ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಅ. 15 : ನಗರದ ಸರಸ್ವತಿ ವಿದ್ಯಾ ಸಂಸ್ಥೆಯಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರಸ್ವತಿ ಕಾನೂನು ಕಾಲೇಜಿನಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಕಾನೂನು ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ, ಮಾನವ ಹಕ್ಕುಗಳ ವೇದಿಕೆ, ರೆಡ್ ಕ್ರಾಸ್ ಘಟಕ, ಇಕೋ ಕ್ಲಬ್ ಹಾಗೂ ಕ್ರೀಡಾ ಚಟುವಟಿಕೆಗಳ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವೂ ಅ, 15ರ ಗುರುವಾರ ಬೆಳಿಗ್ಗೆ 10.30ಕ್ಕೆ ಸರಸ್ವತಿ ಕಾನೂನು ಕಾಲೇಜಿನ ರಜತ ಮಹೋತ್ಸವ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ತುಮಕೂರಿನ ವಿಶ್ವ ವಿದ್ಯಾನಿಲಯದ ಪರೀಕ್ಷಾಂಗ ಕುಲ ಸಚಿವರಾದ ಪ್ರೋ. (ಡಾ.) ಸತೀಶ್ ಗೌಡ ಎನ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ವಿವೇಕಾನಂದ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಬಿ.ಕೇಂಪೇಗೌಡ ಸರಸ್ವತಿ ವಿದ್ಯಾ ಸಂಸ್ಥೆಯ ಅಧ್ಯಕ್ಷರು, ರಾಜ್ಯ ಸಭಾದ ಮಾಜಿ ಸದಸ್ಯರಾದ ಹೆಚ್,ಹನುಮಂತಪ್ಪ, ಹಿರಿಯ ವಕೀಲರು ಸರಸ್ವತಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಗಳಾದ ಫಾತ್ಯಾರಾಜನ್, ಶ್ರೀಮತಿ ಡಿ.ಕೆ.ಶೀಲ ಭಾಗವಹಿಸಲಿದ್ದಾರೆ.ಸರಸ್ವತಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಪ್ರೋ.(ಡಾ.)ಎಂ.ಎಸ್. ಸುಧಾದೇವಿ ವಹಿಲಿದ್ದಾರೆ.
Views: 20