
IND Vs AUS, 1st Test, Live Streaming: ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್ – ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯು ನಾಳೆಯಿಂದ (ಫೆ.9) ಶುರುವಾಗಲಿದೆ. ನಾಲ್ಕು ಪಂದ್ಯಗಳ ಸರಣಿಯ ಮೊದಲ ಪಂದ್ಯವು ನಾಗ್ಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು 2ನೇ ಪಂದ್ಯಕ್ಕೆ ದೆಹಲಿ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಿದರೆ, ಮೂರನೇ ಪಂದ್ಯ ಧರ್ಮಶಾಲಾದಲ್ಲಿ ಮತ್ತು ಕೊನೆಯ ಟೆಸ್ಟ್ ಅಹಮದಾಬಾದ್‌ನಲ್ಲಿ ನಡೆಯಲಿದೆ.
ಕಳೆದ ಬಾರಿ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿತ್ತು. ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಆ ಸರಣಿಯಲ್ಲಿ ಭಾರತ ತಂಡವು ಆಸ್ಟ್ರೇಲಿಯಾವನ್ನು 2-1 ಅಂತರದಿಂದ ಬಗ್ಗು ಬಡಿದಿತ್ತು. ಇದೀಗ ತವರಿನಲ್ಲಿ ಸರಣಿ ಸೋತಿರುವ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ ಆಸ್ಟ್ರೇಲಿಯಾ ತಂಡ. ಹೀಗಾಗಿ ಈ ಬಾರಿ ಕೂಡ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.
ಈ ಸರಣಿಯ ಪಂದ್ಯಗಳನ್ನು ಎಲ್ಲಿ ವೀಕ್ಷಿಸಬಹುದು? ಯಾವ ಚಾನೆಲ್ನಲ್ಲಿ ನೇರ ಪ್ರಸಾರ, ಪಂದ್ಯದ ಆರಂಭದ ಸಮಯ ಸೇರಿದಂತೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ಯಾವಾಗ ನಡೆಯಲಿದೆ?
ಮೊದಲ ಟೆಸ್ಟ್ ಪಂದ್ಯ ಫೆಬ್ರವರಿ 9 ರಿಂದ ಫೆಬ್ರವರಿ 13 ರವರೆಗೆ ನಡೆಯಲಿದೆ.
ಮೊದಲ ಟೆಸ್ಟ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಸಂಸ್ಥೆಯಲ್ಲಿ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?
ಮೊದಲ ಟೆಸ್ಟ್ ಪಂದ್ಯವು ಗುರುವಾರ ಬೆಳಗ್ಗೆ 09:30 ಕ್ಕೆ ಆರಂಭವಾಗಲಿದೆ. ಒಂಬತ್ತು ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಇರಲಿದೆ.
ಇದನ್ನೂ ಓದಿ: Aaron Finch: ವಿಶ್ವ ದಾಖಲೆಯೊಂದಿಗೆ ವಿದಾಯ ಹೇಳಿದ ಆರೋನ್ ಫಿಂಚ್
ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ:
- ಫೆಬ್ರವರಿ 9 ರಿಂದ 13- ಮೊದಲ ಟೆಸ್ಟ್ ಪಂದ್ಯ (ವಿದರ್ಭ ಕ್ರಿಕೆಟ್ ಸ್ಟೇಡಿಯಂ)
- ಫೆಬ್ರವರಿ 17 ರಿಂದ 21- ಎರಡನೇ ಟೆಸ್ಟ್ ಪಂದ್ಯ (ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂ, ದೆಹಲಿ)
- ಮಾರ್ಚ್ 1 ರಿಂದ 5- ಮೂರನೇ ಟೆಸ್ಟ್ ಪಂದ್ಯ (ಧರ್ಮಶಾಲ ಕ್ರಿಕೆಟ್ ಸ್ಟೇಡಿಯಂ, ಹಿಮಾಚಲ್ ಪ್ರದೇಶ್)
- ಮಾರ್ಚ್ 9 ರಿಂದ 13- ನಾಲ್ಕನೇ ಟೆಸ್ಟ್ ಪಂದ್ಯ (ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್).