್ರೀತಮ್‍ಗೌಡ, ವಿಧಾನಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಚಿದಾನಂದಗೌಡ, ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಕೆ.ಟಿ. ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು-ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ಸಭೆಗೆ ಬೂತ್ ಕಮಿಟಿ ಅಧ್ಯಕ್ಷರು, ಶಕ್ತಿ ಕೇಂದ್ರ ಮತ್ತು ಮಹಾಶಕ್ತಿಕೇಂದ್ರದ ಪ್ರಮುಖರು ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಮತ್ತು ಸದಸ್ಯರುಗಳು, ಪಕ್ಷದ ಮುಖಂಡರು-ಕಾರ್ಯಕರ್ತರು, ಪಕ್ಷದ ಹಿತೈಷಿಗಳು-ಬೆಂಬಲಿಗರು ಭಾಗವಹಿಸಿ. ಃಐಂ2 ಮತ್ತು ಪದಾಧಿಕಾರಿಗಳ ಕಾರ್ಯಾಗಾರ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಲು ಕೋರಿದ್ದಾರೆ.

Leave a Reply

Your email address will not be published. Required fields are marked *