IND vs AFG: ವಿಶ್ವ ದಾಖಲೆ; ಬೆಂಗಳೂರಿನಲ್ಲಿ ಐತಿಹಾಸಿಕ ಶತಕ ಸಿಡಿಸಿದ ರೋಹಿತ್ ಶರ್ಮಾ..!

Rohit Sharma Century: ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಕೇವಲ 64 ಎಸೆತಗಳಲ್ಲಿ ರೋಹಿತ್ ಶತಕ ಪೂರೈಸಿದ್ದಾರೆ. ಇದು ರೋಹಿತ್ ಶರ್ಮಾ ಅವರ ಐದನೇ ಅಂತಾರಾಷ್ಟ್ರೀಯ ಟಿ20 ಶತಕವಾಗಿದೆ.

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಮೂರನೇ T-20 ಪಂದ್ಯದಲ್ಲಿ ರೋಹಿತ್ ಶರ್ಮಾ (Rohit Sharma) ಭರ್ಜರಿ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಕೇವಲ 64 ಎಸೆತಗಳಲ್ಲಿ ರೋಹಿತ್ ಶತಕ ಪೂರೈಸಿದ್ದಾರೆ. ಇದು ರೋಹಿತ್ ಶರ್ಮಾ ಅವರ ಐದನೇ ಅಂತಾರಾಷ್ಟ್ರೀಯ ಟಿ20 ಶತಕವಾಗಿದೆ. ರೋಹಿತ್​ಗೂ ಮೊದಲು ಯಾವುದೇ ಬ್ಯಾಟ್ಸ್‌ಮನ್‌ಗಳು ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಐದು ಶತಕಗಳನ್ನು ಸಿಡಿಸಿರಲಿಲ್ಲ. ಇದೀಗ ದಾಖಲೆಯ ಐದನೇ ಶತಕ ಸಿಡಿಸಿರುವ ರೋಹಿತ್ ಶರ್ಮಾ ಈ ಸಾಧನೆ ಮಾಡಿದ ವಿಶ್ವದ ಏಕೈಕ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ತಮ್ಮ ಇನ್ನಿಂಗ್ಸ್​ನಲ್ಲಿ 69 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ 11 ಬೌಂಡರಿ ಮತ್ತು 8 ಸಿಕ್ಸರ್‌ಗಳ ಸಹಿತ ಅಜೇಯ 121 ರನ್ ಚಚ್ಚಿದರು. ರೋಹಿತ್​ಗೆ ಉತ್ತಮ ಸಾಥ್ ನೀಡಿದ ರಿಂಕು ಸಿಂಗ್ (Rinku Singh) ಕೂಡ ಕೇವಲ 39 ಎಸೆತಗಳಲ್ಲಿ 2 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ ಅಜೇಯ 69 ರನ್ ಕಲೆಹಾಕಿದರು. ಈ ಇಬ್ಬರ ಸ್ಫೋಟಕ ಬ್ಯಾಟಿಂಗ್​ನ ಆಧಾರದ ಮೇಲೆ ಟೀಂ ಇಂಡಿಯಾ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು ಬರೋಬ್ಬರಿ 213 ರನ್ ಕಲೆಹಾಕಿದೆ.

ಭಾರತಕ್ಕೆ ಕಳಪೆ ಆರಂಭ

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ಸಿಗಲಿಲ್ಲ. 18 ರನ್​ಗಳಿಗೆ ತಂಡ ಯಶಸ್ವಿ ಜೈಸ್ವಾಲ್ ರೂಪದಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು. ಕಳೆದ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದ ಜೈಸ್ವಾಲ್, ಈ ಪಂದ್ಯದಲ್ಲಿ ಕೇವಲ 4 ರನ್​ಗಳಿಗೆ ಸುಸ್ತಾದರು. ಆ ಬಳಿಕ ಬಂದ ವಿರಾಟ್ ಕೊಹ್ಲಿ ತಮ್ಮ ಅಂತಾರಾಷ್ಟ್ರೀಯ ಟಿ20 ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಗೋಲ್ಡನ್ ಡಕ್ ಆದ ಬೇಡದ ದಾಖಲೆಗೆ ಕೊರೊಳೊಡ್ಡಿದರು. ಶಿವಂ ದುಬೆ 1 ರನ್​ಗೆ ಸುಸ್ತಾದರೆ, ಸಂಜು ಸ್ಯಾಮ್ಸನ್​ಗೂ ಖಾತೆ ತೆರೆಯಲಾಗಲಿಲ್ಲ. ಹೀಗಾಗಿ ತಂಡ 22 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಆದರೆ 4 ವಿಕೆಟ್​ಗಳ ಪತನದ ಬಳಿಕ ಜೊತೆಯಾದ ನಾಯಕ ರೋಹಿತ್ ಶರ್ಮಾ ಹಾಗೂ ರಿಂಕು ಸಿಂಗ್ ಆರಂಭದಲ್ಲಿ ತಾಳ್ಮೆಯ ಬ್ಯಾಟಿಂಗ್ ಮಾಡಿದರು. ಬಳಿಕ ಲಯಕಂಡುಕೊಂಡ ಇವರು ಅಫ್ಘಾನ್ ಬೌಲರ್​ಗಳ ಚೆಂಡಾಡಿದರು. ಈ ಇಬ್ಬರು ಬ್ಯಾಟರ್​ಗಳು ಕೊನೆಯವರೆಗೂ ಅಜೇಯರಾಗಿ ಉಳಿದು ಬರೋಬ್ಬರಿ 190 ರನ್​ಗಳ ಜೊತೆಯಾಟ ಹಂಚಿಕೊಂಡರು.

