ಚಿತ್ರದುರ್ಗ|ಡಿ.15 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಡಿ. 12: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷರ, ಕಾರ್ಯದರ್ಶಿ, ಖಂಜಾಚಿ, ರಾಜ್ಯ ಪರಿಷತ್ ಸದಸ್ಯರ ಹಾಗೂ ಪದಾಧಿಕಾರಿಗಳ ಮತ್ತು ನಿರ್ದೆಶಕರ ಪದಗ್ರಹಣ ಸಮಾರಂಭವೂ ಡಿ. 15 ರಂದು ಭಾನುವಾರ 10 ಗಂಟೆಗೆ ನಗರದ ತ.ರಾ.ಸು
ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಮಾಲತೇಶ್
ಮುದ್ದಜ್ಜಿ ತಿಳಿಸಿದರು.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2024 ರಿಂದ 2029ರವರೆಗೆ ನಮ್ಮ
ಪದಾಧಿಕಾರಿಗಳು ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಇವರ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು
ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭವನ್ನು ಯೋಜನೆ ಮತ್ತು ಸಾಂಖ್ಯಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್
ಉದ್ಘಾಟನೆ ಮಾಡಲಿದ್ದಾರೆ. ಸಂಸದರಾದ ಗೋವಿಂದ ಕಾರಜೋಳ, ಶಾಸಕರಾದ ಕೆ.ಸಿ.ವಿರೇಂದ್ರ ಪಪ್ಪಿ, ಬಿ.ಜಿ.ಗೋವಿಂದಪ್ಪ,
ಟಿ.ರಘುಮೂರ್ತಿ, ಎನ್.ವೈ ಗೋಪಾಲಕೃಷ್ಣ, ಡಾ.ಎಂ.ಚಂದ್ರಪ್ಪ, ರಾಜ್ಯ ವಕ್ಷ್ ಮಂಡಲಿ ಅಧ್ಯಕ್ಷರಾದ ಅನ್ವರ್ ಭಾಷಾ, ವಿಧಾನ
ಪರಿಷತ್ ಸದಸ್ಯರಾದ ಚಿದಾನಂದ ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷರಾದ
ಡಾ.ಬಿ.ಯೋಗಿಶ್ ಬಾಬು, ಆದಿಜಾಂಬವ ಅಭೀವೃದ್ದಿ ನಿಗಮ ಮಂಡಳಿ ಅಧ್ಯಕ್ಷರಾದ ಜಿ.ಎಸ್.ಮಂಜುನಾಥ್, ಸಫಾಯಿ ಕರ್ಮಚಾರಿ
ಅಯೋಗದ ಅಧ್ಯಕ್ಷರಾದ ಶ್ರೀಮತಿ ಸವಿತಾ ರಘು, ನಗರಾಭೀವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ತಾಜ್‍ಪೀರ್, ನಗರಸಭೆಯ
ಅಧ್ಯಕ್ಷರಾದ ಶ್ರೀಮತಿ ಸುಮಿತ್ರ ರಾಘವೇಂದ್ರ, ಜಿಲ್ಲಾಧಿಕಾರಿಗಳಾದ ವಂಕಟೇಶ್, ಜಿ.ಪಂ.ಸಿಇಓ ಸೋಮಶೇಖರ್ ಜಿಲ್ಲಾ
ರಕ್ಷಣಾಧಿಕಾರಿಗಳಾದ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿಗಳಾದ ಕುಮಾರಸ್ವಾಮಿ, ಉಪ ವಿಭಾಗಾಧಿಕಾರಿಗಳಾದ
ಕಾರ್ತಿಕ್, ತಹಶೀಲ್ದಾರ್ ನಾಗವೇಣಿ, ರಾ.ಹೆ.ವಿಭಾಗದ ಮುಖ್ಯ ಅಭಿಯಂತರರಾದ ಕೆ.ಜಿ.ಜಗದೀಶ್, ಪದವಿ ಪೂರ್ವ ಕಾಲೇಜು
ಶಿಕ್ಷಣ ಇಲಾಖೆಯ ಉಪ ನಿರ್ದೆಶಕರಾದ ಪುಟ್ಟಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಂಜುನಾಥ್,
ಡಿ.ಎಚ್.ಓ. ಡಾ.ರೇಣುಪ್ರಸಾದ್, ಜಿಲ್ಲಾ ಸರ್ಜನ್ ಡಾ.ರವಿಂದ್ರ ಕ್ಷೇತ್ರ ಶಿಕಣಾಧಿಕಾರಿಗಳಾದ ನಾಗಭೂಷಣ ಭಾಗವಹಿಸಲಿದ್ದಾರೆ
ಎಂದರು.

Leave a Reply

Your email address will not be published. Required fields are marked *