
ಬಾರ್ಡರ್- ಗವಾಸ್ಕರ್ (Border-Gavaskar Trophy) ಟೆಸ್ಟ್ ಸರಣಿಯನ್ನು ಗೆಲುವಿನೊಂದಿಗೆ ಆರಂಭಿಸಿರುವ ಟೀಂ ಇಂಡಿಯಾ (Team India) ಇದೀಗ ದೆಹಲಿಯಲ್ಲೂ ತನ್ನ ಗೆಲುವಿನ ಓಟ ಮುಂದುವರಿಸಲು ಮುಂದಾಗಿದೆ. ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಟೆಸ್ಟ್ಗಳ ಸರಣಿಯಲ್ಲಿ ಟೀಂ ಇಂಡಿಯಾ (India vs Australia) ಪ್ರಸ್ತುತ 1-0 ಮುನ್ನಡೆಯಲ್ಲಿದೆ. ದೆಹಲಿಯಲ್ಲಿ ಭಾರತ ಗೆಲುವು ಸಾಧಿಸಿದರೆ ಆಸ್ಟ್ರೇಲಿಯಾದಿಂದ ಸರಣಿ ಗೆಲ್ಲುವ ಅವಕಾಶವನ್ನು ಕಸಿದುಕೊಳ್ಳಲಿದೆ. ಇತ್ತ ಮೊದಲ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 132 ರನ್ಗಳಿಂದ ಹೀನಾಯ ಸೋಲನ್ನನುಭವಿಸಿರುವ ಪ್ರವಾಸಿ ತಂಡ ಗೆಲುವಿನ ಲಯಕ್ಕೆ ಮರಳಲು ಹೋರಾಡಲಿದೆ. ಕಳೆದ ಟೆಸ್ಟ್ ವೇಳೆ ಪಿಚ್ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಹೀಗಿರುವಾಗ ದೆಹಲಿಯ ಪಿಚ್ನ ಮನಸ್ಥಿತಿ ಹೇಗಿದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಮೊದಲ ಟೆಸ್ಟ್ನಲ್ಲಿ ಬೌಲಿಂಗ್ ವಿಭಾಗದಲ್ಲಿ ಅನುಭವಿಗಳಿಲ್ಲದೆ ಆಸೀಸ್ ತಂಡಕ್ಕೆ ಭಾರಿ ಹಿನ್ನಡೆಯುಂಟಾಗಿತ್ತು. ಆದರೆ ಈಗ ಎರಡನೇ ಟೆಸ್ಟ್ಗೆ ತಂಡಕ್ಕೆ ಮರಳುವ ಭರವಸೆ ಇದೆ ಎಂದು ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಹೇಳಿಕೊಂಡಿದ್ದಾರೆ. ಹೀಗಾಗಿ ಆಸೀಸ್ ಬೌಲಿಂಗ್ ವಿಭಾಗ ಮತ್ತಷ್ಟು ಬಲಿಷ್ಠಗೊಳಿಸಲದೆ. ಅದೇ ಸಮಯದಲ್ಲಿ, ಇತ್ತ ಟೀಂ ಇಂಡಿಯಾದಲ್ಲಿ ಸ್ಟಾರ್ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಆಡುವ ನಿರೀಕ್ಷೆಯಿದೆ. ರಾಹುಲ್ ದ್ರಾವಿಡ್ ಬುಧವಾರ ಈ ಬಗ್ಗೆ ಸೂಚನೆ ನೀಡಿದ್ದು, ಉಭಯ ತಂಡಗಳ ಆಡುವ ಹನ್ನೊಂದರಲ್ಲಿ ಬದಲಾವಣೆಯಾಗುವ ನಿರೀಕ್ಷೆಯಿದೆ.
IND vs AUS: ದೆಹಲಿಯಲ್ಲಾದರೂ ಕೊನೆಯಾಗುತ್ತಾ ಕೊಹ್ಲಿಯ 1181 ದಿನಗಳ ಕಾಯುವಿಕೆ..?
ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಫೆಬ್ರವರಿ 17 ರಿಂದ ಫೆಬ್ರವರಿ 21 ರವರೆಗೆ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಬುಧವಾರ ಬೆಳಗ್ಗೆ 09:30ಕ್ಕೆ ಆರಂಭವಾಗಲಿದೆ. ಟಾಸ್ ಒಂಬತ್ತು ಗಂಟೆಗೆ ನಡೆಯಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಯಾವ ಚಾನೆಲ್ನಲ್ಲಿ ನೇರ ಪ್ರಸಾರವಾಗಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಚಾನೆಲ್ಗಳಲ್ಲಿ ಪ್ರಸಾರ ಮಾಡಲಾಗುತ್ತದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್ಸ್ಟಾರ್ನಲ್ಲಿ ವೀಕ್ಷಿಸಬಹುದಾಗಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