ರೋಹಿತ್ ಸಿಡಿಲಬ್ಬರದ ಶತಕ

ವಾಸ್ತವವಾಗಿ ನಾಯಕ ರೋಹಿತ್ ಶರ್ಮಾ ಈ ಸರಣಿಯೊಂದಿಗೆ 14 ತಿಂಗಳ ನಂತರ ಟಿ20 ತಂಡಕ್ಕೆ ಮರಳಿದ್ದರು. ಆದರೆ ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಎರಡನೇ ಎಸೆತದಲ್ಲಿಯೇ ರನೌಟ್ ಆಗಿದ್ದ ರೋಹಿತ್​ಗೆ ಖಾತೆ ತೆರೆಯಲೂ ಸಾಧ್ಯವಾಗಲಿಲ್ಲ. ಹಾಗೆಯೇ ಇಂದೋರ್‌ನಲ್ಲಿ ನಡೆದ ಎರಡನೇ ಟಿ20ಯಲ್ಲಿ ಮೊದಲ ಎಸೆತದಲ್ಲೇ ರೋಹಿತ್ ಖಾತೆ ತೆರೆಯದೆ ಔಟಾಗಿದ್ದರು. ಇಂತಹ ಪರಿಸ್ಥಿತಿಯಲ್ಲಿ ಮೂರನೇ ಪಂದ್ಯದಲ್ಲಿ ಅವರು ಬಲಿಷ್ಠ ಇನ್ನಿಂಗ್ಸ್ ಆಡಬಹುದೇ ಅಥವಾ ಇಲ್ಲವೇ ಎಂಬ ಬಗ್ಗೆ ಹೆಚ್ಚಿನವರ ಕಣ್ಣು ನೆಟ್ಟಿತ್ತು. ಅದರಂತೆ ಎಲ್ಲರ ನಿರೀಕ್ಷೆಯನ್ನು ಹುಸಿಗೊಳಿಸಿದ ರೋಹಿತ್ ಅಮೋಘ ಶತಕ ಬಾರಿಸಿ ಮಿಂಚಿದರು.

ವರ್ಷಗಳ ನಂತರ ಟಿ20 ಶತಕ

ರೋಹಿತ್ ಶರ್ಮಾ ನವೆಂಬರ್ 2018 ರಂದು ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ ಬಾರಿಗೆ ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ ಶತಕ ಬಾರಿಸಿದ್ದರು. ಲಕ್ನೋದಲ್ಲಿ ನಡೆದಿದ್ದ ಪಂದ್ಯದಲ್ಲಿ ರೋಹಿತ್ 111 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದರು. ಇದೀಗ ಬರೋಬ್ಬರಿ 5 ವರ್ಷಗಳ ನಂತರ ಟಿ20ಯಲ್ಲಿ ಶತಕ ಬಾರಿಸಿರುವ ರೋಹಿತ್ ಅಜೇಯ 121 ರನ್ ಕಲೆಹಾಕಿದ್ದಾರೆ. ಅಲ್ಲದೆ ಇದು ಅಂತಾರಾಷ್ಟ್ರೀಯ ಟಿ20ಯಲ್ಲಿ ರೋಹಿತ್ ಅವರ ಅತ್ಯಧಿಕ ಸ್ಕೋರ್ ಕೂಡ ಆಗಿದೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *