IND vs ENG 2nd Test: ಎರಡನೇ ಟೆಸ್ಟ್​ನಲ್ಲಿ ಟಾಸ್ ಗೆದ್ದ ಭಾರತ: ರಜತ್ ಪಟಿದಾರ್ ಪದಾರ್ಪಣೆ, 3 ಬದಲಾವಣೆ.

India vs England Second Test Playing XI: ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯ ವೈಜಾಗ್‌ನ ಡಾ. ವೈಎಸ್ ರಾಜಶೇಖರ ರೆಡ್ಟಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ನೋಡಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಪಟ್ಟಿ.

ವೈಜಾಗ್‌ನ ಡಾ. ವೈಎಸ್ ರಾಜಶೇಖರ ರೆಡ್ಟಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ಎರಡನೇ ಟೆಸ್ಟ್ ಪಂದ್ಯಕ್ಕೆ ಚಾಲನೆ ಸಿಕ್ಕಿದೆ. ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಉಭಯ ತಂಡಗಳಲ್ಲಿ ಕೆಲ ಬದಲಾವಣೆ ಮಾಡಲಾಗಿದ್ದು, ವಿಶೇಷವಾದ ಈ ಪಿಚ್​ನಲ್ಲಿ ಹೇಗೆ ಪ್ರದರ್ಶನ ನೀಡುತ್ತಾರೆ ನೋಡಬೇಕಿದೆ. ಐದು ಪಂದ್ಯಗಳ ಸರಣಿಯಲ್ಲಿ ಮೊದಲ ಮ್ಯಾಚ್ ಗೆದ್ದಿರುವ ಆಂಗ್ಲರು 1-0 ಮುನ್ನಡೆಯಲ್ಲಿದ್ದರೆ, ಟೀಮ್ ಇಂಡಿಯಾ ಕಮ್​ಬ್ಯಾಕ್ ಮಾಡುವ ಯೋಜನೆ ಹಾಕಿಕೊಂಡಿದೆ.

ಭಾರತದಲ್ಲಿ 3 ಬದಲಾವಣೆ:

ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಎರಡು ಪ್ರಮುಖ ಬದಲಾವಣೆ ಮಾಡಲಾಗಿದೆ. ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಜಾಗಕ್ಕೆ ಹೊಸ ಆಟಗಾರರ ಎಂಟ್ರಿ ಆಗಿದೆ. ಮೊಹಮ್ಮದ್ ಸಿರಾಜ್​ಗೆ ವಿಶ್ರಾಂತಿ ನೀಡಲಾಗಿದೆ. ಇದೇ ಮೊದಲ ಬಾರಿಗೆ ರಜತ್ ಪಟಿದಾರ್ ಅಂತರರಾಷ್ಟ್ರೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಈ ಮೂಲಕ ಟೀಮ್ ಇಂಡಿಯಾಕ್ಕೆ ಪದಾರ್ಪಣೆ ಮಾಡಿದ್ದಾರೆ.

ಹಾಗೆಯೆ ಮೂರನೇ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಸ್ಪಿನ್ ವಿಭಾಗವನ್ನು ಆರ್. ಅಶ್ವಿನ್ ಮುನ್ನಡೆಸಲಿದ್ದಾರೆ. ವೇಗಿಗಳಾಗಿ ಜಸ್​ಪ್ರಿತ್ ಬುಮ್ರಾ ಮತ್ತು ಮುಖೇಶ್ ಕುಮಾರ್ ಕಾಣಿಸಿಕೊಂಡಿದ್ದಾರೆ.

Rajat Patidar

ರಜತ್ ಪಟಿದಾರ್​ಗೆ ಟೆಸ್ಟ್ ಕ್ಯಾಪ್ ನೀಡಿದ ಜಹೀರ್ ಖಾನ್.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *