ಚಿತ್ರದುರ್ಗ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಎಲ್ಲೆಲ್ಲಿ ನಡೆಯಲಿದೆ ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಮಾ.17) : ಹೊಳಲ್ಕೆರೆ ತಾಲ್ಲೂಕು ಹೊರತುಪಡಿಸಿ ಉಳಿದ ತಾಲ್ಲೂಕಿನ ತಹಶೀಲ್ದಾರ್‍ರರು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಮಾರ್ಚ್ 18ರಂದು ಜಿಲ್ಲಾಧಿಕಾರಿಗಳ ನಡೆ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಬೆಟ್ಟದ ನಾಗೇನಹಳ್ಳಿ, ಹಿರಿಯೂರಿನ ಕೆ.ಆರ್.ಹಳ್ಳಿ, ಹೊಸದುರ್ಗದ ಜಿನ್ನಾಪುರ, ಚಳ್ಳಕೆರೆಯ ಸೋಮಗುದ್ದು ಹಾಗೂ ಮೊಳಕಾಲ್ಮುರು ತಾಲ್ಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಆಯಾ ತಾಲ್ಲೂಕಿನ ತಹಶೀಲ್ದಾರ್ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಂಡು ಸಾರ್ವಜನಿಕರ ಅಹವಾಲು ಸ್ವೀಕರಿಸುವರು.

ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಮಾರ್ಚ್ 18 ರಂದು ಹೊಳಲ್ಕೆರೆ ತಾಲ್ಲೂಕಿನ ತಿರುಮಲಾಪುರ ಗ್ರಾಮದಲ್ಲಿ ಗ್ರಾಮವಾಸ್ತವ್ಯ ಹಮ್ಮಿಕೊಳ್ಳಲಾಗಿತ್ತು. ಆದರೆ ಮಾರ್ಚ್ 19ರಂದು ಮುಖ್ಯಮಂತ್ರಿಗಳು ಹೊಳಲ್ಕೆರೆ ಪಟ್ಟಣದಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ಆಗಮಿಸುತ್ತಿರುವುದರಿಂದ ಮಾರ್ಚ್ 18ರಂದು ಹಮ್ಮಿಕೊಳ್ಳಲಾಗಿದ್ದ ಗ್ರಾಮ ವಾಸ್ತವ್ಯ ಮುಂದೂಡಲಾಗಿದೆ. ಉಳಿದಂತೆ ಹೊಳಲ್ಕೆರೆ ತಾಲ್ಲೂಕು ಹೊರತುಪಡಿಸಿ, ಉಳಿದ ಐದು ತಾಲ್ಲೂಕುಗಳಲ್ಲಿ ನಿಗದಿಪಡಿಸಿರುವಂತೆ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಅಭಿಯಾನ ನಡೆಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ತಿಳಿಸಿದ್ದಾರೆ.

The post ಚಿತ್ರದುರ್ಗ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಎಲ್ಲೆಲ್ಲಿ ನಡೆಯಲಿದೆ ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್ first appeared on Kannada News | suddione.

from ಚಿತ್ರದುರ್ಗ – Kannada News | suddione https://ift.tt/4ilHMWJ
via IFTTT

Leave a Reply

Your email address will not be published. Required fields are marked *