IND vs AUS, WTC Final: ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯದ ದ್ವಿತೀಯ ದಿನದಾಟ ಹೇಗಿತ್ತು?: ಇಲ್ಲಿದೆ ನೋಡಿ ಫೋಟೋ

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೋಚಕತೆ ಸೃಷ್ಟಿಸಿದೆ.ಮೊದಲ ದಿನ ಬ್ಯಾಟಿಂಗ್​ನಲ್ಲಿ ಭರ್ಜರಿ ಯಶಸ್ಸು ಸಾಧಿಸಿದ್ದ ಆಸ್ಟ್ರೇಲಿಯಾನ್ನರು ದ್ವಿತೀಯ ದಿನ ಬೌಲಿಂಗ್​ನಲ್ಲಿ ಪಾರುಪತ್ಯ ಮೆರೆದರು. ಮೊದಲ ಇನ್ನಿಂಗ್ಸ್​ನಲ್ಲಿ ಕಾಂಗರೂ ಪಡೆ 469 ರನ್ ಕಲೆಹಾಕಿತು.ಭಾರತ ತನ್ನ ಪ್ರಥಮ ಇನ್ನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿದೆ. 318 ರನ್​ಗಳ ಹಿನ್ನಡೆಯಲ್ಲಿರುವ ಟೀಮ್ ಇಂಡಿಯಾ ಇನ್ನಿಂಗ್ಸ್ ಹಿನ್ನಡೆಯ ಭೀತಿಯಲ್ಲಿದೆ.ಬೃಹತ್ ಮೊತ್ತ ಗಳಿಸುವ ಗುರಿಯೊಂದಿಗೆ 2ನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯ ಮೊದಲ ದಿನದ ಮೊತ್ತಕ್ಕೆ 142 ರನ್ ಸೇರಿಸುವಷ್ಟರಲ್ಲಿ ಉಳಿದ 7 ವಿಕೆಟ್‌ಗಳನ್ನು ಕಳೆದುಕೊಂಡಿತು. 146 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿದ ಹೆಡ್ 163 ರನ್ ಗಳಿಸಿ ಸಿರಾಜ್‌ಗೆ ವಿಕೆಟ್ ಒಪ್ಪಿಸಿದರು. ಸ್ಮಿತ್ ಆಟ 121 ರನ್​ಗೆ ಅಂತ್ಯವಾಯಿತು.ಅಂತಿಮವಾಗಿ ಆಸೀಸ್ ಮೊದಲ ಇನಿಂಗ್ಸ್‌ನಲ್ಲಿ 469 ರನ್ಸ್​ಗೆ ಆಲೌಟ್ ಆಯಿತು. ಭಾರತದ ಪರ ಸಿರಾಜ್ 4 ವಿಕೆಟ್ ಕಿತ್ತರೆ ಶಾರ್ದೂಲ್ ಠಾಕೂರ್ ಹಾಗೂ ಶಮಿ ತಲಾ 2ವಿಕೆಟ್‌ಗಳನ್ನು ಪಡೆದರು.ಭಾರತ ಪರ ನಾಯಕ ರೋಹಿತ್​ ಶರ್ಮಾ ಹಾಗೂ ಶುಭ್​ಮನ್​ ಗಿಲ್​ ಮೊದಲ ಇನ್ನಿಂಗ್ಸ್​ ಆರಂಭಿಸಿದರು. ಆದರೆ, ಇಬ್ಬರೂ ಬ್ಯಾಟರ್​ಗಳು ವೈಫಲ್ಯ ಅನುಭವಿಸಿದರು. ನಾಯಕ ರೋಹಿತ್ ಕೇವಲ 15 ರನ್​ಗಳಿಗೆ ಪ್ಯಾಟ್ ಕಮ್ಮಿನ್ಸ್ ಎಸತೆದಲ್ಲಿ ಎಲ್​ಬಿ ಬಲೆಗೆ ಬಿದ್ದರೆ ಗಿಲ್ ಆಟ 13 ರನ್​ಗಳಿಗೆ ಅಂತ್ಯವಾಯಿತು.ಬಳಿಕ ಕ್ರೀಸ್​ಗೆ ಬಂದ ಚೇತೇಶ್ವರ ಪೂಜಾರ (14) ಹಾಗೂ ವಿರಾಟ್​ ಕೊಹ್ಲಿ (14) ಕೂಡ ನಿರಾಸೆ ಮೂಡಿಸಿದರು. ಇದರ ನಡುವೆ ಐದನೇ ವಿಕೆಟ್​ಗೆ ಅಜಿಂಕ್ಯ ರಹಾನೆ ಹಾಗೂ ರವೀಂದ್ರ ಜಡೇಜಾ ಉತ್ತಮ ಇನ್ನಿಂಗ್​ ಕಟ್ಟಿ ತಂಡಕ್ಕೆ ನೆರವಾದರು.ಜಡೇಜಾ 51 ಬಾಲ್​ಗಳಲ್ಲಿ 7 ಬೌಂಡರಿ ಮತ್ತು ಸಿಕ್ಸರ್​ ಸಮೇತ 48 ರನ್​ಗೆ ನಿರ್ಗಮಿಸಿದರು. 29 ರನ್​ ಗಳಿಸಿರುವ ರಹಾನೆ ಹಾಗೂ 5 ರನ್​ ಗಳಿಸಿರುವ ಶ್ರೀಕರ್ ಭರತ್ ಇಂದು ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಭಾರತ 5 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿದ್ದು 318 ರನ್​ಗಳ ಹಿನ್ನಡೆಯಲ್ಲಿದೆ.

source https://tv9kannada.com/photo-gallery/cricket-photos/ind-vs-aus-wtc-final-here-is-the-photos-of-india-vs-australia-icc-world-test-championship-final-vb-597329.html

Leave a Reply

Your email address will not be published. Required fields are marked *