ಡಿ.21ರಂದು ಚಿತ್ರದುರ್ಗದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ, ಡಿ.19:

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಚಿತ್ರದುರ್ಗ ಜಿಲ್ಲಾ ಘಟಕದ 2025–28ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಡಿಸೆಂಬರ್ 21ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ನಗರದ ಪತ್ರಿಕಾ ಭವನದ ಡಾ.ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ವೀರೇಶ್ ವಿ. (ಅಪ್ಪು) ತಿಳಿಸಿದ್ದಾರೆ.

ಸಮಾರಂಭವನ್ನು ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಉದ್ಘಾಟಿಸಲಿದ್ದು, ಲೋಕಸಭಾ ಸದಸ್ಯ ಗೋವಿಂದ ಎಂ. ಕಾರಜೋಳ ಭಾಗವಹಿಸಲಿದ್ದಾರೆ. ಮುಖ್ಯ ಭಾಷಣವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಬೆಂಗಳೂರು ಅಧ್ಯಕ್ಷ ಶಿವಾನಂದ ತಗಡೂರು ನಡೆಸಿಕೊಡಲಿದ್ದಾರೆ.

ನೂತನ ಪದಾಧಿಕಾರಿಗಳಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್ ಪ್ರಮಾಣ ವಚನ ಬೋಧಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಸ್. ವಿನಾಯಕ ತೊಡರನಾಳ್ ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ರವಿಕುಮಾರ್ (ಟೆಲೆಕ್ಸ್) ಹಾಗೂ ಜಿಲ್ಲಾ ಮುಖ್ಯ ಚುನಾವಣಾಧಿಕಾರಿ ಚಿಕ್ಕಪ್ಪನಹಳ್ಳಿ ಷಣ್ಮುಖ ಅವರಿಗೆ ಗೌರವ ಸನ್ಮಾನ ನಡೆಯಲಿದೆ. ಜೊತೆಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಎಂ.ಎನ್. ಅಹೋಬಳಪತಿ ಮತ್ತು ಸಂಘದ ನಿಕಟಪೂರ್ವ ಅಧ್ಯಕ್ಷ ಬಿ. ದಿನೇಶ್ ಗೌಡಗೆರೆ ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ವಿವಿಧ ವಿಧಾನಸಭಾ ಕ್ಷೇತ್ರಗಳ ಶಾಸಕರು, ವಿಧಾನಪರಿಷತ್ ಸದಸ್ಯರು, ನಿಗಮ–ಆಯೋಗಗಳ ಅಧ್ಯಕ್ಷರು, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಸಿಇಒ ಡಾ. ಆಕಾಶ್ ಎಸ್, ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ಪದಗ್ರಹಣ ಸಮಾರಂಭವು ಪತ್ರಕರ್ತರ ಸಂಘಟನೆ ಬಲಪಡಿಸುವ ಜೊತೆಗೆ, ಮಾಧ್ಯಮ ಕ್ಷೇತ್ರದ ಹಿತಾಸಕ್ತಿಗಳ ಚರ್ಚೆಗೆ ವೇದಿಕೆಯಾಗಲಿದೆ ಎಂದು ಸಂಘದ ಮುಖಂಡರು ತಿಳಿಸಿದ್ದಾರೆ.

Views: 3

Leave a Reply

Your email address will not be published. Required fields are marked *