IND vs AUS: ಟಾಸ್ ಗೆದ್ದ ಭಾರತ: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಬ್ರಿಸ್ಬೇನ್‌ನಲ್ಲಿ ಶುರುವಾಗಿದೆ. ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ ​ನಲ್ಲಿ  ಬದಲಾವಣೆ ಮಾಡಲಾಗಿದ್ದು, ಹರ್ಷಿತ್ ರಾಣಾ ಬದಲಿಗೆ ಆಕಾಶ್ ದೀಪ್​ಗೆ ಅವಕಾಶ ನೀಡಲಾಗಿದೆ. ಹಾಗೆಯೇ ಅಶ್ವಿನ್ ಸ್ಥಾನದಲ್ಲಿ ರವೀಂದ್ರ ಜಡೇಜಾ ಕಣಕ್ಕಿಳಿದಿದ್ದಾರೆ.

ಅತ್ತ ಆಸ್ಟ್ರೇಲಿಯಾ ತಂಡದಲ್ಲೂ ಒಂದು ಬದಲಾವಣೆ ಕಂಡು ಬಂದಿದೆ. ಅಡಿಲೇಡ್ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಪ್ರಮುಖ ವೇಗಿ ಜೋಶ್ ಹ್ಯಾಝಲ್ ವುಡ್ ತಂಡಕ್ಕೆ ಮರಳಿದ್ದು, ಹೀಗಾಗಿ ಸ್ಕಾಟ್ ಬೋಲ್ಯಾಂಡ್ ಪ್ಲೇಯಿಂಗ್ ಇಲೆವೆನ್ ನಿಂದ ಹೊರಗುಳಿದಿದ್ದಾರೆ. ಅದರಂತೆ ಉಭಯ ತಂಡಗಳ ಆಡುವ ಬಳಗ ಈ ಕೆಳಗಿನಂತಿವೆ…

ಭಾರತ ಪ್ಲೇಯಿಂಗ್ 11:

ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್ ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್ ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಆಸ್ಟ್ರೇಲಿಯಾ ಪ್ಲೇಯಿಂಗ್ 11:

ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.

ಟೀಮ್ ಇಂಡಿಯಾಗೆ ನಿರ್ಣಾಯಕ ಪಂದ್ಯ:

ಗಾಬಾ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡದ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಸೋತರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿ ಮತ್ತಷ್ಟು ಕಠಿಣವಾಗಲಿದೆ.

ಅಂದರೆ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೆ ನೇರವಾಗಿ ಪ್ರವೇಶಿಸಬೇಕಿದ್ದರೆ, ಆಸ್ಟ್ರೇಲಿಯಾ ವಿರುದ್ಧದ ಮುಂದಿನ ಮೂರೂ ಪಂದ್ಯಗಳಲ್ಲೂ ಜಯ ಸಾಧಿಸಬೇಕು. ಹೀಗಾಗಿ ಟಿಮ್ ಇಂಡಿಯಾ ಪಾಲಿಗೆ ಮುಂದಿನ ಮೂರು ಮ್ಯಾಚ್​​ಗಳು ಮಾಡು ಇಲ್ಲವೇ ಮಡಿ ಪಂದ್ಯ ಎನ್ನಬಹುದು.

ಅತ್ತ ಆಸ್ಟ್ರೇಲಿಯಾ ತಂಡಕ್ಕೆ ಇನ್ನೂ ಐದು ಟೆಸ್ಟ್ ಪಂದ್ಯಗಳಿವೆ. ಇಲ್ಲಿ ಟೀಮ್ ಇಂಡಿಯಾ ವಿರುದ್ಧ 3 ಮ್ಯಾಚ್ ಗೆದ್ದರೆ ಫೈನಲ್​ಗೆ ಪ್ರವೇಶಿಸುವುದು ಖಚಿತ. ಒಂದು ವೇಳೆ ಭಾರತದ ವಿರುದ್ಧ 2 ಮ್ಯಾಚ್​​ಗಳಲ್ಲಿ ಸೋತರೆ, ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಮೂಲಕ ಅಂಕ ಪಟ್ಟಿಯಲ್ಲಿ ಮೇಲೇರಲು ಉತ್ತಮ ಅವಕಾಶವಿದೆ.

ಈ ಎಲ್ಲಾ ಕಾರಣಗಳಿಂದಾಗಿ ಬ್ರಿಸ್ಬೇನ್ ಟೆಸ್ಟ್ ಮ್ಯಾಚ್ ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ ಪಂದ್ಯವಾಗಿ ಮಾರ್ಪಟ್ಟಿದೆ.

Source : https://tv9kannada.com/sports/cricket-news/india-vs-australia-3rd-test-toss-and-playing-xi-zp-949601.html

Leave a Reply

Your email address will not be published. Required fields are marked *