
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 3 ಏಕದಿನ ಸರಣಿಯ ಮೊದಲ ಪಂದ್ಯ ಇಂದು ನಡೆಯುತ್ತಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ಭಾರತ ತಂಡದ ನಾಯಕತ್ವ ವಹಿಸಲಿದ್ದು, ಪ್ಯಾಟ್ ಕಮಿನ್ಸ್ ಅನುಪಸ್ಥಿತಿಯಲ್ಲಿ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸುತ್ತಿದ್ದಾರೆ. ವಿಶ್ವಕಪ್ ದೃಷ್ಟಿಯಿಂದ ಉಭಯ ತಂಡಗಳಿಗೂ ಈ ಸರಣಿ ಅತ್ಯಂತ ಮಹತ್ವದ್ದಾಗಿದೆ. ಇದರೊಂದಿಗೆ ಎರಡೂ ತಂಡಗಳು ವಿಶ್ವಕಪ್‌ಗೆ ತಮ್ಮ ಸಿದ್ಧತೆಯನ್ನು ಪರೀಕ್ಷಿಸುವ ಅವಕಾಶವನ್ನು ಪಡೆದುಕೊಂಡಿವೆ.